ಬೆಂಗಳೂರು/ತಿರುವನಂತಪುರಂ: ಶಬರಿ ಮಲೆ ದೇವಸ್ಥಾನಕ್ಕೆ ಹೋಗುವ ಭಕ್ತರಿಗಾಗಿ ಕೇರಳ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಏಳು ಮಾರ್ಗ ಸೂಚಿಗಳನ್ನು ಒಳಗೊಂಡ ಪ್ರಕಟಣೆಯನ್ನು ಧಾರ್ಮಿಕ ದತ್ತಿ ಇಲಾಖೆ ಕನ್ನಡದಲ್ಲೇ ಬಿಡುಗಡೆ ಮಾಡಿದೆ. ಶಬರಿಮಲೆ ವೆಬ್ ಸೈಟ್ ನಲ್ಲಿ ನೊಂದಾಯಿಸಿಕೊಂಡು ಅನುಮತಿ ಪಡೆದ ಭಕ್ತರಿಗಷ್ಟೆ ಅವಕಾಶ ನೀಡಲಾಗುತ್ತದೆ. ಪ್ರತಿದಿನ 1 ಸಾವಿರ ಭಕ್ತರಿಗೆ ವಾರಾಂತ್ಯದಲ್ಲಿ 2 ಸಾವಿರ ಭಕ್ತರಿಗೆ ದೇವಸ್ಥಾನ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ದೇವಸ್ಥಾನ ಭೇಟಿಯ 48 ಗಂಟೆ ಅವಧಿಗೆ ಮೊದಲು …
Read More »ಕೇಕ್ ಕತ್ತರಿಸಿ ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ ಕೋರಿದ ಯಲವಿಗಿ ಜನತೆ
ಹಾವೇರಿ: ಸುಮಾರು ಇಪ್ಪತ್ತು ವರ್ಷಗಳ ಕಾಲ ಭಾರತಾಂಬೆಯ ಸೇವೆ ಸಲ್ಲಿಸಿ ನಿವೃತ್ತರಾಗಿ ಸ್ವಗ್ರಾಮ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಯಲವಿಗಿ ಗ್ರಾಮಕ್ಕೆ ಆಗಮಿಸಿದ ವೀರಯೋಧ ನಾಗರಾಜ ನಾಗಪ್ಪನವರ್ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿ, ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ನಾಗರಾಜ ನಾಗಪ್ಪನವರ್ ಅವರು ತಮ್ಮ 18 ವರ್ಷದ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿದ್ದು,ಬಳಿಕ ಮತ್ತೆ ಎರಡು ವರ್ಷ ಹೆಚ್ಚಿನ ಸೇವೆಯನ್ನು ಸಲ್ಲಿಸಿ ಸ್ವಗ್ರಾಮಕ್ಕೆ ಆಗಮಿಸಿದರು. ಈ ಹಿನ್ನೆಲೆಯಲ್ಲಿ ಯಲವಿಗಿಯಲ್ಲಿ ಹಬ್ಬದ ವಾತಾವರಣ …
Read More »ಅನುಪ್ರಭಾಕರ್ ಮುಖರ್ಜಿ ಅವರದ್ದು ಇಂದು 40ನೇ ವರ್ಷದ ಹುಟ್ಟುಹಬ್ಬ
ಬೆಂಗಳೂರು: ಸ್ಯಾಂಡಲ್‍ವುಡ್ ಖ್ಯಾತ ನಟಿಯರಲ್ಲಿ ಒಬ್ಬರಾದ ಅನುಪ್ರಭಾಕರ್ ಮುಖರ್ಜಿ ಅವರದ್ದು ಇಂದು 40ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ನಟಿಗೆ ಅಭಿಮಾನಿಗಳು, ಸಂಬಂಧಿಕರು ಹಾಗೂ ನಟ-ನಟಿಯರಿಂದ ಶುಭಾಶಯಗಳ ಸುರಿಮಳೆಗಳೇ ಬರುತ್ತಿವೆ. ಈ ಮಧ್ಯೆ ಅನು ಅವರು ವಿಶೇಷವಾಗಿ ತಮಗೆ ತಾವೇ ವಿಶ್ ಕೂಡ ಮಾಡಿಕೊಂಡಿದ್ದಾರೆ. ಇವತ್ತು ನಾನು 40ನೇ ವರ್ಷಕ್ಕೆ ಕಾಲಿಡುತ್ತಿದ್ದೇನೆ ಎಂಬ ತಲೆಬರಹದೊಂದಿಗೆ ಪತ್ರದ ಮೂಲಕ ಶುಭಾಶಯ ಕೋರಿಕೊಂಡ ಅನು, ಕೃತಜ್ಞತೆ! ಎಂಬ ಒಂದು ಪದವು ಇಂದು ನನ್ನ …
Read More »ಓದಿಲ್ಲದೇ ನಾನು ಬದುಕಲಾರೆ, ಅಪ್ಪ-ಅಮ್ಮ ಕ್ಷಮಿಸಿ ಎಂದು ಡೆತ್ ನೋಡ್ ಬರೆದು ವಿದ್ಯಾರ್ಥಿನಿ ಆತ್ಮಹತ್ಯೆ
ಹೈದರಾಬಾದ್: ಓದಿಲ್ಲದೇ ನಾನು ಬದುಕಲಾರೆ, ಅಪ್ಪ-ಅಮ್ಮ ಕ್ಷಮಿಸಿ ಎಂದು ಡೆತ್ ನೋಡ್ ಬರೆದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಧ್‍ನಗರದಲ್ಲಿ ನಡೆದಿದೆ. ನವೆಂಬರ್ 2ರಂದು 19 ವರ್ಷದ ಐಶ್ವರ್ಯಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಆತ್ಮಹತ್ಯೆಗೆ ಮುನ್ನ ಐಶ್ವರ್ಯಾ ಡೆತ್ ನೋಟ್ ಬರೆದು, ತನ್ನ ಈ ನಿರ್ಧಾರಕ್ಕೆ ಬಡತನವೇ ಕಾರಣ ಎಂಬುದನ್ನ ಪರೋಕ್ಷವಾಗಿ ಹೇಳಿದ್ದಾಳೆ. ನನ್ನ ಸಾವಿಗೆ ಯಾರು ಕಾರಣರಲ್ಲ. ನನ್ನಿಂದಾಗಿ ಕುಟುಂಬ ಆರ್ಥಿಕ ಸಂಕಷ್ಟದಲ್ಲಿದೆ. ಇನ್ನು …
Read More »ಲ್ಲೊಂದು ಖಾಸಗಿ ಶಾಲೆ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಶಾಲೆಯ ತರಗತಿಗಳನ್ನು ಆರಂಬಿಸಿದೆ.
ಕೊಪ್ಪಳ: ಕೊರೊನಾ ಹಿನ್ನೆಲೆ ಶಾಲೆಗಳನ್ನು ಆರಂಭಿಸಬೇಕೆ, ಬೇಡವೇ ಎಂಬ ಗೊಂದಲದಲ್ಲಿ ಸರ್ಕಾರ ಇದ್ದರೆ, ಇಲ್ಲೊಂದು ಖಾಸಗಿ ಶಾಲೆ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಶಾಲೆಯ ತರಗತಿಗಳನ್ನು ಆರಂಬಿಸಿದೆ. ಇದರಿಂದಾಗಿ ಪೋಷಕರು ಭಯಭೀತರಾಗಿದ್ದು, ಮಕ್ಕಳಿಗೆ ಸೋಂಕು ತಗುಲಿದರೆ ಏನು ಗತಿ ಎಂಬ ಆತಂಕದಲ್ಲಿದ್ದಾರೆ. ಜಿಲ್ಲೆಯ ಗಂಗಾವತಿಯ ಸೇಂಟ್ ಫಾಲ್ಸ್ ಖಾಸಗಿ ಶಾಲೆಯಲ್ಲಿ ತರಗತಿಗಳನ್ನು ಆರಂಭಿಸಲಾಗಿದ್ದು, ಸರ್ಕಾರದ ನಿಯಮ ಉಲ್ಲಂಘಿಸಿ ಖಾಸಗಿ ಶಾಲೆಯನ್ನು ಆಡಳಿತ ಮಂಡಳಿ ತೆರೆದಿದೆ. ಅಲ್ಲದೆ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ …
Read More »ಐಪಿಎಲ್ ಪ್ರಶಸ್ತಿ ಹಣವನ್ನು ಕಡಿಮೆ ಮಾಡುವುದಾಗಿ ಬಿಸಿಸಿಐ ತಿಳಿಸಿದೆ.
ಅಬುಭಾಬಿ: ಕೊರೊನಾ ಕಾರಣದಿಂದ ಈ ಬಾರಿಯ ಐಪಿಎಲ್‍ನ ಪ್ರಶಸ್ತಿ ಹಣವನ್ನು ಬಿಸಿಸಿಐ ಕಡಿಮೆ ಮಾಡಿದೆ. 2019ರಲ್ಲಿ ನೀಡಿದ ಪ್ರಶಸ್ತಿ ಹಣದ ಅರ್ಧದಷ್ಟು ಹಣವನ್ನು ಈ ಬಾರಿ ಗೆದ್ದ ತಂಡಕ್ಕೆ ನೀಡಲಾಗುತ್ತದೆ ಎಂದು ಬಿಸಿಸಿಐ ತಿಳಿಸಿದೆ. ಈ ವರ್ಷ ಇಡೀ ವಿಶ್ವಕ್ಕೆ ಕಂಟಕವಾಗಿ ಕಾಡಿದ ಕೊರೊನಾ ಕ್ರಿಕೆಟ್ ಜಗತ್ತನ್ನು ಸ್ತಬ್ಧವಾಗುವಂತೆ ಮಾಡಿತ್ತು. ಈ ಕಾರಣದಿಂದಲೇ ಮುಂದೂಡಿಕೆಯಾಗಿದ್ದ ಐಪಿಎಲ್ ಟೂರ್ನಿ ಹಲವಾರು ಅಡೆತಡೆಗಳ ಮಧ್ಯೆ ಆರಂಭವಾಗಿ ಇಂದು ಮುಕ್ತಾಯದ ಅಂಚಿಗೆ ಬಂದು ನಿಂತಿದೆ. …
Read More »ಅಡ್ವಾಣಿಗೆ ಭಾರತ ರತ್ನ ನೀಡಿ- ಶಂಕರಮೂರ್ತಿಯಿಂದ ಪ್ರಧಾನಿಗೆ ಪತ್ರ
ಶಿವಮೊಗ್ಗ: ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ನೀಡುವಂತೆ ವಿಧಾನ ಪರಿಷತ್‍ನ ಮಾಜಿ ಸಭಾಪತಿ ಡಿ.ಎಚ್ ಶಂಕರಮೂರ್ತಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಎಲ್.ಕೆ.ಅಡ್ವಾಣಿ ಅವರು 7 ದಶಕಕ್ಕೂ ಹೆಚ್ಚು ಕಾಲದಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅಡ್ವಾಣಿ ಅವರ ಈ ಎಲ್ಲ ಜನಪರ ಸೇವೆ ಗುರುತಿಸಿ ರಾಷ್ಟ್ರದ ಅತ್ಯುನ್ನತ ಪ್ರಶಸ್ತಿಯಾದ …
Read More »ಮಲ್ಪೆ ಕಡಲತೀರದಲ್ಲಿ ಬೆಂಗಳೂರು ಮೂಲದ ಮೂವರು ನೀರಿನಲ್ಲಿ
ಉಡುಪಿ: ಜಿಲ್ಲೆಯ ಮಲ್ಪೆ ಕಡಲತೀರದಲ್ಲಿ ಬೆಂಗಳೂರು ಮೂಲದ ಮೂವರು ನೀರಿನಲ್ಲಿ ಮುಳುಗಿದ್ದು, ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ ಬೆಂಗಳೂರಿನ 10 ಜನ ಪ್ರವಾಸಿಗರು ಮಲ್ಪೆಯ ಕಡಲತೀರಕ್ಕೆ ಆಗಮಿಸಿದ್ದರು.ಈ ಪೈಕಿ ಐದಾರು ಜನ ನೀರಿಗಿಳಿದು ಮೋಜು ಮಸ್ತಿಯಲ್ಲಿ ತೊಡಗಿದ್ದರು. ಮೊದಲು ಯುವತಿಯೊಬ್ಬರು ನೀರಿನಲ್ಲಿ ಮುಳುಗಿದ್ದರು. ಆಕೆಯ ರಕ್ಷಣೆಗೆ ಇನ್ನಿಬ್ಬರು ನೀರಿಗೆ ಹಾರಿದ್ದಾರೆ. ಈ ವೇಳೆ ಮೂವರು ಕೂಡ ಅಪಾಯಕ್ಕೆ ಸಿಲುಕಿದ್ದರು. ದಡದಲ್ಲಿ ಇದ್ದ ವರು ರಕ್ಷಣೆಗಾಗಿ ಕೂಗಿಕೊಂಡಿದ್ದಾರೆ ಸಮುದ್ರ …
Read More »ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ಅರೆಸ್ಟ್
ಬೆಂಗಳೂರು: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಡಿ ಮಾಜಿ ಸಚಿವರ ಪುತ್ರನಾಗಿರುವ ದರ್ಶನ್ ಲಮಾಣಿಯನ್ನು ಇಂದು ಕೆಜಿ ನಗರ ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 5ರಂದು ಡ್ರಗ್ಸ್ ಪೆಡ್ಲರ್ ಸುಜಯ್ ಎಂಬಾತನನ್ನು ಸಿಸಿಬಿ ಬಂಧಿಸಿತ್ತು. ಬಂಧಿತ ಸುಜಯ್ ಬಿಟ್ ಕಾಯಿನ್ಸ್ ಮುಖಾಂತರ ಡ್ರಗ್ಸ್ ಖರೀದಿಸುತ್ತಿದ್ದನು. ಬಂಧಿತನಿಂದ ಪೊಲೀಸರು 500 ಗ್ರಾಂ ಹೈಡ್ರೊ ಗಾಂಜಾ ವಶಕ್ಕೆ ಪಡೆದುಕೊಂಡಿದ್ದರು. ಇದೇ ಪ್ರಕರಣಕ್ಕೆ …
Read More »ಅರ್ನಬ್ ಗೋಸ್ವಾಮಿಯ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.
ನವದೆಹಲಿ : 2018ರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿಯ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. ಈ ಮೂಲಕ ಅರ್ನಬ್ ಗೋಸ್ವಾಮಿಗೆ ಜೈಲೇ ಗತಿಯಾದಂತೆ ಆಗಿದೆ. 2018ರ ಆತ್ಮಹತ್ಯೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ಹಿಂದೆ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರನ್ನು ಮುಂಬೈ ಪೆÇಲೀಸರು ಬಂಧಿಸಿದ್ದರು. ಈ ಸಂಬಂಧ ಜಾಮೀನಿಗಾಗಿ ಬಾಂಬೆ …
Read More »