Breaking News

ಇನ್ನೋವಾ ಮತ್ತು ಬಲೆನೋ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹುಬ್ಬಳ್ಳಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಘಟನೆ ನಡೆದಿದ್ದು, ಇನ್ನೋವಾ ಮತ್ತು ಬಲೆನೋ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಭಾರಿ ಅಪಘಾತವಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನ್ನೂ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಗಂಭೀರ ಗಾಯಗೊಂಡ ಮೂವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ …

Read More »

ಐಎಎಸ್‌ ಟಾಪರ್‌ ಜೋಡಿಯಿಂದ ವಿಚ್ಛೇದನಕ್ಕೆ ಅರ್ಜಿ……

ಜೈಪುರ: 2015ನೇ ಸಾಲಿನ ಐಎಎಸ್‌ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದ ಟೀನಾ ಡಾಬಿ ಹಾಗೂ ಅವರ ಪತಿ ಅಥರ್‌ ಖಾನ್‌ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರೇಮಿಗಳಾಗಿದ್ದ ಇಬ್ಬರು 2018ರಲ್ಲಿ ಮದುವೆಯಾಗಿದ್ದರು. ಈಗ ದಂಪತಿ ಪರಸ್ಪರ ಒಪ್ಪಿಗೆಯ ಮೇರೆಗೆ ಜೈಪುರ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಕೆಲ ದಿನಗಳ ಹಿಂದೆ ಟೀನಾ ಡಾಬಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ʼಖಾನ್‌ʼ ಸರ್‌ ನೇಮ್‌ ತೆಗೆದು ಹಾಕಿದ್ದರು. ಅಥರ್‌ ಖಾನ್‌ ಅವರು ಇನ್‌ಸ್ಟಾಗ್ರಾಮ್‌ನಲ್ಲಿ …

Read More »

ರಾಜ್ಯದಲ್ಲಿ ಫ್ಲ್ಯಾಟ್ ಕೊಳ್ಳುವವರಿಗೆ ರಾಜ್ಯ ಸರಕಾರ ಶುಭ ಸುದ್ದಿ ನೀಡಿದೆ.

ಬೆಂಗಳೂರು – ರಾಜ್ಯದಲ್ಲಿ ಫ್ಲ್ಯಾಟ್ ಕೊಳ್ಳುವವರಿಗೆ ರಾಜ್ಯ ಸರಕಾರ ಶುಭ ಸುದ್ದಿ ನೀಡಿದೆ. ಕರ್ನಾಟಕ ಸ್ಟ್ಯಾಂಪ್ ಆ್ಯಕ್ಟ್ ಗೆ ತಿದ್ದುಪಡಿ ತರುವ ಮೂಲಕ ಸಣ್ಣ ಮತ್ತು ಮಧ್ಯಮ ವರ್ಗದವರಿಗೆ ಫ್ಲ್ಯಾಟ್ ಕೊಳ್ಳುವುದಕ್ಕೆ ಇರುವ ಸ್ಟ್ಯಾಂಪ್ ಡ್ಯೂಟಿಯನ್ನು ಗಣನೀಯವಾಗಿ ಇಳಿಸಿದೆ. ಈ ಕುರಿತು ಗುರುವಾರ ರಾಜ್ಯಪತ್ರ ಪ್ರಕಟವಾಗಿದೆ. 5 ಲಕ್ಷ ರೂ.ವರೆಗಿನ ಫ್ಲ್ಯಾಟ್ ಖರೀದಿಸುವವರಿಗೆ ಈವರೆಗೆ ಇದ್ದ ಶೇ.6ರ ಸ್ಟ್ಯಾಂಪ್ ಡ್ಯೂಟಿಯನ್ನು ಶೇ.2ಕ್ಕೆ ಇಳಿಸಲಾಗಿದೆ. 25 ಲಕ್ಷ ರೂ.ಗಳಿಂದ 35 ಲಕ್ಷ ರೂ.ಗಳವರೆಗಿನ …

Read More »

ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ನೆರೆ ಸಂತ್ರಸ್ತರ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸಿ: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ : ಕಳೆದ ವರ್ಷ ಪ್ರವಾಹ ಹಾಗೂ ಮಳೆಯಿಂದ ಹಾನಿಗೀಡಾಗಿರುವ ಸಂತ್ರಸ್ತರ ಕುಟುಂಬಗಳಿಗೆ 15 ದಿನಗಳೊಳಗಾಗಿ ವಸತಿ ಸೌಕರ್ಯ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ನಗರದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಅವರು, ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ನೆರೆ ಸಂತ್ರಸ್ತರ ಬೇಡಿಕೆಗಳಿಗೆ ಸ್ಪಂದಿಸಿ ತಕ್ಷಣ ಪರಿಹಾರ ಕಂಡುಕೊಳ್ಳಬೇಕೆಂದು ಅವರು ಹೇಳಿದರು. 2019 ರ ಅಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಪ್ರವಾಹ …

Read More »

ಕೆಎಸ್ ಆರ್ ಟಿಸಿ ಬಸ್ ಹಾಗೂ ಲಾರಿ ಡಿಕ್ಕಿಪ್ರಯಾಣಿಕರೊಬ್ಬರು ಮೃತ

ಧಾರವಾಡ: ಕೆಎಸ್ ಆರ್ ಟಿಸಿ ಬಸ್ ಹಾಗೂ ಲಾರಿ ಡಿಕ್ಕಿಯಾದ ಪರಿಣಾಮ ಬಸ್ ನಲ್ಲಿದ್ದ ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಅಣ್ಣಿಗೇರಿ ತಾಲ್ಲೂಕಿನ ಬದ್ರಾಪುರ ಗ್ರಾಮದ ಬಳಿ ತಡರಾತ್ರಿ ನಡೆದಿದೆ. ಓಂಕಾರ ಗೊಂದಕರ(25) ಮೃತ ದುರ್ದೈವಿ. ಬಳ್ಳಾರಿಯಿಂದ ಬೆಳಗಾವಿ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಅಣ್ಣಿಗೇರಿ ಬಳಿಯ ಬದ್ರಾಪುರದ ಬಳಿ ನಿಂತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಣ್ಣಿಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಮರಾಠರು ಈ ನೆಲದ ಮಕ್ಕಳು. ಮರಾಠಾ ಸಮುದಾಯವನ್ನು ಪ್ರೀತಿಸೋಣ:ಲಕ್ಷ್ಮಣ ಸವದಿ

ಕಲಬುರಗಿ :  ರಾಜ್ಯ ಸರ್ಕಾರ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿರುವುದು ಭಾಷೆ ಗಳ ನಡುವೆ ಗೊಂದಲ ಸೃಷ್ಟಿಸಲು ಅಲ್ಲ. ಸಮುದಾಯಕ್ಕೆ ಆರ್ಥಿಕ ಬಲ ತುಂಬುವ ಉದ್ದೇಶವಾಗಿದೆ. ಅಭಿವೃದ್ಧಿ ಪ್ರಾಧಿಕಾರಕ್ಕೆ ವಿರೋಧ ಬೇಡವೆಂದು ಡಿಸಿಎಂ ಲಕ್ಷ್ಮಣ ಸವದಿ ಮನವಿ ಮಾಡಿಕೊಂಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ವಿವಾದ ಮುಗಿದ ಅಧ್ಯಾಯವಾಗಿದೆ.  ಬೆಳಗಾವಿ ವಿಚಾರವಾಗಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ  ಅಜಿತ್ ಪವಾರ್ ಉದ್ದಟತನದ ಮಾತು ಯಾರಿಗೂ ಹಿತವನ್ನು ತರುವುದಿಲ್ಲ. ಅವರು ಇತಿಹಾಸವನ್ನು …

Read More »

ಡಿ.5ರಂದು ಕರ್ನಾಟಕ ಬಂದ್ ಹೆಸರಲ್ಲಿ ವಿಜಯಪುರ ಬಂದ್ ಹೇಗೆ ಮಾಡುತ್ತಾರೆ ನೋಡೋಣ

ವಿಜಯಪುರ: ಕನ್ನಡಿಗರ ಮತ ಹೋಗುತ್ತೆ ಎಂದು ಸಿಎಂ ಯಡಿಯೂರಪ್ಪನವರು ಭಯ ಪಡಬೇಕಿಲ್ಲ. ಡಿ.5ರಂದು ಕರ್ನಾಟಕ ಬಂದ್ ಮಾಡುವುದಾಗಿ ಬೆದರಿಕೆ ಹಾಕಿರುವ ರೋಲ್ ಕಾಲ್ ಹೋರಾಟಗಾರರಿಗೂ ಅಂಜಬೇಕಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಮರಾಠ ಅಭಿವೃದ್ಧಿ ನಿಗಮ ಹಿಂಪಡೆದರೆ ದೊಡ್ಡ ಅನಾಹುತ ಸಂಭವಿಸುತ್ತೆ. ನಮ್ಮ ರಕ್ಷಣೆ ಮಾಡಿದ ಶಿವಾಜಿ ಮಹಾರಾಜರ ಸಮುದಾಯಕ್ಕೆ ಇನ್ನೂ ಹೆಚ್ಚಿನ ಸೌಲಭ್ಯ ಒದಗಿಸಬೇಕು ಎಂದು ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಬೆಳಗಾವಿ ವಿಚಾರ, ಮರಾಠಿ …

Read More »

ಮರಾಠಿ ಭಾಷೆಯ ಬ್ಯಾನರ್  ಗೆ  ಕಪ್ಪು ಮಸಿ ಬಳಿಯುತ್ತಿರುವ ವೀಡಿಯೋ ವೈರಲ್

ಮರಾಠಿ ಭಾಷೆಯ ಬ್ಯಾನರ್ ಗೆ ಕಪ್ಪು ಮಸಿ: ವೀಡಿಯೋ ವೈರಲ್ VIDEO CREDITS TO UDAYANADU ಬೆಳಗಾವಿ: ರಾಜ್ಯ ಸರಕಾರ ಮರಾಠ ಪ್ರಾಧಿಕಾರ ರಚನೆಗೆ ಆದೇಶ ನೀಡಿದ್ದ ಹಿನ್ನೆಲ್ಲೆಯಲ್ಲಿ ಮರಾಠ ಪ್ರಾಧಿಕಾರ ರಚನೆಗೆ ಸಂಬಂಧಿಸಿ  ನಗರದಲ್ಲಿ  ಹಾಕಲಾಗಿದ್ದ ಮರಾಠಿ ಭಾಷೆಯ ಬ್ಯಾನರ್  ಗೆ  ಕಪ್ಪು ಮಸಿ ಬಳಿಯುತ್ತಿರುವ ವೀಡಿಯೋ ವೈರಲ್ ಆಗಿದೆ. ಮರಾಠ ಪ್ರಾಧಿಕಾರ ರಚನೆಯ ವಿರುದ್ಧ ಈಗಾಗಲೇ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಕನ್ನಡ ಪರ ಸಂಘಟನೆಗಳು ಹಾಗೂ …

Read More »

ಬಿಜೆಪಿ ಸರ್ಕಾರ ಬಂದಾಗಲೆಲ್ಲ ಅಶಕ್ತರೇ ಮಂತ್ರಿಯಾಗಿದ್ದಾರೆ: ಅಪ್ಪಚ್ಚು ರಂಜನ್

ಮಡಿಕೇರಿ: ನಮ್ಮ ಸರ್ಕಾರ ರಚನೆಯಾದಗಲೆಲ್ಲ ಅವರೇ ಮಂತ್ರಿಗಳಾಗಿದ್ದಾರೆ. ಜೊತೆಗೆ ಕೆಲಸ ಮಾಡದ ಅಶಕ್ತ ಸಚಿವರು ಇದ್ದಾರೆ. ಅಂತಹವರನ್ನು ಕೈಬಿಟ್ಟು ನಮಗೆ ಸಚಿವ ಸ್ಥಾನ ಕೊಡಲಿ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಹೇಳಿದರು.ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿರುವ ಅವರು, ನಾಲ್ಕೈದು ಬಾರಿ ಸಚಿವರಾದವರೇ ಮತ್ತೆ ಸಚಿವರಾಗಿದ್ದಾರೆ. ಈಗಿರುವ ಕ್ಯಾಬಿನೆಟ್ ನಲ್ಲಿ ಸರಿಯಾಗಿ ಕರ್ತವ್ಯ ನಿರ್ವಹಿಸದ ಸಚಿವರೂ ಇದ್ದಾರೆ. ಅಂತಹವರನ್ನು ಕೈಬಿಡಲಿ. ಉಮೇಶ್ ಕತ್ತಿ ಸೇರಿದಂತೆ ನಾನೂ ಐದು ಬಾರಿ ಶಾಸಕನಾಗಿದ್ದೇನೆ. …

Read More »

ಶೀಘ್ರವೇ 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿ: ಬಸವರಾಜ ಬೊಮ್ಮಾಯಿ 

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿ ನಡೆಯಲಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ  ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನುಮತಿ ನೀಡಿದ್ದು, ಶೀಘ್ರವೇ ನೇಮಕಾತಿ ನಡೆಯಲಿದೆ ಎಂದಿದ್ದಾರೆ. ಈಗಾಗಲೇ ಹಲವು ಉದ್ಯೋಗಗಳಿಗೆ ನೇಮಕಾತಿ ನಡೆಯುತ್ತಿದೆ. ಇನ್ನೂ ಹೆಚ್ಚಿನ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಶೀಘ್ರವೇ ನೇಮಕಾತಿ ನಡೆಯಲಿದೆ …

Read More »