ಬೆಳಗಾವಿ – ಇಲ್ಲಿಯ ಆರ್ ಎಸ್ಎಸ್ನ ಜನಸೇವಾ ಕಲ್ಯಾಣ ಟ್ರಸ್ ಮೊಬೈಲ್ ಕೋವಿಡ್ ಕೇರ್ ಸೆಂಟರ್ ಆರಂಭಿಸಿದ್ದು, ಬೆಳಗಾವಿಜನರಿಗೆ ವಿಶಿಷ್ಷ ಸೇವೆ ಸಲ್ಲಿಸಲು ಮುಂದಾಗಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸೋಂಕಿತರ ಮನೆಗೇ ತೆರಳುವಕೋವಿಡ್ ಕೇರ್ ಸಂಟರ್ ಅಲ್ಲಿಯೆ ರೋಗಿಯನ್ನು ಪರೀಕ್ಷೆಗೊಳಪಡಿಸಲಿದೆ. ಓರ್ವ ಎಂಬಿಬಿಎಸ್ ವೈದ್ಯರು, ಓರ್ವ ನರ್ಸ್, ಸ್ವಯಂ ಸೇಲಕ ಹಾಗೂ ವ್ಯಾನ್ ಚಾಲಕ ಈ ಮೊಬೈಲ್ ಕೋವಿಡ್ ಕೇರ್ ಸೆಂಟರ್ ನಲ್ಲಿರಲಿದ್ದಾರೆ. ಇದರಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ …
Read More »ಕೋವಿಡ್-19 ಸೋಂಕಿತರು ಉಚಿತ ಚಿಕಿತ್ಸೆ ಪಡೆಯಬಹುದು: ಎಂ.ಜಿ.ಹಿರೇಮಠ
ಬೆಳಗಾವಿ: ನೋಂದಾಯಿತ ಖಾಸಗಿ ಆಸ್ಪತ್ರೆಗಳ ಕಾಯ್ದಿರಿಸಿದ ಹಾಸಿಗೆಗಳಲ್ಲಿ ಕೋವಿಡ್-19 ಸೋಂಕಿತರು ಉಚಿತ ಚಿಕಿತ್ಸೆ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಸರ್ಕಾರದ ನಿರ್ದೇಶನದಂತೆ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ 50 ರಷ್ಟು ಹಾಸಿಗೆಗಳನ್ನು ಕೋವಿಡ್-19 ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಕಾಯ್ದಿರಿಸಲಾಗಿದೆ ಎಂದಿದ್ದಾರೆ. ಜಿಲ್ಲೆಯಲ್ಲಿ 06 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, 9 ತಾಲೂಕಾ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ …
Read More »ಯುವತಿಯ ಮೇಲೆ ಅತ್ಯಾಚಾರ,ಸಾಮಾಜಿಕ ಜಾಲ ತಾಣದಲ್ಲಿ ವಿಡಿಯೋ ವೈರಲ್, ಐವರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ಬೆಂಗಳೂರು, ಮೇ. 28: ಬಾಂಗ್ಲಾದೇಶ ಮೂಲದ ಯುವತಿಯ ಮೇಲೆ ಅತ್ಯಾಚಾರ ಎಸಗಿ ಆಕೆಗೆ ಚಿತ್ರಹಿಂಸೆ ನೀಡುವ ದೃಶ್ಯಗಳು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿವೆ. ಈ ಸಂಬಂಧ ಗ್ಯಾಂಗ್ ರೇಪ್ ಪ್ರಕರಣ ದಾಖಲಿಸಿಕೊಂಡಿರುವ ರಾಮಮೂರ್ತಿನಗರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ವಿಡಿಯೋ ವೈರಲ್ ಆದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದ್ದು, ರಾಮಮೂರ್ತಿನಗರದ ಎನ್‌ಆರ್‌ಐ ಬಡಾವಣೆಯಲ್ಲಿ ಕಳೆದ ಹತ್ತು ದಿನಗಳ ಹಿಂದೆ ಈ ಘಟನೆ ನಡೆದಿದೆ. …
Read More »ಚುಟುಚುಟು’ ಬೆಡಗಿ ಆಶಿಕಾಗೆ ಈಗ ತೋಟದಲ್ಲಿ ಕೆಲಸ; ಲಾಕ್ಡೌನ್ನಲ್ಲಿ ಹೊಸ ಕಸುಬು
ಕೊರೊನಾ ವೈರಸ್ ಎರಡನೇ ಅಲೆ ದೇಶಾದ್ಯಂತ ಜೋರಾಗಿರುವ ಕಾರಣ ಬಹುತೇಕ ಕಡೆ ಲಾಕ್‌ಡೌನ್ ಜಾರಿ ಮಾಡಲಾಗಿದೆ. ಸಿನಿಮಾ, ಧಾರಾವಾಹಿ ಶೂಟಿಂಗ್ಗಳು ಸ್ಥಗಿತಗೊಂಡಿರುವುದರಿಂದ ಸೆಲೆಬ್ರಿಟಿಗಳು ಮನೆಯಲ್ಲೇ ಇರಬೇಕಾದ ಪರಿಸ್ಥಿತಿ ಬಂದಿದೆ. ಸದಾ ಕಾಲ ಶೂಟಿಂಗ್ನಲ್ಲಿ ಬ್ಯುಸಿ ಆಗಿರುತ್ತಿದ್ದ ನಟ-ನಟಿಯರು ಇಷ್ಟು ದಿನ ಫ್ಯಾಮಿಲಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದರು. ಈಗ ಅವರಿಗೆ ಕುಟುಂಬದವರ ಜೊತೆ ಕಾಲ ಕಳೆಯಲು ಸಮಯ ಸಿಕ್ಕಿದೆ. ಕೆಲವರು ತಮ್ಮ ತೋಟದ ಮನೆಗೆ ತೆರಳಿ ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ. ನಟಿ ಆಶಿಕಾ ರಂಗನಾಥ್ …
Read More »ಶಾರುಖ್ ಖಾನ್ ಮಗಳ ಪೂಲ್ ಪಾರ್ಟಿ ಚಿತ್ರಗಳು ವೈರಲ್
ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಸಿನಿಮಾಗಳಲ್ಲಿ ನಟಿಸದಿದ್ದರೂ ಬಾಲಿವುಡ್‌ನ ಯುವ ಸೆಲೆಬ್ರಿಟಿಗಳಲ್ಲಿ ಒಬ್ಬರು. ಸುಹಾನಾಗೆ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಜನಪ್ರಿಯರಾಗಿದ್ದಾರೆ ಸುಹಾನಾ. ಇವರ ಒಂದೊಂದು ಪೋಸ್ಟ್‌ಗಳು ಲಕ್ಷಾಂತರ ವೀವ್ಸ್ ಪಡೆಯುತ್ತವೆ. ಗ್ಲಾಮರಸ್ ಲುಕ್‌ಗಳಲ್ಲಿ ಕಾಣಿಸಿಕೊಳ್ಳುವ ಸುಹಾನಾ ಚಿತ್ರಗಳು ವೈರಲ್ ಆಗುವುದು ಸಾಮಾನ್ಯ. ಅಮೆರಿಕದಲ್ಲಿ ನೆಲೆಸಿರುವ ಸುಹಾನಾ ಇತ್ತೀಚೆಗಷ್ಟೆ ತಮ್ಮ ಗೆಳತಿಯರೊಂದಿಗೆ ಪಾರ್ಟಿ ಮಾಡಿದ್ದು ಆ ಚಿತ್ರಗಳು ಸಖತ್ ವೈರಲ್ ಆಗಿವೆ. ಪೂಲ್ ಪಾರ್ಟಿ ಮಾಡಿರುವ …
Read More »ಖಾಸಗಿ ಆಸ್ಪತ್ರೆಗಳಲ್ಲಿ ಮಾತ್ರ: ಒಂದು ಡೋಸ್ ಕೊರೊನಾ ಲಸಿಕೆಗೆ 200 ರೂ. ಸೇವಾ ಶುಲ್ಕ!
ಬೆಂಗಳೂರು, ಮೇ 28: ಕರ್ನಾಟಕದಲ್ಲಿ ಕೊರೊನಾವೈರಸ್ ಲಸಿಕೆಯ ವಿತರಿಸುವ ಖಾಸಗಿ ಆಸ್ಪತ್ರೆಗಳಲ್ಲಿ 200 ರೂಪಾಯಿ ಸೇವಾ ಶುಲ್ಕವನ್ನು ಮಾತ್ರ ವಿಧಿಸುವಂತೆ ಗುರುವಾರ ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಿದೆ. ಕೊವಿಡ್-19 ಲಸಿಕೆ ಉತ್ಪಾದಕ ಕಂಪನಿಗಳು ಖಾಸಗಿ ಆಸ್ಪತ್ರೆಗಳಿಗೆ ನೀಡಿರುವ ಲಸಿಕೆ ದರದ ಮೇಲೆ ಸೇವಾಶುಲ್ಕ ವಿಧಿಸುವ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಕರ್ನಾಟಕ ಸರ್ಕಾರವು ಆರಂಭದಲ್ಲಿ 100 ರೂಪಾಯಿ ಸೇವಾ ಶುಲ್ಕ ವಿಧಿಸುವುದಕ್ಕೆ ಮಾತ್ರ ಅನುಮತಿ ನೀಡಿತ್ತು. ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ …
Read More »ಕರೆನ್ಸಿ ಮೌಲ್ಯ, ಪ್ರಮಾಣ ಹೆಚ್ಚಳ
ಹೊಸದಿಲ್ಲಿ: ದೇಶದಲ್ಲಿ ಕರೆನ್ಸಿಯ ಮೌಲ್ಯ ಮತ್ತು ಪ್ರಮಾಣ 2020-21ನೇ ಸಾಲಿನಲ್ಲಿ ಕ್ರಮವಾಗಿ ಶೇ.16.8 ಹಾಗೂ ಶೇ.7.2ಕ್ಕೆ ಏರಿಕೆಯಾಗಿದೆ. 500 ರೂ., 2 ಸಾವಿರ ರೂ. ನೋಟುಗಳ ಮೌಲ್ಯ ಜತೆ ಸೇರಿ ಶೇ.85.7 ಆಗಿದೆ. 2020ರ ಮಾ.31ರಂದು ಅದರ ಪ್ರಮಾಣ ಶೇ.83.4ರಷ್ಟು ಆಗಿತ್ತು. ಗುರುವಾರ ಬಿಡುಗಡೆಯಾಗಿರುವ ಆರ್‌ಬಿಐ ವಾರ್ಷಿಕ ವರದಿಯಲ್ಲಿ ಈ ಅಂಶ ಉಲ್ಲೇಖೀಸಲಾಗಿದೆ. ಸೋಂಕಿನ ಹಿನ್ನೆಲೆಯಲ್ಲಿ ಬ್ಯಾಂಕ್ ನೋಟ್‌ಗಳು ಹೆಚ್ಚಿನ ಪ್ರಮಾಣದಲ್ಲಿ ಚಲಾವಣೆಯಲ್ಲಿವೆ. ಎಲ್ಲಾ ರೀತಿಯ ಮೌಲ್ಯಗಳ ಬ್ಯಾಂಕ್ ನೋಟುಗಳು …
Read More »ಗೋವಾ : ಸಾವಂತ್ ನೇತೃತ್ವದ ಸರ್ಕಾರವನ್ನು ವಜಾಗೊಳಿಸಿ : ಗಿರೀಶ್ ಚೋಡಣಕರ್
ಪಣಜಿ : ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಆಡಳಿತ ಸರ್ಕಾರ ವಿಫಲವಾದ ಕಾರಣ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ನೇತೃತ್ವದ ಸರ್ಕಾರವನ್ನು ವಜಾಗೊಳಿಸುವಂತೆ ಗೋವಾ ರಾಜ್ಯ ಕಾಂಗ್ರೇಸ್ ಸಮೀತಿ ಅಧ್ಯಕ್ಷ ಗಿರೀಶ್ ಚೋಡಣಕರ್ ರಾಜ್ಯಪಾಲ ಭಗತ್‍ಸಿಂ ಗ್ ಕೋಶ್ಯಾರಿ ರವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ :https://laxminews24x7.com/laxminews-8217/ ರಾಜ್ಯದಲ್ಲಿ ವೆಂಟಿಲೇಟರ್ ಬೆಡ್, ಆಮ್ಲಜನಕ ಲಭ್ಯತೆಯಿಲ್ಲದೆಯೇ ಮತ್ತು ಅಗತ್ಯ ಔಷಧಿ, ಆಸ್ಪತ್ರೆ ಕೊರತೆಯಿಂದಾಗಿ 2000 ಕ್ಕೂ ಹೆಚ್ಚು ಜನರು ಕರೋನಾ …
Read More »ಮದ್ಯದಂಗಡಿ ಮುಂದೆ ಮಕ್ಕಳನ್ನೂ ಕ್ಯೂ ನಿಲ್ಲಿಸಿದ ಮದ್ಯ ಪ್ರಿಯರು
ಲಕ್ಮೇಶ್ವರ: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದನ್ನು ತಡೆಯುವ ನಿಟ್ಟಿನಲ್ಲಿ ಗುರುವಾರದಿಂದ ಗದಗ ಜಿಲ್ಲೆ ಸಂಪೂರ್ಣ ಲಾಕ್ ಆಗುವುದರಿಂದ ಬುಧವಾರ ಲಕ್ಮೇಶ್ವರದಲ್ಲಿ ಮದ್ಯಪ್ರಿಯರು ಮದ್ಯದ ಅಂಗಡಿಗಳ ಮುಂದೆ ಕ್ಯೂ ನಿಂತ ದೃಶ್ಯ ಕಂಡು ಬಂದಿತು. https://laxminews24x7.com/laxminews-8217/ ನಸುಕಿನ 5 ಗಂಟೆಯಷ್ಟರಲ್ಲಾಗಲೇ ಮದ್ಯದ ಅಂಗಡಿಗಳ ಮುಂದೆ ಮದ್ಯಪ್ರಿಯರು ಕಾದು ಕುಳಿತಿದ್ದರು. ನೆರೆಯ ಧಾರವಾಡ, ಹಾವೇರಿ ಜಿಲ್ಲೆ ಕಳೆದ ಮೂರ್‍ನಾಲ್ಕು ದಿನಗಳ ಹಿಂದೆಯೇ ಸಂಪೂರ್ಣ ಲಾಕ್‌ಡೌನ್ ಘೋಷಣೆ ಮಾಡಿದ್ದರಿಂದ ಈ ಭಾಗದಿಂದ ಮದ್ಯ ಖರೀದಿಗೆ …
Read More »ಬೆಳಗಾವಿಯಿಂದ ಕಡಿಮೆ ಸರಬರಾಜು: ಗೋವಾದಲ್ಲಿ ತರಕಾರಿಗೆ ಹಾಹಾಕಾರ
ಪಣಜಿ: ಗೋವಾ ತೋಟಗಾರಿಕಾ ನಿಗಮಕ್ಕೆ ಬೆಳಗಾವಿಯಿಂದ ಸದ್ಯ ವಾರದಲ್ಲಿ ಮೂರು ದಿನಗಳ ಕಾಲ ತರಕಾರಿ ಪೂರೈಕೆಯಾಗುತ್ತಿದೆ, ಇದರಿಂದಾಗಿ ಅಲ್ಲಿರುವ ನಿಗಮದ ಹಲವು ತರಕಾರಿ ಅಂಗಡಿಗಳನ್ನು ಅನಿವಾರ್ಯವಾಗಿ ಬಂದ್ ಮಾಡುವಂತಾಗಿದೆ. ಕೋವಿಡ್ ನಿರ್ಬಂಧದಿಂದಾಗಿ ಬೆಳಗಾವಿ ತರಕಾರಿ ಮಾರುಕಟ್ಟೆ ಬಂದ್ ಆಗಿದೆ. ಗೋವಾ ರಾಜ್ಯಾದ್ಯಂತ ನಿಗಮದ ಸುಮಾರು 1400 ತರಕಾರಿ ಅಂಗಡಿಗಳಿವೆ. ಈ ಅಂಗಡಿಗಳ ಮೂಲಕ ಸರ್ಕಾರವು ರಾಜ್ಯದಲ್ಲಿ ಜನತೆಗೆ ಸಬ್ಸಿಡಿ ದರದಲ್ಲಿ ತರಕಾರಿ ಮಾರಾಟ ಮಾಡುತ್ತದೆ. ಆದರೆ ಬೆಳಗಾವಿಯಿಂದ ಪ್ರತಿದಿನ ತರಕಾರಿ …
Read More »
Laxmi News 24×7