ಬೆಂಗಳೂರು : ರಾಜ್ಯಾದ್ಯಂತ ಸಾರಿಗೆ ನೌಕರರು ಕೆಲಸಕ್ಕೆ ಹಾಜರಾಗದೇ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರ ಪರಿಣಾಮ 135 ಬಸ್ಗಳು ಮಾತ್ರ ಇವತ್ತು ಸಂಚಾರ ಮಾಡುತ್ತಿವೆ. ನಗರದ ಯಶವಂತಪುರ ಬಸ್ ನಿಲ್ದಾಣಕ್ಕೆ ಬಿಎಂಟಿಸಿ ಎಂಡಿ ಶಿಖಾ ಆಗಮಿಸಿ ಪರಿಶೀಲನೆ ನಡೆಸಿದರು. ಬಳಿಕ ಮಾತಾನಾಡಿದ ಅವರು, ಬೆಂಗಳೂರಿನಲ್ಲಿ ಈವರೆಗೆ 135 ಬಿಎಂಟಿಸಿ ಬಸ್ಗಳು ಮಾತ್ರ ಸಂಚರಿಸುತ್ತಿವೆ. ಮಂಗಳವಾರದ ಸಭೆಯಲ್ಲಿನ ತೀರ್ಮಾನದಂತೆ ಪರ್ಯಾಯವಾಗಿ ಖಾಸಗಿ ಬಸ್ಗಳನ್ನ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಪ್ರಯಾಣಿಕರಿಗೆ ಸ್ವಲ್ಪ …
Read More »6ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಲೂ ಸಾಧ್ಯವೇ ಇಲ್ಲ – ಬಿಎಸ್ ವೈ
ಬೆಳಗಾವಿ : ಇಂದಿನಿಂದ ರಾಜ್ಯಾದ್ಯಂತ ಸಾರಿಗೆ ನೌಕರರು 6ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸುವ ಜೊತೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ. ಆದ್ರೆ ಮುಷ್ಕರದ ಹಿಂದಿನ ದಿನವೂ ಬೆಳವಾಗಿಯಲ್ಲಿ ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದ ಸಿಎಂ ಬಿಎಸ್ ಯಡಿಯೂರಪ್ಪನವರು ಯಾವುದೇ ಕಾರಣಕ್ಕೂ 6ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಸಾರಿಗೆ ನೌಕರರ 9 ಬೇಡಿಕೆಯಲ್ಲಿ 8 ಬೇಡಿಕೆಗಳನ್ನ ಈಡೇರಿಸಿದ್ದೇವೆ. ಕೊವಿಡ್‌ನಿಂದ …
Read More »‘ವೇತನ ಹೆಚ್ಚಿಸಲು ಸರ್ಕಾರ ಸಿದ್ಧ, ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ’: ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಮನವಿ
ಹುಮ್ನಾಬಾದ್: ಯಾರದ್ದೋ ಮಾತು ಕೇಳಿ ಮುಷ್ಕರ ನಡೆಸಬೇಡಿ, ಅದರಿಂದ ನಾಳೆ ನಿಮಗೇ ತೊಂದರೆಯಾಗುತ್ತದೆ, ಮುಷ್ಕರ ನಿಲ್ಲಿಸಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ ಮಾಡಿಕೊಂಡಿದ್ದಾರೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿದ್ದು, ವೇತನ ಹೆಚ್ಚಿಸಲು ನಾವು ಸಿದ್ದರಿದ್ದೇವೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗವನ್ನು …
Read More »ಬೇಡಿಕೆ ಈಡೇರುವವರೆಗೂ ಮುಷ್ಕರ ಮುಂದುವರಿಯಲಿದೆ : ಕೋಡಿಹಳ್ಳಿ ಚಂದ್ರಶೇಖರ್
ಬೆಂಗಳೂರು, ಏ.7- ಆರನೆ ವೇತನ ಜಾರಿಯಾಗುವವರೆಗೂ ಮುಷ್ಕರ ಮುಂದುವರಿಯಲಿದೆ ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಬಸ್‍ಗಳಿಂದ ಸರ್ಕಾರಕ್ಕೆ ನಷ್ಟವೇ ಹೊರತು ಲಾಭವಿಲ್ಲ. ಸರ್ಕಾರ ಅವೈಜ್ಞಾನಿಕ ಪ್ರಯತ್ನ ಮಾಡುತ್ತಿದೆ. ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಯಲಿದೆ ಎಂದರು. ಬಂದ್ ಯಶಸ್ಸಿಗೆ ಸಾರಿಗೆ ನೌಕರರ ನೋವುಗಳೇ ಕಾರಣ. ಹಲವು ದಿನಗಳಿಂದ ಅವರಿಗೆ ಸಾಕಷ್ಟು ಸಮಸ್ಯೆಗಳಿವೆ. ವ್ಯಕ್ತಿ ಪ್ರತಿಷ್ಠೆಗಿಂತ ನೌಕರರ ಸಮಸ್ಯೆ ಬಗೆಹರಿಸುವುದು …
Read More »ಮನವಿ ಮಾಡಿದ್ರೂ ನೌಕರರು ಡೋಂಟ್ ಕೇರ್: ಸಾರಿಗೆ ನೌಕರರಿಗೆ ಶಾಕ್ ನೀಡಲು ಮುಂದಾದ ಸರ್ಕಾರ!
ಬೆಂಗಳೂರು: ಆರನೇ ವೇತನ ಆಯೋಗ ಶಿಫಾರಸಿಗೆ ಆಗ್ರಹಿಸಿ ಸಾರಿಗೆ ನೌಕರರು ಇಂದು ಮುಷ್ಕರ ಹೂಡಿದ್ದು, ಯಾವುದೇ ಕೆಎಸ್‌ಆರ್ ಟಿಸಿ, ಬಿಎಂಟಿಸಿ ಬಸ್ ಗಳು ರಸ್ತೆಗಿಳಿದಿಲ್ಲ. ಸರ್ಕಾರ, ಅಧಿಕಾರಿಗಳ ಮನವಿಗೆ ನೌಕರರು ಸೊಪ್ಪು ಹಾಕದೆ ಇರುವುದರಿಂದ ನೌಕರರಿಗೆ ಶಾಕ್ ನೀಡಲು ಸರ್ಕಾರ ನಿರ್ಧರಿಸಿದೆ. ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವ ನೌಕರರ ಮಾರ್ಚ್ ತಿಂಗಳ ವೇತನ ತಡೆಯಲು ಸರ್ಕಾರ ಮುಂದಾಗಿದೆ. ಪ್ರತಿ ತಿಂಗಳು 10ನೇ ತಾರೀಖಿನೊಳಗೆ ನಿಗಮಗಳು ನೌಕರರಿಗೆ ವೇತನ ನೀಡುತ್ತಿದ್ದವು. ಆದರೆ …
Read More »ಸರ್ಕಾರಿ ಬಸ್‌ಗಳಿಗೆ ಪರ್ಯಾಯವಾಗಿ ಹಲವೆಡೆ ಖಾಸಗಿ ಬಸ್ ಸಂಚಾರ ಆರಂಭ
ಬೆಂಗಳೂರು: ಕೋವಿಡ್ ಸಂಕಷ್ಟದ ಕಾಲದಲ್ಲಿ ಸರ್ಕಾರಿ ಸಾರಿಗೆ ನೌಕರರ ಮುಷ್ಕರದ ಬಿಸಿ ಜನರಿಗೆ ತಟ್ಟುತ್ತಿದೆ. ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಸರ್ಕಾರಿ ಸಾರಿಗೆ ನೌಕರರ ಒಕ್ಕೂಟ ಪಟ್ಟು ಹಿಡಿದಿದೆ. ಆದರೆ, ಸದ್ಯ ಆರನೇ ವೇತನ ಆಯೋಗ ಜಾರಿಗೆ ಸಾಧ್ಯವೇ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಆದರೆ, ಪಟ್ಟು ಸಡಿಲಿಸದ ನೌಕರರು ಮುಷ್ಕರ ಆರಂಭಿಸಿದ್ದಾರೆ. ರಾಜ್ಯದಾದ್ಯಂತ ಸರ್ಕಾರಿ ಸಾರಿಗೆ ಸಿಬ್ಬಂದಿ ಕೆಲಸಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಸಂಚಾರ …
Read More »ದ್ವಿಚಕ್ರ ವಾಹನದಲ್ಲಿ ಇವಿಎಂ ಸಾಗಿಸ್ತಿದ್ದವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!
ಚೆನ್ನೈ (ತಮಿಳುನಾಡು) : ದ್ವಿಚಕ್ರ ವಾಹನದಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (ಇವಿಎಂ) ಸಾಗಿಸುತ್ತಿದ್ದ ವ್ಯಕ್ತಿಗಳಿಬ್ಬರನ್ನು ಚೆನ್ನೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಈ ಘಟನೆ ವೇಲಚೇರಿ ಏರಿಯಾದಲ್ಲಿ ನಡೆದಿದೆ. ಇವಿಎಂ ಬದಲಾಯಿಸಲಿಸಲು ಬೈಕ್ನಲ್ಲಿ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಸ್ಥಳೀಯರು ಗಮನಿಸಿ ಇಬ್ಬರನ್ನು ಇವಿಎಂ ಸಮೇತ ಪೊಲೀಸರ ವಶಕ್ಕೆ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಹ ವೈರಲ್ ಆಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇನ್ನು ಇವಿಎಂ ಬಗ್ಗೆ ಮಾತನಾಡಿರುವ ತಮಿಳುನಾಡು …
Read More »ಕೊರೊನಾ ಮುಕ್ತ ಉತ್ತರ ಕೊರಿಯಾ..!!
ಸಿಯೋಲ್,ಏ.7-ಇಡೀ ವಿಶ್ವವೇ ಕೊರೊನಾ ಸೋಂಕಿನಿಂತ ತತ್ತರಿಸಿ ಹೋಗಿದ್ದರು. ಉತ್ತರ ಕೋರಿಯಾ ಮಾತ್ರ ನಮ್ಮ ದೇಶ ಸೋಂಕು ರಹಿತವಾಗಿದೆ ಎಂದು ಘೋಷಿಸಿಕೊಂಡಿದೆ. ಕೊರೊನಾ ಕಾಣಿಸಿಕೊಂಡ ನಂತರ ನಾವು ನಮ್ಮ ದೇಶದಿಂದ ಸೋಂಕು ಹೋಗಲಾಡಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಉತ್ತರ ಕೋರಿಯಾ ಹೇಳಿತ್ತು. ಇದೀಗ ಮತ್ತೆ ತನ್ನ ಹೇಳಿಕೆಯನ್ನು ಪುನರುಚ್ಚರಿಸಿರುವ ಕೋರಿಯಾ ವಿಶ್ವ ಆರೋಗ್ಯ ಸಂಸ್ಥೆಗೆ ಸಲ್ಲಿರುವ ದಾಖಲೆಯಲ್ಲಿ ನಾವು ಸೋಂಕಿನಿಂದ ಮುಕ್ತರಾಗಿದ್ದೇವೆ ಎಂದು ಹೇಳಿಕೆ ನೀಡಿದೆ. ನಮ್ಮ ರಾಷ್ಟ್ರದ ಗಡಿಭಾಗಗಳನ್ನು ಬಂದ್ ಮಾಡಿದ್ದೇವೆ. …
Read More »ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವತಿಯಿಂದ ‘ನಿರುಪಮ’ (ಚೆನ್ನಮ್ಮ) ಎನ್ನುವ ಹೆಸರಿಟ್ಟು ಸಿಂಹಿಣಿಯನ್ನು ದತ್ತಕ ತೆಗೆದುಕೊಳ್ಳಲಾಯಿತು.
ಬೆಳಗಾವಿ: ಭಾರತೀಯ ಸ್ವಾತಂತ್ರ್ಯದ ಅಮೃತ ಮಹೋತ್ಸವ ( 75ನೆಯ ವರ್ಷಾಚರಣೆಯ) ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿ ಪ್ರಾಣಾರ್ಪಣೆ ಮಾಡಿದ ಹುತಾತ್ಮರ ಸ್ಮರಣೆಗಾಗಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವತಿಯಿಂದ ‘ನಿರುಪಮ’ (ಚೆನ್ನಮ್ಮ) ಎನ್ನುವ ಹೆಸರಿಟ್ಟು ಸಿಂಹಿಣಿಯನ್ನು ದತ್ತಕ ತೆಗೆದುಕೊಳ್ಳಲಾಯಿತು. ಈ ಕುರಿತು ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೊ ಎಂ ರಾಮಚಂದ್ರಗೌಡ, ಕುಲಸಚಿವರಾದ ಪ್ರೊ. ಬಸವರಾಜ ಪದ್ಮಶಾಲಿ, ಕುಲಸಚಿವರು ಮೌಲ್ಯಮಾಪನ ರಾದ ಪ್ರೊ. ಎಸ್. ಎಂ ಹೂರಕಡ್ಲಿ ಹಣಕಾಸು ಅಧಿಕಾರಿಗಳಾದ ಪ್ರೊ. …
Read More »ಜನವಿರೋಧಿ ಆಡಳಿತದಿಂದಾಗಿ ಎಲ್ಲೆಡೆ ಬಿಜೆಪಿ ವಿರೋಧಿ ಅಲೆ : ಸತೀಶ್ ಜಾರಕಿಹೊಳಿ ಗೆಲುವು ಖಚಿತ ಎಂದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ – ಜನವಿರೋಧಿ ಆಡಳಿತದಿಂದಾಗಿ ಎಲ್ಲೆಡೆ ಬಿಜೆಪಿ ವಿರೋಧಿ ಅಲೆ ಎದ್ದಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಗೆಲುವು ಖಚಿತ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ಅತವಾಡ, ಗೋಜಗಾ, ಬೆಕ್ಕಿನಕೇರಿ, ಗಣೇಶಪುರದ ಜ್ಯೋತಿ ನಗರದಲ್ಲಿ ಲೋಕಸಭಾ ಉಪ ಚುನಾವಣೆಯ ಪ್ರಯುಕ್ತ ಸತೀಶ್ ಜಾರಕಿಹೊಳಿಯವರ ಪರ ಮತ ಯಾಚಿಸಿ ಅವರು ಮಾತನಾಡುತ್ತಿದ್ದರು. ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರಕಾರಕ್ಕೆ ಬಡ ಜನರ ಬಗೆಗೆ …
Read More »
Laxmi News 24×7