Breaking News

ಭೂ ಸುಧಾರಣೆ ಕಾಯ್ದೆ ಖಂಡಿಸಿ ಅನ್ನದಾತರು ನಗರದಲ್ಲಿಂದು ಬಾರುಕೋಲು ಚಳವಳಿ ನಡೆಸುವ ಮೂಲಕ ಸರ್ಕಾರದ ವಿರುದ್ಧ ಕಿಡಿ

ಬೆಂಗಳೂರು, ಡಿ.9- ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳು, ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆ ಖಂಡಿಸಿ ಅನ್ನದಾತರು ನಗರದಲ್ಲಿಂದು ಬಾರುಕೋಲು ಚಳವಳಿ ನಡೆಸುವ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿದರು. ರಾಜ್ಯದ ವಿವಿಧ ಭಾಗಗಳಿಂದ ಹಸಿರು ಶಾಲು ಹೊದ್ದು ಕೈಯಲ್ಲಿ ಬಾರುಕೋಲು ಹಿಡಿದು ಬಂದಿದ್ದ ಸಾವಿರಾರು ರೈತರು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಜಮಾವಣೆಗೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋ ಧೋರಣೆ ಖಂಡಿಸಿ ಕ್ಕಾರದ ಘೋಷಣೆಗಳನ್ನು ಕೂಗಿದರು …

Read More »

ನಾಳೆ ಸಾರಿಗೆ ನೌಕರರ ಜಾಥಾ ಬಸ್ ರಸ್ತೆಗೆ ಇಳಿಯುವುದು ಡೌಟು!

ಬೆಂಗಳೂರು: ನಾಳೆ ಸಾರಿಗೆ ನೌಕರರು ಜಾಥಾ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಸ್ ಸಂಚಾರ ವ್ಯತ್ಯಯವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಕೆಎಸ್ಆರ್ ಟಿಸಿ, ಬಿಎಂಟಿಸಿ, ಎನ್ ಡ್ ಬ್ಲ್ಯೂ ಕೆಎಸ್ಆರ್ ಟಿಸಿ ಸೇರಿದಂತೆ ವಿವಿಧ ಸಾರಿಗೆ ನೌಕರರು ನಾಳೆ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ. ನಾಳೆ ಬೆಳಿಗ್ಗೆ ಸಿಟಿ ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೆ ಸಾರಿಗೆ ನೌಕರರು ಹಾಗೂ ಕುಟುಂಬ ಸದಸ್ಯರಿಂದ ಜಾಥಾ ನಡೆಯಲಿದೆ. ಆದರೆ ಕೆಎಸ್ಆರ್ …

Read More »

ನಿಪ್ಪಾಣಿ ನಗರಸಭೆಯಲ್ಲಿ ಪತ್ರಕರ್ತರನ್ನು ಹೊರಗಿಟ್ಟುಸಾಮಾನ್ಯ ಸಭೆ: ಪತ್ರಕರ್ತರ ಧರಣಿ

ಬೆಳಗಾವಿ : ಪತ್ರಕರ್ತರನ್ನು ಹೊರಗಿಟ್ಟು ಸಾಮಾನ್ಯ ಸಭೆ ನಡೆಸುತ್ತಿರುವುದನ್ನು ಖಂಡಿಸಿ ಪತ್ರಕರ್ತರು ನಗರಸಭೆಯ ಹೊರಗೆ ಬುಧವಾರ ಧರಣಿ ನಡೆಸಿದರು. ನಗರಸಭೆಯಲ್ಲಿ ಸಾಮಾನ್ಯ ಸಭೆ ನಡೆಸಿದ್ದರು. ಈ ವೇಳೆ ಪ್ರತ್ರಕರ್ತರನ್ನು ಹೊರಗಿಟ್ಟು ಸಭೆ ನಡೆಸಿದ್ದಾರೆ. ಇದರಿಂದ ಅಸಮಾಧಾನಗೊಂಡ ಪತ್ರಕರ್ತರು ನಗರಸಭೆ ಎದುರು ಧರಣಿ ನಡೆಸಿ, ಧಿಕ್ಕಾರ ಕೂಗಿದ್ದಾರೆ. ಲೋಕಸಭೆ, ವಿಧಾನಸಭೆ ಅಧಿವೇಶನದಲ್ಲಿಯೂ ಪತ್ರಕರ್ತರಿಗೆ ವರದಿ ಮಾಡಲು ಅವಕಾಶ ಇರುತ್ತದೆ. ಹಾಗಾದರೆ  ನಿಪ್ಪಾಣಿ ನಗರಸಭೆಯಲ್ಲಿ ಏಕಿಲ್ಲ. ನಗರಸಭೆ ಅಸ್ತಿತ್ವಕ್ಕೆ ಬಂದಾಗಿನಿಂದ ಮೊದಲ ಸಲ …

Read More »

ಪಂಚತಾರಾ ಹೋಟೆಲ್‍ನ ಕೊಠಡಿಯೊಂದರಲ್ಲಿಆತ್ಮಹತ್ಯೆಗೆ ಶರಣಾಗಿದ್ದಾರೆ.ನಿರೂಪಕಿ

ಚೆನ್ನೈ, ಡಿ.9- ಖಿನ್ನತೆಗೆ ಒಳಗಾಗಿದ್ದ ಕಿರುತೆರೆ ನಟಿ ಹಾಗೂ ನಿರೂಪಕಿಯೊಬ್ಬರು ಚೆನ್ನೈನ ನಜರೆತ ಪೆಟ್ಟೈನಲ್ಲಿರುವ ಪಂಚತಾರಾ ಹೋಟೆಲ್‍ನ ಕೊಠಡಿಯೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿ.ಜೆ. ಚಿತ್ರಾ (28) ಆತ್ಮಹತ್ಯೆ ಮಾಡಿಕೊಂಡಿರುವ ನಟಿ. ಇವಿಪಿ ಫಿಲ್ಮ್ ಸಿಟಿಯಲ್ಲಿ ನಿನ್ನೆ ಧಾರಾವಾಹಿಯೊಂದರ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ಚಿತ್ರಾ ಆತ್ಮಹತ್ಯೆಗೆ ಶರಣಾಗಿರುವುದು ಕಿರುತೆರೆ ಕಲಾವಿದರು, ಅಭಿಮಾನಿಗಳು ಹಾಗೂ ಸ್ನೇಹಿತರಿಗೆ ಆಘಾತ ಉಂಟುಮಾಡಿದೆ. ಪಾಂಡಿಯನ್ ಸ್ಟೋರ್ಸ್ ಧಾರಾವಾಹಿಯ ಮುಲೈ ಪಾತ್ರದಲ್ಲಿ ಕಾಣಿಸಿಕೊಂಡ ನಂತರ ತನ್ನದೇ ಅಭಿಮಾನಿ ಬಳಗವನ್ನು ಹೊಂದಿದ್ದ …

Read More »

ವಿಧಾನಪರಿಷತ್ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಸಾರಿಗೆ ನೌಕರರಿಗೆ ಸಂಬಳ ನೀಡದ ವಿಚಾರದ ಕುರಿತಂತೆ ಶಾಸಕ ಹರ್ಷವರ್ಧನ್ ಪ್ರಸ್ತಾಪ

ಬೆಂಗಳೂರು : ಕೆಎಸ್ಆರ್ ಟಿಸಿ, ಬಿಎಂಟಿಸಿ ನೌಕರರಿಗೆ ಡಿಸೆಂಬರ್ ತಿಂಗಳ ಸಂಬಳವನ್ನು 10 ದಿನದೊಳಗೆ ನೀಡುತ್ತೇವೆ ಎಂದು ಸಾರಿಗೆ ಸಚಿವ ಮತ್ತು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ವಿಧಾನಪರಿಷತ್ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಸಾರಿಗೆ ನೌಕರರಿಗೆ ಸಂಬಳ ನೀಡದ ವಿಚಾರದ ಕುರಿತಂತೆ ಶಾಸಕ ಹರ್ಷವರ್ಧನ್ ಪ್ರಸ್ತಾಪ ಮಾಡಿದರು. ಇದಕ್ಕೆ ಉತ್ತರಿಸಿದ ಲಕ್ಷ್ಮಣ ಸವದಿ ನವೆಂಬರ್ ತಿಂಗಳ ತನಕ ಎಲ್ಲಾ ನೌಕರರಿಗೆ ಸಂಬಳ ನೀಡಲಾಗಿದೆ. ಡಿಸೆಂಬರ್ ತಿಂಗಳ ಸಂಬಳವನ್ನು 8 ರಿಂದ …

Read More »

ರೈತರ ಬಾಯಿಗೆ ಕುಮಾರಸ್ವಾಮಿ ಮಣ್ಣು ಹಾಕೋ ಕೆಲಸ ಮಾಡಿದ್ರು. ಅವರು ಒಬ್ಬ ಡೀಲಿಂಗ್ ಮಾಸ್ಟರ್: ಕೋಡಿಹಳ್ಳಿ ಚಂದ್ರಶೇಖರ್:

ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ರೈತರು ಮಣ್ಣಿನ ಮಗ ಅಂತಾರೆ. ಆದ್ರೇ ರೈತರ ಬಾಯಿಗೆ ಕುಮಾರಸ್ವಾಮಿ ಮಣ್ಣು ಹಾಕೋ ಕೆಲಸ ಮಾಡಿದ್ರು. ಅವರಿಗೆ ರೈತರ ಪರ ಕಾಳಜಿಯೇ ಇಲ್ಲ. ಕುಮಾರಸ್ವಾಮಿ ಮಣ್ಣಿನ ಮಕ್ಕಳ ದ್ರೋಹಿ ಹಾಗೂ ಅವರು ಒಬ್ಬ ಡೀಲಿಂಗ್ ಮಾಸ್ಟರ್ ಎಂಬುದಾಗಿ ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದ್ದಾರೆ. ನಗರದಲ್ಲಿ ವಿಧಾನಸೌಧ ಮುತ್ತಿಗೆ ಪ್ರತಿಭಟನೆ ಚಳುವಳಿ ನಡೆಸುತ್ತಾ ಮಾಜಿ ಸಿಎಂ ಭೂ ಸುಧಾರಣಾ ತಿದ್ದುಪಡಿ …

Read More »

250 ರೂ.ಗೆ 1 ಡೋಸ್‌ – ಮಾರ್ಚ್‌ನಲ್ಲಿ ಮೆಡಿಕಲ್‌ ಸ್ಟೋರ್‌ನಲ್ಲಿ ಲಭ್ಯ?

ನವದೆಹಲಿ: ಇಂಗ್ಲೆಂಡಿನ ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಮತ್ತು ಆಸ್ಟ್ರಾಜೆನಿಕಾ ಅಭಿವೃದ್ಧಿ ಪಡಿಸಿರುವ ಕೋವಿಶೀಲ್ಡ್‌ ಲಸಿಕೆ ಖರೀದಿ ವಿಚಾರವಾಗಿ ಶೀಘ್ರವೇ ಪುಣೆಯ ಸೀರಂ ಮತ್ತು ಭಾರತ ಸರ್ಕಾರದ ನಡುವೆ ಒಪ್ಪಂದ ನಡೆಯುವ ಸಾಧ್ಯತೆಯಿದೆ.ವಿಶ್ವದ ಅತಿದೊಡ್ಡ ಲಸಿಕೆ ತಯಾರಿಕಾ ಸಂಸ್ಥೆ ಸೀರಂ 1 ಡೋಸ್‌ಗೆ 250 ರೂ. ದರ ನಿಗದಿ ಪಡಿಸಿದ್ದು ಒಪ್ಪಂದದ ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಪ್ರಕಟಿಸಿದೆಈ ಕುರಿತು ಮಾತನಾಡಿದ ಸಂಸ್ಥೆ ಸಿಇಒ ಅದರ್ ಪೂನಾವಾಲಾ, …

Read More »

ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ವ್ಯಕ್ತಿಯೊಬ್ಬನಿಗೆ ಕಾರ್ ಡಿಕ್ಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ

ಬೆಳಗಾವಿ : ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ವ್ಯಕ್ತಿಯೊಬ್ಬನಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಹುಕ್ಕೇರಿ ತಾಲ್ಲೂಕಿನ ಬೊಳಶ್ಯಾನಟ್ಟಿ ಗ್ರಾಮದ ಶಂಕರ  ಕೊಂಕಣಿ ಮೃತ ವ್ಯಕ್ತಿ. ಸಮೀಪದ ಏಕಸ್ ಕಂಪನಿ ಸಮೀಪದಲ್ಲಿ ಘಟನೆ ನಡೆದಿದ್ದು, ಬೆಳಗಾವಿಯಿಂದ ಸಂಕೇಶ್ವರ ಕಡೆಗೆ ಹೊರಟ್ಟಿದ್ದ  ಕಾರ್ ಡಿಕ್ಕಿ ಹೊಡೆದಿದೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಡಿಕೆಶಿ ರಾಜಿನಾಮಗೆ ಒತ್ತಾಯ! ಸತೀಶ ಜಾರಕಿಹೋಳಿ ಹೇಳಿದ್ದೇನು

  ಬೆಂಗಳೂರು: ನಮ್ಮದು ಸಾಮೂಹಿಕ ನಾಯಕತ್ವ. ಸೋಲಿನ ಹೊಣೆಗೆ ಡಿ.ಕೆ. ಶಿವಕುಮಾರ್ ಒಬ್ಬರೇ ಕಾರಣವಲ್ಲ. ಅವರು ರಾಜೀನಾಮೆ ಕೊಡಬೇಕಾದ ಅಗತ್ಯವಿಲ್ಲ. ಉಪಚುನಾವಣೆಯಲ್ಲಿ ಆಡಳಿತಾರೂಢ ಪಕ್ಷವೇ ಗೆಲ್ಲುತ್ತೆ. ಹಾಗಾಗಿ ರಾಜೀನಾಮೆ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಚುನಾವಣೆ ಸೋಲಿನ ಹೊಣೆ ಹೊತ್ತು ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕೆಂಬ ಈಶ್ವರಪ್ಪ ಹೇಳಿಕೆಗೆ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.      

Read More »

ಆಟವಾಡಲು ಹೋದ ಇಬ್ಬರು ಬಾಲಕರು ಬಾವಿಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ

ಬೆಳಗಾವಿ: ಸಂಬಂಧಿಕರ ಜಮೀನಿನಲ್ಲಿ ಆಟವಾಡಲು ಹೋದ ಇಬ್ಬರು ಬಾಲಕರು ಬಾವಿಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಬೆಕ್ಕಿನಕೇರಿಯಲ್ಲಿ ನಡೆದಿದೆ. ಮೃತ ಬಾಲಕರನ್ನು ಲೋಕೇಶ ವಿಠಲ (10) ಹಾಗೂ ನಿಕೀಲ (7) ಎಂದು ಗುರುತಿಸಲಾಗಿದೆ. ಬಾಳು ಮಲ್ಲಪ್ಪ ಗಾವಡೆ ಎಂಬುವವರ ಜಮೀನೊಂದರಲ್ಲಿ ಆಟವಾಡಲೆಂದು ಮೂವರು ಬಾಲಕರು ಹೋಗಿದ್ದಾರೆ. ಈ ವೇಳೆಮೀನು, ಏಡಿ ಹಿಡಿಯಲೆಂದು ಬಾವಿಯತ್ತ ಸಾಗಿದ ಇಬ್ಬರು ಬಾಲಕರು, ಏಕಾಏಕಿ ಬಾವಿಗೆ ಬಿದ್ದಿದ್ದಾರೆ. ಇನ್ನೋರ್ವ ಬಾಲಕ ರಕ್ಷಣೆಗಾಗಿ ಕೋಗಿದ್ದಾನೆ. ಗ್ರಾಮಸ್ಥರು ಬಂದು …

Read More »