ಮೈಸೂರು, (ಜನವರಿ 15): ಪರಪುರಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯನ್ನು ಪತಿ ಬರ್ಬರವಾಗಿ ಹತ್ಯೆಗೈದು ಪೊಲೀಸರಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಣಿಯನಹುಂಡಿಯಲ್ಲಿ ನಡೆದಿದೆ. ತೇಜು (26) ಪತಿಯಿಂದಲೇ ಕೊಲೆಯಾದ ಪತ್ನಿ. ಕಳೆದ ಏಳು ವರ್ಷಗಳ ಹಿಂದೆ ದೇವರಾಜ್ ಎನ್ನುವಾತ ಸಂಬಂಧಿಯಾಗಿದ್ದ ತೇಜಳನ್ನು ಮದುವೆಯಾಗಿದ್ದ. ಇಬ್ಬರಿಗೆ ಎರಡು ಮಕ್ಕಳು ಸಹ ಇವೆ. ಆದರೂ ತೇಜ ಪರಪುರಷನೊಂದಿಗೆ ಸಂಬಂಧ ಇಟ್ಟುಕೊಂಡಿದ್ದಳು. ಸಾಲದಕ್ಕೆ ಗಂಡ ಮಕ್ಕಳನ್ನು ಬಿಟ್ಟು ಪ್ರಿಯಕರನ ಜತೆ ಮನೆ …
Read More »ಕಾಂಗ್ರೆಸನಲ್ಲಿ ಯಾವುದೇ ಗೊಂದಲಗಳಿಲ್ಲ…ಡಿ.ಸಿ.ಎಂ. ಡಿ.ಕೆ.ಶಿವಕುಮಾರ್
ಕಾಂಗ್ರೆಸನಲ್ಲಿ ಯಾವುದೇ ಗೊಂದಲಗಳಿಲ್ಲ…ಡಿ.ಸಿ.ಎಂ. ಡಿ.ಕೆ.ಶಿವಕುಮಾರ್…ಕಾಂಗ್ರೆಸನಲ್ಲಿ ಯಾವುದೇ ಗೊಂದಲಗಳಿಲ್ಲ… ಎಲ್ಲವನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ ಡಿ.ಸಿ.ಎಂ. ಡಿ.ಕೆ.ಶಿವಕುಮಾರ್ ಹೇಳಿಕೆ ವಿಪಕ್ಷಿಯರಿಗೆ ತಿರುಗೇಟು ನೀಡಿದ ಡಿಸಿಎಂ ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲವೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಒಂದೆಡೇ ಕಾಂಗ್ರೆಸಗೆ ಪೂರ್ಣ ಪ್ರಮಾಣದ ಸಾರಥಿ ನೇಮಿಸಿ ಗೊಂದಲಗಳನ್ನು ನಿವಾರಿಸಿ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದ್ರೇ ಇನ್ನೊಂದೆಡೆ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಎಲ್ಲವನ್ನು ಹೈಕಮಾಂಡ್ ನೋಡಿಕೊಳ್ಳುತ್ತಾರೆಂದು …
Read More »ಜಾತಿಗಣತಿ ವರದಿ : ಊಹಾಪೋಹಗಳನ್ನಾಧರಿಸಿ ವಿರೋಧಿಸುವುದು ಅನವಶ್ಯಕ – ಮುಖ್ಯಮಂತ್ರಿ ಸಿದ್ದರಾಮಯ್ಯ*
ಜಾತಿಗಣತಿ ವರದಿ : ಊಹಾಪೋಹಗಳನ್ನಾಧರಿಸಿ ವಿರೋಧಿಸುವುದು ಅನವಶ್ಯಕ – ಮುಖ್ಯಮಂತ್ರಿ ಸಿದ್ದರಾಮಯ್ಯ* 1 ಜಾತಿಗಣತಿ ಉಹಾಪೋಹದಲ್ಲೇ ಇದೆ. 2 ಈ ಕುರಿತು ವಿರೋಧಿಸುವುದು ಅನವಶ್ಯಕ. 3 ಅಂಕಿ ಅಂಶಗಳು ಇನ್ನೂ ಸಾರ್ವಜನಿಕವಾಗಿಯೇ ಇಲ್ಲ. 4 ಮುಂದಿನ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ: ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. …
Read More »ಮುಡಾ ಹಗರಣ ‘CBI’ ತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಜ.27ಕ್ಕೆ ಮುಂದೂಡಿಕೆ
ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಜ.27ಕ್ಕೆ ಮುಂದೂಡಿದೆ. ಸ್ನೇಹಮಯಿ ಕೃಷ್ಣ ಪರ ವಕೀಲ ವಸಂತಕುಮಾರ ಮಾತನಾಡಿ, “ಮುಡಾ ಹಗರಣ ಸಂಬಂಧ ಎರಡ್ಮೂರು ಬಾರಿ ವಿಚಾರಣೆ ಬೆಂಗಳೂರನಲ್ಲಿ ನಡೆದಿತ್ತು. ಮುಡಾ ಹಗರಣ ಸಂಬಂಧ ಲೋಕಾಯುಕ್ತದಲ್ಲಿ ಎಫ್‌ಐಆರ್ ಆಗಿದೆ. ಆ ತನಿಖೆ ಪ್ರಮಾಣಿಕವಾಗಿ ಆಗಬೇಕೆಂದು ವಿಶೇಷ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದೆವು. ಲೋಕಾಯುಕ್ತ ರಾಜ್ಯ ಸರ್ಕಾರದ ಕೈ …
Read More »45 ರೌಡಿಶೀಟರ್‌ಗಳ ಗಡಿಪಾರು ಮಾಡಿ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಆದೇಶ
ಹುಬ್ಬಳ್ಳಿ: ಅವಳಿ- ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವ 45 ಮಂದಿ ರೌಡಿಶೀಟರ್‌ಗಳಿಗೆ ಗಡಿಪಾರು ಮಾಡಿ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರೌಡಿಶೀಟರ್‌ಗಳ ವಿರುದ್ಧ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಕೊಲೆ, ಸುಲಿಗೆ, ಮಾದಕ ವಸ್ತು ಮಾರಾಟ ಹಾಗೂ ಸೇವನೆ, ಮಟ್ಕಾ, ಭೂ ಮಾಫಿಯಾ ಸೇರಿದಂತೆ ಇನ್ನಿತರ ಪ್ರಕರಣಗಳಲ್ಲಿ ಭಾಗಿಯಾಗಿರುವ ರೌಡಿಶೀಟರ್ಗಳಿಂದ …
Read More »ಸತೀಶ್ಗೆ ನಾನು ಹೃದಯಪೂರ್ವಕ ಧನ್ಯವಾದ ಹೇಳುತ್ತೇನೆ:ಮಾಜಿ ಸಚಿವ ರಮೇಶ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರು ಸೈಲೆಂಟ್ ಆಗಿ ಇರಬಾರದು. ಉಗ್ರವಾಗಿ ವರ್ತಿಸಿದರೆ ಮಾತ್ರ ಅವರಿಗೆ ಉಳಿಗಾಲ. ಇಲ್ಲದಿದ್ದರೆ ನಿಮ್ಮನ್ನು ರಾಜಕೀಯವಾಗಿ ಮುಗಿಸುತ್ತಾರೆ ಎನ್ನುವ ಮೂಲಕ ಸಹೋದರ ಸತೀಶ ಜಾರಕಿಹೊಳಿ ಅವರಿಗೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಕಿವಿಮಾತು ಹೇಳಿದ್ದಾರೆ. ಸತೀಶ್ಗೆ ನಾನು ಹೃದಯಪೂರ್ವಕ ಧನ್ಯವಾದ ಹೇಳುತ್ತೇನೆ: ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳಗಾವಿ ಕಾಂಗ್ರೆಸ್ ಕಚೇರಿ ನಿರ್ಮಾಣದ ವಿಚಾರದಲ್ಲಿ ಡಿಕೆಶಿ ರಾಜ್ಯದ ಜನತೆಗೆ …
Read More »ಕೆಪಿಸಿಸಿಗೆ ಪೂರ್ಣ ಪ್ರಮಾಣದ ಹೊಸ ಅಧ್ಯಕ್ಷರನ್ನು ಆದಷ್ಟು ಬೇಗ ನೇಮಕ ಮಾಡಲಿ: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ಶಾಸಕಾಂಗ ಸಭೆ ಬಳಿಕವೂ ಕಾಂಗ್ರೆಸ್ ನಾಯಕರ ಅಸಮಾಧಾನಗಳು ಕಡಿಮೆಯಾಗಿಲ್ಲ ಎಂಬುದಕ್ಕೆ ಇದೀಗ ಸತೀಶ್ ಜಾರಕಿಹೊಳಿ ಹೇಳಿಕೆ ಸಾಕ್ಷಿಯಾಗಿದೆ. ಡಿಕೆ ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿರುವ ಅವರು, ಕೆಪಿಸಿಸಿಗೆ ಜನಪ್ರಿಯ ನಾಯಕನನ್ನು ಅಧ್ಯಕ್ಷರನ್ನಾಗಿ ಮಾಡಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಅವರಿಗೆ ತಿಳಿಸಿದ್ದೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ನನ್ನನ್ನು ನಾನು ಕೆಪಿಸಿಸಿ ಅಧ್ಯಕ್ಷರಾಗಿ ಎಂದು ಮಾಡಿ ಎಂದು …
Read More »ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ನೋವು ಕಡಿಮೆ ಆಗಿರುವುದನ್ನು ದೃಢಪಡಿಸಿಕೊಂಡು, ಎರಡು ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದ ವೈದ್ಯ ಡಾ. ರವಿ ಪಾಟೀಲ
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ನಮ್ಮ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡುತ್ತಿದ್ದೇವೆ. ನಮ್ಮಲ್ಲಿ ತಜ್ಞ ನ್ಯೂರೋಲಾಜಿಸ್ಟ್, ಫಿಸಿಶಿಯನ್ ಮತ್ತು ಆರ್ಥೋ ಫಿಸಿಶಿಯನ್ಸ್ ಇರುವುದರಿಂದ ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡುವ ಅವಶ್ಯಕತೆ ಇಲ್ಲ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ರವಿ ಪಾಟೀಲ ತಿಳಿಸಿದರು. ಆಸ್ಪತ್ರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಅವರ ಚಾಲಕ ಮತ್ತು …
Read More »ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಹರಿಹರ ಪೀಠದ ವಚನಾನಂದ ಶ್ರೀ
ಬೆಳಗಾವಿ: ಕಾರು ಅಪಘಾತದಲ್ಲಿ ನಮ್ಮ ಸಮುದಾಯದ ಜನಪ್ರಿಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗಾಯಗೊಂಡಿರುವುದು ನಮಗೆಲ್ಲ ಬಹಳ ಆಘಾತ ತಂದಿದೆ ಎಂದು ಪಂಚಮಸಾಲಿ ಹರಿಹರ ಪೀಠದ ವಚನಾನಂದ ಸ್ವಾಮೀಜಿ ಹೇಳಿದರು. ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಿಸಿದ ಬಳಿಕ ಸ್ವಾಮೀಜಿ ಮಾಧ್ಯಮಗಳ ಜೊತೆಗೆ ಮಾತನಾಡಿದರು. ನಾನು ಹರ ಜಾತ್ರೆಯಲ್ಲಿ ಇರುವುದರಿಂದ ತಡವಾಗಿ ಮಾಹಿತಿ ಬಂತು. ಇವತ್ತು ಬೆಳಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಿಸಲು …
Read More »NET ಪರೀಕ್ಷೆ ಮುಂದೂಡಿಕೆ*
ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕರು ಮತ್ತು ಜೂನಿಯರ್ ಸಂಶೋಧನಾ ಸಹೋದ್ಯೋಗಿಗಳ ಆಯ್ಕೆಯ ರಾಷ್ಟ್ರೀಯ ಅರ್ಹತಾ ಪರೀಕ್ಷೆ NET ಪರೀಕ್ಷಾ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಈ ನಿರ್ಧಾರ ಕೈಗೊಂಡಿದ್ದು, ಜನವರಿ 15 ರಂದು ನಿಗದಿಯಾಗಿದ್ದ ಪರೀಕ್ಷಾ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ. ಮಕರ ಸಂಕ್ರಾಂತಿ ಮತ್ತು ಪೊಂಗಲ್ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ.ಪರೀಕ್ಷೆ ನಡೆಸುವ ಹೊಸ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುವುದಾಗಿ ಎನ್‌ಟಿಎ ತಿಳಿಸಿದೆ. ವಿವಿಧ ರಾಜ್ಯಗಳಲ್ಲಿ ಪೊಂಗಲ್ …
Read More »