ಬೆಂಗಳೂರು ನ19.ಇತ್ತೀಚೆಗಷ್ಟೇ ನಡೆದಿದ್ದ ನಗರಸಭೆ ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಯನ್ನು ರಾಜ್ಯ ಹೈಕೋರ್ಟ್ ರದ್ದುಗೊಳಿಸಿದೆ. ಇತ್ತೀಚೆಗಷ್ಟೇ ಮೀಸಲಾತಿಯ ವಿರುದ್ಧ ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದರು ಈ ಸಂದರ್ಭದಲ್ಲಿ ಏಕಸದಸ್ಯಪೀಠ ಅದನ್ನ ವಜಾಗೊಳಿಸಿ ನವೆಂಬರ್ ಎರಡರ ಒಳಗೆ ಚುನಾವಣೆಗಳನ್ನು ನಡೆಸಲು ಸೂಚನೆ ನೀಡಿತ್ತು . ಅದರಂತೆ ಈಗಾಗಲೇ ರಾಜ್ಯದ ಹಲವಾರು ಕಡೆ ನಗರಸಭೆ ಪುರಸಭೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆದು ಪದಗ್ರಹಣ ಮಾಡಿದ್ದಾರೆ .ಆದರೆ …
Read More »ಶಶಿಕಲಾ ಜೊಲ್ಲೆ ಸಂಪುಟದಿಂದ ಕೈ ಬಿಡುವ ಸಾಧ್ಯತೆ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತ
ಬೆಂಗಳೂರು : ಸಚಿವ ಸಂಪುಟ ಪುನಾರಚನೆಯಲ್ಲಿ ಶಾಸಕ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದ್ದು, ಈಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸಂಪುಟದಿಂದ ಕೈ ಬಿಡುವ ಸಾಧ್ಯತೆ ಇದೆ. ನಿನ್ನೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ಪಕ್ಷದ ನಾಯಕರೊಂದಿಗೆ ಚರ್ಚಿಸಿ, ಪಟ್ಟಿ ನೀಡಿದ್ದಾರೆ. ಸುಮಾರು 50 ನಿಮಿಷಗಳ ಕಾಲ ಸಿಎಂ ಬಿಎಸ್ ವೈ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾವರ …
Read More »ಮಾಸ್ಕ್ ದಂಡದ ಮೊತ್ತವನ್ನು 2000 ರೂ ಗೆ ಹೆಚ್ಚಳ
ನವದೆಹಲಿ: ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ದೆಹಲಿ ಸರ್ಕಾರ ದಂಡದ ಮೊತ್ತವನ್ನು 2000ರೂ ಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ದೆಹಲಿಯಲ್ಲಿ ದಿನದಿಂದ ದಿನಕ್ಕೆ ಆರರಿಂದ ಏಳು ಸಾವಿರ ಸೋಂಕಿತರು ಪತ್ತೆಯಾಗುತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಸಾರ್ವಜನಿಕರು ಮಾಸ್ಕ್ ನಿರ್ಲಕ್ಷ್ಯ ಮಾಡುತ್ತಿರುವುದರಿಂದ ಕಠಿಣ ಕ್ರಮ ಕೈಗೊಂಡಿರುವ ಸರ್ಕಾರ 500 ರೂ ಇದ್ದ ಮಾಸ್ಕ್ ದಂಡದ ಮೊತ್ತವನ್ನು 2000 ರೂ …
Read More »ಅನಾಥ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸರಳ ರೀತಿಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡ ಸರ್ವೋತ್ತಮ ಜಾರಕಿಹೊಳಿ
ಗೋಕಾಕ : ಭೀಮಶಿ ಜಾರಕಿಹೊಳಿ ಪುತ್ರ ಸರ್ವೋತ್ತಮ ತಮ್ಮ ಹುಟ್ಟು ಹಬ್ಬವನ್ನು ಗುರುವಾರ ಇಲ್ಲಿನ ಶಿವಾ ಪೌಂಡೇಷನ್ ಸಂಸ್ಥೆಯಲ್ಲಿರುವ ಹೆಚ್ ಐವಿ ಪೀಡಿತ, ಅನಾಥ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸರಳ ರೀತಿಯಲ್ಲಿ ಆಚರಿಸಿಕೊಂಡರು. ಸರ್ವೋತ್ತಮ ಜಾರಕಿಹೊಳಿ ಅವರನ್ನು ಮುದ್ದಾದ ಮಕ್ಕಳು ಗುಲಾಬಿ ಹೂ ಕೊಡುವ ಮೂಲಕ ಸ್ವಾಗತಿಸಿದರು. ಜನ್ಮ ದಿನದ ಶುಭ ಕೋರಿದರು. ಬಳಿಕ ಸರ್ವೋತ್ತಮ ಮಕ್ಕಳ ಮುಂದೆಯೇ ಕೇಕ್ ಕತ್ತಿಸಿ, ಸಿಹಿ ಹಂಚಿಸಿದರು. ತದನಂತರ ಮಕ್ಕಳಿಗೆ ಸ್ಕೂಲ್ ಬ್ಯಾಗ್, …
Read More »ರಾಹುಲ್, ಪ್ರಿಯಾಂಕಾರಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 103ನೇ ಜಯಂತಿ ಆಚರಣೆ
ಗೋಕಾಕ್ : ಇಲ್ಲಿನ ಹಿಲ್ ಗಾರ್ಡ್ ನ ಗೃಹ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 103ನೇ ಜಯಂತಿಯನ್ನು ಅದ್ದೂರಿಯಿಂದ ಗುರುವಾರ ಆಚರಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ರವರ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ಮಾಜಿ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ವಿವೇಕ ಜತ್ತಿ ಮಾತನಾಡಿ, ಉಕ್ಕಿನ ಮಹಿಳೆ ಎಂದು ಕರೆಯುವ …
Read More »‘ಮಹಾನಾಯಕ’ ಧಾರಾವಾಹಿಯಿಂದ ಮರೆತು ಹೋದ ಡಾ. ಬಿ.ಆರ್.ಅಂಬೇಡ್ಕರ್ ಅವರ ಇತಿಹಾಸವನ್ನು ತಿಳಿದುಕೊಳ್ಳುವ ಪ್ರಯತ್ನವಾಗುತ್ತಿದೆ:ಸತೀಶ್ ಜಾರಕಿಹೊಳಿ
ಹುಕ್ಕೇರಿ : ‘ ಝೀ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಮಹಾನಾಯಕ’ ಧಾರಾವಾಹಿಯಿಂದ ಮರೆತು ಹೋದ ಡಾ. ಬಿ.ಆರ್.ಅಂಬೇಡ್ಕರ್ ಅವರ ಇತಿಹಾಸವನ್ನು ತಿಳಿದುಕೊಳ್ಳುವ ಪ್ರಯತ್ನವಾಗುತ್ತಿದೆ ‘ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಅರ್ಜುನ ವಾಡ್ ಗ್ರಾಮದಲ್ಲಿ ಗುರುವಾರ ಮಹಾನಾಯಕ ಬ್ಯಾನರ್ ಉದ್ಘಾಟನೆಗೊಳಿಸಿ ಮಾತನಾಡಿದರು. ‘ ಇಡೀ ಕರ್ನಾಟಕದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ಭಾವಚಿತ್ರವಿರುವ ಪೊಸ್ಟರ್ ಉದ್ಘಾಟನೆಗೊಳಿಸುವ ಪರಂಪರೆ ಮುಂದುವರೆದಿದೆ. ಇದಕ್ಕೆ ಝೀ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ …
Read More »ವಿದ್ಯುತ್ ದರ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿಪ್ರತಿಭಟನಾ ಮೆರವಣಿಗೆ
ಬೆಳಗಾವಿ: ರಾಜ್ಯ ಸರ್ಕಾರದ ವಿದ್ಯುತ್ ದರ ಏರಿಕೆ ನಿರ್ಧಾರವನ್ನು ಖಂಡಿಸಿ ಬೆಳಗಾವಿ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು. ಇಲ್ಲಿ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ್ಯಾಲಿ ನಡೆಸಿದರು. ಬಿಜೆಪಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಬಿಜೆಪಿ ಸರ್ಕಾರವು ವಿದ್ಯುತ್ ದರವನ್ನು ಸರಾಸರಿ 5.4 ರಂತೆ ಪ್ರತಿ ಯೂನಿಟ್ ಗೆ 40 ಪೈಸೆ ಹೆಚ್ಚಳ ಮಾಡಿದೆ. ಕೋವಿಡ್ ಸಂಕಷ್ಟದ …
Read More »ಜಿಲ್ಲೆ ಮಾಡುವುದಾದರೆ ಮೊದಲು ಚಿಕ್ಕೋಡಿ ಜಿಲ್ಲೆ ಮಾಡಿ ಇಲ್ಲವಾದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆ:ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ
ಚಿಕ್ಕೋಡಿ: ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿ ನೂತನವಾಗಿ ವಿಜಯನಗರ ಜಿಲ್ಲೆ ರಚನೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸುತ್ತಿದ್ದಂತೆ. ವಿಜಯನಗರ ಜಿಲ್ಲೆಗೆ ಚಿಕ್ಕೋಡಿಯಲ್ಲಿ ವಿರೋಧ ವ್ಯಕ್ತವಾಗಿದೆ. ಜಿಲ್ಲೆ ಮಾಡುವುದಾದರೆ ಮೊದಲು ಚಿಕ್ಕೋಡಿ ಜಿಲ್ಲೆ ಮಾಡಿ ಇಲ್ಲವಾದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆಯನ್ನ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ನೀಡಿದೆ. ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿ ರಾಜ್ಯದಲ್ಲಿ ಅತಿ ದೊಡ್ಡ ಜಿಲ್ಲೆ ಎನ್ನುವ ಹೆಗ್ಗಳಿಕೆ ಹೊಂದಿದಂತಹ ಜಿಲ್ಲೆ 18 ವಿಧಾನಸಭಾ, ಎರಡು …
Read More »ರಸ್ತೆಗಳ ಅಭಿವೃದ್ಧಿಗಾಗಿ ಪಿಎಂಜಿಎಸ್‍ವಾಯ್ ಅಡಿ 21.27 ಕೋಟಿ ರೂ. ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಡೇರಹಟ್ಟಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಅರಭಾವಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ವಿವಿಧ ರಸ್ತೆ ಕಾಮಗಾರಿಗಳಿಗಾಗಿ 21.27 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಮಂಗಳವಾರದಂದು ಉದಗಟ್ಟಿಯಿಂದ ನಾಗನೂರ ವ್ಹಾಯಾ ವಡೇರಹಟ್ಟಿ ರಸ್ತೆ ಸುಧಾರಣಾ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ …
Read More »ಲಾರಿ ಚಾಲಕನ ಅವಘಡದಿಂದಾಗಿ ಲಾರಿ, ಬೈಕ್, ಕಾರು, ನಡುವೆ ಭೀಕರ ಅಪಘಾತ
ನೆಲಮಂಗಲ: ಇಲ್ಲಿನ ಬಸ್ ನಿಲ್ದಾಣದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಕಾರು ಚಾಲಕನನ್ನು ಸುನೀಲ್ ಎಂದು ಗುರುತಿಸಲಾಗಿದೆ. ಬೈಕ್ ಸವಾರನ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಲಾರಿ ಚಾಲಕನ ಅವಘಡದಿಂದಾಗಿ ಲಾರಿ, ಬೈಕ್, ಕಾರು, ನಡುವೆ ಭೀಕರ ಅಪಘಾತ ಸಂಭವಿಸಿದೆ.ಸ್ತೆಯಲ್ಲಿ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿಯಾಗಿ ಸರಣಿ ಅಪಘಾತವೆಸಗಿ ಚಾಲಕ ನಾಪತ್ತೆಯಾಗಿದ್ದಾನೆ. ಸ್ಥಳಕ್ಕೆ ನೆಲಮಂಗಲ ಟೌನ್ ಹಾಲ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »