Breaking News

ಐಪಿಎಲ್ ಪ್ರಶಸ್ತಿ ಹಣವನ್ನು ಕಡಿಮೆ ಮಾಡುವುದಾಗಿ ಬಿಸಿಸಿಐ ತಿಳಿಸಿದೆ.

ಅಬುಭಾಬಿ: ಕೊರೊನಾ ಕಾರಣದಿಂದ ಈ ಬಾರಿಯ ಐಪಿಎಲ್‍ನ ಪ್ರಶಸ್ತಿ ಹಣವನ್ನು ಬಿಸಿಸಿಐ ಕಡಿಮೆ ಮಾಡಿದೆ. 2019ರಲ್ಲಿ ನೀಡಿದ ಪ್ರಶಸ್ತಿ ಹಣದ ಅರ್ಧದಷ್ಟು ಹಣವನ್ನು ಈ ಬಾರಿ ಗೆದ್ದ ತಂಡಕ್ಕೆ ನೀಡಲಾಗುತ್ತದೆ ಎಂದು ಬಿಸಿಸಿಐ ತಿಳಿಸಿದೆ. ಈ ವರ್ಷ ಇಡೀ ವಿಶ್ವಕ್ಕೆ ಕಂಟಕವಾಗಿ ಕಾಡಿದ ಕೊರೊನಾ ಕ್ರಿಕೆಟ್ ಜಗತ್ತನ್ನು ಸ್ತಬ್ಧವಾಗುವಂತೆ ಮಾಡಿತ್ತು. ಈ ಕಾರಣದಿಂದಲೇ ಮುಂದೂಡಿಕೆಯಾಗಿದ್ದ ಐಪಿಎಲ್ ಟೂರ್ನಿ ಹಲವಾರು ಅಡೆತಡೆಗಳ ಮಧ್ಯೆ ಆರಂಭವಾಗಿ ಇಂದು ಮುಕ್ತಾಯದ ಅಂಚಿಗೆ ಬಂದು ನಿಂತಿದೆ. …

Read More »

ಅಡ್ವಾಣಿಗೆ ಭಾರತ ರತ್ನ ನೀಡಿ- ಶಂಕರಮೂರ್ತಿಯಿಂದ ಪ್ರಧಾನಿಗೆ ಪತ್ರ

ಶಿವಮೊಗ್ಗ: ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ನೀಡುವಂತೆ ವಿಧಾನ ಪರಿಷತ್‍ನ ಮಾಜಿ ಸಭಾಪತಿ ಡಿ.ಎಚ್ ಶಂಕರಮೂರ್ತಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಎಲ್.ಕೆ.ಅಡ್ವಾಣಿ ಅವರು 7 ದಶಕಕ್ಕೂ ಹೆಚ್ಚು ಕಾಲದಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅಡ್ವಾಣಿ ಅವರ ಈ ಎಲ್ಲ ಜನಪರ ಸೇವೆ ಗುರುತಿಸಿ ರಾಷ್ಟ್ರದ ಅತ್ಯುನ್ನತ ಪ್ರಶಸ್ತಿಯಾದ …

Read More »

ಮಲ್ಪೆ ಕಡಲತೀರದಲ್ಲಿ ಬೆಂಗಳೂರು ಮೂಲದ ಮೂವರು ನೀರಿನಲ್ಲಿ

ಉಡುಪಿ: ಜಿಲ್ಲೆಯ ಮಲ್ಪೆ ಕಡಲತೀರದಲ್ಲಿ ಬೆಂಗಳೂರು ಮೂಲದ ಮೂವರು ನೀರಿನಲ್ಲಿ ಮುಳುಗಿದ್ದು, ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ ಬೆಂಗಳೂರಿನ 10 ಜನ ಪ್ರವಾಸಿಗರು ಮಲ್ಪೆಯ ಕಡಲತೀರಕ್ಕೆ ಆಗಮಿಸಿದ್ದರು.ಈ ಪೈಕಿ ಐದಾರು ಜನ ನೀರಿಗಿಳಿದು ಮೋಜು ಮಸ್ತಿಯಲ್ಲಿ ತೊಡಗಿದ್ದರು. ಮೊದಲು ಯುವತಿಯೊಬ್ಬರು ನೀರಿನಲ್ಲಿ ಮುಳುಗಿದ್ದರು. ಆಕೆಯ ರಕ್ಷಣೆಗೆ ಇನ್ನಿಬ್ಬರು ನೀರಿಗೆ ಹಾರಿದ್ದಾರೆ. ಈ ವೇಳೆ ಮೂವರು ಕೂಡ ಅಪಾಯಕ್ಕೆ ಸಿಲುಕಿದ್ದರು. ದಡದಲ್ಲಿ ಇದ್ದ ವರು ರಕ್ಷಣೆಗಾಗಿ ಕೂಗಿಕೊಂಡಿದ್ದಾರೆ ಸಮುದ್ರ …

Read More »

ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ಅರೆಸ್ಟ್

ಬೆಂಗಳೂರು: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಡಿ ಮಾಜಿ ಸಚಿವರ ಪುತ್ರನಾಗಿರುವ ದರ್ಶನ್ ಲಮಾಣಿಯನ್ನು ಇಂದು ಕೆಜಿ ನಗರ ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 5ರಂದು ಡ್ರಗ್ಸ್ ಪೆಡ್ಲರ್ ಸುಜಯ್ ಎಂಬಾತನನ್ನು ಸಿಸಿಬಿ ಬಂಧಿಸಿತ್ತು. ಬಂಧಿತ ಸುಜಯ್ ಬಿಟ್ ಕಾಯಿನ್ಸ್ ಮುಖಾಂತರ ಡ್ರಗ್ಸ್ ಖರೀದಿಸುತ್ತಿದ್ದನು. ಬಂಧಿತನಿಂದ ಪೊಲೀಸರು 500 ಗ್ರಾಂ ಹೈಡ್ರೊ ಗಾಂಜಾ ವಶಕ್ಕೆ ಪಡೆದುಕೊಂಡಿದ್ದರು. ಇದೇ ಪ್ರಕರಣಕ್ಕೆ …

Read More »

ಅರ್ನಬ್ ಗೋಸ್ವಾಮಿಯ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.

ನವದೆಹಲಿ : 2018ರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿಯ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. ಈ ಮೂಲಕ ಅರ್ನಬ್ ಗೋಸ್ವಾಮಿಗೆ ಜೈಲೇ ಗತಿಯಾದಂತೆ ಆಗಿದೆ. 2018ರ ಆತ್ಮಹತ್ಯೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ಹಿಂದೆ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರನ್ನು ಮುಂಬೈ ಪೆÇಲೀಸರು ಬಂಧಿಸಿದ್ದರು. ಈ ಸಂಬಂಧ ಜಾಮೀನಿಗಾಗಿ ಬಾಂಬೆ …

Read More »

ತನಗೆ ನೊವೆಲ್ ಕೊರೋನ ಸೋಂಕು ತಗಲಿದೆ ಎಂದು ಮೆಗಾಸ್ಟಾರ್ ಚಿರಂಜೀವಿ ತನ್ನ ಟ್ವಟ್ಟರನಲ್ಲಿ   ಸೋಮವಾರ ತಿಳಿಸಿದ್ದಾರೆ.

ಹೈದರಾಬಾದ್: ತನಗೆ ನೊವೆಲ್ ಕೊರೋನ ಸೋಂಕು ತಗಲಿದೆ ಎಂದು ಮೆಗಾಸ್ಟಾರ್ ಚಿರಂಜೀವಿ ತನ್ನ ಟ್ವಟ್ಟರನಲ್ಲಿ   ಸೋಮವಾರ ತಿಳಿಸಿದ್ದಾರೆ. ‘ಆಚಾರ್ಯ’ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸುವ ಮುಂಚೆ ಕಡ್ಡಾಯ ಕೋವಿಡ್-ಪರೀಕ್ಷೆಗೆ ಒಳಗಾದಾಗ ಸೋಂಕು ತಗಲಿರುವುದು ದೃಢಪಟ್ಟಿದೆ. ಇದೀಗ ಅವರು ಹೋಮ್ ಕ್ವಾರಂಟೆನ್‍ನಲ್ಲಿದ್ದು, ಕಳೆದು ಐದು ದಿನಗಳಿಂದ ತನ್ನೊಂದಿಗೆ ಸಂಪರ್ಕದಲ್ಲಿರುವವರು ಪರೀಕ್ಷೆಗೆ ಒಳಗಾಗಬೇಕೆಂದು ಅವರು ವಿನಂತಿಸಿದ್ದಾರೆ.

Read More »

ವಿದ್ಯುತ್ ದರ  ಹೆಚ್ಚಿಸಿರುವ  ಸರ್ಕಾರ ಕ್ರಮವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಂಡಿಸಿದ್ದು, ತಕ್ಷಣ ಆದೇಶವನ್ನು  ವಾಪಸ್ ಪಡೆಯುವಂತೆ ಒತ್ತಾಯ

ಬೆಂಗಳೂರು:  ವಿದ್ಯುತ್ ದರ  ಹೆಚ್ಚಿಸಿರುವ  ಸರ್ಕಾರ ಕ್ರಮವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಂಡಿಸಿದ್ದು, ತಕ್ಷಣ ಆದೇಶವನ್ನು  ವಾಪಸ್ ಪಡೆಯುವಂತೆ ಒತ್ತಾಯ ಮಾಡಿದ್ದಾರೆ. ವಿದ್ಯುತ್ ದರ ಹೆಚ್ಚಳ ವಿಚಾರವಾಗಿ  ನಗರದಲ್ಲಿ  ಇಂದು  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ನಿಂದಾಗಿ  ದೇಶ, ರಾಜ್ಯಗಳು ಆರ್ಥಿಕ  ಸಂಕಷ್ಟದಲ್ಲಿವೆ.  ಇಂತಹ ಸಂದರ್ಭದಲ್ಲಿ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿದೆ.  ಪ್ರತಿ ಯೂನಿಟ್​ಗೆ 40 ಪೈಸೆ ಹೆಚ್ಚಳ ಮಾಡಿ ಬಿಜೆಪಿ ಸರ್ಕಾರ  ಜನರ ವಿರೋಧಿ …

Read More »

ದೀಪಾವಳಿ ಸಂದರ್ಭದಲ್ಲಿ ಯಾವುದೇ ಬಗೆಯ ಪಟಾಕಿಗಳನ್ನು ಮಾರಾಟ ಮಾಡಬಾರದು:

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೀಪಾವಳಿ ಹಬ್ಬದ ವೇಳೆ ಎಲ್ಲ ಬಗೆಯ ಪಟಾಕಿಗಳನ್ನು ಮಾರಾಟ ಮಾಡಬಾರದು, ಸಿಡಿಸಬಾರದೆಂದು ಇಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣವು ಆದೇಶ ನೀಡಿದೆ. ಈ ಆದೇಶವು ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ. ದೀಪಾವಳಿ ಸಂದರ್ಭದಲ್ಲಿ ಯಾವುದೇ ಬಗೆಯ ಪಟಾಕಿಗಳನ್ನು ಮಾರಾಟ ಮಾಡಬಾರದು. ಈ ಬಗ್ಗೆ ಸ್ಥಳೀಯ ಆಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ನ್ಯಾಯಾಲಯವು ಸೂಚನೆ ಕೊಟ್ಟಿದೆ.

Read More »

ವಿನಯ ಕುಲಕರ್ಣಿ ಅವರನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿ, ಧಾರವಾಡದ 3 ನೇ ಹೆಚ್ಚುವರಿ ಸೇಷನ್ ಕೋರ್ಟ್ ಆದೇಶಿಸಿದೆ.

ಧಾರವಾಡ : ಜಿಪಂ. ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿ, ಧಾರವಾಡದ 3 ನೇ ಹೆಚ್ಚುವರಿ ಸೇಷನ್ ಕೋರ್ಟ್ ಆದೇಶಿಸಿದೆ. ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ನ.9ರ ವರೆಗೆ ಸಿಬಿಐ ವಶಕ್ಕೆ ನೀಡಿದ್ದ ಇಲ್ಲಿನ 3ನೇ ಜಿಲ್ಲಾ ಸತ್ರ ನ್ಯಾಯಾಲಯ ಇಂದು ಬೆಳಿಗ್ಗೆ …

Read More »

ನವ್ಹೆಂಬರ್ 14 ರಂದು ಡಿಸಿಸಿ ಬ್ಯಾಂಕ್ ಅದ್ಯಕ್ಚ ಉಪಾದ್ಯಕ್ಷರ ಚುನಾವಣೆ….

ಬೆಳಗಾವಿ – ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಡಳಿಯ ಚುನಾವಣೆ ಮುಗಿದಿದ್ದು,ನವ್ಹೆಂಬರ್ 14 ರಂದು ಅದ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ನವ್ಹೆಂಬರ್ 14 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಯವರೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ನಡೆಯಲಿದ್ದು ಮದ್ಯಾಹ್ನ 3-00 ಗಂಟೆಗೆ ನಿರ್ದೇಶಕ ಮಂಡಳಿಯ ಸಭೆ ಆರಂಭವಾಗಲಿದ್ದು,ನಾಮ ಪತ್ರ ವಾಪಸ್ ಪಡೆಯಲು 30 ನಿಮಿಷ ಕಾಲಾವಕಾಶ ನೀಡಿದ ಬಳಿಕ ಚುನಾವಣೆ ನಡೆಯಲಿದೆ. ಹಾಲಿ ಅದ್ಯಕ್ಷ ರಮೇಶ್ ಕತ್ತಿ …

Read More »