Breaking News

COVID ಲಸಿಕೆ: ಸರಕಾರಕ್ಕೆ 250 ರೂ, ಖಾಸಗಿಗೆ 1000 ರೂ.ಗೆ ಮಾರಾಟ: ಸೆರಂ ಇನ್ಸ್ಟಿಟ್ಯೂಟ್ Nov, 24 2020

ನವದೆಹಲಿ: ಮಾರಕ ಕೊರೋನಾ ವೈರಸ್ ಲಸಿಕೆ ಸರಬರಾಜು ಕುರಿತಂತೆ ಭಾರತಕ್ಕೇ ತಮ್ಮ ಮೊದಲ ಆದ್ಯತೆ ಎಂದು ಸೆರಂ ಸಂಸ್ಥೆಯ ಮುಖ್ಯಸ್ಥ ಅದಾರ್ ಪೂನಾವಾಲ ಭಾರತಕ್ಕೆ ಲಸಿಕೆ ಪೂರೈಕೆ ಕುರಿತು ಖಾಸಗಿ ಸಂಸ್ಥೆಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಸೆರಂ ಸಂಸ್ಥೆಯ ಮುಖ್ಯಸ್ಥ ಅದಾರ್ ಪೂನಾವಾಲ, ಬ್ರಿಟನ್ ಮೂಲದ ಆಕ್ಸ್‍ಫರ್ಡ್ ಯುನಿವರ್ಸಿಟಿ ಸಹಭಾಗಿತ್ವದಲ್ಲಿ ಆಸ್ಟ್ರಾಜೆನೆಕಾ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೋವಿಡ್-19 ‘ಕೋವಿಶೀಲ್ಡ್’ ಲಸಿಕೆಯು ಭರವಸೆದಾಯಕ ಫಲಿತಾಂಶ ನೀಡಿರುವುದಾಗಿ ಪ್ರಕಟಿಸಲಾಗಿದ್ದು, …

Read More »

ರಮೇಶ್ ಜಾರಕಿಹೊಳಿ ಅವರನ್ನು ಡಿಸಿಎಂ ಅಶ್ವತ್ಥ್ ನಾರಾಯಣ್ ಹಾಡಿ ಹೊಗಳಿದ್ದಾರೆ.

ಗೋಕಾಕ: ಗೋಕಾಕ ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ರಾಜ್ಯದ ನೀರಾವರಿ ಕ್ಷೇತ್ರದಲ್ಲಿ ಉತ್ತಮ ಕೆಲಸವನ್ನು ಮಾಡುವ ಮೂಲಕ ನೀರಾವರಿ ಕ್ಷೇತ್ರದ ಅಭಿವೃದ್ಧಿಗೆ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಅವರನ್ನು ಡಿಸಿಎಂ ಅಶ್ವತ್ಥ್ ನಾರಾಯಣ್ ಹಾಡಿ ಹೊಗಳಿದ್ದಾರೆ. ಗೋಕಾಕನ ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ನೂತನ ಸಂಕೀರ್ಣವನ್ನು ಉದ್ಘಾಟನೆ ಹಾಗೂ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಗೋಕಾಕ …

Read More »

ಮರಾಠ ಅಭಿವೃದ್ಧಿ ಪ್ರಾಧಿಕಾರ ಮಾಡಿದರೆ ನಿಮಗೇನು ಕಷ್ಟ ಹೋರಾಟಗಾರರನ್ನು ಶೂಟ್ ಮಾಡಿ ಬಿಸಾಕಿ:ಋಷಿಸ್ವಾಮಿ

ಡಿಸೆಂಬರ್: ಡಿ.5ರಂದು ಕನ್ನಡ ಹೋರಾಟಗಾರರು ಬಂದ್‍ಗೆ ಕರೆ ನೀಡಿರುವುದಕ್ಕೆ ಸಂಬಂಧಿಸಿದಂತೆ ಅರಸೀಕೆರೆ ಕಾಳಿ ಮಠದ ಋಷಿಕುಮಾರ ಎಂಬ ಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಕನ್ನಡ ಹೋರಾಟಗಾರರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ಮಾಡಿದರೆ ನಿಮಗೇನು ಕಷ್ಟ. ಅವರು ರಾಜ್ಯದಲ್ಲಿ ಟ್ಯಾಕ್ಸ್ ಕಟ್ಟುತ್ತಿದ್ದಾರೆ ಎಂದು ಮರಾಠಿಗರ ಪರ ಬ್ಯಾಟ್ ಬೀಸಿದ್ದಾರೆ. ಇದರ ಜೊತೆಗೆ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿರುವ ಸ್ವಾಮಿ ಬಿಎಸ್‍ವೈ ಇಂತವರನ್ನೆಲ್ಲಾ ಶೂಟ್ ಮಾಡಿ ಬಿಸಾಕಬೇಕು. ಉತ್ತರಪ್ರದೇಶದಲ್ಲಿ …

Read More »

ನ.25ಕ್ಕೆ ಒಂದೇ ದಿನ ಬಾಕಿ, ನಿಜವಾಗಲಿದಿಯಾ ಯತ್ನಾಳ್ ಹೇಳಿಕೆ ?

ಬೆಂಗಳೂರು :  ನ.25ರಂದು ರಾಜ್ಯ ರಾಜಕಾರಣದಲ್ಲಿ ಏನೇನು ಆಗುತ್ತೆ ? ನೋಡ್ತಾಯಿರಿ ಎಂದಿದ್ದ  ಶಾಸಕ ಬಸನಗೌಡ ಯತ್ನಾಳ ಹೇಳಿಕೆ ನಿಜವಾಗಲಿದಿಯಾ ? ಎಂಬ   ಕುತೂಹಲ ರಾಜ್ಯ ರಾಜಕಾರಣದಲ್ಲಿ ಮೂಡಿದೆ. ಮೇಲಿನವರಿಗೂ ಯಡಿಯೂರಪ್ಪ ಸಾಕಾಗಿದ್ದಾರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ​​​ಇನ್ನು ಬಹಳ ದಿನ ಅಧಿಕಾರದಲ್ಲಿ ಇರುವುದಿಲ್ಲ.  ಮುಂದಿನ ಉತ್ತರಾಧಿಕಾರಿ ಉತ್ತರ ಕರ್ನಾಟಕದವರೇ ಆಗುತ್ತಾರೆ. ಪ್ರಧಾನಿ ಮಂತ್ರಿಗಳ ಮನಸ್ಸಿನಲ್ಲಿ ಈ ವಿಚಾರ ಬಂದಿದೆ. ಯಡಿಯೂರಪ್ಪ ಬಳಿಕ ಉತ್ತರ ಕರ್ನಾಟಕವದವರಿಗೆ ಸಿಎಂ ಮಾಡೋಣ ಎಂದಿದ್ದಾರೆ. …

Read More »

ಮೇಕೆದಾಟು, ಎತ್ತಿನಹೊಳೆ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆ ಪಡೆದುಕೊಳ್ಳಲು ರಮೇಶ್ ಜಾರಕಿಹೊಳಿ‌ ಸೂಚನೆ‌

ಬೆಂಗಳೂರು : ಮೇಕೆದಾಟು, ಎತ್ತಿನಹೊಳೆ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳು ಮತ್ತು ಏತ ನೀರಾವರಿ ಯೋಜನೆಗಳ ಶೀಘ್ರ ಅನುಷ್ಠಾನಕ್ಕಾಗಿ ಬಾಕಿ ಇರುವ ಅರಣ್ಯ ಇಲಾಖೆಯ ಅನುಮೋದನೆಗಳನ್ನು ಕೂಡಲೇ ಪಡೆದುಕೊಳ್ಳಲು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಸೂಚನೆ‌ ನೀಡಿದ್ದಾರೆ. ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ತಿರುವಳಿಗಳನ್ನು ಪಡೆಯುವ ಕುರಿತು ಪ್ರಗತಿ ಪರಿಶೀಲನಾ ಸಭೆ ಯಲ್ಲಿ ಮಾತನಾಡಿದ ಸಚಿವರು, ಬಾಕಿ ಇರುವ ಪ್ರಸ್ತಾವನೆಗಳಿಗೆ ಕೂಡಲೇ ಅನುಮೋದನೆ ನೀಡಬೇಕೆಂದು ಅರಣ್ಯ …

Read More »

ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ

ನವದೆಹಲಿ: ರಾಜ್ಯಗಳಲ್ಲಿ ಕೊರೊನಾ ಸ್ಥಿತಿಗತಿ ಹಾಗೂ ಕೋವಿಡ್ ಲಸಿಕೆ, ವಿತರಣೆ ಕುರಿತಾಗಿ ಸಮಗ್ರವಾಗಿ ಚರ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಗಳ ಜೊತೆ ಪ್ರಧಾನಿ ಮೋದಿ ಸಭೆ ಆರಂಭವಾಗಿದ್ದು, ಎರಡು ಹಂತಗಳಲ್ಲಿ ಸಭೆ ನಡೆಯುತ್ತಿದೆ. ಆರಂಭದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ರಾಜ್ಯಗಳಾದ ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಕೇರಳ, ರಾಜಸ್ಥಾನ ಸೇರಿದಂತೆ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ …

Read More »

ಸಿಎಂ ಮಾಜಿ ರಾಜಕೀಯ ಕಾರ್ಯದರ್ಶಿಯಾಗಿದ್ದ ಶಿವಶಂಕರ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ

ತಿರುವನಂತಪುರಂ:: ಕೇರಳ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪಿಣರಾಯಿ ವಿಜಯನ್ ಅವರ ಮಾಜಿ ರಾಜಕೀಯ ಕಾರ್ಯದರ್ಶಿ ಎಂ.ಶಿವಶಂಕರ್ ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಶಿವಶಂಕರ್ ಅವರನ್ನು ಬಂಧಿಸಿರುವ ಅಧಿಕಾರಿಗಳು ಕೋರ್ಟ್ ಮುಂದೆ ಹಾಜರುಪಡಿಸಿದ್ದು, ನ.26ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ 30 ಕೆಜಿ ಚಿನ್ನ ಸಾಗಾಟ ಪ್ರಕರಣ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣದ ಬೆನ್ನಲ್ಲೇ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಶಿವಶಂಕರ್ ಅವರನ್ನು ವಜಾ ಮಾಡಲಾಗಿತ್ತು. ಈ …

Read More »

ಪ್ರೀತಿ ಒಂದೇ ಅವರು ಸಂಪಾದಿಸಿರೋ ಆಸ್ತಿ.:ಸುಮಲತಾ ಅಂಬರೀಶ್

ಬೆಂಗಳೂರು: ಮಂಡ್ಯದ ಜನ ಅಂಬರೀಶ್ ಅವರನ್ನು ವಿಶೇಷವಾಗಿ ದೇವರಂತೆ ಪೂಜಿಸುತ್ತಿದ್ದರು. ಪ್ರೀತಿ ಒಂದೇ ಅವರು ಸಂಪಾದಿಸಿರೋ ಆಸ್ತಿ. ಜನರ ಅವರನ್ನ ಹೃದಯಲ್ಲಿ ಇಟ್ಟುಕೊಂಡು ಪೂಜಿಸ್ತಾ ಇದ್ದಾರೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಇಂದು ಅಂಬಿ ಎರಡನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬರೀಶ್ ಅವರು ಎಲ್ಲರನ್ನೂ ಕುಟುಂಬದ ಸದಸ್ಯರಂತೆ ನೋಡಿಕೊಳ್ಳುತ್ತಿದ್ದರು. ಎಲ್ಲರ ಪ್ರೀತಿ ಗಳಿಸಿ ಆ ಪ್ರೀತಿಯನ್ನ ಶಾಶ್ವತವಾಗಿ ಉಳಿಸಿಕೊಂಡಿದ್ದಾರೆ. …

Read More »

210 ಗ್ರಾಂನ 3 ಚಿನ್ನದ ಕಿರೀಟ ಗಿಫ್ಟ್ ನೀಡಿದ ಗ್ರಾಮಸ್ಥರು

ವಿಜಯಪುರ: ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ, ಮಾಜಿ ಸಚಿವ ಎಂಬಿ ಪಾಟೀಲ್ ಹಾಗೂ ಶಿವಾನಂದ್ ಪಾಟೀಲ್ ಗೆ ವಿಜಯಪುರದ ಕಾರಜೋಳ ಗ್ರಾಮಸ್ಥರು ಚಿನ್ನದ ಕಿರೀಟಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಕಾರಜೋಳದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದ ವೇಳೆ ಈ ಮೂವರಿಗೆ 210 ಗ್ರಾಂ ನ ಮೂರು ಚಿನ್ನದ ಕಿರೀಟಗಳನ್ನು ಗ್ರಾಮಸ್ಥರು ಗಿಫ್ಟ್ ಮಾಡಿದ್ದಾರೆ. ಆದರೆ ಮೂವರು ನಾಯಕರು ಕೂಡ ಚಿನ್ನದ ಕಿರೀಟ ಗಿಫ್ಟ್ ಪಡೆಯಲು ನಿರಾಕರಿಸಿದ್ದಾರೆ.ಒತ್ತಾಯ ಪೂರ್ವಕವಾಗಿ ಗ್ರಾಮಸ್ಥರು ನಾಯಕರಿಗೆ ಕಿರೀಟ ತೊಡಿಸಿದ್ದಾರೆ. …

Read More »

ಯಡಿಯೂರಪ್ಪ ಈ ಹಂತಕ್ಕೆ ಇಳೀತಾರೆ ಅಂದ್ಕೊಂಡಿರ್ಲಿಲ್ಲ – ಮಗಳ ಎಂಗೇಜ್ಮೆಂಟ್‍ನಂದೇ ನೋಟಿಸ್ ಕೊಟ್ಟಿದ್ದಾರೆ

ಕಲಬುರಗಿ: ಒಂದು ವರ್ಷದಿಂದ ಸುಮ್ಮನೆ ಇದ್ದವರು ನನ್ನ ಮನೆಯಲ್ಲಿ ಕಾರ್ಯಕ್ರಮ ಇದ್ದಾಗಲೇ ನೋಟಿಸ್ ಕೊಡಲು ಬಂದಿದ್ದಾರೆ. ನನಗೆ ಚಳಿ ಯಾವುದು, ಮಳೆ ಯಾವುದು ಗೊತ್ತಿಲ್ಲ. ಎಲ್ಲವನ್ನೂ ಒಂದೇ ರೀತಿಯಾಗಿ ಅನುಭವಿಸಿದ್ದೇನೆ. ನನ್ನ ಮೇಲೆ ಎಫ್‍ಐಆರ್ ಹಾಕಿದ್ದೇ ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿಬಿಐ ನೋಟಿಸ್ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮ್ಮ ಮನೆಯಲ್ಲೆ ನನ್ನ ಮಗಳ ಎಂಗೆಜ್ಮೆಂಟ್ ಕಾರ್ಯಕ್ರಮ ಇದ್ದಾಗ ಮನೆ …

Read More »