ನವದೆಹಲಿ: ಕೇಂದ್ರ, ರಾಜ್ಯ ಅಥವಾ ಸ್ಥಳೀಯ ಆಡಳಿತದ ಅಧಿಕಾರಿಯೊಬ್ಬರು ಆಮ್ಲಜನಕ ಪೂರೈಕೆಯಲ್ಲಿ ಅಡಚಣೆಯನ್ನು ಉಂಟು ಮಾಡಿದ್ರೆ, ‘ನಾವು ಆ ವ್ಯಕ್ತಿಯನ್ನ ಗಲ್ಲಿಗೇರಿಸುತ್ತೇವೆ’ ಎಂದು ದೆಹಲಿ ಹೈಕೋರ್ಟ್ ಶನಿವಾರ ಹೇಳಿದೆ. ಮಹಾರಾಜ ಅಗ್ರಸೆನ್ ಆಸ್ಪತ್ರೆಯ ಅರ್ಜಿಯ ವಿಚಾರಣೆಯ ನಡೆಸಿದ ನ್ಯಾಯಮೂರ್ತಿ ವಿಪಿನ್ ಸಂಘಿ ಮತ್ತು ನ್ಯಾಯಮೂರ್ತಿ ರೇಖಾ ಪಲ್ಲಿ ಅವ್ರ ನ್ಯಾಯಪೀಠ ಈ ಹೇಳಿಕೆ ನೀಡಿದೆ. ಗಂಭೀರ ಅನಾರೋಗ್ಯದ ಕೊರೊನಾ ರೋಗಿಗಳಿಗೆ ಆಮ್ಲಜನಕದ ಕೊರತೆಯ ಬಗ್ಗೆ ಆಸ್ಪತ್ರೆ ಹೈಕೋರ್ಟ್‌ಗೆ ಮೊರೆ ಹೋಗಿತ್ತು. …
Read More »ಬೆಳಗಾವಿ: ಸಿಡಿಲು ಬಡಿದು ಇಬ್ಬರು ಕೂಲಿ ಕಾರ್ಮಿಕರು ಸಾವು
ಬೆಳಗಾವಿ: ಮಳೆಯಿಂದ ರಕ್ಷಿಸಿಕೊಳ್ಳಲು ಗಿಡದ ಕೆಳಗೆ ನಿಂತಾಗ ಸಿಡಿಲು ಬಡಿದು ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟ ಘಟನೆ ನಗರದ ಕಣಬರ್ಗಿ ರಸ್ತೆಯ ಸುರಭಿ ಹೊಟೇಲ್ ಹಿಂಬಾಗದಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಮೂಲ ಬೈಲಹೊಂಗಲ ತಾಲೂಕಿನ ಹೋಗರ್ತಿಯ, ಸದ್ಯ ಗೋಕಾಕ ತಾಲೂಕಿನ ಅಕ್ಕತಂಗೇರಹಾಳದಲ್ಲಿ ನೆಲೆಸಿದ್ದ ಪ್ರಕಾಶ ಕರೆಪ್ಪ ವ್ಯಾಪಾರಗಿ(44) ಹಾಗೂ ಗೋಕಾಕ ತಾಲೂಕಿನ ರಾಜನಕಟ್ಟೆ ಗ್ರಾಮದ ಭರಮಪ್ಪ ಭೀಮಪ್ಪ ಬಾದರವಾಡಿ(39) ಎಂಬಾತರು ಮೃತಪಟ್ಟಿದ್ದಾರೆ. ಕೂಲಿ ಕೆಲಸ ಮಾಡುತ್ತಿದ್ದ ಈ ಇಬ್ಬರೂ ಸುರಭಿ …
Read More »14 ಸಾವಿರ ದಾಟಿದ ಕೋವಿಡ್ ಮೃತರ ಸಂಖ್ಯೆ
ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ಹೊಸದಾಗಿ 190 ಜನರು ಮೃತಪಡುವುದರೊಂದಿಗೆ ರಾಜ್ಯದಲ್ಲಿ ಮೃತರ ಸಂಖ್ಯೆ 14 ಸಾವಿರ ದಾಟಿದೆ. ಈವರೆಗೂ 1,128 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಹೊಸದಾಗಿ 26,962 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 12,74,959ಕ್ಕೆ ಏರಿಕೆಯಾಗಿದ್ದರೆ, 14,075 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈವರೆಗೆ 10,44,554 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ …
Read More »ಚಿಕಿತ್ಸೆಗೆ 4,816 ಹಾಸಿಗೆಗಳ ವ್ಯವಸ್ಥೆ: ಕೋಟ ಶ್ರೀನಿವಾಸ ಪೂಜಾರಿ
ಮಂಗಳೂರು: ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೊರಡಿಸಿರುವ ಹಲವು ಕಠಿಣ ನಿಯಮಗಳನ್ನು ಒಳಗೊಂಡ ಮಾರ್ಗಸೂಚಿ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 3,035 ಸಾಮಾನ್ಯ ಬೆಡ್‌ಗಳು, 1,263 ಆಕ್ಸಿಜೆನ್ ಬೆಡ್‌ಗಳು, 243 ಹೈಪ್ರೆಷರ್ ಬೆಡ್‌ಗಳು, 135 ಐಸಿಯು ಬೆಡ್‌ಗಳು, 140 …
Read More »ಬೆಂಗಳೂರು: ಕೊರೊನಾ ಸೋಂಕಿತ ಆಸ್ಪತ್ರೆಯಲ್ಲೇ ಆತ್ಮಹತ್ಯೆ
ಬೆಂಗಳೂರು: ಕೊರೊನಾ ಸೋಂಕು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮಣ್ಣ (61) ಎಂಬುವರು ಆಸ್ಪತ್ರೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಅಂಜನಾನಗರದ ರಾಮಣ್ಣ, ವಿಜಯನಗರದ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದರು. ಶುಕ್ರವಾರ ತಡರಾತ್ರಿ ಆಸ್ಪತ್ರೆಯ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಪಾಟೀಲ ತಿಳಿಸಿದರು. ‘ಘಟನೆ ಸಂಬಂಧ ಮಗನಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದೂ ಹೇಳಿದರು.
Read More »ರಾಜ್ಯದಲ್ಲಿ ದಿನಕ್ಕೆ 25 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ ಸೋಮವಾರದಿಂದ ಇನ್ನಷ್ಟು ಕಠಿಣ ನಿರ್ಧಾರ?
ಬೆಂಗಳೂರು – ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಕ್ಷಣ ಕ್ಷಣಕ್ಕೂ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ತುರ್ತು ಸಚಿವಸಂಪುಟ ಸಭೆ ಕರೆಯಲಾಗಿದೆ. ರಾಜ್ಯದಲ್ಲಿ ದಿನಕ್ಕೆ 25 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ದೃಢಪಡುತ್ತಿದ್ದು, ನೂರಾರು ಮಂದಿ ಸಾವಿಗೀಡಾಗುತ್ತಿದ್ದಾರೆ. ಹಾಗಾಗಿ ತುರ್ತಾಗಿ ನಿಯಂತ್ರಣಕ್ಕೆ ತರಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸಧ್ಯಕ್ಕೆ ಜನರಿಗೆ ತೊಂದರೆಯಾದರೂ ಜನರ ಜೀವ ಉಳಿಯುವುದು ಮುಖ್ಯ ಹಾಗೂ ಟಫ್ ರೂಲ್ಸ್ ಜಾರಿಗೊಳಿಸಿ. ರೂಲ್ಸ್ ಮುರಿಯುವವರ ವಿರುದ್ಧ …
Read More »ಸರ್ಕಾರಿ ನೌಕರರಿಗೆ ಮಾಸ್ಕ್ ಕಡ್ಡಾಯ : ಡಿಸಿ
ಚಿಕ್ಕೋಡಿ : ಕೊರೊನಾ ಎರಡನೆ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರಿ ನೌಕರರು ಕಡ್ಡಾಯವಾಗಿ ಮಾಸ್ಕ್ ಹಾಕಬೇಕು. ಇಲ್ಲದೇ ಹೋದರೆ ಅಂಥವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಇಂದಿನಿಂದಲೇ ಎಲ್ಲ ಸರ್ಕಾರಿ ನೌಕರರು ಮಾಸ್ಕ್ ಧರಿಸುವಂತೆ ಆದೇಶ ಹೊರಡಿಸಲಾಗುತ್ತದೆ ಎಂದು ಜಿಲ್ಲಾ ಧಿಕಾರಿ ಡಾ| ಕೆ.ಹರೀಶ ಕುಮಾರ ಹೇಳಿದರು. ಪಟ್ಟಣದ ಮಿನಿವಿಧಾನಸೌಧದಲ್ಲಿ ಚಿಕ್ಕೋಡಿ ಉಪವಿಭಾಗದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೊರೊನಾ ಎರಡನೆ ಅಲೆಯಿಂದ ಬೆಳಗಾವಿ ಜಿಲ್ಲೆಯಲ್ಲಿ ಸೋಂಕಿತರ …
Read More »ಕೊರೋನ 2ನೆ ಅಲೆಯನ್ನು ಬಿಜೆಪಿ ಅಲೆ ಎನ್ನಬೇಕೋ, ಮೋದಿ ಅಲೆ ಎನ್ನಬೇಕೊ ಗೊತ್ತಾಗುತ್ತಿಲ್ಲ: ಡಿಕೆಶಿ
ಬೆಂಗಳೂರು, ಎ.23: ಕೊರೋನ ಎರಡನೆ ಅಲೆಯನ್ನು ಬಿಜೆಪಿ ಅಲೆ ಎನ್ನಬೇಕೋ, ಮೋದಿ ಅಲೆ ಎನ್ನಬೇಕೊ ಗೊತ್ತಾಗುತ್ತಿಲ್ಲ. ಒಟ್ಟಿನಲ್ಲಿ ಕಳೆದ ಒಂದು ವರ್ಷದ ಸರಕಾರದ ವೈಫಲ್ಯದಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಗಾರಿದರು. ಶುಕ್ರವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರಕಾರವು ಗುರುವಾರ ಮಧ್ಯಾಹ್ನದಿಂದ ಪೊಲೀಸರನ್ನು ಬಳಸಿಕೊಂಡು ವರ್ತಕರು, ವ್ಯಾಪಾರಿಗಳಿಗೆ ಮಾಹಿತಿ ನೀಡದೆ ಅವರ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದೆ ಎಂದು …
Read More »ಕೊರೊನಾ ನಿರ್ವಹಣೆ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ: ಸತೀಶ ಜಾರಕಿಹೊಳಿ
ಬೆಳಗಾವಿ: ‘ಕೊರೊನಾ ನಿರ್ವಹಣೆ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ; ಸೂಕ್ತ ಯೋಜನೆಯೂ ಇಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಟೀಕಿಸಿದರು. ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೊರೊನಾ 2ನೇ ಅಲೆ ಹರಡುವ ಬಗ್ಗೆ ತಜ್ಞರು ಹಿಂದೆಯೇ ತಿಳಿಸಿದ್ದರು. ಹೀಗಾಗಿ, ಸರ್ಕಾರ ಆಸ್ಪತ್ರೆಗಳ ತಯಾರಿ, ಹಾಸಿಗೆಗಳು, ವೈದ್ಯಕೀಯ ಆಕ್ಸಿಜನ್ ಸಿಲಿಂಡರ್ ಹಾಗೂ ಔಷಧಿಗಳ ಸಂಗ್ರಹಣೆ ಸೇರಿ ಅಗತ್ಯ ವ್ಯವಸ್ಥೆ ಮತ್ತು ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿತ್ತು. ಸರ್ಕಾರದ ನಿರ್ಲಕ್ಷ್ಯದಿಂದ ಈಗ …
Read More »ಸರ್ಕಾರದಿಂದ ಜನರ ಕೊಲೆ: ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ
ಬೆಂಗಳೂರು: ತಜ್ಞರ ವರದಿಯನ್ನು ರಾಜ್ಯದ ಬಿಜೆಪಿ ಸರ್ಕಾರ ನಿರ್ಲಕ್ಷಿಸಿದ ಪರಿಣಾಮವಾಗಿ ಜನರು ಕೋವಿಡ್‌ನಿಂದ ಬೀದಿಯ ಮೇಲೆ ಸಾಯುತ್ತಿದ್ದಾರೆ. ಈ ಸಾವುಗಳು ಕೋವಿಡ್‌ನಿಂದ ಆಗುತ್ತಿವೆ ಎನ್ನುವುದಕ್ಕಿಂತ ಬಿಜೆಪಿ ಸರ್ಕಾರದ ಅದಕ್ಷತೆ ಮತ್ತು ಉಡಾಫೆಯಿಂದ ಆದ ಕೊಲೆಗಳು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕೋವಿಡ್ ಎರಡನೇ ಅಲೆ ಸ್ಫೋಟಗೊಂಡಿರುವ ಸಂದರ್ಭದಲ್ಲಿ ಸೋಂಕಿತರ ಚಿಕಿತ್ಸೆಗೆ ನೆರವಾಗುವಂತೆ ಕಾಂಗ್ರೆಸ್‌ನ ಎಲ್ಲ ಶಾಸಕರಿಗೂ ಶುಕ್ರವಾರ ಬರೆದಿರುವ ಪತ್ರದಲ್ಲಿ ಈ ವಿಷಯ ಪ್ರಸ್ತಾಪಿಸಿರುವ ಅವರು, …
Read More »
Laxmi News 24×7