Breaking News

ಹೊಸ ಟ್ವಿಸ್ಟ್ ಪಡೆದುಕೊಂಡಿದೆ ಸಂತೋಷ್ – ಜಾರಕಿಹೊಳಿ ಭೇಟಿ. ಕೊಟ್ಟ ಮಾತಿನಂತೆ ಹಲವರಿಗೆ ಸಚಿವ ಸ್ಥಾನ ನೀಡಿ.!

ಬೆಂಗಳೂರು,ನ.21- ಸಚಿವ ಸಂಪುಟ ವಿಸ್ತರಣೆ ಆಗಲಿದೆಯೋ ಎಂಬ ಇಲ್ಲವೋ ಎಂಬ ವದಂತಿ ಹಬ್ಬಿರುವ ಬೆನ್ನಲ್ಲೇ ಸಚಿವ ರಮೇಶ್ ಜಾರಕಿಹೊಳಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾಗಿರುವುದು ಭಾರೀ ಮಹತ್ವ ಪಡೆದುಕೊಂಡಿದೆ. ಕೋಲ್ಕತ್ತಾ ಪ್ರವಾಸದಲ್ಲಿದ್ದ ಸಂತೋಷ್ ಅವರು ಇಂದು ನವದೆಹಲಿಗೆ ಬರುತ್ತಿದ್ದಂತೆ ಅವರನ್ನು ಭೇಟಿ ಮಾಡಿದ ರಮೇಶ್ ಜಾರಕಿಹೊಳಿ, ಸುಮಾರು 20 ನಿಮಿಷಕ್ಕೂ ಹೆಚ್ಚುಕಾಲ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತಂತೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ …

Read More »

ಫಿಜಿಯೋಥೆರಪಿಸ್ಟ್ ಒಬ್ಬರನ್ನು ಸೀಕ್ರೆಟ್ ಆಗಿ ಮದುವೆಯಾಗಿದ್ದಾರಂತೆ ಪ್ರಭುದೇವ್..?

ಚೆನ್ನೈ,ನ.20- ಭಾರತದ ಮೈಕಲ್ ಜಾಕ್ಸನ್ ಎಂದೇ ಖ್ಯಾತಿಯಾಗಿರುವ ನಟ ಪ್ರಭುದೇವ್ ಅವರು ಬಿಹಾರ ಮೂಲದ ಫಿಜಿಯೋಥೆರಪಿಸ್ಟ್ ಒಬ್ಬರನ್ನು ರಹಸ್ಯವಾಗಿ ವಿವಾಹವಾಗಿದ್ದಾರೆ ಎಂಬ ಮಾಹಿತಿಯನ್ನು ನೃತ್ಯ ಸಂಯೋಜಕ ನಿರ್ದೇಶಕರೊಬ್ಬರು ಬಹಿರಂಗಪಡಿಸಿದ್ದಾರೆ. ಪ್ರಭುದೇವ ಕಳೆದ ಸೆಪ್ಟೆಂಬರ್‍ನಲ್ಲೇ ಬಿಹಾರ ಮೂಲದ ಫಿಜಿಯೋಥೆಪಿಸ್ಟ್‍ನ್ನು ರಹಸ್ಯವಾಗಿ ವಿವಾಹವಾಗಿದ್ದು, ಅವರ ವಿವಾಹ ಮಹೋತ್ಸವು ಮುಂಬೈ ನಿವಾಸ ಗ್ರೀನ್ ಎಕರೆಸ್‍ನಲ್ಲಿ ನಡೆಯಿತು ಎಂದು ಹೇಳಿದ್ದಾರೆ. ತಮ್ಮ ಬೆನ್ನಿನ ಸಮಸ್ಯೆಗೆ ಈ ವೈದ್ಯೆ ಬಳಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಭುದೇವ್, ಪರಸ್ಪರ ಇಷ್ಟಪಟ್ಟು …

Read More »

ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದಾಗಿ ಮಗು ಅಪಹರಣ,ನವಜಾತ ಶಿಶು ಅಪಹರಿಸಿದವರು ಅರೆಸ್ಟ್

ಬೆಂಗಳೂರು, ನ.20-ವಾಣಿ ವಿಲಾಸ ಆಸ್ಪತ್ರೆಯಿಂದ ಎರಡು ದಿನದ ನವಜಾತ ಶಿಶು ಅಪಹರಿಸಿದ್ದ ಮಹಿಳೆ ಸೇರಿದಂತೆ ನಾಲ್ವರನ್ನು ವಿವಿ ಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಗು ಅಪಹರಿಸಿದ್ದ ಮಹಿಳೆ, ಇದಕ್ಕೆ ಸಹಕರಿಸಿದ ವ್ಯಕ್ತಿ ಮತ್ತು ಮಗುವನ್ನು ಪಡೆದಿದ್ದ ದಂಪತಿಯನ್ನು ಬಂಧಿಸಲಾಗಿದೆ. ಅಬ್ದುಲ್ ರಶೀದ್ ಮತ್ತು ಆರ್ಷಿಯಾ ದಂಪತಿ ಮಗುವಿಗೆ ಅನಾರೋಗ್ಯವಾದ್ದರಿಂದ ನ.9ರಂದು ವಾಣಿ ವಿಲಾಸ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.ನ.11ರಂದು ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಮಗುವನ್ನು ಕರೆದೊಯ್ಯುವಂತೆ ಅನೌನ್ಸ್ ಮಾಡಿದ್ದಾರೆ. …

Read More »

ಸಂಪುಟ ವಿಸ್ತರಣೆ ಯಾವಾಗ..? ಸಿಎಂ ಬಿಎಸ್‍ವೈ ಹೇಳಿದ್ದೇನು?

ಬೆಂಗಳೂರು,ನ.21- ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಇನ್ನು ಎರಡು ಮೂರು ದಿನಗಳಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ವಿಧಾನಸೌಧದ ಬಾಂಕ್ವೆಟ್ ಹಾಲ್‍ನಲ್ಲಿ ಪೊಲೀಸ್ ಪದಕ ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೆರಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆಯೋ ಇಲ್ಲವೇ ಪುನಾರಚನೆಯೋ ಎಂಬುದು ತಿಳಿಯಲಿದೆ ಎಂದು ಹೇಳಿದರು. ಈ ಬಾರಿ ಸಂಪುಟ ಪುನಾರಚನೆಯೋ ಅಥವಾ ವಿಸ್ತರಣೆಯೋ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಎರಡರಲ್ಲಿ ಒಂದಂತೂ …

Read More »

ಮೂಢನಂಬಿಕೆಗೆ ಜೋತು ಬಿದ್ರಾ ಬಿಎಸ್‍ವೈ?

ಚಾಮರಾಜನಗರ: ಸಿಎಂ ಯಡಿಯೂರಪ್ಪ ಮೂಢನಂಬಿಕೆಗೆ ಕಟ್ಟುಬಿದ್ದಿದ್ದಾರಾ? ಹೌದು ಹೀಗೊಂದು ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಕಾರಣ ಅಧಿಕಾರ ವಹಿಸಿಕೊಂಡು 16 ತಿಂಗಳು ಕಳೆದರು ಸಿಎಂ ಚಾಮರಾಜನಗರದತ್ತ ತಲೆ ಹಾಕಿಲ್ಲ. ಆದರೆ ಇದೇ ತಿಂಗಳು 25ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗಾಗಿ ಜಿಲ್ಲೆಯ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿರುವ ಯಡಿಯೂರಪ್ಪ ಚಾಮರಾಜನಗರಕ್ಕೆ ಭೇಟಿ ನೀಡುತ್ತಿಲ್ಲ ಎಂಬುದು ಚರ್ಚೆಗೆ ಗ್ರಾಸವಾಗಿದೆ. 2008ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಸುಮಾರು ಮೂರು ವರ್ಷ …

Read More »

ಟ್ರಯಲ್ ನೋಡುತ್ತೇನೆ ಎಂದು ಚಿನ್ನದ ಸರಕೊರಳಿಗೆ ಹಾಕಿ ಬೈಕ್ ಏರಿ ಎಸ್ಕೇಪ್

ಬೆಂಗಳೂರು: ಟ್ರಯಲ್ ನೋಡುತ್ತೇನೆ ಎಂದು 40 ಗ್ರಾಮ್‍ನ ಚಿನ್ನದ ಸರವನ್ನು ಕೊರಳಿಗೆ ಹಾಕಿಕೊಂಡು ನಂತರ ಗೆಳೆಯ ಜೊತೆ ಯುವತಿಯೊಬ್ಬಳು ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ಮುರುಗೇಶ್ ಪಾಳ್ಯದ ನವರತ್ನ ಜ್ಯುವೆಲ್ಲರ್ಸ್ ನಲ್ಲಿ ನಡೆದಿದೆ.ಚಿನ್ನ ಖರೀದಿಸುವ ನೆಪದಲ್ಲಿ ಜೋಡಿಯೊಂದು ನವರತ್ನ ಜ್ಯುವೆಲ್ಲರ್ಸ್ ಗೆ ಬಂದಿದೆ. ಈ ವೇಳೆ ಸರವನ್ನು ಟ್ರಯಲ್ ನೋಡುತ್ತೇವೆ ಎಂದು ಯುವತಿ ಕೊರಳಿಗೆ ಹಾಕಿಕೊಂಡಿದ್ದಾಳೆ. ನಂತರ ಎಟಿಎಂ ಕಾರ್ಡ್ ಪಡೆದುಕೊಳ್ಳುವ ನೆಪದಲ್ಲಿ ಅಂಗಡಿಯಿಂದ ಹೊರ ಬಂದು ಗೆಳೆಯನ ಜೊತೆ …

Read More »

ಖತರ್ನಾಕ್ ಮನೆಗಳ್ಳರನ್ನು ಬಂಧಿಸಿದ ಹುಬ್ಬಳ್ಳಿ ಪೊಲೀಸರು

ಹುಬ್ಬಳ್ಳಿ: ಮನೆಗಳ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಮೂವರು ಐನಾತಿ ಮನೆಗಳ್ಳರನ್ನು ಹುಬ್ಬಳ್ಳಿಯ ಗೋಕುಲ ರಸ್ತೆ ಪೊಲೀಸರು ಬಂಧಿಸಿದ್ದಾರೆ.ಪ್ರೇಮ್‍ಕುಮಾರ್ ಭೀಮಪ್ಪ ಪೂಜಾರ, ವಿರೇಶ ಜಂಬುನಾಥ ಕಾಂಬಳೆ, ರಾಘವೇಂದ್ರ ಮಲ್ಲಪ್ಪ ಸಲಗಾರ ಬಂಧಿತ ಆರೋಪಿಗಳು. ಬಂಧಿತರಿಂದ ದ್ವಿಚಕ್ರ ವಾಹನ, ಲ್ಯಾಪ್‍ಟಾಪ್, ಟಿವಿ ಹಾಗೂ ಬೆಳ್ಳಿಯ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Read More »

ಕುಟುಂಬ ಸಮೇತ ಚಾಮುಂಡಿ ಬೆಟ್ಟಕ್ಕೆ ನಟ ಶಿವರಾಜ್ ಕುಮಾರ್ ಭೇಟಿ

ಮೈಸೂರು: ಶುಕ್ರವಾರ ರಾತ್ರಿ ಚಾಮುಂಡಿ ಬೆಟ್ಟಕ್ಕೆ ನಟ ಶಿವರಾಜ್ ಕುಮಾರ್ ಭೇಟಿ ನೀಡಿ ನಾಡದೇವಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಕುಟುಂಬ ಸಮೇತ ಬೆಟ್ಟಕ್ಕೆ ಭೇಟಿ ನೀಡಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿಕೊಂಡಿದ್ದಾರೆ.ದೀಪಾವಳಿ ಮಗಿದ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಭಕ್ತರು ಆಗಮಿಸುತ್ತಿದ್ದಾರೆ. ಇಂದು ಸಹ ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.

Read More »

ಆರೋಗ್ಯ ಇಲಾಖೆ ಎಡವಟ್ಟಿನಿಂದ ಕಾಲೇಜು ತರಗತಿಗಳು ಮಾತ್ರ ಇನ್ನೂ ಆರಂಭವಾಗಿಲ್ಲ. ರಿಪೋರ್ಟ್ ಸಿಗದೆ ಪರದಾಟ

ಯಾದಗಿರಿ: ಕೊರೊನಾ ಮಹಾಮಾರಿ ಆತಂಕ ನಡುವೆಯೆ ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪದವಿ ಕಾಲೇಜುಗಳನ್ನು ಆರಂಭ ಮಾಡಿದೆ. ಆದರೆ ಆರೋಗ್ಯ ಇಲಾಖೆ ಎಡವಟ್ಟಿನಿಂದ ತರಗತಿಗಳು ಮಾತ್ರ ಇನ್ನೂ ಆರಂಭವಾಗಿಲ್ಲ. ಹೌದು. ಯಾದಗಿರಿ ಜಿಲ್ಲೆಯ ಪದವಿ ಕಾಲೇಜುಗಳ ಆವರಣದಲ್ಲಿ ವಿದ್ಯಾರ್ಥಿಗಳನ್ನು ಮರದ ಕೆಳಗೆ, ಕಾಲೇಜು ಮುಂದಿನ ಕಟ್ಟೆಯ ಮೇಲೆ, ಕಾಲೇಜು ಗೇಟ್ ಬಳಿ ಸಿಬ್ಬಂದಿ ಸ್ಟಾಪ್ ಮಾಡುತ್ತಿದ್ದಾರೆ. ಈ ಹಿಂದೆ ಜನರ ಕೊರೊನಾ ಟೆಸ್ಟ್ ವರದಿ ನೀಡುವಲ್ಲಿ ನಿಧಾನಗತಿ ಅನುಸರಿಸಿ ಜನರ …

Read More »

ರಾಜ್ಯದಲ್ಲಿ 1,781 ಮಂದಿಗೆ ಸೋಂಕು 17 ಮಂದಿ ಮೃತ

ಬೆಂಗಳೂರು:  ರಾಜ್ಯದಲ್ಲಿ 1,781 ಮಂದಿಗೆ ಸೋಂಕು ತಗುಲಿದ್ದು, 2,181 ಜನ ಆಸ್ಪ್ರತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಒಟ್ಟು 17 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 8,69,561ಕ್ಕೆ ಏರಿಕೆಯಾಗಿದೆ. ಈ ಪೈಕಿ 8,33,169 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 24,752 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ ಒಟ್ಟು 11,621 ಮಂದಿ ಸೋಂಕಿಗೆ ಮೃತಪಟ್ಟಿದ್ದು, 539 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Read More »