Breaking News

ನಿವಾರ್ ಅಬ್ಬರ- ಕೋಲಾರದಲ್ಲಿ ಭಾರೀ ಮಳೆ,

ಕೋಲಾರ: ಚೆನ್ನೈ ನಿವಾರ್ ಚಂಡ ಮಾರುತದ ಅಬ್ಬರ ಮುಂದುವರೆದಿದ್ದು, ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಪರಿಣಾಮ ಮನೆಯ ಗೋಡೆ ಕುಸಿದಿದ್ದು, ವ್ಯಕ್ತಿಯ ಕಾಲು ಮುರಿದಿದೆ. ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಪ್ರತ್ಯೇಕ ಪ್ರಕರಣದಲ್ಲಿ ನಾಲ್ಕು ಮನೆ ಗೋಡೆ ಕುಸಿತವಾಗಿವೆ. ಪೆದ್ದೂರು ಗ್ರಾಮದ ಸೂರ್ಯ ನಾರಾಯಣ ಅವರ ಕಾಲು ಮುರಿದಿದೆ. ಮಲಗಿದ್ದಾಗ ಗೋಡೆ ಕುಸಿದ್ದರಿಂದ ಕಾಲು ಮುರಿದಿದೆ. ಮುಷ್ಟೂರಲ್ಲಿ ನಾಗಮಣಿ, ವಿಜಿಯಮ್ಮ ಅವರ 2 ಮನೆಯ ಗೋಡೆ ಕುಸಿತವಾಗಿದೆ. ಅಬ್ಬೆಹಳ್ಳಿಯ ಭಾಗ್ಯಮ್ಮ ಅವರ …

Read More »

ಸಾರಿಗೆ ಬಸ್ಸಿನಲ್ಲಿ ಕೊವಿಡ್ ನಿಯಮಪಾಲನೆ ಇಲ್ಲದ ಹಿನ್ನೆಲೆಯಲ್ಲಿ ಪ್ರಯಾಣಿಕರ ಆಕ್ರೋಶ

ರಾಯಚೂರು: ಸಾರಿಗೆ ಬಸ್ಸಿನಲ್ಲಿ ಕೊವಿಡ್ ನಿಯಮಪಾಲನೆ ಇಲ್ಲದ ಹಿನ್ನೆಲೆಯಲ್ಲಿ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಮಂತ್ರಾಲಯ ಬಸ್ ನಿಲ್ದಾಣದಲ್ಲಿ ನಡೆದಿದೆ. ತುಂಗಭದ್ರಾ ಪುಷ್ಕರ ಹಿನ್ನೆಲೆಯಲ್ಲಿ ಭಕ್ತರು ಮಂತ್ರಾಲಯಕ್ಕೆ ಬಂದಿದ್ದರು. ಆದರೆ ಇವರು ರಾಯಚೂರು- ಬೆಂಗಳೂರು ಮಾರ್ಗದ ಸ್ಲೀಪರ್ ಬಸ್ಸಿನಲ್ಲಿ ಪ್ರಯಾಣಿಸಲು ನಿರಾಕರಿಸಿದ್ದಾರೆ. ಅಲ್ಲದೆ ಸಾರಿಗೆ ಸಿಬ್ಬಂದಿಯೊಂದಿಗೆ ಪ್ರಯಾಣಿಕರ ಮಾತಿನ ಚಕಮಕಿ ನಡೆಸಿದ್ದಾರೆ. ಬಸ್ಸಿನಲ್ಲಿ ಸ್ವಚ್ಛತೆಯಿಲ್ಲ, ಸೀಟುಗಳು ಹಾಳಾಗಿರುವುದರಿಂದ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.

Read More »

ವಾಟಾಳ್ ನಾಗರಾಜ್ ಇಂದು ಹೈವೇ ಬಂದ ಮಾಡ್ತಾರಂತೆ ಬೆಳಗಾವಿಯಲ್ಲಿ

ಬೆಳಗಾವಿ- ಬೆಂಗಳೂರಿನಲ್ಲಿ ಕರ್ನಾಟಕ ಬಂದ್..ಬಂದ್..ಬಂದ್ ಎಂದು ಘೋಷಣೆ ಮಾಡಿದ ವಾಟಾಳ್ ನಾಗರಾಜ್  ಶುಕ್ರವಾರ ಬೆಳಗಾವಿಗೆ ಬರುತ್ತಿದ್ದಾರೆ. ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ವಿರೋಧಿಸಿ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿರಿಯ ಕನ್ನಡಪರ ಹೋರಣಾಟಗಾರ, ವಾಟಾಳ್ ಇಂದು  ಬೆಳಿಗ್ಗೆ 11-30 ಗಂಟೆಗೆ ಬೆಳಗಾವಿಯ ಸುವರ್ಷ ಸೌಧದ ಎದುರು,ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲಿದ್ದಾರೆವಾಟಾಳ್ ನಾಗರಾಜ್ ಅವರ ಜೊತೆ ಪ್ರವೀಣ ಶೆಟ್ಟಿ,ಶಿವರಾಮೇಗೌಡ ಸೇರಿದಂತೆ ಬೆಂಗಳೂರಿನ ಅನೇಕ ಕನ್ನಡಪರ …

Read More »

ವೀರಶೈವ ಲಿಂಗಾಯತರಿಗೆ ಬಂಪರ್ ಮೇಲೆ ಬಂಪರ್ ಸಿಗುತ್ತಿದೆ.

ಬೆಂಗಳೂರು: ವೀರಶೈವ ಲಿಂಗಾಯತರಿಗೆ ಬಂಪರ್ ಮೇಲೆ ಬಂಪರ್ ಸಿಗುತ್ತಿದೆ. ಲಿಂಗಾಯತ ಸಮುದಾಯಕ್ಕೆ ಯಡಿಯೂರಪ್ಪ ಬಿಗ್ ಗಿಫ್ಟ್ ನೀಡಲಿದ್ದಾರೆ. ಮೊನ್ನೆಯಷ್ಟೇ ಲಿಂಗಾಯತ ನಿಗಮ ಸ್ಥಾಪನೆ ಆದೇಶ ನೀಡಿದ್ದ ಸಿಎಂ, ನಿಗಮಕ್ಕೆ 500 ಕೋಟಿ ಆರಂಭಿಕ ಅನುದಾನ ಘೋಷಿಸಿದ್ದರು. ಇದೀಗ ಲಿಂಗಾಯತ ಸಮುದಾಯಕ್ಕೆ ಮತ್ತಷ್ಟು ಬಂಪರ್ ಗಿಫ್ಟ್ ನೀಡಲಿದ್ದಾರೆ. ಲಿಂಗಾಯತ ಓಲೈಕೆಗೆ ಯಡಿಯೂರಪ್ಪ ಮಾಸ್ಟರ್ ಪ್ಲ್ಯಾನ್ ಮಾಡುತ್ತಿದ್ದಾರೆ. ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯ ಸೇರ್ಪಡೆಗೆ ಶಿಫಾರಸು ಮಾಡಲಿದ್ದಾರೆ. ತರಾತುರಿಯಲ್ಲಿ ಕ್ಯಾಬಿನೆಟ್ ಅಜೆಂಡಾಗೆ …

Read More »

ಒನ್ ನೇಷನ್, ಒನ್ ಎಲೆಕ್ಷನ್: ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮತ್ತೆ ಒನ್ ನೇಷನ್, ಒನ್ ಎಲೆಕ್ಷನ್ ಬಗ್ಗೆ ಮಾತನಾಡಿದ್ದು, ಎಲ್ಲ ಚುನಾವಣೆಗಳಿಗೂ ಒಂದೇ ಮತದಾರರ ಪಟ್ಟಿ ಇರಬೇಕು. ಇದರಿಂದ ಆಗಾಗ್ಗೆ ನಡೆಯುವ ಮತದಾನದಿಂದಾಗಿ ಪ್ರತಿ ಕೆಲ ತಿಂಗಳಿಗೊಮ್ಮೆ ಅಭಿವೃದ್ಧಿ ಕಾರ್ಯಗಳ ಮೇಲೆ ಚುನಾವಣಾ ನೀತಿ ಸಂಹಿತೆಯ ಅಡ್ಡಿಯನ್ನು ತಡೆಯಬೇಕು ಎಂದು ಹೇಳಿದ್ದಾರೆ. ಅಖಿಲ ಭಾರತ ಅಧಿಕಾರಿಗಳ 80ನೇ ಸಮಾವೇಶದ ಅಂತಿಮ ದಿನವಾದ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಒಂದು …

Read More »

ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಕ್ರಮ ಕೈಗೊಳ್ಳಲು ಕೋವಿಡ್ ಸಾಂಕ್ರಾಮಿಕ ಕಾರಣವೆಂದಾದಲ್ಲಿ ಇತ್ತೀಚೆಗೆ ಹರ್ಯಾಣ ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲ ಅವರು ಹೇಗೆ ರೈತರ ರ್ಯಾಲಿ ನಡೆಸಿದ್ದರು ಎಂದು ಪ್ರಶ್ನಿಸಿದ್ದಾರೆ.

ಹೊಸದಿಲ್ಲಿ : ಗುರುಗ್ರಾಮದಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿದ್ದಾರೆಂದು ಹರ್ಯಾಣ ಪೊಲೀಸರು ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರನ್ನು ವಶಪಡಿಸಿಕೊಂಡ ಬೆನ್ನಲ್ಲೇ ಯಾದವ್ ಅವರು ಮಹತ್ವದ ಪ್ರಶ್ನೆಯೊಂದನ್ನು ಮುಂದಿಟ್ಟಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಕ್ರಮ ಕೈಗೊಳ್ಳಲು ಕೋವಿಡ್ ಸಾಂಕ್ರಾಮಿಕ ಕಾರಣವೆಂದಾದಲ್ಲಿ ಇತ್ತೀಚೆಗೆ ಹರ್ಯಾಣ ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲ ಅವರು ಹೇಗೆ ರೈತರ ರ್ಯಾಲಿ ನಡೆಸಿದ್ದರು ಎಂದು ಪ್ರಶ್ನಿಸಿದ್ದಾರೆ. “ಇದೊಂದು ವಿಚಿತ್ರ ಸಾಂಕ್ರಾಮಿಕ,” ಎಂದು ಹರ್ಯಾಣದ ಮನೋಹರ್ ಲಾಲ್ ಖಟ್ಟರ್ ನೇತೃತ್ವದ …

Read More »

ಸ್ಯಾಂಡಲ್‍ವುಡ್ ಅಂಗಳದಲ್ಲಿ ಮತ್ತೊಂದು ಸಿನಿಮಾ ಚಿತ್ರಮಂದಿರಕ್ಕೆ ಬರಲು ಸಿದ್ಧವಾಗಿದೆ

ಸ್ಯಾಂಡಲ್‍ವುಡ್ ಅಂಗಳದಲ್ಲಿ ಮತ್ತೊಂದು ಸಿನಿಮಾ ಚಿತ್ರಮಂದಿರಕ್ಕೆ ಬರಲು ಸಿದ್ಧವಾಗಿದೆ. ಕಳೆದು ಹೋದ ಘಟನೆಗಳ ಜೊತೆ ವಾಸ್ತವವನ್ನು ತಿಳಿಸಲು ಬರುತ್ತಿರುವ ಈ ಚಿತ್ರದ ಹೆಸರು ‘ಗಡಿಯಾರ’. ಪ್ರಬಿಕ್ ಮೊಗವೀರ್ ನಿರ್ದೇಶನದ ‘ಗಡಿಯಾರ’ ಸಿನಿಮಾ ಕೋವಿಡ್ ಅನ್‍ಲಾಕ್ ಬಳಿಕ ಚಿತ್ರಮಂದಿರದಲ್ಲಿ ಬಿಡುಗಡೆಯಾಗುತ್ತಿರುವ ಎರಡನೇ ಚಿತ್ರ. ಇದೇ ವಾರ ನವೆಂಬರ್ 27ಕ್ಕೆ ಚಿತ್ರ ಬಿಡುಗಡೆಯಾಗುತ್ತಿದೆ. ಲಾಕ್‍ಡೌನ್ ಬಳಿಕ ಚಿತ್ರದ ತುಣುಕುಗಳ ಮೂಲಕ ಸದ್ದು ಮಾಡುತ್ತಿದ್ದ ಈ ಚಿತ್ರದ ಬಗ್ಗೆ ಈಗಾಗಲೇ ಸಾಕಷ್ಟು ನಿರೀಕ್ಷೆ ಗರಿಗೆದರಿದೆ. …

Read More »

ನಮಗೆ ನೀರು ಕೊಡದಿದ್ರೆ ಪೈಪ್‍ಲೈನ್ ಒಡೆದು ಹಾಕ್ತೀನಿ: ಶಿವಲಿಂಗೇಗೌಡ

ಹಾಸನ: ನಮಗೆ ನೀರು ಕೊಡದೆ ಪೈಪ್ ಲೈನ್ ತೆಗೆದುಕೊಂಡು ಹೋದರೆ ಅದನ್ನು ಒಡೆದು ಹಾಕಿಸ್ತೀನಿ. ಏನಾಗುತ್ತೋ ಆಗಲಿ ಎಂದು ಶಾಸಕ ಶಿವಲಿಂಗೇಗೌಡ ಕೆಡಿಪಿ ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಹಾಸನದ ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯುತ್ತಿತ್ತು. ಈ ವೇಳೆ ಮಾತನಾಡಿದ ಶಾಸಕ ಶಿವಲಿಂಗೇಗೌಡ ಕೃಷ್ಣಾ ಬೇಸಿನ್ ನಲ್ಲಿ ನಮಗೂ ಹಕ್ಕಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಎರಡು ಹೋಬಳಿಗಳು ಕೃಷ್ಣಾ ಬೇಸಿನ್‍ಗೆ ಸೇರಿದೆ. ನಮಗೆ ನೀರು ಕೊಡ್ತೀವಿ …

Read More »

ಬೆಳಗಾವಿ ಜಿಲ್ಲೆ ವಿಭಜನೆ ಬೇಕಾ..? ಕಮೆಂಟ್ ಮಾಡಿ ತಿಳಿಸಿ

ಬೆಳಗಾವಿ – ಬಳ್ಳಾರಿ ಜಿಲ್ಲೆ ವಿಭಜನೆ ಘೋಷಣೆ ಬೆನ್ನಲ್ಲೇ ಬೆಳಗಾವಿ ಜಿಲ್ಲೆ ಸದ್ದು ಕೇಳಿಬಂದಿದೆ. ರಾಜ್ಯದಲ್ಲೇ ದೊಡ್ಡದಾಗಿರುವ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ 3 ಜಿಲ್ಲೆಯನ್ನಾಗಿಸಬೇಕೆನ್ನುವ ಪ್ರಸ್ತಾವನೆಗೆ 2 ದಶಕಗಳ ಇತಿಹಾಸವಿದೆ. ಯಾವ ದೃಷ್ಟಿಯಿಂದ ನೋಡಿದರೂ ಜಿಲ್ಲೆಯ ವಿಭಜನೆ ಅಗತ್ಯ, ಅನಿವಾರ್ಯ. ಕೇವಲ ಭಾಷೆ ಮತ್ತು ಗಡಿ ವಿವಾದದ ಕಾರಣದಿಂದ ಜಿಲ್ಲಾ ವಿಭಜನೆಯನ್ನು ಮುಂದೂಡಲಾಗುತ್ತಿದೆ. ಬೆಳಗಾವಿಯನ್ನು ಎರಡು ವಿಭಾಗ ಮಾಡಬೇಕೋ, ಮೂರು ವಿಭಾಗ ಮಾಡಬೇಕೋ? ವಿಭಜಿಸುವುದಾದರೆ ಯಾವ್ಯಾವುದು ಜಿಲ್ಲಾ ಕೇಂದ್ರವಾಗಬೇಕು? ವಿಭಜಿತವಾಗಲಿರುವ …

Read More »

‘ನಮ್ಮ ಭಾರತದ ಸಂವಿಧಾನವು ಜಗತ್ತಿನ ಅತೀ ದೊಡ್ಡ ಹಾಗೂ ಯಶಸ್ವಿ ಪ್ರಜಾಪ್ರಭುತ್ವವನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ.:ಬಾಲಚಂದ್ರ ಜಾರಕಿಹೊಳಿ

ಗೋಕಾಕ :  ‘ನಮ್ಮ ಭಾರತದ ಸಂವಿಧಾನವು ಜಗತ್ತಿನ ಅತೀ ದೊಡ್ಡ ಹಾಗೂ ಯಶಸ್ವಿ ಪ್ರಜಾಪ್ರಭುತ್ವವನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರ ಶ್ರೇಯಸ್ಸು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ ಅವರಿಗೆ ಸಲ್ಲುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಅರಭಾವಿ ಮಂಡಲ ಭಾರತೀಯ ಜನತಾ ಪಾರ್ಟಿ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಸಂವಿಧಾನ ದಿನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ …

Read More »