ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕ್ಷಣಕ್ಕೂ ಕುತೂಹಲ ಮೂಡಿಸುತಿದ್ದು, ಸಿಡಿಯಲ್ಲಿರುವ ಯುವತಿ ದೂರು ದಾಖಲಿಸುವುದಾಗಿ ಹೇಳುತ್ತಿದ್ದಂತೆ ಪ್ರತಿಕ್ರಿಯಿಸಿರುವ ರಮೇಶ್ ಜಾರಕಿಹೊಳಿ, ಯುವತಿ ದೂರು ಕೊಡಲಿ ನಾನು ಎಲ್ಲದಕ್ಕೂ ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ. ಯುವತಿ 3ನೇ ಸಿಡಿ ಬಿಡುಗಡೆ ಮಾಡಿದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಯುವತಿ ಯಾವ ಕೇಸ್ ದಾಖಲಿಸುತ್ತಾಳೋ ದಾಖಲಿಸಿ. ನನ್ನ ವಿರುದ್ಧ ರೇಪ್ ಕೇಸ್ ದಾಖಲಿಸಿದರೂ ನಾನು ಕಾನೂನಾತ್ಮಕವಾಗಿ ಹೋರಾಟ ನಡೆಸಲು …
Read More »ಕರ್ನಾಟಕದ ದಶಕಗಳ ಬೇಡಿಕೆಗೆ ಒಪ್ಪಿದ ಕೇಂದ್ರ ಸರ್ಕಾರ
ಬೆಂಗಳೂರು, ಮಾರ್ಚ್ 26; ಕರ್ನಾಟಕ ರಾಜ್ಯದ ದಶಕಗಳ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆ ಸ್ಥಾನಮಾನವನ್ನು ನೀಡಲು ಅನುಮೋದನೆ ಸಿಕ್ಕಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಟ್ವೀಟ್ ಮೂಲಕ ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ. ರಾಷ್ಟ್ರೀಯ ಯೋಜನೆ ಸ್ಥಾನಮಾನ ಪಡೆದ ರಾಜ್ಯದ ಮೊದಲ ಯೋಜನೆ ಇದಾಗಿದೆ. ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳ …
Read More »ರೈತ ಪ್ರತಿಭಟನೆ : 4 ಶತಾಬ್ಧಿ ರೈಲು ಸಂಚಾರ ರದ್ದು
ನವದೆಹಲಿ,ಮಾ.26- ಪಂಜಾಬ್ ಮತ್ತು ಹರಿಯಾಣದಲ್ಲಿ ರೈತರು ರೈಲ್ವೇ ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿರುವುದರಿಂದ ನಾಲ್ಕು ಶತಾಬ್ದಿ ಎಕ್ಸ್‍ಪ್ರೆಸ್ ರೈಲುಗಳ ಸಂಚಾರ ರದ್ದುಗೊಂಡಿದೆ. ಭಾರತ್ ಬಂದ್ ಹಿನ್ನೆಲೆಯಲ್ಲಿ 32 ರೈಲ್ವೆ ನಿಲ್ದಾಣಗಳಲ್ಲಿ ರೈಲು ಹಳಿ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿರುವುದರಿಂದ ಹಲವಾರು ರೈಲುಗಳ ಸಂಚಾರಕ್ಕೆ ಅಡಚಣೆಯಾಗಿದೆ. ದೆಹಲಿ, ಅಂಬಾಲಾ, ಫೀರೋಜ್‍ಪುರ್ ವಿಭಾಗಗಳ ರೈಲು ಸಂಚಾರ ರದ್ದುಗೊಂಡಿದೆ. ಇದುವರೆಗೂ 31 ರೈಲುಗಳ ಸಂಚಾರಕ್ಕೆ ಆಡಚಣೆಯಾಗಿದ್ದು ನಾಲ್ಕು ಶತಾಬ್ದಿ ರೈಲು ಸಂಚಾರ ರದ್ದುಗೊಳಿಸಲಾಗಿದೆ …
Read More »ಇಂದು ಮಧ್ಯಾಹ್ನ 2 ಗಂಟೆಗೆ ವಕೀಲರ ಮೂಲಕ ದೂರು ದಾಖಲು: ಸಿಡಿ ಲೇಡಿ
ಬೆಂಗಳೂರು – ಕಳೆದ 24 ದಿನಗಳಿಂದ ತೀವ್ರ ಸಂಚಲನ ಮೂಡಿಸಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಇದೀಗ ಮತ್ತೊಂದು ಸ್ಪೋಟಕ ತಿರುವು ಸಿಕ್ಕಿದೆ. ರಮೇಶ ಜಾರಕಿಹೊಳಿ ವಿರುದ್ಧ ಇಂದೇ ಪ್ರಕರಣ ದಾಖಲಿಸಲು ಸಿಡಿಯಲ್ಲಿರುವ ಯುವತಿ ನಿರ್ಧರಿಸಿದ್ದು, ವಕೀಲ ಜಗದೀಶ್ ಎನ್ನುವವರ ಮೂಲಕ ಮಧ್ಯಾಹ್ನ 2 ಗಂಟೆಗೆ ದೂರು ದಾಖಲಾಗಲಿದೆ. ಯುವತಿಯ ಹಸ್ತಾಕ್ಷರದಲ್ಲೇ ದೂರು ದಾಖಲಿಸಲಾಗುವುದು ಎಂದು ಅವಳ ಪರ ವಕೀಲ ಜಗದೀಶ ಸುದ್ದಿಗಾರರಿಗೆ ತಿಳಿಸಿದ್ದಾರೆ. ಒಬ್ಬ ಪ್ರಭಾವಿ …
Read More »ಸಿಡಿ ಕೇಸ್: ಕತ್ತರಿ ಹಾಕದ ವಿಡಿಯೋ ಪತ್ತೆ
ಬೆಂಗಳೂರು: ಸಿಡಿ ಕೇಸ್ ತನಿಖೆ ಚುರುಕುಗೊಳಿಸಿರುವ ಎಸ್ ಐಟಿ ಅಧಿಕಾರಿಗಳಿಗೆ “ಕತ್ತರಿ ಹಾಕದ’ ಸುಮಾರು 2 ಗಂಟೆ 28 ನಿಮಿಷದ ವಿಡಿಯೋ ಸಿಕ್ಕಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಮತ್ತೂಂದೆಡೆ ಬುಧ ವಾರ ರಾತ್ರಿ 3ನೇ ಬಾರಿಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವ ರನ್ನು ಎಸ್ ಐಟಿ ಅವರ ಮನೆಯಲ್ಲೇ ವಿಚಾರಣೆ ನಡೆಸಿದೆ. ಇತ್ತೀಚೆಗೆ ಪ್ರಕರಣದ ಕಿಂಗ್ ಪಿನ್ ಎನ್ನ ಲಾದ ಪತ್ರ ಕರ್ತ ನರೇ ಶ್ …
Read More »ಪ್ರಜಾಪ್ರಭುತ್ವವನ್ನು ಕೊಲ್ಲಲೂ ಮೋದಿ ಸರ್ಕಾರ ಹಿಂಜರಿಯುವುದಿಲ್ಲ; ಶಿವಸೇನೆ
ಮುಂಬೈ, ಮಾರ್ಚ್ 25: ದೆಹಲಿ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆ 2021ಗೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿರುವ ಶಿವಸೇನೆ, “ಬಿಜೆಪಿಯೇತರ ರಾಜ್ಯಗಳನ್ನು ರಾಜ್ಯಪಾಲರ ಮೂಲಕ ಕೇಸರಿ ಪಕ್ಷ ನಿಗ್ರಹಿಸುತ್ತಿದೆ” ಎಂದು ಆರೋಪಿಸಿದೆ. ಪಕ್ಷದ ಪತ್ರಿಕೆ “ಸಾಮ್ನಾ”ದ ಸಂಪಾದಕೀಯದಲ್ಲಿ ಈ ಕುರಿತು ಟೀಕಿಸಿದ್ದು, ನರೇಂದ್ರ ಮೋದಿ ಅವರು ಈ ದೇಶದಲ್ಲಿ ಪ್ರಜಾಪ್ರಭುತ್ವ ಹಾಗೂ ಸ್ವಾತಂತ್ರ್ಯವನ್ನು ನಿಗ್ರಹಿಸಲು ನಿರ್ಧರಿಸಿದಂತಿದೆ ಎಂದು …
Read More »ಕೃಷಿ ಕಾನೂನುಗಳ ವಾಪಾಸಾತಿಗೆ ಒತ್ತಾಯಿಸಿ ಇಂದು ಭಾರತ್ ಬಂದ್
ನವದೆಹಲಿ, (ಮಾ. 26): ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಮೂರು ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಾಸ್ ಪಡೆಯುವಂತೆ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ತಮ್ಮ ಹೋರಾಟದ ಮುಂದುವರೆದ ಭಾಗವಾಗಿ ಇಂದು (ಮಾರ್ಚ್ 26ರಂದು) ಭಾರತ್ ಬಂದ್ಗೆ ಕರೆ ಕೊಟ್ಟಿದ್ದಾರೆ. ಕೃಷಿ ಕಾಯ್ದೆಗಳನ್ನು ವಾಪಾಸ್ ಪಡೆಯುವಂತೆ ಒತ್ತಾಯಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ಆರಂಭವಾಗಿದ್ದ 2020ರ ನವೆಂಬರ್ 26ರಂದು; ಬರೊಬ್ಬರಿ ನಾಲ್ಕು …
Read More »ಶಾಕಿಂಗ್ ನ್ಯೂಸ್ : ಮೂರು ತಿಂಗಳ ಕಾಲ ಅಬ್ಬರಿಸಲಿದೆ ಕೊರೊನಾ!
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮತ್ತೆ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದ್ದು, ಈ ನಡುವೆ ಜನತೆಗೆ ತಜ್ಞರು ಬಿಗ್ ಶಾಕಿಂಗ್ ಸುದ್ದಿಯೊಂದನ್ನು ನೀಡಿದ್ದು, ರಾಜ್ಯದಲ್ಲಿ ಕೊರೊನಾ ವೈರಸ್ ಜುಲೈ ವರೆಗೂ ಕಾಡುವ ಸಾಧ್ಯತೆ ಇದೆ ಎಂದು ರಾಜ್ಯ ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ ಎನ್ನಲಾಗಿದೆ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೊರೊನಾ ಅತಂಕ ಮತ್ತಷ್ಟು ಹೆಚ್ಚಲಿದ್ದು, ಈ ಹಿನ್ನೆಲೆಯಲ್ಲಿ ಜನರು ಹೆಚ್ಚು ಜಾಗರೂಕರಾಗಿ ಇರಬೇಕು. ಹೊರಗಡೆ ಸುತ್ತಾಟ …
Read More »ರಾಜ್ಯ ಕಾಂಗ್ರೆಸ್ ನಾಯಕರು ಚುನಾವಣೆಗೆ ಸ್ಪರ್ಧಿಸಲು ನನ್ನ ಹೆಸರನ್ನೇ ಹೈಕಮಾಂಡ್ ಗೆ ಕಳಿಸಲಿಲ್ಲ: ಪ್ರಕಾಶ ಹುಕ್ಕೇರಿ ಅಸಮಾಧಾನ
ಬೆಳಗಾವಿ : “ಬಿಜೆಪಿಯಿಂದ ಸುರೇಶ ಅಂಗಡಿ ಕುಟುಂಬದ ಯಾರಿಗೇ ಟಿಕೆಟ್ ನೀಡಲಿ, ನಾನು ಅವರ ಪರವಾಗಿ ಕ್ಷೇತ್ರದಲ್ಲೆಲ್ಲ ಸುತ್ತಾಡಿ ಪ್ರಚಾರ ಮಾಡುತ್ತೇನೆ. ನನ್ನ ಮಗನ ಚುನಾವಣೆಗೆ ಕೆಲಸ ಮಾಡಿದ ರೀತಿಯಲ್ಲೇ ಮಾಡುತ್ತೇನೆ. ಇದಕ್ಕೆ ಕಾಂಗ್ರೆಸ್ ಹೈಕಮಾಂಡ್ ಏನ್ ಮಾಡುತ್ತೋ ಮಾಡ್ಕೊಳ್ಳಿ ನೋಡೋಣ” ಎಂದು ಸವಾಲೆಸೆದಿದ್ದ ಮಾಜಿ ಸಂಸದ, ಮಾಜಿ ಸಚಿವ ಪ್ರಕಾಶ ಹುಕ್ಕೇರಿ ಇದೀಗ ಮಂಗಲಾ ಅಂಗಡಿಗೆ ಬಿಜೆಪಿ ಟಿಕೆಟ್ ಘೋಷಣೆಯಾದ ನಂತರ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈಗ ತರಾತುರಿಯಲ್ಲಿ …
Read More »BIG BREAKING: ರಾಜ್ಯದಲ್ಲಿಂದು 2500 ಕ್ಕೂ ಅಧಿಕ ಜನರಿಗೆ ಸೋಂಕು, 18 ಸಾವಿರಕ್ಕೂ ಅಧಿಕ ಮಂದಿಗೆ ಚಿಕಿತ್ಸೆ
ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೊನಾ ಸೋಂಕಿತರ ಸಂಖ್ಯೆ 2000 ಗಡಿ ದಾಟಿದೆ. ಇವತ್ತು ಒಂದೇ ದಿನ ಬರೋಬ್ಬರಿ 2523 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,78,478 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 1192 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,47,781 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇವತ್ತು ಒಂದೇ ದಿನ 10 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ ರಾಜ್ಯದಲ್ಲಿ 12,471 …
Read More »
Laxmi News 24×7