Breaking News

ಏಪ್ರಿಲ್ ನಿಂದ ಹೊಸ PF ತೆರಿಗೆ ನಿಯಮ ಜಾರಿ: ಇದು ನಿಮ್ಮ ಮೇಲೆ ಹೇಗೆ ಪರಿಣಾಮ ಬೀರುತ್ತದೆ, ಇಲ್ಲಿದೆ ಮಾಹಿತಿ

ನವದೆಹಲಿ: ಏಪ್ರಿಲ್ 1ರಿಂದ ವಾರ್ಷಿಕ ₹2.5 ಲಕ್ಷಕ್ಕಿಂತ ಹೆಚ್ಚು ಭವಿಷ್ಯ ನಿಧಿಗೆ ನೌಕರರ ಕೊಡುಗೆಗಳ ಮೇಲಿನ ಬಡ್ಡಿಗೆ ತೆರಿಗೆ ವಿಧಿಸುವುದಾಗಿ ಹಣಕಾಸು ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021ರ ಬಜೆಟ್ ನಲ್ಲಿ ಘೋಷಿಸಿದ್ದರು. ₹2.5 ಲಕ್ಷದವರೆಗೂ ಠೇವಣಿ ಯ ಮಿತಿಯಲ್ಲಿ ಬಡ್ಡಿ ವಿನಾಯಿತಿ ಇದೆ ಎಂದು ಹಣಕಾಸು ಸಚಿವರು ಅವರು ಇದೇ ವೇಳೆ ಹೇಳಿದ್ದಾರೆ ಉದ್ಯೋಗಿಯ ಮೂಲ ವೇತನ ಮತ್ತು ಕಾರ್ಯಕ್ಷಮತೆಯ ವೇತನದಲ್ಲಿ ಕನಿಷ್ಠ 12% ರಷ್ಟನ್ನು ಭವಿಷ್ಯನಿಧಿಯಾಗಿ …

Read More »

16 ಸಾವಿರ ಪೊಲೀಸ್ ಹುದ್ದೆ ಭರ್ತಿ: ಬಸವರಾಜ ಬೊಮ್ಮಾಯಿ

ಉಡುಪಿ: ಮುಂದಿನ 3 ವರ್ಷಗಳ ಅವಧಿಯಲ್ಲಿ ಒಟ್ಟು 16 ಸಾವಿರ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನೂತನ ಪೊಲೀಸ್ ವಸತಿ ಗೃಹ ಸಮುಚ್ಚಯ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ 6 ಸಾವಿರ ಪೊಲೀಸ್ ಹುದ್ದೆಗಳ ಭರ್ತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಮುಂದಿನ 3 ವರ್ಷಗಳ ಅವಧಿಯಲ್ಲಿ ಒಟ್ಟು 16 ಸಾವಿರ ಪೊಲೀಸ್ ಹುದ್ದೆ ಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು. …

Read More »

ಮಹಾರಾಷ್ಟ್ರದಲ್ಲಿ ಕೊರೋನಾ 2ನೇ ಅಲೆ ಆರಂಭ,ಮತ್ತೆ ಯಲ್ಲಮ್ಮ, ಮಾಯಕ್ಕ ದರ್ಶನ ಅನಿರ್ಧಿಷ್ಠಾವಧಿಗೆ ಬಂದ್

ಬೆಳಗಾವಿ – ಮಹಾರಾಷ್ಟ್ರದಲ್ಲಿ ಮತ್ತೆ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಮತ್ತು ಚಿಂಚಲಿ ಮಾಯಕ್ಕೆ ದರ್ಶನವನ್ನು ನಿಷೇಧಿಸಲಾಗಿದೆ.   10 ತಿಂಗಳ ನಂತರ ಕಳೆದ ಫೆ.1ರಿಂದ ಈ ದೇವಸ್ಥಾನಗಳಿಗೆ ಭಕ್ತರ ಪ್ರವೇಶ ಆರಂಭವಾಗಿತ್ತು. ಆದರೆ ಇದೀಗ ಪುನಃ ದೇವರ ದರ್ಶನ ನಿಷೇಧಿಸಿ ಜಿಲ್ಲಾಧಿಕಾರಿಗಳು  ಆದೇಶ ಹೊರಡಿಸಿದ್ದಾರೆ. ಮುಂದಿನ ಆದೇಶದವರೆಗೂ ಈ ನಿರ್ಬಂಧ ಮುಂದುವರಿಯಲಿದೆ. ಸವದತ್ತಿ ಯಲ್ಲಮ್ಮ ಮತ್ತು ಚಿಂಚಲಿ ಮಾಯಕ್ಕ ದರ್ಶನಕ್ಕೆ ಮಹಾರಾಷ್ಟ್ರದಿಂದ ಅಪಾರ ಸಂಖ್ಯೆಯಲ್ಲಿ …

Read More »

ನಿರುದ್ಯೋಗಿ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ‘ಮಹತ್ವದ ಮಾಹಿತಿ’: ನಗದು ಪರಿಹಾರ ಪಡೆಯಲು ತಪ್ಪದೇ ಹೀಗೆ ಮಾಡಿ

ಬೆಂಗಳೂರು: ಕೇಂದ್ರ ಸರ್ಕಾರವು ಕಾರ್ಮಿಕರ ವಿಮಾ ನಿಗಮದ ಮೂಲಕ ಅಟಲ್ ವಿಮಿತ್ ವ್ಯಕ್ತಿ ಕಲ್ಯಾಣ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲ ಉದ್ದೇಶವು ನೊಂದಾಯಿತ ವಿಮಾ ಕಾರ್ಮಿಕರ ಹಲವಾರು ಕಾರಣಗಳಿಂದ ಕೆಲಸ ಕಳೆದುಕೊಂಡು ನಿರುದ್ಯೋಗಿಗಳಾಗಿರುವುದರಿಂದ ಅವರ ನಿರುದ್ಯೋಗ ಅವಧಿಗೆ ನಗದು ಪರಿಹಾರ ಒದಗಿಸುವ ಉದ್ದೇಶವಾಗಿರುತ್ತದೆ. ಈ ಯೋಜನೆಯು ಜೂನ್ -2021ರ ಅಂತ್ಯದವರೆಗೆ ಜಾರಿಯಲ್ಲಿರುತ್ತದೆ. ನಿಗಮದಲ್ಲಿ ನೋಂಣಿಯಾದ ಕನಿಷ್ಠ 2 ವರ್ಷಗಳ ಅವಧಿಯಲ್ಲಿ ವಂತಿಗೆಯನ್ನು ಪಾವತಿಸಿ ನಿರುದ್ಯೋಗಿಯಾದ ದಿನಾಂಕದ ಪೂರ್ವ …

Read More »

ಅಧಿಕಾರಿಗಳ ಜೊತೆ ನವದೆಹಲಿಗೆ ತೆರಳಿದ ರಮೇಶ್ ಸಾಹುಕಾರ್…

ಬೆಳಗಾವಿ-ಕರ್ನಾಟಕ ರಾಜ್ಯದ ಹಲವು ನೀರಾವರಿ ಯೋಜನೆಗಳ ಕುರಿತು ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ‌, ನವದೆಹಲಿಯಲ್ಲಿ ಸೋಮವಾರ ಭೇಟಿ ಮಾಡಿ ಚರ್ಚಿಸಲಿದ್ದಾರೆ. ಆ ಸಭೆಗೂ ಮುನ್ನ ನವದೆಹಲಿಯ ಕರ್ನಾಟಕ ಭವನದಲ್ಲಿ ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಅಂತರರಾಜ್ಯ ಜಲವಿವಾದಗಳ ಕುರಿತು ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನು ತಜ್ಞರು ಮತ್ತು ತಾಂತ್ರಿಕ ಸಲಹೆಗಾರರ ಸಭೆಯಲ್ಲಿ …

Read More »

ಆರ್ಥಿಕವಾಗಿ ಸಬಲರಾಗಿರುವ ಜಾತಿಗಳನ್ನು 2ಎ ಗೆ ಸೇರಿಸಲು ವಿರೋಧ

ಗೋಕಾಕ: ಆರ್ಥಿಕವಾಗಿ ಸಬಲರಾಗಿರುವ ಜಾತಿಗಳನ್ನು 2ಎ ಗೆ ಸೇರ್ಪಡೆ ಮಾಡುವುದಕ್ಕೆ ರಾಜ್ಯ ಆರ್ಯ ಈಡಿಗ ಸಂಘದ ಯುವ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ಈಳಿಗೇರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಈಡಿಗ, ಬಿಲ್ಲವ ಸೇರಿ ಅನೇಕ ಜಾತಿಗಳು ಈಗಾಗಲೇ 2ಎ ನಲ್ಲಿವೆ. ಇದರಲ್ಲಿ ಈಡಿಗ ಸಮುದಾಯ 60 ಲಕ್ಷದಿಂದ 70 ಲಕ್ಷ ಜನಸಂಖ್ಯೆ ಹೊಂದಿದೆ. 2ಎ ನಲ್ಲಿ ಈಗಾಗಲೇ ಇರುವ ಸಮುದಾಯಗಳಿಗೆ ಸರಿಯಾಗಿ ಮೀಸಲಾತಿ …

Read More »

ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು: ಚಾಲಕ ಸಜೀವ ದಹನ

ರಾಯಚೂರು: ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಚಾಲಕ ಸಜೀವ ದಹನವಾದ ಘಟನೆ ತಾಲೂಕಿನ ಕಲ್ಮಲ ಸಮೀಪ ಸಂಭವಿಸಿದೆ. ಮೃತ ಕಾರು ಚಾಲಕನನ್ನು ಮಲ್ಲಟ ಗ್ರಾಮದ ಸದಾನಂದಗೌಡ ಮಾಲೀಪಾಟೀಲ (60) ಎಂದು ಗುರುತಿಸಲಾಗಿದೆ. ಮಲ್ಲಟದಿಂದ ರಾಯಚೂರು ಕಡೆ ಹೊರಟಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡದಿದೆ. ಇದರಿಂದ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಕ್ಷಣದಲ್ಲೇ ಹೊತ್ತಿ ಉರಿದಿದೆ. ಕಾರು ಲಾಕ್ ಆಗಿರುವ ಕಾರಣ ಚಾಲಕ …

Read More »

ಮಸಗುಪ್ಪಿ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಭೇಟಿ ಶಾಸಕರಿಂದ ಭಜರಂಗದಳ ಘಟಕ ಉದ್ಘಾಟನೆ

ಮೂಡಲಗಿ : ಮಸಗುಪ್ಪಿ ಮಹಾಲಕ್ಷಿ ದೇವಿ ದೇವಸ್ಥಾನವು ಭಕ್ತರ ಸಕಲ ಇಷ್ಟಾರ್ಥಗಳನ್ನು ನೆರವೇರಿಸುವ ಪುಣ್ಯಕ್ಷೇತ್ರವಾಗಿ ಬೆಳೆಯುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಸುಮಾರು 5 ಕೋಟಿ ವೆಚ್ಚದಲ್ಲಿ ಮಹಾಲಕ್ಷ್ಮಿ ದೇವಿ ದೇವಸ್ಥಾನದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. 2.50 ಕೋಟಿ ರೂ.ವೆಚ್ಚದಲ್ಲಿ ದೇವಸ್ಥಾನದ ಹೊಸ ಕಟ್ಟಡ, 50 ಲಕ್ಷ ರೂ.ವೆಚ್ಚದಲ್ಲಿ ದೇವಸ್ಥಾನದ ಸಿಖರ , …

Read More »

ಬೆಳಗಾವಿ: ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ನೇಕಾರನ ಕುಟುಂಬಕ್ಕೆ ಸಚಿವರ ಸಾಂತ್ವನ

ಬೆಳಗಾವಿ: ನಗರದ ವಡಗಾವಿಯಲ್ಲಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ನೇಕಾರ ಸಿದ್ದಲಿಂಗೇಶ್ವರ ಗಂಗಪ್ಪ ಹೊರಕೇರಿ ಅವರ ಮನೆಗೆ ಕೈಮಗ್ಗ, ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಪಾಟೀಲ ಶನಿವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕುಟುಂಬದವರಿಗೆ ತಮ್ಮ ‘ಶ್ರೀಮಂತ ಪಾಟೀಲ ಪ್ರತಿಷ್ಠಾನ’ದಿಂದ ಆರ್ಥಿಕ ನೆರವು ನೀಡಿದರು. ಆದಷ್ಟು ಬೇಗ ಇಲಾಖೆಯಿಂದಲೂ ನೆರವು ಕೊಡಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಇಲಾಖೆಯ ಅಧಿಕಾರಿಗಳು, ಮುಖಂಡರು ಹಾಗೂ ಸ್ಥಳೀಯರು ಇದ್ದರು.

Read More »

ಭೀಕರ ಅಪಘಾತ : ನಡುರಸ್ತೆಯಲ್ಲೇ ಹೊತ್ತಿ ಉರಿದ ಲಾರಿ-ಕಾರು

ದಾವಣಗೆರೆ : ಟಿಪ್ಪರ್-ಲಾರಿಗೆ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಲಾರಿಗೂ ತಗಲು ಸುಟ್ಟು ಕರಕಲಾದ ಘಟನೆ ನಡೆದಿದೆ. ದಾವಣಗೆರೆಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ದಾವಣಗೆರೆಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಾಗುತ್ತಿದ್ದ ಕಾರು, ದಾವಣಗೆರೆ ಕಡೆಯಿಂದ ಬರುತ್ತಿದ್ದಂತ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಿಂದಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡು, ಕ್ಷಣಾರ್ಧದಲ್ಲೇ ಹೊತ್ತಿ ಉರಿದಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದಂತವರು …

Read More »