Breaking News

ಆರ್ಡರ್ ಮಾಡಿದ್ದು ಆಯಪಲ್‌ ಐಫೋನ್, ಬಂದಿದ್ದು ಆಯಪಲ್‌ ಜ್ಯೂಸ್!; ಬುಕ್ ಮಾಡಿದ ಮಹಿಳೆಗೆ ಶಾಕ್..!

ಈಗ ಆಫ್‌ಲೈನ್‌ಗಿಂತ ಆನ್‌ಲೈನ್ ನೆಚ್ಚಿಕೊಂಡವರೇ ಹೆಚ್ಚು. ಏಕೆಂದು ಇದು ಬಹಳ ಸುಲಭ ಹಾಗೂ ಕುಳಿತಲ್ಲೇ ಎಲ್ಲ ಕೆಲಸವೂ ಆಗುತ್ತದೆ. ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದರೆ ಫೋನಿಗೆ ಬದಲಾಗಿ ಕಲ್ಲು, ಇಟ್ಟಿಗೆ ಹಾಗೂ ಬದಲಿ ವಸ್ತುಗಳು ಬಂದಿರುವ ನಿದರ್ಶನಗಳು ಸಾಕಷ್ಟಿವೆ. ಗ್ರಾಹಕರು ಆರ್ಡರ್ ಮಾಡುವುದೇ ಒಂದಾದರೆ, ಅವರಿಗೆ ಬರೋದು ಇನ್ನೊಂದು. ಆದರೂ ಕೂಡ ಆನ್‌ಲೈನ್ ಶಾಪಿಂಗ್ ಮಾಡುವುದು ಕಡಿಮೆಯಾಗಿಲ್ಲ. ಚೀನಾದ ಮಹಿಳೆಯೊಬ್ಬಳು ಆನ್‌ಲೈನ್ನಲ್ಲಿ ಲಕ್ಷಾಂತರ ರೂ. ಕೊಟ್ಟು ಆರ್ಡರ್ ಮಾಡಿದ ವಸ್ತುವಿನ ಬದಲು …

Read More »

ವಿದ್ಯಾರ್ಥಿನಿಯರ ಜೊತೆ ನೃತ್ಯ ಮಾಡಿದ ರಾಹುಲ್​ ಗಾಂಧಿ

ಕಾಂಗ್ರೆಸ್​ ನಾಯಕ ಹಾಗೂ ಸಂಸದ ರಾಹುಲ್​ ಗಾಂಧಿ ದಿನಕ್ಕೊಂದು ವಿಚಾರಕ್ಕಾಗಿ ಟ್ರೋಲ್​ ಆಗ್ತಾನೇ ಇರ್ತಾರೆ. 50 ವರ್ಷದ ರಾಹುಲ್​ ಗಾಂಧಿ ಮೀನುಗಾರರ ಜೊತೆ ಈಜಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿತ್ತು. ಇದಾದ ಬಳಿಕ ಅವರು ಟೀ ಶರ್ಟ್​ ಧರಿಸಿ ಸಮುದ್ರದಲ್ಲಿ ಈಜಾಡುತ್ತಿರುವ ಫೋಟೋ ಕೂಡ ಸುದ್ದಿ ಮಾಡಿತ್ತು. ಇದೀಗ ರಾಹುಲ್​ ಗಾಂಧಿಯ ಮತ್ತೊಂದು ವಿಡಿಯೋ ಸಾಕಷ್ಟು ಸುದ್ದಿಯಲ್ಲಿದೆ. ಇದರಲ್ಲಿ ತಮಿಳುನಾಡಿನ ಮುಲ್ಗಮುಡುಬನ್​​ನ ಸೇಂಟ್​ ಜೋಸೆಫ್​ ಮ್ಯಾಟ್ರಿಕ್​ ಶಾಲೆಯ …

Read More »

ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಗುಡ್ ನ್ಯೂಸ್: ಅಂಗನವಾಡಿಯಿಂದ ಮನೆ ಬಾಗಿಲಿಗೆ ಆಹಾರ

ಕೊರೋನಾ ಕಾರಣದಿಂದಾಗಿ ಅಂಗನವಾಡಿ ಕೇಂದ್ರಗಳ ಮೂಲಕ ಸೌಲಭ್ಯ ಪಡೆಯುತ್ತಿದ್ದವರಿಗೆ ತೊಂದರೆ ಉಂಟಾಗಿದೆ. ಮಕ್ಕಳು, ಬಾಣಂತಿಯರು, ಗರ್ಭಿಣಿಯರಿಗೆ ಪೌಷ್ಟಿಕ ಆಹಾರವನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯಶಸ್ವಿಯಾಗಿ ಕೈಗೊಂಡಿದೆ. ದಾವಣಗೆರೆ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಅಂಗನವಾಡಿ ಫಲಾನುಭವಿಗಳ ಮನೆಗೆ ಪೌಷ್ಟಿಕ ಆಹಾರವನ್ನು ಪೂರೈಕೆ ಮಾಡುತ್ತಿದ್ದಾರೆ. ಕೊರೊನಾ ಕಾರಣದಿಂದ ಅಂಗನವಾಡಿ ಕೇಂದ್ರಗಳು ಮುಚ್ಚಿದ್ದವು. ಇದರಿಂದ ಫಲಾನುಭವಿಗಳಿಗೆ ಸೌಲಭ್ಯ ಸಿಗದಂತಾಗಿತ್ತು. ಇದನ್ನು …

Read More »

ಬೆಂಗಳೂರಲ್ಲಿಂದು ಅಂಗನವಾಡಿ, ಸಾರಿಗೆ ಹಾಗೂ ಕಾಂಗ್ರೆಸ್ ಪ್ರತಿಭಟನೆಗಳ ಅಬ್ಬರ

ಬೆಂಗಳೂರು,ಮಾ.2- ದಿನೇ ದಿನೇ ಹೆಚ್ಚಾಗುತ್ತಿರುವ ದಿನಸಿ ಪದಾರ್ಥಗಳ ದರ, ತೈಲ ಹಾಗೂ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಘಟಕ ಪ್ರತಿಭಟನೆ ನಡೆಸಿದರೆ ಸಾರಿಗೆ ನೌಕರರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಮಹಿಳಾ ಘಟಕದವರು ರ್ಯಾಲಿ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ತಮ್ಮ 9 ಬೇಡಿಕೆಗಳನ್ನು …

Read More »

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಮಾ. 31 ರವರೆಗೆ ಅವಕಾಶ

ಕಲಬುರಗಿ: ಪದವಿ ಹಾಗೂ ಇತರ ವರ್ಗದ ವಿದ್ಯಾರ್ಥಿಗಳಿಗೆ 2020-21ನೇ ಶೈಕ್ಷಣಿಕ ವರ್ಷದ ಚಟುವಟಿಕೆ ಪ್ರಾರಂಭವಾಗಿವೆ. ಎಲ್ಲಾ ವರ್ಗದ ಶಾಲಾ/ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಹಳೆಯ (2019-20) ಬಸ್ ಪಾಸ್ ಮತ್ತು ಪ್ರಸ್ತುತ ಸಾಲಿನಲ್ಲಿ ಶಾಲಾ/ಕಾಲೇಜುಗಳಿಗೆ ಪಾವತಿಸಿರುವ ರಶೀದಿ ತೋರಿಸಿ ಸಂಸ್ಥೆಯ ಬಸ್ ಗಳಲ್ಲಿ ಸಂಬಂಧಪಟ್ಟ ಮಾರ್ಗದಲ್ಲಿ ಅಥವಾ ಹೊಸ ವಿಳಾಸದಲ್ಲಿರುವ ಶಾಲಾ/ಕಾಲೇಜುಗಳಿಗೆ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‍ಗಳಲ್ಲಿ 2021ರ ಮಾರ್ಚ್ 31 ರವರೆಗೆ ಉಚಿತವಾಗಿ ಪ್ರಯಾಣಿಸಲು …

Read More »

ಬ್ಯಾಂಕ್ ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಖಾತೆಯಿಂದ ಗೊತ್ತೇ ಆಗದೆ ಹಣ ಕಡಿತ -ಪರೋಕ್ಷ ಸುಲಿಗೆ ಎಂದು ಆಕ್ರೋಶ

ಬ್ಯಾಂಕುಗಳು ಗ್ರಾಹಕರಿಗೆ ಪರೋಕ್ಷವಾಗಿ ಸುಲಿಗೆ ಮಾಡುತ್ತಿವೆ. ಸದ್ದೇ ಇಲ್ಲದೆ ಗ್ರಾಹಕರು ತಮ್ಮ ಖಾತೆಯಿಂದ ಹಣ ಕಳೆದುಕೊಳ್ಳುತ್ತಿದ್ದಾರೆ. ಬ್ಯಾಂಕುಗಳ ನಿಯಮಗಳಲ್ಲಿ ಅನೇಕ ಬದಲಾವಣೆಗಳಾಗಿದ್ದರೂ ಈ ಬಗ್ಗೆ ಬಹುತೇಕ ಗ್ರಾಹಕರಿಗೆ ಗೊತ್ತೇ ಇರಲ್ಲ. ಅನೇಕ ರೀತಿಯ ಶುಲ್ಕ ಮತ್ತು ಫೈನ್ ಗಳನ್ನು ಬ್ಯಾಂಕುಗಳು ವಿಧಿಸುತ್ತಿವೆ. ಬಹುತೇಕ ಗ್ರಾಹಕರಿಗೆ ಇದರ ಬಗ್ಗೆ ಮಾಹಿತಿಯೂ ಇರುವುದಿಲ್ಲ. ಖಾತೆಯಲ್ಲಿ ಹಣವಿಲ್ಲದ ಸಂದರ್ಭದಲ್ಲಿ ಅಥವಾ ನಿಗದಿತ ಮೊತ್ತ ಇಲ್ಲದಿದ್ದಾಗ ನೀವು ಹಣ ಪಾವತಿಗೆ ಡೆಬಿಟ್ ಕಾರ್ಡ್ ಸ್ವೈಪ್ ಮಾಡಿದರೆ …

Read More »

BPL, APL ಕಾರ್ಡ್ ಬೇಕಾದವರಿಗೆ ಗುಡ್ ನ್ಯೂಸ್: ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಆಹ್ವಾನ

ಯಾದಗಿರಿ: ಸ್ಥಗಿತಗೊಂಡಿರುವ ಹೊಸ ಆನ್‌ಲೈನ್ ಪಡಿತರ ಚೀಟಿಗಳ ಸ್ವೀಕಾರ ಕಾರ್ಯವನ್ನು ಪುನರಾಂಭಿಸಿದ್ದು, ಆಹಾರ ಇಲಾಖೆ ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರದ ಮಾನದಂಡಗಳಿಗೆ ಅನುಗುಣವಾಗಿ ಹೊಸ ಆದ್ಯತಾ( ಬಿ.ಪಿ.ಎಲ್ ) ಮತ್ತು ಆದ್ಯತೇತರ(ಎ.ಪಿ.ಎಲ್) ಪಡಿತರ ಚೀಟಿಗಳಿಗೆ ಆಹಾರ ಇಲಾಖೆಯ ತಂತ್ರಾಂಶದಲ್ಲಿ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ತಿಳಿಸಿದ್ದಾರೆ.

Read More »

ಕೆ.ಆರ್.ಎಸ್. ಡ್ಯಾಂ ಮೇಲೆ ಯುವಕನ ಉದ್ಧಟತನ – ಇನ್ಸ್ ಪೆಕ್ಟರ್ ಅಮಾನತು

ಮಂಡ್ಯ: ಕೆ.ಆರ್.ಎಸ್. ಡ್ಯಾಂ ಮೇಲೆ ಯುವಕನಿಗೆ ಪೊಲೀಸ್ ವಾಹನ ಚಲಾಯಿಸಲು ಅವಕಾಶ ನೀಡಿದ ಭದ್ರತಾ ವಿಭಾಗದ ಇನ್ಸ್ ಪೆಕ್ಟರ್ ರನ್ನು ಅಮಾನತು ಮಾಡಲಾಗಿದೆ. ಕೆ.ಆರ್.ಎಸ್. ಡ್ಯಾಂ ಮೇಲೆ ಸಾರ್ವಜನಿಕರಿಗೆ ನಿಷೇಧವಿದ್ದು, ನಿರ್ಬಂಧವಿದ್ದಾಗ್ಯೂ ಕೂಡ ಪೊಲಿಸರಿಂದಲೇ ನಿಯಮ ಉಲ್ಲಂಘನೆಯಾಗಿದೆ. ಭದ್ರತೆ ನೋಡಿಕೊಳ್ಳಬೇಕಿದ್ದ ಇನ್ಸ್ ಪೆಕ್ಟರ್ ಎಸ್.ಬಿ.ಸ್ವಾಮಿ ಯುವಕನ ಮೋಜು ಮಸ್ತಿಗಾಗಿ ಡ್ಯಾಂ ಮೇಲೆ ವಾಹನ ಚಲಾಯಿಸಲು ಪೊಲೀಸ್ ವಾಹನವನ್ನೇ ನೀಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪೊಲೀಸ್ ನಡೆಗೆ …

Read More »

ಕೈ-ಕಾಲು ಕಟ್ಟಿದ ಸ್ಥಿತಿಯಲ್ಲಿ ನಿರ್ಜನ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿ ಪತ್ತೆ..!

ವಿಜಯವಾಡ: ದುಷ್ಕರ್ಮಿಗಳು ಪದವಿ ವಿದ್ಯಾರ್ಥಿನಿಯ ಕೈಕಾಲು ಕಟ್ಟಿ ನಿರ್ಜನ ಪ್ರದೇಶವೊಂದರಲ್ಲಿ ಎಸೆದು ಹೋಗಿರುವ ಆತಂಕಕಾರಿ ಘಟನೆ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ನಡೆದಿದೆ. ಥೇರ್ಲಂ ಪೊಲೀಸ್​ ಠಾಣೆಯ ಸಮೀಪವಿದ್ದ ನಿರ್ಜನ ಪ್ರದೇಶದಲ್ಲಿ ಪ್ರಜ್ಞೆಯಿಲ್ಲದೆ ಬಿದ್ದಿದ್ದ ವಿದ್ಯಾರ್ಥಿನಿಯನ್ನು ನೋಡಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರು. ಸದ್ಯ ವಿದ್ಯಾರ್ಥಿನಿ ಕೋಮಾದಲ್ಲಿದ್ದು, ಆಕೆಯನ್ನು ಥೇರ್ಲಂ ವಲಯದ ಚಾರ್ಲಾ ಗ್ರಾಮದ ನಿವಾಸಿ ರಮಾ ಎಂದು …

Read More »

ಜೀವಂತ ಇರುವ ವ್ಯಕ್ತಿಯನ್ನು ಪೋಸ್ಟ್ ಮಾರ್ಟಮ್ ಗೆ ಕಳಿಸಿದ ಆಸ್ಪತ್ರೆ ಸಿಬ್ಬಂದಿ

ಬಾಗಲಕೋಟೆ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಭಾವಿಸಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳು ಮರಣೋತ್ತರ ಪರೀಕ್ಷೆಗಾಗಿ ಜೀವಂತ ವ್ಯಕ್ತಿಯನ್ನೇ ಕಳುಹಿಸಿರುವ ಎಡವಟ್ಟು ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಶಂಕರ್ ಗೊಂಬಿ ಎಂಬ 27 ವರ್ಷದ ವ್ಯಕ್ತಿಗೆ ಕಾರು ಅಪಘಾತದಲ್ಲಿ ತಲೆಗೆ ಗಂಭೀರವಾದ ಗಾಯವಾಗಿತ್ತು. ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ವೆಂಟಿಲೇಟರ್ ಅಳವಡಿಸಿ ಶಂಕರ್ ಅವರನ್ನು ಮಹಾಲಿಂಗಪುರ ಆಸ್ಪತ್ರೆಗೆ ದಾಖಲಿಸುವಂತೆ ಹೇಳಿದ್ದರು. ಮಾರ್ಗ ಮಧ್ಯೆಯೇ ಶಂಕರ್ ಮೃತಪಟ್ಟಿದ್ದಾರೆ ಎಂದು …

Read More »