Breaking News

ಬಿಎಸ್‍ವೈ ಸಂಪುಟದಲ್ಲಿ 7 ಮಂತ್ರಿ ಸ್ಥಾನಗಳು ಖಾಲಿಯಿದ್ದು, 2 ಡಜನ್‍ಗೂ ಅಧಿಕ ಶಾಸಕರು ಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.

ಬೆಂಗಳೂರು,ನ.10- ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಆರ್ ಆರ್ ನಗರ ಮತ್ತು ಶಿರಾದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದರಿಂದ ಯಾವುದೇ ಸಂದರ್ಭದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯಾಗುವುದು ಖಚಿತವಾಗಿದೆ. ದೆಹಲಿ ವರಿಷ್ಠರು ಅನುಮತಿ ಕೊಟ್ಟರೆ ದೀಪಾವಳಿ ಹಬ್ಬದ ನಂತರ ಯಾವುದೇ ವೇಳೆಯೂ ಸಂಪುಟ ವಿಸ್ತರಣೆಗೆ ಮುಹೂರ್ತ ಯಾವುದೇ ವೇಳೆಯಲ್ಲಿ ನಿಗದಿಯಾಗಲಿದ್ದು, ಆಡಳಿತಾರೂಢ ಬಿಜೆಪಿಯಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ಸದ್ಯ ಬಿಎಸ್‍ವೈ ಸಂಪುಟದಲ್ಲಿ 7 ಮಂತ್ರಿ ಸ್ಥಾನಗಳು ಖಾಲಿಯಿದ್ದು, 2 ಡಜನ್‍ಗೂ ಅಧಿಕ ಶಾಸಕರು ಮಂತ್ರಿ …

Read More »

ನಾಯಕತ್ವ ಬದಲಾವಣೆ ಎಂಬ ವದಂತಿಗೆ ಪೂರ್ಣ ವಿರಾಮ ಬಿದ್ದಿದ್ದು, ಬಿಎಸ್‍ವೈ 2023ರವರೆಗೂ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಸಂಶಯವೇ ಇಲ್ಲ

ಬೆಂಗಳೂರು,ನ.10- ಭಾರೀ ಹಣಾಹಣಿಯಿಂದ ಕೂಡಿದ್ದ ರಾಜ್ಯದ ಎರಡು ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕುರ್ಚಿ ಇನ್ನಷ್ಟು ಸುಭದ್ರ ಮಾಡಿದೆ. ಒಂದು ವೇಳೆ ಅಪ್ಪಿತಪ್ಪಿಯೂ ರಾಜರಾಜೇಶ್ವರಿನಗರ ಮತ್ತು ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಿದ್ದರೆ ಸಿಎಂ ಬಿಎಸ್‍ವೈ ಕುರ್ಚಿಗೆ ನಿಸ್ಸಂದೇಹವಾಗಿ ಕಂಟಕ ಎದುರಾಗುತ್ತಿತ್ತು.ಕುರಿ ಹಳ್ಳಕ್ಕೆ ಬಿದ್ದಾಗಲೇ ಹಾಳಿಗೊಂದು ಕಲ್ಲು ಎಂಬಂತೆ ಸೋಲಿನ ಹೊಣೆಯನ್ನು ಯಡಿಯೂರಪ್ಪನವರಿಗೆ ಕಟ್ಟಿ ನಾಯಕತ್ವ ಬದಲಾವಣೆಯಾಗಬೇಕೆಂಬ ಕೂಗಿಗೆ ಬಲ …

Read More »

ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ಉಚುನಾವಣೆಯಲ್ಲಿಬಿಜೆಪಿ ಮುನ್ನಡೆ

ನವದೆಹಲಿ: ಕರ್ನಾಟಕದ ರಾಜರಾಜೇಶ್ವರಿ ನಗರ, ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಹಾರದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲೂ ಬಿಜೆಪಿ ಮೈತ್ರಿಕೂಟ ಮುನ್ನಡೆಯಲ್ಲಿದೆ. ಇದರ ಜೊತೆಗೆ ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ಉಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದೆ.ಮಧ್ಯಪ್ರದೇಶದಲ್ಲಿ ಒಟ್ಟು 28 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಈ ಪೈಕಿ ಬಿಜೆಪಿ 19 ರಲ್ಲಿ ಮುನ್ನಡೆಯಲ್ಲಿದ್ದರೆ ಕಾಂಗ್ರೆಸ್‌ 8, ಬಿಎಸ್‌ಪಿ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಗುಜರಾತ್‌ನಲ್ಲಿ 8 ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ 8 ರಲ್ಲಿ ಬಿಜೆಪಿ …

Read More »

ಸಚಿವ ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತ

ದಾವಣಗೆರೆ: ಸಚಿವ ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತಕ್ಕೀಡಾದ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಘಟನೆಯಲ್ಲಿ ಪ್ರಶಾಂತ್ ಶೆಟ್ಟರ್ ಹಾಗೂ ಅವರ ಪತ್ನಿ ಅಂಚಲ್ ಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಹೈಟೆಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಡಿವೈಡರ್ ಬಳಿ ಲಾರಿ ಹಾಗೂ ಲ್ಯಾಂಡ್ ರೋವರ್ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಶೆಟ್ಟರ್ ಪುತ್ರ ಇಂದು ದಾವಣಗೆರೆಯಿಂದ ಹುಬ್ಬಳ್ಳಿ ನಿವಾಸಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ …

Read More »

ಕಾಂಂಗ್ರೆಸ್ ಕಾಮಿಡಿಯನ್ ಸಿದ್ದರಾಮಯ್ಯ ಎಂದು ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿ ವ್ಯಂಗ್ಯವಾಡಿದೆ.:bjp

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮುನಿರತ್ನ ಜಯಗಳಿಸಿದ ಬೆನ್ನಲ್ಲೇ ಬಿಜೆಪಿ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಕಾಲೆಳೆದಿದೆ. ಪ್ರಚಾರದ ಸಮಯದಲ್ಲಿ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಲೆಯೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಇದಕ್ಕೆಇಂದು ತಿರುಗೇಟು ನೀಡಿದ ಬಿಜೆಪಿ, ಅಯ್ಯೋ ಸಿದ್ದರಾಮಯ್ಯನವರೇ ಆರ್. ಆರ್ ನಗರದಲ್ಲಿ ಕಾಂಗ್ರೆಸ್ಸ್ ಪಕ್ಷವೇ ಇಲ್ಲವಲ್ಲ ಎಂದು ಬಿಜೆಪಿ ಟ್ವೀಟ್ ಮಾಡುವ ಮೂಲಕವಾಗಿ ವಂಗ್ಯವಾಡಿದೆ. ಟ್ವೀಟ್‍ನಲ್ಲಿ ಏನಿದೆ? ಸಿದ್ದರಾಮಯ್ಯ: ರಾಜರಾಜೇಶ್ವರಿನಗರದಲ್ಲಿ ಬಿಜೆಪಿಯ ಅಲೆಯೇ …

Read More »

ಸೆಕ್ಸ್ ದಂಧೆ ನಡೆಸುತ್ತಿದ್ದ ಮನೆಯ ಮೇಲೆ ಪೊಲೀಸರು ದಾಳಿ

ಲಕ್ನೋ: ಸೆಕ್ಸ್ ದಂಧೆ ನಡೆಸುತ್ತಿದ್ದ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿ 10 ಜನರನ್ನ ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯ ಅಬ್ದುಲಪುರವಾ ಪೊಲೀಸ್ ಠಾಣಾ ವ್ಯಾಪ್ತಿಯ ದೇಹಾತ್ ಗ್ರಾಮದಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಸೋಮವಾರ ತಡರಾತ್ರಿ ಪೊಲೀಸರು ಗ್ರಾಮದಲ್ಲಿರುವ ಮನೆ ಮೇಲೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿದ್ದರು. ಮನೆಯ ಐದು ಕೋಣೆಗಳಲ್ಲಿ ಆಕ್ಷೇಪಾರ್ಹ ಸ್ಥಿತಿಯಲ್ಲಿದ್ದ 10 ಜನರನ್ನು ಬಂಧಿಸಿದ್ದಾರೆ. ಇತ್ತ ದಾಳಿ ಬಳಿಕ ಸೆಕ್ಸ್ …

Read More »

ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ

ಬೆಂಗಳೂರು, ನ.10- ಕೆಮಿಕಲ್ ಫ್ಯಾಕ್ಟರಿಯಲ್ಲಿ ಇಂದು ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಹೊಸಗುಡ್ಡದಹಳ್ಳಿಯ ಬಾಪೂಜಿನಗರದ ಮೊದಲನೆ ಮುಖ್ಯರಸ್ತೆಯಲ್ಲಿ ಕೆಮಿಕಲ್ ಫ್ಯಾಕ್ಟರಿ ಇದೆ. ಈ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ನೋಡನೋಡುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಭಾರೀ ಹೊಗೆ ಆವರಿಸಿದೆ. ಫ್ಯಾಕ್ಟರಿ ಒಳಗಿದ್ದ ನಾಲ್ಕು ಮಂದಿ ಕಾರ್ಮಿಕರು ಹೊರಗೆ ಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಮೂರು ಅಗ್ನಿಶಾಮಕ ವಾಹನಗಳೊಂದಿಗೆ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ …

Read More »

ಬಂಡೆ’ಯನ್ನು ಆರ್.ಆರ್.ನಗರದ ಜನ ಛಿದ್ರಗೊಳಿಸಿದ್ದಾರೆ : ಕಟೀಲ್

ಬೆಂಗಳೂರು,ನ.10- ಜನತೆಯ ಮುಂದೆ ಅಹಂಕಾರ, ದರ್ಪ ನಡೆಯುವುದಿಲ್ಲ ಎಂಬುದಕ್ಕೆ ರಾಜರಾಜೇಶ್ವರಿನಗರ ಮತ್ತು ಶಿರಾ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಪ್ರತಿಪಕ್ಷದ ವಿಧಾನಸಭೆ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಕ್ಕ ಪಾಠ ಕಲಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಪ್ರಚಾರದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಯಾವ ರೀತಿ ಮಾತನಾಡಿದರು ಎಂಬುದು ಎಲ್ಲರಿಗೂ ಗೊತ್ತಿದೆ. ಅವರ ದರ್ಪ ಮತ್ತು ಅಹಂಕಾರಕ್ಕೆ ಜನತೆ …

Read More »

ಅಶೋಕ್ ಗಸ್ತಿ ನಿಧನದಿಂದ ತೆರವಾದ ರಾಜ್ಯಸಭೆ ಸ್ಥಾನಕ್ಕೆ ಡಿ.1ರಂದು ಉಪಚುನಾವಣೆ

ಬೆಂಗಳೂರು,ನ.10-ರಾಜ್ಯ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ಡಿಸೆಂಬರ್ 1ರಂದು ಉಪಚುನಾವಣೆ ನಡೆಯಲಿದ್ದು, ನಾಳೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ವಿಧಾನಸಭೆಯ ಕಾರ್ಯದರ್ಶಿ(ಪ್ರ) ಹಾಗೂ ಉಪಚುನಾವಣೆ ಅಧಿಕಾರಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆಯಿಂದ ನವೆಂಬರ್ 18ರವರೆಗೂ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ನವೆಂಬರ್ 19ರಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು ನವೆಂಬರ್ 23ರವರೆಗೆ ಕಾಲಾವಕಾಶವಿದೆ.

Read More »

ಬಿಹಾರದಲ್ಲಿ ನಿತೀಶ್ ಮತ್ತೆ ಸಿಎಂ ಆಗೋದು ಫಿಕ್ಸ್ ?

ಪಾಟ್ನಾ, ನ.10- ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯು ಕಡಿಮೆ ಸ್ಥಾನಗಳಲ್ಲು ಗಳಿಸಿದ್ದರೂ ಕೂಡ ಬಿಜೆಪಿ ಬೆಂಬಲ ಪಡೆದು ಆರನೇ ಅವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಮಧ್ಯಾಹ್ನದ ವರೆಗಿನ ಫಲಿತಾಂಶದಲ್ಲಿ ಜೆಡಿಯು ಮತ್ತು ಬಿಜೆಪಿ ಮಿತ್ರಕೂಟವಾಗಿರುವ ಎನ್‍ಡಿಎ 131 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಸರ್ಕಾರಕ್ಕೆ ಅಗತ್ಯವಾದ ಬಹುಮತ ಪಡೆಯುವ ನಿಟ್ಟಿನಲ್ಲಿ ಹೆಜ್ಜೆ ಹಾಕಿತ್ತು. ಈ ಸಂದರ್ಭದಲ್ಲಿ ಬಿಜೆಪಿ 24 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ ಜೆಡಿಯು 47 ಸ್ಥಾನಗಳಲ್ಲಿ ಮುನ್ನಡೆ ಇತ್ತು. ಜೆಡಿಯುಗಿಂತ …

Read More »