Breaking News

ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಜಿಲ್ಲಾ ಘಟಕದ ಉದ್ಘಾಟನೆ, ಜಾಗೃತಿ ಮೆರವಣಿಗೆ

ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಜಿಲ್ಲಾ ಘಟಕದ ಉದ್ಘಾಟನೆ, ಜಾಗೃತಿ ಮೆರವಣಿಗೆ ಬೆಳಗಾವಿ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಜಿಲ್ಲಾ ಘಟಕದ ಉದ್ಘಾಟನೆ ಸಮಾರಂಭವನ್ನು ಗಣೇಶಪುರ ರಸ್ತೆ ಸ್ಕೂಲ್ ಆಫ್ ಕಲ್ಚರ್‍ನಲ್ಲಿ ಆಯೋಜಿಸಲಾಗಿತ್ತು. ಇದೇ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಚನ್ನಮ್ಮ ಸರ್ಕಲ್‍ನಿಂದ ಕಾಲೇಜು ರಸ್ತೆ ಮಾರ್ಗವಾಗಿ ಗೋಗಟೆ ರಂಗಮಂದಿರದವರೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ಭ್ರಷ್ಟಾಚಾರ ನಿರ್ಮೂಲನೆ ಮತ್ತು …

Read More »

ಪಶ್ವಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ

ಕೋಲ್ಕತ್ತಾ,ಡಿ.10-ಪಶ್ವಿಮ ಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಬಂಗಾಳದ ದಕ್ಷಿಣ 24 ಪರಗಣ ಪ್ರದೇಶಕ್ಕೆ ಬಿಜೆಪಿ ರಾಷ್ಟ್ರಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡುವ ಕಾರ್ಯಕ್ರಮವಿತ್ತು. ಹೀಗಾಗಿ ನಡ್ಡಾ ಭಾಷಣ ಮಾಡುವ ಪ್ರದೇಶದಲ್ಲಿ ಕೇಸರಿ ಬಾವುಟಗಳನ್ನು ಹಾರಿಸಲಾಗಿತ್ತು. ಸ್ಥಳಕ್ಕೆ ಆಗಮಿಸಿದ ಟಿಎಂಸಿ ಕಾರ್ಯಕರ್ತರು ಬಾವುಟಗಳನ್ನು ಹರಿದುಹಾಕಿ ಬಿಜೆಪಿ ಮುಖಂಡರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿರುವ ಬಂಗಾಳದಲ್ಲಿ ಜಂಗಲ್ ರಾಜ್ …

Read More »

ಸುವರ್ಣ ವಿಧಾನಸೌಧದ ಎದುರು ಅನ್ನದಾತರ  ಪ್ರತಿಭಟನೆ

ಬೆಳಗಾವಿ : ಕೃಷಿ ಮಸೂದೆ ತಿದ್ದುಪಡಿ ಖಂಡಿಸಿ ದೆಹಲಿ, ಬೆಂಗಳೂರಿನಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ, ಗುರುವಾರ ಸುವರ್ಣ ವಿಧಾನಸೌಧದ ಎದುರು ಅನ್ನದಾತರು  ಪ್ರತಿಭಟನೆ ನಡೆಸಿದರು. ಕೃಷಿ ಮಸೂದೆ ತಿದ್ದುಪಡಿ ವಾಪಸ್ ಪಡೆಯುವಂತೆ ರೈತರು  ಹೋರಾಟ ನಡೆಸುತ್ತಿದೆ. ಆದರೆ  ಕೇಂದ್ರ ಹಾಗೂ ರಾಜ್ಯ ಸರ್ಕಾರ  ರೈತರಿಗೆ ಸ್ಪಂಧಿಸುತ್ತಿಲ್ಲವೆಂದು ಆಕ್ರೋಶ ವ್ಯಕ್ತ ಪಡಿಸಿದರು. ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಧರಣಿ ಕುಳಿತು, ಪ್ರತಿಭಟನೆ ನಡೆಸಿದರು. ‘ ಕೇಂದ್ರ ಸರ್ಕಾರ ರೈತರ ಬಾಳಲ್ಲಿ …

Read More »

ರೈತ ಸಂಘಟನೆಗಳ ಹಿಂದೆ ಕಾಂಗ್ರೆಸ್ ತರೆಮರೆಯ ರಾಜಕಾರಣ ಮಾಡುತ್ತಿದೆ:H.D.K.

ಬೆಂಗಳೂರು:  ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ದ ಕಿಡಿಕಾರಿದ್ದು,  ಭೂ ಸುಧಾರಣೆ ಕಾಯ್ದೆ ವಿಚಾರವಾಗಿ  ಅನಗತ್ಯ ಹೋರಾಟ ಮಾಡುತ್ತಿರುವ ಕೆಲ ರೈತ ಸಂಘಟನೆಗಳ ಹಿಂದೆ ಕಾಂಗ್ರೆಸ್ ತರೆಮರೆಯ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.  ಕಾಂಗ್ರೆಸ್‌ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜೆಡಿಎಸ್‌ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ. ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್‌ ಈಗ ಅಡಗಿ ಕುಳಿತಿದೆ. ಅವರ ಮೂಲಕ ರಾಜಕೀಯದ ಹೇಳಿಕೆಗಳನ್ನು ಕೊಡಿಸುತ್ತಿದೆ. ಈ …

Read More »

ಜೆಟ್ ಏರ್‌ವೇಸ್ ಮುಂದಿನ ವರ್ಷ 2021ರ ಬೇಸಿಗೆ ವೇಳೆಗೆ ಮತ್ತೆ ತನ್ನ ಹಾರಾಟವನ್ನು ಆರಂಭಿಸಲಿದೆ.

ನವದೆಹಲಿ, ಡಿ.10- ಆರ್ಥಿಕ ಸಂಕಷ್ಟದಿಂದ ನಿಂತು ಹೋಗಿದ್ದ ಜೆಟ್ ಏರ್‌ವೇಸ್ ಮುಂದಿನ ವರ್ಷ 2021ರ ಬೇಸಿಗೆ ವೇಳೆಗೆ ಮತ್ತೆ ತನ್ನ ಹಾರಾಟವನ್ನು ಆರಂಭಿಸಲಿದೆ. ದೇಶೀಯ ಹಾಗೂ ಅಂತಾರಾಷ್ಟ್ರೀಯ ಕಾರ್ಯಚರಣೆಯನ್ನು ಆರಂಭಿಸುವ ಕುರಿತು ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜೆಟ್ ಏರ್‌ವೇಸ್ ಮಾಲೀಕತ್ವ ವಹಿಸಿಕೊಂಡಿರುವ ಜಲನ್‍ಕಾಲ್‍ರಾಕ್ ಒಕ್ಕೂಟ (ಎನ್‍ಎಲ್‍ಸಿಟಿ) ಘೋಷಿಸಿದೆ. ಕಳೆದು ಹೋಗಿರುವ ನಮ್ಮ ಐತಿಹಾಸಿಕ ಸ್ಥಾನವನ್ನು ಮರುಪಡೆಯಲು ಮತ್ತು ವಿಮಾನಯಾನ ಉದ್ಯಮಕ್ಕೆ ಹೊಸ ಮಾನದಂಡಗಳನ್ನು ಸ್ಥಾಪಿಸಿ ಅತ್ಯುತ್ತಮ ಸೇವೆಯನ್ನು ನೀಡುವ …

Read More »

ಜನರೇ ಕಾಂಗ್ರೆಸ್‍ನವರನ್ನು ಬಹಿಷ್ಕಾರ ಮಾಡಿದ ಮೇಲೆ ಇವರೇನು ಕಲಾಪ ಬಹಿಷ್ಕಾರ ಮಾಡೋದು”

ಬೆಂಗಳೂರು,ಡಿ.10- ರಾಜ್ಯದ ಜನರೇ ಕಾಂಗ್ರೆಸ್‍ನವರನ್ನು ಬಹಿಷ್ಕಾರ ಮಾಡಿದ ಮೇಲೆ ಇವರೇನು ಕಲಾಪ ಬಹಿಷ್ಕಾರ ಮಾಡುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ ನಡೆಸಿದರು. ಕಲಾಪ ಬಹಿಷ್ಕಾರ ಮಾಡಿದರೆ ಇವರೇ ಇವರ ಮುಖದ ಮೇಲೆ ಉಗುಳಿಕೊಂಡಂತೆ ಎಂದು ಟೀಕೆ ಮಾಡಿರುವ ಅವರು, ಕಾಂಗ್ರೆಸ್ ನವರು ಬೆದರಿಕೆ ಹಾಕ್ತಾರೇನು? ಒಂದು ಸಲ ಪಶ್ಚಾತ್ತಾಪದ ಧ್ವನಿಯಲ್ಲಿ ಮಾತಾನಾಡುತ್ತಾರೆ. ಮತ್ತೊಂದು ಸಲ ಗೋ ಹತ್ಯೆ ನಿಷೇಧ ಕಾಯ್ದೆ ವಿರೋಧಿಸುತ್ತಾರೆ. ಕಾಂಗ್ರೆಸ್‍ನವರಿಗೆ ಒಂದು ನಿರ್ದಿಷ್ಟ …

Read More »

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ

ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಇಂದಿನಿಂದ ಆರಂಭಗೊಳ್ಳಲಿದೆ.ಹೌದು. ಇಂದಿನಿಂದ 5 ದಿನ ಅಂದರೆ ಡಿಸೆಂಬರ್ 14ರ ವರೆಗೆ ಲಕ್ಷದೀಪೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ದೇವಸ್ಥಾನ, ಬೀಡು, ವಸತಿಛತ್ರಗಳು, ಉದ್ಯಾನ, ಪ್ರವೇಶದ್ವಾರ, ಬಾಹುಬಲಿ ಬೆಟ್ಟವನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದ್ದು, ಶ್ರೀಕ್ಷೇತ್ರ ಮದುಮಗಳಂತೆ ಅಲಂಕಾರಗೊಂಡಿದೆ. ಈ ಮೂಲಕ ಭಕ್ತರನ್ನು ಸೆಳೆಯುತ್ತಿದೆ. ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಯುಟ್ಯೂಬ್ ಮತ್ತು ಫೇಸ್‍ಬುಕ್‍ನಲ್ಲಿ ಕಾರ್ಯಕ್ರಮಗಳ ನೇರ ಪ್ರಸಾರ ನಡೆಯಲಿದೆ. ಈ …

Read More »

ಸರಣಿ ಕಳ್ಳತನ- ಖದೀಮರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವಿಜಯಪುರ: ಬುಧವಾರ ತಡರಾತ್ರಿಯಲ್ಲಿ ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ಸರಣಿ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಖತರ್ನಾಕ್ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಂಧಗಿ ಪಟ್ಟಣದ ಸಂಗೀತಾ ಮೊಬೈಲ್ ಶೋರೂಂನಲ್ಲಿ ಲಕ್ಷಾಂತರ ರೂ. ಮೌಲ್ಯದ ಮೊಬೈಲ್‍ಗಳನ್ನು ಖದೀಮರು ದೋಚಿದ್ದಾರೆ. ಅಲ್ಲದೆ ಸಿದ್ದೇಶ್ವರ ಸೂಪರ್ ಬಾಜಾರ್, ಪೂಜಾರಿ ಟೈರ್ ರಿಮೊಡಿಂಗ್ ಶಾಫ್ ಹಾಗೂ ಸ್ಪೂರ್ತಿ ವೈನ್ ಶಾಫ್ ಗಳಲ್ಲಿಯೂ ಕಳ್ಳತನ ಮಾಡಿ ಖದೀಮರು ಪರಾರಿಯಾಗಿದ್ದಾರೆ.ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯಾವಳಿ ಆಧರಿಸಿ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. …

Read More »

ಪ್ರತಿಪಕ್ಷಗಳ ವಿರೋಧದ ನಡುವೆ ಜಾರಿಗೆ ತಂದ ಕಾಯ್ದೆ, ಇಂತಹ ಸರಕಾರ ಈವರೆಗೂ ಕಂಡಿಲ್ಲ

ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದಾಂತ್ಯ ರೈತರು ನಡೆಸುತ್ತಿರುವ ಬೃಹತ್ ಪ್ರತಿಭಟನೆಗೆ ನಮ್ಮ ಸಂಪೂರ್ಣ ಬೆಂಬಲ ಇದೆ. ನಾವು ರೈತರ ಪರವಾಗಿದ್ದು, ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆಗಳನ್ನು ಕೂಡಲೇ ಕೇಂದ್ರ ಸರಕಾರವು ರದ್ದು ಮಾಡಬೇಕು. ಕಾಯ್ದೆಗಳಲ್ಲಿ ತಿದ್ದುಪಡಿ ತಂದರೆ ಯಾವ ಪ್ರಯೋಜನವು ಇಲ್ಲ, ಕಾಯ್ದೆಗಳನ್ನೇ ರದ್ದು ಮಾಡಬೇಕು ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರವು ವಿರೋಧ ಪಕ್ಷಗಳನ್ನು ಗಣನೆಗೆ …

Read More »

ಕಲ್ಯಾಣ ಕರ್ನಾಟಕದ ಜನರಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಘೋಷಣೆಯಾಗಿರುವ 1,100 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲು ಯೋಜನಾ ಇಲಾಖೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಆದೇಶ ನೀಡಿದ್ದಾರೆ. ಕಲ್ಯಾಣ ಕರ್ನಾಟಕದ ಜನರಿಗೆ ಇದು ಭರ್ಜರಿ ಸಿಹಿಸುದ್ದಿಯಾಗಿದೆ. ಸದನದಲ್ಲಿ ಪೂರಕ ಅಂದಾಜು ವಿಷಯದ ಮೇಲೆ ಚರ್ಚೆ ನಡೆಯುತ್ತಿದ್ದ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಅನುದಾನದ ಬಗ್ಗೆ ಪ್ರಸ್ತಾಪಿಸಿದರು. ಅನುದಾನ ಘೋಷಣೆಯಾದರೂ ಬಿಡುಗಡೆಯಾಗದಿರುವುದರಿಂದ ಯಾವುದೇ ಕಾಮಗಾರಿ ಕೈಗೊಳ್ಳಲು ಸಾಧ್ಯವಿಲ್ಲ. ತಕ್ಷಣ ಅನುದಾನ ಬಿಡುಗಡೆಗೆ ಕ್ರಮ …

Read More »