ಉಡುಪಿ : ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪ ಸಂಬಂಧ ಮರಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಘಟನೆ ಸಂಬಂಧ ಆರೋಪಿಗಳ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ವಾಪಸ್ ಪಡೆಯುವಂತೆ ಹಲ್ಲೆಗೊಳಗಾದ ಸಂತ್ರಸ್ತ ಮಹಿಳೆಯು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ. ತಮ್ಮ ಸಮುದಾಯದ ಜನರ ಜೊತೆ ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಹಲ್ಲೆಗೊಳಗಾದ ಮಹಿಳೆಯು, ರಾಜಿ ಮಾಡಿಕೊಂಡಿದ್ದೇವೆ. ಈ ಪ್ರಕರಣ ಹಿಂಪಡೆಯಿರಿ ಎಂದು ಉಡುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಮೀನು ಕದ್ದ ಸಂಬಂಧ ಅದೇ ದಿನ …
Read More »ನಕಲಿ ಅಂಕಪಟ್ಟಿ ನೀಡುತ್ತಿದ್ದ ಜಾಲ ಪತ್ತೆ
ಬೆಂಗಳೂರು: ಕರ್ನಾಟಕ ರಾಜ್ಯ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂಬ ಸಂಸ್ಥೆ ಹೆಸರಿನಲ್ಲಿ ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ನಕಲಿ ಅಂಕಪಟ್ಟಿಗಳನ್ನು ನೀಡುತ್ತಿದ್ದ ಮೂವರು ಆರೋಪಿಗಳನ್ನ ಸಿಸಿಬಿಯ ಆರ್ಥಿಕ ಅಪರಾಧ ದಳದ ಪೊಲೀಸರು ಬಂಧಿಸಿದ್ದಾರೆ. ಪ್ರಶಾಂತ್ ಗುಂಡುಮಿ (41), ಮೋನೀಷ್ ಕೆ.ಜೆ (36) ಹಾಗೂ ರಾಜಶೇಖರ (41) ಬಂಧಿತ ಆರೋಪಿಗಳು. ಕತ್ರಿಗುಪ್ಪೆಯ ರಾಮ್ ರಾವ್ ಲೇಔಟ್‌ನಲ್ಲಿರುವ ಅಕಾಡೆಮಿಯೊಂದರಲ್ಲಿ ಪಿಯುಸಿಗೆ ದಾಖಲಾಗಿದ್ದ ವಿದ್ಯಾರ್ಥಿಗೆ ಯಾವುದೇ ಪರೀಕ್ಷೆ ಬರೆಯದೆಯೇ ಆರೋಪಿಗಳು ಕರ್ನಾಟಕ ರಾಜ್ಯ ಮಾಧ್ಯಮಿಕ …
Read More »ಯುಗಾದಿ ಮತ್ತು ರಂಜಾನ್ ಹಬ್ಬಕ್ಕೆ ಬೆಂಗಳೂರು-ಬೆಳಗಾವಿ ನಡುವೆ ಎಕ್ಸ್ಪ್ರೆಸ್ ರೈಲು
ಹುಬ್ಬಳ್ಳಿ: ಯುಗಾದಿ ಮತ್ತು ರಂಜಾನ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ರೈಲ್ವೆ ಮಂಡಳಿಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಬೆಳಗಾವಿ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಕಾರ್ಯಾಚರಣೆಗೆ ಅನುಮೋದನೆ ನೀಡಿದೆ. ಬೆಂಗಳೂರು – ಬೆಳಗಾವಿ ವಿಶೇಷ ರೈಲು ಸೇವೆಗಳ ವಿವರಗಳು ಈ ಕೆಳಗಿನಂತಿವೆ: ರೈಲು ಸಂಖ್ಯೆ 06511 – ಎಸ್ಎಂವಿಟಿ ಬೆಂಗಳೂರು – ಬೆಳಗಾವಿ ವಿಶೇಷ ಎಕ್ಸ್ಪ್ರೆಸ್ ರೈಲು: ಮಾರ್ಚ್ 28, 2025 ರಂದು …
Read More »ವಾರಕ್ಕೊಮ್ಮೆ ನೀರು ಪೂರೈಕೆ – ನಾಗರಿಕರಿಗೆ ಸಂಕಷ್ಟದ ಬರೆ
ಬಳ್ಳಾರಿ : ನಗರದಲ್ಲಿ ಬಿರು ಬೇಸಿಗೆಯ ದಿನಗಳು ಪ್ರಾರಂಭವಾದ ಬೆನ್ನಲ್ಲಿಯೇ, ಮಹಾನಗರಪಾಲಿಕೆ ಹಾಗೂ ಜಲ ಮಂಡಳಿ ಅಧಿಕಾರಿಗಳು ನಾಗರಿಕರಿಗೆ ಶಾಕ್ ನೀಡಿದ್ದು, ಇನ್ನು ಮುಂದೆ ವಾರಕ್ಕೊಮ್ಮೆ ಕುಡಿಯುವ ನೀರು ಪೂರೈಕೆಯಾಗಲಿದೆ ಎಂದು ತಿಳಿಸಿದ್ದಾರೆ. ಕಳೆದ ವರ್ಷ ಉತ್ತಮ ಮಳೆಯಾಗಿ ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹವೂ ತೃಪ್ತಿಕರವಾಗಿತ್ತು. ಟಿ. ಬಿ ಡ್ಯಾಂನ ‘ಕ್ರಸ್ಟ್ಗೇಟ್’ಗಳಿಂದ ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋದರೂ ಮತ್ತೆ ಡ್ಯಾಮ್ ಭರ್ತಿಯಾಗಿತ್ತು. ಉತ್ತಮವಾದ ಮಳೆಯಾದ ಕಾರಣ ಡ್ಯಾಂನಲ್ಲಿ ಸಾಕಷ್ಟು …
Read More »ರಾಜ್ಯೋತ್ಸವ ಪ್ರಶಸ್ತಿ: ಅರ್ಜಿ ಬೇಡ, ಸರ್ಕಾರದಿಂದಲೇ ಅರ್ಹರ ಆಯ್ಕೆಗೆ ಚಿಂತನೆ – ಸಚಿವ ತಂಗಡಗಿ
ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊಡಮಾಡುವ ಪ್ರತಿಷ್ಟಿತ ರಾಜ್ಯೋತ್ಸವ ಪ್ರಶಸ್ತಿಗಳನ್ನು ಅರ್ಜಿಗಳಿಂದ ಮುಕ್ತಗೊಳಿಸಿ ಸರ್ಕಾರದಿಂದಲೇ ನೇರವಾಗಿ ಅರ್ಹ ಸಾಧಕರನ್ನು ಆಯ್ಕೆ ಮಾಡುವ ಪದ್ಧತಿಯನ್ನು ಜಾರಿಗೆ ತರಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗಂಭೀರ ಚಿಂತನೆ ನಡೆಸುತ್ತಿದೆ. “ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ” ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ತಿಳಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ …
Read More »ಮನೆ ಬಾಗಿಲಿಗೆ ಆಸ್ತಿ ದಾಖಲೆ, ಅಕ್ರಮ ಕಟ್ಟಡ ನಿರ್ಮಾಣ ತಡೆಗೆ ‘ಎಐ’ ತಂತ್ರಜ್ಞಾನ ಬಳಕೆ: ಡಿಸಿಎಂ
ಬೆಂಗಳೂರು: ”ಮನೆ ಬಾಗಿಲಿಗೆ ಉಚಿತವಾಗಿ ಖಾತೆ ವಿತರಣೆ, ಬೀದಿಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ ಮಾಡಲಾಗುವುದು. ಅಲ್ಲದೆ, ಅಕ್ರಮ ನಿರ್ಮಾಣಗಳ ಪತ್ತೆಗೆ ‘ಎಐʼ ತಂತ್ರಜ್ಞಾನದ ಬಳಕೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. 2025-26ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು ಬೆಂಗಳೂರು ನಗರದ ಶಾಸಕರ ಜೊತೆ ವಿಕಾಸಸೌಧದಲ್ಲಿ ಸೋಮವಾರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಡಿಸಿಎಂ, ”ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 …
Read More »ಕಿತ್ತೂರಿನಲ್ಲಿ ಮಹಿಳಾ ದಿನಾಚರಣೆ; ಸಾಧಕಿಯರ ಸನ್ಮಾನ
ಕಿತ್ತೂರಿನಲ್ಲಿ ಮಹಿಳಾ ದಿನಾಚರಣೆ; ಸಾಧಕಿಯರ ಸನ್ಮಾನ ಅಧಿವಕ್ತಾ ಪರಿಷದ್ ಮತ್ತು ಕಿತ್ತೂರು ಬಾರ್ ಅಸೋಸಿಯೇಷನ ವತಿಯಿಂದ ಆಯೋಜನೆ ಅಧಿವಕ್ತಾ ಪರಿಷದ್ ಉತ್ತರ ಕರ್ನಾಟಕ, ಬೆಳಗಾವಿ ಶಾಲೆ ಮತ್ತು ಕಿತ್ತೂರು ಬಾರ್ ಅಸೋಸಿಯೇಷನನ ವತಿಯಿಂದ ಬೆಳಗಾವಿ ತಾಲೂಕಿನ ಕಿತ್ತೂರಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು. ಭಾನುವಾರದಂದು ಚೆನ್ನಮ್ಮನ ಕಿತ್ತೂರಿನ ರಾಜಗುರು ಪ್ರತಿಷ್ಠಾನ ಸಂಸ್ಥಾನ ಕಲ್ಮಠದಲ್ಲಿ ಮುಖ್ಯ ಅತಿಥಿಗಳಾಗಿ ಮೀನಾಕ್ಷಿ ಸವದಿ ಅವರು ಉಪಸ್ಥಿತರಿದ್ದರು. ಈ ವೇಳೆ ಅವರು ರಾಣಿ ಚೆನ್ನಮ್ಮನ ಕಿತ್ತೂರು …
Read More »ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮುಂದಿನ ಮಾರ್ಚ್ ತಿಂಗಳಲ್ಲಿ ಸರ್ಕಾರದ ವತಿಯಿಂದ ಸಾಮೂಹಿಕ ಸೀಮಂತ ಕಾರ್ಯಕ್ರಮ ನಾನು ಮಂತ್ರಿಯಾದ ಬಳಿಕ ಇಲಾಖೆಗೆ ಹೊಸ ಸ್ಪರ್ಶಕೊಟ್ಟಿರುವೆ ಎಂದ ಸಚಿವರು ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿಯೇ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ಮಾರ್ಚ್ ತಿಂಗಳಿಗೆ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಆದೇಶ …
Read More »ನವಜಾತ ಶಿಶುವಿನ ಹತ್ಯೆ, ಕೊಲೆ ಪ್ರಕರಣದಲ್ಲಿ ಪ್ರೇಮಿಗಳು ಅಂದರ್:ಎಸ್ ಪಿ
ಕಿತ್ತೂರು: ನವಜಾತ ಶಿಶುವಿನ ಹತ್ಯೆ, ಕೊಲೆ ಪ್ರಕರಣದಲ್ಲಿ ಪ್ರೇಮಿಗಳು ಅಂದರ್-ಎಸ್ ಪಿ ಡಾ. ಭೀಮಾಶಂಕರ ಗುಳೇದ ಚನ್ನಮ್ಮನ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ನವಜಾತ ಶಿಶುವನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಇಬ್ಬರು ಪ್ರೇಮಿಗಳನ್ನು ಬಂಧಿಸಿ ಜೈಲಿಗೆ ತಳ್ಳಲಾಗಿದೆ. ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ ಪಿ ಡಾ. ಭೀಮಾಶಂಕರ್ ಗುಳೇದ ಅವರು, ಅಂಬಡಗಟ್ಟಿ ಗ್ರಾಮದಲ್ಲಿ ನವಜಾತ ಹೆಣ್ಣು ಶಿಶುವಿನ ಶವವು ತಿಪ್ಪೆಯಲ್ಲಿ ಸಿಕ್ಕಿತ್ತು. ಈ ಪ್ರಕರಣದ ಕುರಿತು ಪೊಲೀಸರು …
Read More »ಕಾಗವಾಡ ತಾಲೂಕಿನ ಉಗಾರ ಪುರಸಭೆಯಲ್ಲಿ ಸನ್ 2025-26 ಸಾಲಿನ ಬಜೆಟ್ ಮಂಡನೆ ನೆರವೇರಿತು.
ಕಾಗವಾಡ ತಾಲೂಕಿನ ಉಗಾರ ಪುರಸಭೆಯಲ್ಲಿ ಸನ್ 2025-26 ಸಾಲಿನ ಬಜೆಟ್ ಮಂಡನೆ ನೆರವೇರಿತು. . ಕಾಗವಾಡ ತಾಲೂಕಿನ ಉಗಾರ ಪುರಸಭೆಯ ಸನ 2025-26 ಸಾಲಿನ 35 ಲಕ್ಷ 57 ಸಾವಿರ ರೂಪಾಯದ ಉಳಿತಾಯ ಬಜೆಟ ಪುರಸಭೆ ಮುಖ್ಯ ಅಧಿಕಾರಿ ಎಂ ಆರ ನದಾಫ ಮಂಡನೆ ಮಾಡಿದರು. ಸೋಮವಾರ ರಂದು ಉಗಾರ ಪುರಸಭೆಯಲ್ಲಿ ಬಜೆಟ್ ಮಂಡನೆ. ಪುರಸಭೆ ಅಧ್ಯಕ್ಷೆ ಶ್ರೀಮತಿ ಫಾತಿಮಾ ನದಾಫ ಇವರ ಅಧ್ಯಕ್ಷತೆಯಲ್ಲಿ ಸಭೆ ಜರಿಗಿತು. ಮುಖ್ಯ ಅಧಿಕಾರಿಗಳಾದ …
Read More »
Laxmi News 24×7