ಮಂಗಳೂರು: ಮಂಗಳೂರಿನ ಉದ್ಯಮಿಗಳಿಗೆ ಸೇರಿದ ವಿವಿಧ ಆಸ್ಪತ್ರೆ, ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯದ ಖ್ಯಾತ ಉದ್ಯಮಿ ಎ.ಜೆ.ಶೆಟ್ಟಿ ಅವರ ಎ.ಜೆ.ಆಸ್ಪತ್ರೆ, ವೈ.ಅಬ್ದುಲ್ಲಾ ಅವರ ಯನಪೋವಾ ಆಸ್ಪತ್ರೆ ಸೇರಿದಂತೆ ಮಂಗಳೂರು ಹಾಗೂ ಬೆಂಗಳೂರಿನ ನಿವಾಸ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಜೆಪಿ ಮುಖಂಡ ಹುಲಿನಾಯ್ಕರ್ ಅವರಿಗೆ ಸೇರಿದ ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜಿನ ಮೇಲೆ ಕೂಡ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, …
Read More »ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಗೋಕಾಕ್ ತಾಲೂಕಿನ ಸಂಗನಕೇರಿ ಗ್ರಾಮದ ನಿವಾಸಿ ಬಂಧನ
ಬೆಳಗಾವಿ: ಕರ್ನಾಟಕ ಲೋಕಸೇವಾ ಆಯೋಗದ ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶಿವಲಿಂಗ ಪಾಟೀಲ್ ಎಂದು ಗುರುತಿಸಲಾಗಿದೆ. ಈತ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಂಗನಕೇರಿ ಗ್ರಾಮದ ನಿವಾಸಿಯಗೈದ್ದು, ದಾರಿದೀಪ ಹೆಸರಿನ ಕೋಚಿಂಗ್ ಸೆಂಟರ್ ನಡೆಸುತ್ತಿದ್ದ. ಆದರೆ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನಲಾಗಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳನ್ನು ಸಂಪರ್ಕಿಸುತ್ತಿದ್ದ ಆರೋಪಿ, ಮತ್ತೋರ್ವ ಆರೋಪಿ ರಾಚಪ್ಪನಿಂದ ಪ್ರಶ್ನೆ …
Read More »ಚೇತನ್ ಹೊಸ ಚಿತ್ರ ‘100 ಕ್ರೋರ್ಸ್’ ಫಸ್ಟ್ ಲುಕ್ ರಿಲೀಸ್
ನಟ ಚೇತನ್ ಟಾಲಿವುಡ್ ಕಡೆಗೆ ಹೊರಟಿದ್ದು ಇವರ “100 ಕ್ರೋರ್ಸ್’ ಶೀರ್ಷಿಕೆಯ ನೂತನ ಚಿತ್ರ ಕನ್ನಡ ಹಾಗೂ ತೆಲುಗಿನಲ್ಲಿ ಬಿಡುಗಡೆಯಾಗಲಿದೆ. ಸಿನಿಮಾ ಚಿತ್ರೀಕರಣ ಪೂರ್ಣಗೊಳಿಸಿದ್ದು, ಚಿತ್ರದ ಫಸ್ಟ್ ಲುಕ್ ಅನ್ನು ನಿರ್ದೇಶಕ ಸುನಿ ಬಿಡುಗಡೆಗೊಳಿಸಿದ್ದಾರೆ. ಆಕ್ಷನ್-ಪ್ಯಾಕ್ಡ್ ಕಮರ್ಷಿಯಲ್ ಡ್ರಾಮಾದಲ್ಲಿ ಚೇತನ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಏಕಕಾಲದಲ್ಲಿ ಎರಡು ಭಾಷೆಗಳಲ್ಲಿ ತಯಾರಾದ ಚಿತ್ರಕ್ಕೆ ಸಂಭಾಷಣಾಗಾರ ವಿರಾಟ್ ಚಕ್ರವರ್ತಿ ಆಕ್ಷನ್ ಕಟ್ ಹೇಳಿದ್ದಾರೆ. “100 ಕ್ರೋರ್ಸ್’ ಚಿತ್ರಕ್ಕೆ ಸಾಯಿ ಕಾರ್ತೀಕ್ ಸಂಗೀತ ನೀಡುತ್ತಿದ್ದು …
Read More »ವಿಟಮಿನ್ ಎಫ್ ಕೊರತೆ ನಿಮ್ಮನ್ನು ಕಾಡುತ್ತಿದೆಯಾ.?
ದೇಹದ ಅಂಗಾಂಶಗಳು ಉತ್ತಮವಾಗಿ ಕಾರ್ಯ ನಿರ್ವಹಿಸಲು ವಿಟಮಿನ್ ಎಫ್ ತುಂಬಾ ಅಗತ್ಯ. ಒಂದು ವೇಳೆ ಇದು ಕಡಿಮೆಯಾದರೆ ಒಣಚರ್ಮ, ಕೂದಲುದುರುವ ಸಮಸ್ಯೆ, ಮೆದುಳು, ಕಣ್ಣಿನ ಸಮಸ್ಯೆ ಕಾಡುತ್ತದೆ. ಹಾಗಾಗಿ ವಿಟಮಿನ್ ಎಫ್ ಸಮೃದ್ಧವಾಗಿರುವಂತಹ ಈ ಆಹಾರಗಳನ್ನು ಸರಿಯಾಗಿ ಸೇವಿಸಿ. *ವೆಜಿಟಬಲ್ ಆಯಿಲ್ : ಇದನ್ನು ಸಸ್ಯ ಬೀಜದಿಂದ ಅಥವಾ ಹಣ್ಣುಗಳ ಬೀಜದಿಂದ ಹೊರತೆಗೆಯಲಾಗುತ್ತದೆ. ಕಡಲೆಕಾಯಿ, ಆಲಿವ್, ಸೋಯಾಬೀನ್, ಸೂರ್ಯ ಕಾಂತಿ ಎಣ್ಣೆಯಲ್ಲಿ ವಿಟಮಿನ್ ಎಫ್ ಸಮೃದ್ಧವಾಗಿದೆ. ಇದು ಆರೋಗ್ಯಕ್ಕೆ ತುಂಬಾ …
Read More »ಸದೃಢ ಆರೋಗ್ಯ ಇದ್ದರಷ್ಟೇ ಬಡ್ತಿ: ಎಡಿಜಿಪಿ ಅಲೋಕ್ ಕುಮಾರ್
ಕಲಬುರ್ಗಿ: ‘ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್‌ಆರ್‌ಪಿ) ಪಡೆಯ ಸಿಬ್ಬಂದಿಯಲ್ಲಿ ಈಗ ಸದೃಢ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಬಡ್ತಿ, ವರ್ಗಾವಣೆ, ನಿಯೋಜನೆ, ಪದಕ ಪ್ರದಾನ… ಹೀಗೆ ಎಲ್ಲ ಹಂತದಲ್ಲೂ ಸಿಬ್ಬಂದಿ ದೈಹಿಕ ಕಾರ್ಯಕ್ಷಮತೆ ದೃಢಪಡಿಸುವುದು ಅನಿವಾರ್ಯ’ ಎಂದು ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು. ನಗರದಲ್ಲಿ ಮಂಗಳವಾರ ‘ಪ‍್ರಜಾವಾಣಿ’ ಜತೆಗೆ ಮಾತನಾಡಿದ ಅವರು, ‘ಪೊಲೀಸ್ ಸಿಬ್ಬಂದಿಗೆ ಇಲಾಖೆಯು ಈಗ ಸಾಕಷ್ಟು ಸೌಕರ್ಯ, ಸಂಬಳ ನೀಡುತ್ತಿದೆ. ಇನ್ನು ಮುಂದೆ ಸೌಕರ್ಯಕ್ಕೆ …
Read More »ಈ ಬಾರಿಯ ಬಜೆಟ್ ನಿಂದ ಆರೋಗ್ಯ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ : ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ಫೆಬ್ರವರಿ 16 : ವೈದ್ಯರು ಪ್ರತಿ ರೋಗಿಯನ್ನು ತಮ್ಮ ಕುಟುಂಬ ಸದಸ್ಯರಂತೆ ಕಂಡು ಸೇವೆ ನೀಡಿದರೆ ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲಿ ನಿರೀಕ್ಷಿತ ಸೇವೆ ನೀಡಲು ಸಾಧ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಬೆಂಗಳೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲಿ 3 ಲಕ್ಷ ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಸರ್ಕಾರಿ ಆರೋಗ್ಯ ಕೇಂದ್ರಗಳು ನಿರೀಕ್ಷೆಗೆ ತಕ್ಕಂತೆ …
Read More »ನಟ ರಾಘವೇಂದ್ರ ರಾಜ್ ಕುಮಾರ್ ಗೆ ಹೃದಯ ಶಸ್ತ್ರಚಿಕಿತ್ಸೆಗೆ ಸಿದ್ಧತೆ
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಅನಾರೋಗ್ಯದಿಂದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಮೂಲಗಳ ಪ್ರಕಾರ ರಾಘವೇಂದ್ರ ರಾಜ್ ಕುಮಾರ್ ಅವರಿಗೆ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆಗೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಅಭಿಮಾನಿಗಳು ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಭದ್ರತೆಗಾಗಿ ಆಸ್ಪತ್ರೆ ಸುತ್ತ ಕೆ.ಎಸ್.ಆರ್.ಪಿ. ತುಕಡಿ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು …
Read More »ಇಂದು ರಾಜ್ಯಕ್ಕಾಗಮಿಸುತ್ತಿದ್ದಾರೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್
ಬೆಂಗಳೂರು,ಫೆ.17- ಆಡಳಿತಾರೂಢ ಬಿಜೆಪಿಯಲ್ಲಿ ನಡೆಯುತ್ತಿರುವ ಮಿಂಚಿನ ಬೆಳವಣಿಗೆಗಳ ನಡುವೆಯೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಸಂಜೆ ನವದೆಹಲಿಯಿಂದ ಆಗಮಿಸಲಿರುವ ಅವರು, ಇಂದು ರಾತ್ರಿ ಬೆಂಗಳೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಈ ವೇಳೆ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಕೆಲವು ನಾಯಕರ ಜೊತೆ ಔಪಚಾರಿಕವಾಗಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ.ಆದರೆ, …
Read More »ಪೊಲೀಸ್ ಠಾಣೆಯ ಎದುರು ಅಸ್ಥಿಪಂಜರ ಪತ್ತೆ; ತನಿಖೆ ನಡೆಸಲು ಮುಂದಾದ ಪೊಲೀಸ್ ಸಿಬ್ಬಂದಿ
ಬೆಂಗಳೂರು : ಚರಂಡಿ ದುರಸ್ತಿ ವೇಳೆ ಮನುಷ್ಯನ ಅಸ್ಥಿಪಂಜರವೊಂದು ಪತ್ತೆಯಾದ ಘಟನೆ ನಗರದ ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಎದುರಿನಲ್ಲಿ ನಡೆದಿದೆ. ಸುಮಾರು ನಾಲ್ಕು ವರ್ಷ ಹಿಂದೆ ಸಂಭವಿಸಿದ ಘಟನೆ ಇದಾಗಿರಬಹುದು ಎಂದು ಶಂಕಿಸಲಾಗಿದೆ . ಈ ಅಸ್ತಿಪಂಜರದ ಕುರಿತಾದ ತನಿಖೆ ನಡೆಸಲಾಗುತ್ತಿದೆ ಎಂದು ವಿಜಯನಗರ ಠಾಣೆ ಪೊಲೀಸರು ತಿಳಿಸಿದ್ದಾರೆ . ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯ ಮುಂದಿರುವ ಮುಚ್ಚಿದ ಮೋರಿಯಲ್ಲಿ ಕಸಗಳು ತುಂಬಿ ಚರಂಡಿ ನೀರು ಮುಂದೆ ಸಾಗುತ್ತಿಲ್ಲ ಎಂಬ …
Read More »ರೈತರ ಪ್ರತಿಭಟನೆ ಪರ ಧ್ವನಿಯೆತ್ತಿ ವಿವಾದಕ್ಕೀಡಾದ ಗಾಯಕಿ ರಿಹಾನ್ನಾ ಮೇಲೆ ಮತ್ತೊಂದು ವಿವಾದ
ನ್ಯೂಯಾರ್ಕ್: ಭಾರತದಲ್ಲಿನ ರೈತರ ಪ್ರತಿಭಟನೆ ಪರ ಧ್ವನಿಯೆತ್ತಿ, ವಿವಾದಕ್ಕೀಡಾಗಿದ್ದ ಖ್ಯಾತ ಪಾಪ್ ಗಾಯಕಿ ರಿಹಾನ್ನಾ ಮತ್ತೂಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಗಣೇಶನ ಪದಕವುಳ್ಳ ನೆಕ್ಲೇಸ್ ಧರಿಸಿ, ಟಾಪ್‌ಲೆಸ್‌ನಲ್ಲಿ ಪೋಸು ಕೊಟ್ಟ ಫೋಟೋವೊಂದನ್ನು ರಿಹಾನ್ನಾ ಟ್ವಿಟರಿನಲ್ಲಿ ಪೋಸ್ಟ್ ಮಾಡಿದ್ದಾರೆ. “ಅರೆಬೆತ್ತಲೆ ರೂಪದ ರಿಹಾನ್ನಾ, ತನ್ನ ಮೈಮಾಟದ ಪ್ರದರ್ಶನಕ್ಕಾಗಿ ಹಿಂದೂ ದೇವರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಮುಗಿಲು ಮುಟ್ಟಿದೆ. “ಭಾರತವನ್ನು, ಹಿಂದೂ ಧರ್ಮವನ್ನು ಅವಹೇಳನ ಮಾಡುವುದನ್ನು ನಿಲ್ಲಿಸಿ’ ಎಂದು …
Read More »
Laxmi News 24×7