Breaking News

ಮುಷ್ಕರದಲ್ಲಿ ಭಾಗಿಯಾಗಿದ್ದ ಸಾರಿಗೆ ನೌಕರರ ವಿರುದ್ಧ ನಿಯಮಾನುಸಾರ ಕ್ರಮ

ಬೆಂಗಳೂರು,ಡಿ.- ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆಸಿದ ಮುಷ್ಕರದ ಸಮಯದಲ್ಲಿ ಕರ್ತವ್ಯನಿರತ ಸಿಬ್ಬಂದಿಗಳ ಮೇಲೆ ದೈಹಿಕ ಹಲ್ಲೆ ಮಾಡಿ, ಬಸ್ಸುಗಳನ್ನು ಜಖಂಗೊಳಿಸಿದ ಹಾಗೂ ಎಫ್‍ಐಆರ್ ದಾಖಲಾದ ಕೆಲವೇ ಸಿಬ್ಬಂದಿಗಳ ಮೇಲೆ ನಿಯಮಾನುಸಾರ ಕ್ರಮಕೈಗೊಳ್ಳಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಸ್ಪಷ್ಟಪಡಿಸಿದೆ. ಕೆಎಸ್‌ಆರ್‌ಟಿಸಿ ವ್ಯಾಪ್ತಿಯಲ್ಲಿ ಒಟ್ಟು 13 ಸಿಬ್ಬಂದಿಗಳ ಮೇಲೆ ಈ ತನಕ ಕ್ರಮ ಕೈಗೊಳ್ಳಲಾಗಿದೆ ಹೊರತು ಇನ್ನಾವುದೇ ಸಿಬ್ಬಂದಿ ಮೇಲೆ ಕ್ರಮಕೈಗೊಂಡಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕೋಲಾರ ವಿಭಾಗದಲ್ಲಿ 200 ನೌಕರರ ಮೇಲೆ …

Read More »

ಸ್ಟಾರ್ ನಟರು ಇದ್ದಂತೆ, ವಿಜ್ಞಾನಿಗಳು ತಾರೆಯರಾಗಬೇಕಿದೆ: ನಿವೃತ್ತ ವಿಜ್ಞಾನಿ ಕೊಳ್ಳೇಗಾಲ ಶರ್ಮ

ಬೆಂಗಳೂರು: ವಿಜ್ಞಾನಿಯೊಬ್ಬನ ಕೂದಲ ವಿನ್ಯಾಸವನ್ನು ಕಾಲೇಜು ಯುವಕರು ಅನುಸರಿಸಿದ ದಿನ ನಮ್ಮಲ್ಲಿ ವಿಜ್ಞಾನ, ತಂತ್ರಜ್ಞಾನ ಅಭಿವೃದ್ಧಿ ಕಾಣಲಿದೆ. ಸ್ಟಾರ್ ನಟರು ಇದ್ದಂತೆ, ವಿಜ್ಞಾನಿಗಳು ತಾರೆಯರಾಗಬೇಕಿದೆ ಎಂದು ಸಿಎಫ್‍ಟಿಆರ್‌ಐನ ನಿವೃತ್ತ ವಿಜ್ಞಾನಿ ಹಾಗೂ ಹಿರಿಯ ವಿಜ್ಞಾನ ಬರಹಗಾರ ಕೊಳ್ಳೇಗಾಲ ಶರ್ಮ ಅಭಿಪ್ರಾಯಪಟ್ಟಿದ್ದಾರೆ. ಪ್ರೆಸ್ ಇನ್ಫರ್ಮೇಷನ್ ಬ್ಯುರೋ ಮತ್ತು ಕರ್ನಾಟಕ ಪತ್ರಕರ್ತೆಯರ ಸಂಘಗಳು ಶುಕ್ರವಾರ ಜಂಟಿಯಾಗಿ ಆಯೋಜಿಸಿದ್ದ `ಭಾರತದಲ್ಲಿ ವಿಜ್ಞಾನದ ಬೆಳವಣಿಗೆ’ ಕುರಿತ ವೆಬಿನಾರ್‌ನಲ್ಲಿ `ಅಭಿವೃದ್ಧಿಶೀಲ ಭಾರತದಲ್ಲಿ ವಿಜ್ಞಾನ’ ವಿಷಯದ ಕುರಿತು ಅವರು …

Read More »

ಕೊರೊನಾ ಹಿನ್ನೆಲೆ ಬಂದ್ ಮಾಡಲಾಗಿದ್ದ ಆಫ್‍ಲೈನ್ ಟಿಕೆಟ್‍ನ್ನು ಭಾರತೀಯ ಪುರಾತತ್ವ ಇಲಾಖೆ ಪುನರಾರಂಭಿಸಿದೆ.

ಬಳ್ಳಾರಿ: ಕೊರೊನಾ ಹಿನ್ನೆಲೆ ಬಂದ್ ಮಾಡಲಾಗಿದ್ದ ಆಫ್‍ಲೈನ್ ಟಿಕೆಟ್‍ನ್ನು ಭಾರತೀಯ ಪುರಾತತ್ವ ಇಲಾಖೆ ಪುನರಾರಂಭಿಸಿದೆ. ಈ ಮೂಲಕ ಪ್ರವಾಸಿಗರು ಆಫ್‍ಲೈನ್ ಹಾಗೂ ಆನ್‍ಲೈನ್ ಎರಡೂ ವಿಧಾನಗಳಿಂದ ಟಿಕೆಟ್ ಪಡೆಯಬಹುದಾಗಿದೆ. ಕರೊನಾ ಹಿನ್ನಲೆ ತನ್ನ ವ್ಯಾಪ್ತಿಯ ಸ್ಮಾರಕಗಳ ವೀಕ್ಷಣೆಗೆ ಆಫ್‍ಲೈನ್ ಟಿಕೆಟ್ ಬಂದ್ ಮಾಡಿ, ಆನ್‍ಲೈನ್ ನಲ್ಲಿ ಮಾತ್ರ ಟಿಕೆಟ್ ಪಡೆಯಲು ಭಾರತೀಯ ಪುರಾತತ್ವ ಇಲಾಖೆ ಅವಕಾಶ ಕಲ್ಪಿಸಿತ್ತು. ಆದರೆ ಡಿ.19 ರಿಂದ ಆಫ್‍ಲೈನ್‍ನಲ್ಲೂ ಟಿಕೆಟ್ ಖರೀದಿಸಲು ಅವಕಾಶ ಕಲ್ಪಿಸಿದೆ. ಇದರಿಂದ …

Read More »

ಪಿಂಕ್‌ ಬಾಲ್‌ ಟೆಸ್ಟ್‌ನ ಎರಡನೇ ದಿನವೇ 15 ವಿಕೆಟ್‌ಗಳು ಪತನ

ಆಡಿಲೇಡ್‌: ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಪಿಂಕ್‌ ಬಾಲ್‌ ಟೆಸ್ಟ್‌ನ ಎರಡನೇ ದಿನವೇ 15 ವಿಕೆಟ್‌ಗಳು ಪತನಗೊಂಡಿದೆ. ಶುಕ್ರವಾರ ಒಂದೇ ದಿನವೇ ಭಾರತದ 5 ವಿಕೆಟ್‌ಗಳು ಪತನಗೊಂಡರೆ ಆಸ್ಟ್ರೇಲಿಯಾದ 10 ವಿಕೆಟ್‌ಗಳು ಉರುಳಿವೆ. ಭಾರತ ಸದ್ಯಕ್ಕೆ 62 ರನ್‌ಗಳ ಮುನ್ನಡೆಯಲ್ಲಿದೆ. 233 ರನ್‌ಗಳಿಗೆ 6 ವಿಕೆಟ್‌ ಕಳೆದುಕೊಂಡು ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಭಾರತ ಇಂದು 4 ವಿಕೆಟ್‌ಗಳ ಸಹಾಯದಿಂದ ಕೇವಲ 11 ರನ್‌ಗಳಿಸಿತು. ಇಂದು 4.1 ಓವರ್‌ ಆಡಿದ …

Read More »

ಬಂಗಾರಕ್ಕೆ ಹಾಲ್ ಮಾರ್ಕ್ ಹಾಕಿ ಕೊಡುತ್ತೇನೆ, ಎಂದು ಹೇಳಿ ಮೋಸ ಮಾಡುತ್ತಿದ್ದ ವಂಚಕನನ್ನು ಬಂಧಿಸಿರುವ ಪೊಲೀಸರು

ಹುಬ್ಬಳ್ಳಿ: ಬಂಗಾರಕ್ಕೆ ಹಾಲ್ ಮಾರ್ಕ್ ಹಾಕಿ ಕೊಡುತ್ತೇನೆ, ಕಲರ್ ಪಾಲೀಷ್ ಮಾಡುತ್ತೇನೆ ಎಂದು ಹೇಳಿ ಮೋಸ ಮಾಡುತ್ತಿದ್ದ ವಂಚಕನನ್ನು ಬಂಧಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಸುನಿಲ್ ಪತ್ತಾರ ಎಂದು ಗುರುತಿಸಲಾಗಿದೆ. ಈತ ನನ್ನು ಬಂಧಿಸುವಲ್ಲಿ ವಿದ್ಯಾನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಸುನಿಲ್ ಪತ್ತಾರ ಸಾರ್ವಜನರಿಕರನ್ನು ನಂಬಿಸಿ ಬಂಗಾರಕ್ಕೆ ಹಾಲ್ ಮಾರ್ಕ್ ಹಾಕಿ ಕೊಡುತ್ತೇನೆ. ಕಲರ್ ಪಾಲೀಷ್ ಮಾಡುತ್ತೇನೆ ಅಂತ ಮೋಸ ಮಾಡುತ್ತಿದ್ದ. ವಂಚಕನ ಬಗ್ಗೆ ಸಾರ್ವಜನಿಕರು ದೂರು …

Read More »

ಯಾವ ಮುಖ್ಯಮಂತ್ರಿಯೂ ಐದು ವರ್ಷ ಪೂರೈಸಿಲ್ಲ. ಆದರೆ, ನಾನು ಐದು ವರ್ಷ ಪೂರೈಸಿದ್ನಲ್ಲ ಅದು ಇವರಿಗೆಲ್ಲ ಹೊಟ್ಟೆ ಉರಿ.

ಮೈಸೂರು: ನಾನು ಕಳೆದ ಚುನಾವಣೆಯಲ್ಲಿ ಅಷ್ಟೊಂದು ಕೆಟ್ಟದಾಗಿ ಸೋಲ್ತಿನಿ ಅಂತ ಅಂದುಕೊಂಡಿರಲಿಲ್ಲ ಎಂದು ಮಾಜಿ ಸಿಎಂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು. 2018ರಲ್ಲಿ ನಡೆದ ವಿಧಾನಸಭೆ ಚುನಾವಣೆ ಸೋಲಿನ ಕುರಿತು ಕಾಂಗ್ರೆಸ್ ಜನಾಧಿಕಾರ ಸಭೆಯಲ್ಲಿ ಮಾತನಾಡಿದ ಅವರು, ನಾನು ಹಳ್ಳಿಗಳಿಗೆ ಹೋದಾಗ ಜನರೆಲ್ಲ ಪ್ರೀತಿ ತೋರಿಸಿದರು. ಆದರೆ, ನನ್ನ ಸೋಲಿಗೆ ನಮ್ಮ ಪಕ್ಷದವರು ಕೂಡ ಕಾರಣರಾದರು ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಪಕ್ಷ ಅಂದರೆ ತಾಯಿ ಇದ್ದ …

Read More »

ಸಿದ್ದರಾಮಯ್ಯನವರು ಗೋಸುಂಬೆ ರೀತಿ ಆಡಬಾರದು.: ಸಿ.ಟಿ.ರವಿ

ಚಿಕ್ಕಮಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರು ಈಗ ಏಕೆ ತಾಜ್ ವೆಸ್ಟ್ ಎಂಡ್ ಕಥೆ ತೆಗೆಯುತ್ತಿದ್ದಾರೆ, ತಾಜ್ ವೆಸ್ಟ್ ಎಂಡ್ ಅಡ್ರೆಸ್ ಗೊತ್ತಾದ ಮೇಲೆ ತಾನೇ ಲೋಕಸಭೆ ಚುನಾವಣೆ ಒಟ್ಟಿಗೆ ಮಾಡಿದ್ದು, ಅಧಿಕಾರ ಹಂಚಿಕೊಂಡು ತನ್ನವರನ್ನ ಮಂತ್ರಿ ಮಾಡುವಾಗ ವೆಸ್ಟ್ ಎಂಡ್ ಅಡ್ರೆಸ್ ಗೊತ್ತಿರಲಿಲ್ವಾ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ಹಳೇ …

Read More »

ಲಕ್ಷ್ಮಿ ಹೆಬ್ಬಾಳಕರ್ ಅವರ ಸಹೋದರಿಯ ಪುತ್ರಿ ಸುಶ್ಮಿತಾ ಅವರ ವಿವಾಹ ಬೆಳಗಾವಿಯಲ್ಲಿ ನಡೆಯಿತು.

ಬೆಳಗಾವಿ – ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಸಹೋದರಿಯ ಪುತ್ರಿ ಸುಶ್ಮಿತಾ ಅವರ ವಿವಾಹವು ಹುಬ್ಬಳ್ಳಿಯ ದಿ.ವಿಶ್ವಪ್ರಕಾಶ ಉಳ್ಳಾಗಡ್ಡಿಮಠ ಅವರ ಪುತ್ರ ರಜತ್ ಜೊತೆ ಬೆಳಗಾವಿಯಲ್ಲಿ ನಡೆಯಿತು. ಇಲ್ಲಿಯ ಸಂಕಮ್ ಹೊಟೆಲ್ ಸಭಾಂಗಣದಲ್ಲಿ ವಿವಾಹ ಪೂರ್ವ ಕಾರ್ಯಕ್ರಮ ಹಾಗೂ ವಿವಾಹ ಕಾರ್ಯಕ್ರಮಗಳು ಒಟ್ಟೂ 3 ದಿನಗಳ ಕಾಲ ನಡೆಯಿತು. ಕೊರೋನಾ ಹಿನ್ನೆಲೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಆಮಂತ್ರಣ ನೀಡಲಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಚಿತ್ರನಟ ವಿಜಯರಾಘವೇಂದ್ರ ಸೇರಿದಂತೆ …

Read More »

ಏಳು ದಿನಗಳೊಳಗೆ ಜನನ ಮರಣ ಪ್ರಮಾಣ ಪತ್ರ ಲಭ್ಯ: ಜಿಲ್ಲಾಧಿಕಾರಿ

ಮಂಡ್ಯ (ಕರ್ನಾಟಕ ವಾರ್ತೆ):- ಜನನ ಪ್ರಮಾಣ ಪತ್ರ ಮತ್ತು ಮರಣ ಪ್ರಮಾಣಪತ್ರವನ್ನು ಸಕಾಲ ಸೇವೆಯಲ್ಲಿ ಸೇರ್ಪಡೆಗೊಳಿಸಲಾಗಿದ್ದು, ಸಾರ್ವಜನಿಕರು ಇ-ಜನ್ಮ ವೆಬ್‍ಸೈಟ್‍ಗೆ ಲಾಗ್‍ಇನ್ ಆಗಿ 07 ದಿನಗಳೊಳಗೆ ಮಕ್ಕಳ ಜನನ ಪ್ರಮಾಣ ಪತ್ರ ಅಥವಾ ತಮ್ಮ ಸಂಬಂಧಿಕರ ಮರಣ ಪ್ರಮಾಣಪತ್ರವನ್ನು ಪಡೆದುಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಎಂ.ವಿ ವೆಂಕಟೇಶ್ ರವರು ತಿಳಿಸಿದರು. ಮಂಡ್ಯ ಜಿಲ್ಲೆಯ ಸಕಾಲ ಸಪ್ತಾಹ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಮತ್ತು ಸಾಂಖ್ಯಿಕ ಇಲಾಖೆÀಯ ವತಿಯಿಂದ …

Read More »

ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಪಣ ತೊಡೋಣ’’:

ಇಂದು ಸಿ.ಎಫ್.ಟಿ.ಎಫ್.ಕೆ ಸಂಸ್ಥೆ ವತಿಯಿಂದ ಆಯೋಜಿಸಿದ್ದ, ಡ್ರಗ್ಸ್, ಮದ್ಯಪಾನ ಮುಕ್ತ ಕರ್ನಾಟಕ ಜನಜಾಗೃತಿ ಕಾರ್ಯಕ್ರಮದಲ್ಲಿ, ಗೂಗಲ್ ಮೀಟ್ ಮೂಲಕ ಭಾಗವಹಿಸಿ, ಮಾತನಾಡಲಾಯಿತು. ಇತ್ತೀಚಿನ ದಿನಮಾನಗಳಲ್ಲಿ ಮಕ್ಕಳು ಡ್ರಗ್ಸ್ , ಮದ್ಯಪಾನ ಹೀಗೆ ಹಲವು ದುಶ್ಚಟಗಳಿಗೆ ಬಲಿಯಾಗುತ್ತಿರುವ ನಡುವೆ ಸಮಾಜದಲ್ಲಿ ಜಾಗೃತಿ ಅಭಿಯಾನ ನಡೆಸುತ್ತಿರುವ ಸಿ.ಎಫ್.ಟಿ.ಎಫ್.ಕೆ ಸಂಸ್ಥೆಯ ಕಾರ್ಯ ಶ್ಲಾಘನೀಯ. ನಮ್ಮ ಇಲಾಖೆಯ ರೀತಿ ಸಿ.ಎಫ್.ಟಿ.ಎಫ್.ಕೆ ಸಂಸ್ಥೆ ಕೂಡ ಸಮಾಜದಲ್ಲಿ ಧೂಮಪಾನ, ಡ್ರಗ್ಸ್, ಮದ್ಯಪಾನದಂತಹ ಕೆಟ್ಟ ಚಟಗಳಿಂದ ಜನರನ್ನು ದೂರವಿರಿಸಲು ಶ್ರಮವಹಿಸುತ್ತಿದೆ. …

Read More »