ಬೆಂಗಳೂರು: ನಗರದ ಏರ್‌ಪೋರ್ಟ್ ರಸ್ತೆಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದೆ. ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಏರ್ಪೋರ್ಟ್ ರಸ್ತೆಯ ಫ್ಲೈ ಓವರ್ ಮೇಲೆ ಅಪಘಾತ (Accident) ಸಂಭವಿಸಿದ್ದು, 5 ವಾಹನಗಳು ಜಖಂಗೊಂಡಿವೆ. ಚಲಿಸುತ್ತಿದ್ದ ವೇಳೆ ಮುಂದಿನ ವಾಹನ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದರಿಂದ ಹಿಂದೆ ಬರುತ್ತಿದ್ದ ವಾಹನಗಳು ಒಂದರ ಹಿಂದೆ ಒಂದರಂತೆ ಡಿಕ್ಕಿ ಹೊಡೆದಿವೆ. ಪರಿಣಾಮ 1 ಟಿಪ್ಪರ್, 4 ಕಾರು ಹಾಗೂ 1 …
Read More »ಬಳ್ಳಾರಿ ಚಲೋ’ಗೆ ಇಂದು ಚಾಲನೆ; ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪಾದಯಾತ್ರೆ
ರಾಯಚೂರು: ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯಲಿರುವ ʼಬಿಜೆಪಿ ಬಳ್ಳಾರಿ ಚಲೋʼ ಪಾದಯಾತ್ರೆಗೆ ಇಂದು ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಚಾಲನೆ ಸಿಗಲಿದೆ. ಲಿಂಗಸುಗೂರಿನಲ್ಲಿ ಇಂದು ಬಹಿರಂಗ ಸಮಾವೇಶ ಮೂಲಕ ಹೋರಾಟ ಆರಂಭವಾಗಲಿದೆ. ಲಿಂಗಸುಗೂರಿನ ಬೆಂಗಳೂರು ಬೈಪಾಸ್ ರಸ್ತೆಯಲ್ಲಿ ಬೆಳಗ್ಗೆ 10:30ಕ್ಕೆ ಬಹಿರಂಗ ಸಮಾವೇಶ ನಡೆಯಲಿದ್ದು, ಮಧ್ಯಾಹ್ನ 1 ಗಂಟೆಗೆ ಪಾದಯಾತ್ರೆ ಆರಂಭವಾಗಲಿದೆ. ಪಾದಯಾತ್ರೆಗೂ ಮುನ್ನ ಬಿ.ವೈ. ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರು ಜಿಲ್ಲೆಯ …
Read More »ಗ್ಯಾರಂಟಿ ಹೊರೆ ಇಳಿಸಿದ ಜನ: 3 ಲಕ್ಷಕ್ಕೂ ಅಧಿಕ ಮಂದಿಯಿಂದ ‘ಗೃಹಜ್ಯೋತಿ’ ತ್ಯಾಗ!
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಆರ್ಥಿಕ ಹೊರೆ ಅನುಭವಿಸುತ್ತಿದ್ದ ರಾಜ್ಯ ಸರ್ಕಾರಕ್ಕೆ ಸ್ವಲ್ಪ ರಿಲೀಫ್ ಸಿಕ್ಕಿದೆ. ಸರ್ಕಾರ ನೀಡಿದ ಗ್ಯಾರಂಟಿ ಗೀವ್ ಅಪ್ (ಯೋಜನೆ ತ್ಯಾಗ) ಕರೆಗೆ ರಾಜ್ಯದ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸುಮಾರು 3 ಲಕ್ಷಕ್ಕೂ ಹೆಚ್ಚು ಮಂದಿ ಸ್ವಯಂಪ್ರೇರಿತರಾಗಿ ಗೃಹಜ್ಯೋತಿ ಯೋಜನೆಯ ಉಚಿತ ವಿದ್ಯುತ್ ಸೌಲಭ್ಯವನ್ನು ಬಿಟ್ಟುಕೊಟ್ಟಿದ್ದಾರೆ. ಗೃಹಜ್ಯೋತಿ ರೀ-ಸರ್ವೆ (ಮರು ಪರಿಶೀಲನೆ) ವೇಳೆ ಯೋಜನೆಯ ಲಾಭ ತಮಗೆ ಬೇಡವೆಂದು ಸಾರ್ವಜನಿಕರೇ ಮುಂದೆ ಬಂದು ತ್ಯಾಗ …
Read More »ಒಂದೇ ದಿನ 830 ಕೋಳಿಗಳ ನಿಗೂಢ ಸಾವು – ದುಷ್ಕರ್ಮಿಗಳ ಕೈವಾಡದ ಶಂಕೆ
ದಾವಣಗೆರೆ: ಒಂದೇ ದಿನ ಇದ್ದಕ್ಕಿದ್ದಂತೆ 830 ನಾಟಿ ಕೋಳಿಗಳು ನಿಗೂಢವಾಗಿ ಸಾವನ್ನಪ್ಪಿದ ಘಟನೆ ದಾವಣಗೆರೆ ತಾಲೂಕಿನ ರಾಮಗೊಂಡನಹಳ್ಳಿಯಲ್ಲಿ ನಡೆದಿದೆ. ಪ್ರಕಾಶ್ ಹಾಗೂ ಅರ್ಜುನ್ ಎಂಬ ರೈತರಿಗೆ ಸೇರಿದ ನಾಟಿ ಕೋಳಿ ಸಾವನ್ನಪ್ಪಿವೆ. ಕೋಳಿಗಳಿಗೆ ಯಾವುದೇ ರೋಗ ಕೂಡಾ ಇರಲಿಲ್ಲ. ಜೊತೆಗೆ ಆಹಾರ ನೀಡುವಲ್ಲಿ ವ್ಯತ್ಯಾಸ ಆಗಿಲ್ಲ. ಬೆಳಗಾಗುವಷ್ಟರಲ್ಲಿ ನೂರಾರು ಕೋಳಿಗಳ ಸಾವನ್ನಪ್ಪಿದ್ದು, ದುಷ್ಕರ್ಮಿಗಳ ಕೈವಾಡದ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಶು ವೈದ್ಯಾಧಿಕಾರಿಗಳು …
Read More »ಕಾಫಿ ಎಸ್ಟೇಟ್‌ನಲ್ಲಿ ಗುಂಡೇಟಿನಿಂದ ರೈತ ಸಾವು – ಮಿಸ್‌ಫೈರ್ ಶಂಕೆ
ಹಾಸನ: ಕಾಫಿ ಎಸ್ಟೇಟ್‌ನಲ್ಲಿ ಗುಂಡೇಟಿನಿಂದ ರೈತ ಸಾವನ್ನಪ್ಪಿದ ಘಟನೆ ಬೇಲೂರು ತಾಲೂಕಿನ ಬಂದಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೇಶವಶೆಟ್ಟಿ (61) ಗುಂಡೇಟಿನಿಂದ ಸಾವನ್ನಪ್ಪಿದ ಕಾಫಿ ಬೆಳೆಗಾರ. ಭಾನುವಾರ (ಆ.30) ಸಂಜೆ ಬಂದೂಕು ಹಿಡಿದು ಅವರು ಕಾಫಿ ತೋಟಕ್ಕೆ ತೆರಳಿದ್ದರು. ಈ ವೇಳೆ ಕೈಯಲ್ಲಿದ್ದ ಬಂದೂಕಿಂದ ಆಕಸ್ಮಿಕವಾಗಿ ಗುಂಡು ಸಿಡಿದು ಅವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಿಂದ 300 ಮೀಟರ್ ದೂರದಲ್ಲಿ ಅವರ ಶವ ಪತ್ತೆಯಾಗಿದ್ದು, ಗುಂಡು ಹಾರಿದ ನಂತರ ಸ್ವಲ್ಪ …
Read More »ಮತಕ್ಕಾಗಿ ಬಗೆಬಗೆಯ ನಾಟಕ – ರಾಯರೆಡ್ಡಿ ವಜಾಕ್ಕೆ ಭರತ್ ಶೆಟ್ಟಿ ಆಗ್ರಹ
ಮಂಗಳೂರು: ಇಸ್ಲಾಂ ಧರ್ಮ ಶ್ರೇಷ್ಠ ಮತ್ತು ಮಠ-ಮಂದಿರಗಳಿಗೆ ಹೋಗಬಾರದು ಎಂಬ ಸಚಿವ ಬಸವರಾಜ ರಾಯರೆಡ್ಡಿ ಅವರ ಹೇಳಿಕೆಗೆ ಮಂಗಳೂರು ನಗರ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ. ವೈ. ಭರತ್ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಹೊಟ್ಟೆಪಾಡಿಗಾಗಿ ಬಗೆಬಗೆಯ ವೇಷ ಎಂಬ ಮಾತು ಕಾಂಗ್ರೆಸ್ ನಾಯಕರಿಗೆ ಸರಿಯಾಗಿ ಹೊಂದುತ್ತದೆ. ಕೇವಲ ಮತಕ್ಕಾಗಿ ಇವರು ಏನೆಲ್ಲಾ ನಾಟಕ …
Read More »ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ
ಶಿವಮೊಗ್ಗ: ಓದುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 9ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸೃಷ್ಟಿ (14) ನೇಣಿಗೆ ಶರಣಾದ ವಿದ್ಯಾರ್ಥಿನಿ. ಈಕೆ ನಗರದ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿ ಓದುತ್ತಿದ್ದಳು. ಪೋಷಕರು ಚೆನ್ನಾಗಿ ಓದುವಂತೆ ಅವಳಿಗೆ ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದಿದ್ದ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸೃಷ್ಟಿಯನ್ನ ಮನೆಯಲ್ಲಿಯೇ ಬಿಟ್ಟು ತಂದೆ-ತಾಯಿ ಇಬ್ಬರು ದೇವಸ್ಥಾನಕ್ಕೆ ತೆರಳಿದ್ದರು. ಈ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. …
Read More »ಸ್ಕೂಟಿಗೆ ಪೆಟ್ರೋಲ್ ಹಾಕಿಸುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು – ಹೃದಯಾಘಾತ ಶಂಕೆ
ದಾವಣಗೆರೆ: ಸ್ಕೂಟಿಗೆ ಪೆಟ್ರೋಲ್ ಹಾಕಿಸುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದಾವಣಗೆರೆಯ ಎಸ್‌ಪಿಎಸ್ ನಗರದ ಭಾರತ್ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ. ದಾವಣಗೆರೆಯ ಮೆಹೆಬೂಬ್ ನಗರದ ನಿವಾಸಿ ಮುನ್ನಾ ಮೃತ ವ್ಯಕ್ತಿ. ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕಿಸುವ ವೇಳೆ ಕುಸಿದು ಬಿದ್ದು ಮುನ್ನಾ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಮುನ್ನಾ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಲಾರಿ ಓಡಿಸಿದ ಪೇಮೆಂಟ್ ಪಡೆದು ಮನೆಗೆ ಹಿಂದಿರುಗುವಾಗ ಘಟನೆ ನಡೆದಿದೆ. ದ್ವಿಚಕ್ರ …
Read More »ಅನಾರೋಗ್ಯದಿಂದ ಬಳಲುತ್ತಿದ್ದ ಒಂದೂವರೆ ವರ್ಷದ ಮಗು ಚಿಕಿತ್ಸೆ ಫಲಿಸದೇ ಸಾವು
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಒಂದೂವರೆ ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ನಗರೂರಿನಲ್ಲಿ ನಡೆದಿದೆ. ಚಾರ್ವಿಕ @ ದಿಯಾ ಮೃತ ಮಗು. ಚಾರ್ವಿಕ ಚಿತ್ರದುರ್ಗದ ಯಳಗೂಡು ನಿವಾಸಿಗಳಾದ ಸುಪ್ರಿತ ಹಾಗೂ ಪ್ರದೀಪ್ ದಂಪತಿಯ ಪುತ್ರಿಯಾಗಿದ್ದು, ಅಜ್ಜಿ ರೇಖಾ ಹಾಗೂ ತಾತ ಗುರು ಅವರ ಮನೆಯಲ್ಲಿ ಸಾಕಿಕೊಂಡಿದ್ದರು. ಮಗುವನ್ನ ಹಾಲು ಬಿಡಿಸುವ ಉದ್ದೇಶದಿಂದ ಅಜ್ಜಿ ತಾತನ ಮನೆಯಲ್ಲಿ ಬಿಡಲಾಗಿತ್ತು. ಮೂರು ದಿನದ ಹಿಂದೆ ಕಫ …
Read More »ಚಾಕಲೇಟ್ ಕದ್ದಿದ್ದಕ್ಕೆ ಬಾಲಕನಿಗೆ ಮನಸೋ ಇಚ್ಛೆ ಹಲ್ಲೆ – ಆರೋಪಿ ಅರೆಸ್ಟ್
ವಿಜಯಪುರ: ಜಿಲ್ಲೆಯಲ್ಲಿ ಚಾಕಲೇಟ್ ಕದ್ದಿದ್ದಕ್ಕೆ ಬಾಲಕನಿಗೆ ಥಳಿಸಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮಲಘಾಣ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಚಾಕಲೇಟ್ ಕದಿದ್ದಕ್ಕೆ ಅಂಗಡಿಯ ಮಾಲೀಕ ಅಶೋಕ್ ಪತ್ತಾರ ಎಂಬಾತ ಬಾಲಕನಿಗೆ ಥಳಿಸಿದ್ದ. ಇದರ ಬೆನ್ನಲ್ಲೇ ಬಾಲಕನ ತಂದೆ ರೆಹಮಾನ್ ವಾಲೀಕಾರ್ ಎಂಬುವವರು ದೂರು ನೀಡಿದ್ದರು. ದೂರಿನನ್ವಯ ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ಆರೋಪಿ ಅಶೋಕ್‌ನನ್ನು ಬಂಧಿಸಿದ್ದಾರೆ.
Read More »
Laxmi News 24×7