Breaking News

ಅಣ್ಣಾಮಲೈ ಬಳಿಕ ಇದೀಗ ಮತ್ತೊಬ್ಬ ಮಾಜಿ ಅಧಿಕಾರಿ ರಾಜಕೀಯಕ್ಕೆ ಎಂಟ್ರಿ

ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಳಿಕ ಇದೀಗ ಮತ್ತೊಬ್ಬ ಮಾಜಿ ಅಧಿಕಾರಿ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದು, ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ. ಸೆಂಥಿಲ್ ಮೂಲತ: ತಮಿಳುನಾಡಿನವರಾಗಿದ್ದು, ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಸೇರಿದಂತೆ ಕೇಂದ್ರ ಸರ್ಕಾರದ ಹಲವು ನೀತಿಗಳ ವಿರುದ್ಧ ಸಿಡಿದೆದ್ದು ಸೆಂಥಿಲ್ 2019ರ ಸೆಪ್ಟೆಂಬರ್ ನಲ್ಲಿ ರಾಜೀನಾಮೆ ನೀಡಿದ್ದರು. ಸಿಎಎ ಹಾಗೂ …

Read More »

ವಿನಯ್ ಕುಲಕರ್ಣಿ ಬಂಧನಕ್ಕೆ ಪ್ರಹ್ಲಾದ್ ಜೋಶಿ ಒತ್ತಡವೇ ಕಾರಣ: ಸಿದ್ದು

ಶಿವಮೊಗ್ಗ: ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರ ಒತ್ತಡವೇ ಕಾರಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತ. ಅವರ ಬಂಧನದ ಹಿಂದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಡವಿದೆ. ವಿನಯ್ ಕುಲಕರ್ಣಿ ಪ್ರಹ್ಲಾದ್ ಜೋಶಿ ವಿರುದ್ಧ ಚುನಾವಣೆಗೆ ಸ್ಪರ್ಧೆ ಮಾಡಿದ್ದೆ ಬಂಧನಕ್ಕೆ ಕಾರಣ ಎಂದು ಆರೋಪಿಸಿದರು. …

Read More »

ಅಂದು ನನ್ನ ತಾಯಿ ಭಾರತದಿಂದ ಬಂದಾಗ ಇದನ್ನು ಊಹಿಸಿರಲಿಲ್ಲ: ಕಮಲಾ ಹ್ಯಾರಿಸ್

ವಾಷಿಂಗ್ಟನ್: ವಿಶ್ವದ ಗಮನವನ್ನೇ ಸೆಳೆದಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣಾ ಫಲಿತಾಂಶ ಕೊನೆಗೂ ಅಚ್ಚರಿಯ ರೀತಿಯಲ್ಲಿ ಹೊರಬಿದ್ದಿದೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷ ಅಭ್ಯರ್ಥಿ ಜೋ ಬೈಡನ್ 273 ಮತಗಳನ್ನು ಪಡೆಯುವುದರ ಮೂಲಕ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಇದರಿಂದಾಗಿ ಅಮೆರಿಕದಾದ್ಯಂತ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಜಯಘೋಷ ಕೇಳಿ ಬರುತ್ತಿದೆ. ಅದೇ ರೀತಿ ತಮಿಳುನಾಡು ಮೂಲದ ಕಮಲಾ ಹ್ಯಾರಿಸ್ ಅವರು ಉಪಾಧ್ಯಕ್ಷರಾಗಿರುವುದಕ್ಕೂ ಸಹ ಭಾರತೀಯರು ಸಂಭ್ರಮಿಸುತ್ತಿದ್ದಾರೆ. ಜೋ ಬೈಡನ್ 46ನೇ …

Read More »

ದೀಪ ಆರಿಸಬೇಡ ಸಖೀ………..

ದೀಪ ಆರಿಸಬೇಡ ಸಖೀ ದೀಪವಾರಿಸಬೇಡ ಸಖೀ ಇರಲಿ ಬಿಡು. ಗೊತ್ತು ಇಲ್ಲಿ ಯಾರೂ ಇಲ್ಲ ಸುಖೀ ಇರಲಿಬಿಡು. ಉತ್ತರಿಸಲಿ ಕಾಲ ಎಲ್ಲ ಪ್ರಶ್ನೆಗಳಿಗೂ ಕಾಯುತ್ತೇನೆ ಅನವರತ ಮೌನ-ಮಾತಾಗುವ ಭರವಸೆಯಲ್ಲಿ!! ದೀಪವಾರಿಸಬೇಡ ಸಖೀ ಇರಲಿ ಬಿಡು. ಜಗವ ಬೆಳಗುವ ದೀಪದ ಕೆಳಗೂ ಕತ್ತಲಿರುವಾಗ. ಒಲವ ಹಣತೆಗಳು ಮತ್ತೆ ಹೊತ್ತಿ ಉರಿಯಲಿ ಬಿಡು. ಉರಿವ ಎದೆಯ ಬೆಂಕಿಗೆ ಇಲ್ಲಿ ತುಪ್ಪ ಸುರಿದವರೆಷ್ಟೋ?? ಅವರ ಹರಕೆಗಳು ಫಲಿಸಿಲ್ಲ ನಿಜ ಶಾಪಗಳಾದರೂ ತಟ್ಟಲಿ ಬಿಡು. ದೀಪವಾರಿಸಬೇಡ …

Read More »

ರಾಜ್ಯದಲ್ಲೇ ಮೊದಲ ಪ್ರಯೋಗ – ವಿದ್ಯಾರ್ಥಿಗಳಿಗೆ ಅನುಕೂಲ

ರಾಮನಗರ: ಇಲ್ಲೊಂದು ಇಂಟರ್ ನೆಟ್ ಗ್ರಾಮವಿದೆ. ಗ್ರಾಮೀಣ ಪ್ರದೇಶಗಳಲ್ಲಿ ಅಂತರ್ಜಾಲವನ್ನು ಹೆಚ್ಚಿಸುವುದನ್ನು ಉತ್ತೇಜಿಸಲು, ಮಾತೃಭೂಮಿ ಸೇವಾ ಫೌಂಡೇಶನ್ ಸಂಸ್ಥೆಯಿಂದ ಈ ಸೇವೆ ಕಲ್ಪಿಸಲಾಗಿದೆ. ಯೂತ್ ಬ್ರಾಂಡ್ ಬ್ಯಾಂಡ್ ಸಹಯೋಗದಲ್ಲಿ ಈ ಗ್ರಾಮಕ್ಕೆ ಇಂಟರ್ನೆಟ್ ಸಂಪರ್ಕ ಕಲ್ಪಿಸಿ ಉಚಿತ ವೈಫೈ ನೀಡಲಾಗಿದೆ. ಇದರಿಂದ ಆನ್‍ಲೈನ್ ಶಿಕ್ಷಣಕ್ಕೆ ವಿದ್ಯಾರ್ಥಿಗಳಿಗೆ ಅನುಕೂಲವಾಗಿದ್ದು, ಇದು ರಾಜ್ಯದಲ್ಲಿಯೇ ಮೊದಲ ಪ್ರಯೋಗವಾಗಿದೆ. ಹೌದು. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಚಿಕ್ಕೇನಹಳ್ಳಿ ಗ್ರಾಮದಲ್ಲಿ ವಿದ್ಯಾರ್ಥಿಗಳ ಆನ್‍ಲೈನ್ ಕ್ಲಾಸ್ ಗೆ ಸಹಾಯವಾಗಲೆಂದು …

Read More »

ವಿನಯ್ ಕುಲಕರ್ಣಿಯ c.b.i.ವಿಚಾರಣೆ ಎರಡನೇ ದಿನವೂ ಮುಂದುವರಿದಿದೆ.

ಹುಬ್ಬಳ್ಳಿ: ಜಿಪಂ ಸದಸ್ಯ ಯೊಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯ ವಿಚಾರಣೆ ಎರಡನೇ ದಿನವೂ ಮುಂದುವರಿದಿದೆ. ಹುಬ್ಬಳ್ಳಿಯ ಸಿಎಆರ್ ಮೈದಾನದ ಕಚೇರಿಯಲ್ಲಿ ನಡೆಯುತ್ತಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ವಿಚಾರಣೆ ಇಂದು ಎರಡನೇಯ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಹ ಅವರ ಮಾವ ಚಂದ್ರಶೇಖರ್ ಇಂಡಿ ಹಾಗೂ ಮಾಜಿ ಆಪ್ತ ಕಾರ್ಯದರ್ಶಿ ಸೋಮಲಿಂಗ ನ್ಯಾಮೇಗೌಡ ವಿಚಾರಣೆ ಸಹ ಮುಂದುವರಿದಿದೆ. ನ್ಯಾಯಾಂಗ ಬಂಧನದಲ್ಲಿದ್ದ …

Read More »

ಪಬ್ಲಿಕ್ ಟಿವಿ ಸಿಇಒ ಅರುಣ್ ಕುಮಾರ್, ಸಿಒಒ ಸಿ.ಕೆ ಹರೀಶ್ ಮಕ್ಕಳಿಗೆ ಟ್ಯಾಬ್ ಗಳನ್ನು ವಿತರಣೆ ಮಾಡಿದರು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಟ್ಯಾಬ್ ವಿತರಣೆ

ಬೆಂಗಳೂರು: ನಿಮ್ಮ ಪಬ್ಲಿಕ್ ಟಿವಿ ಹಾಗೂ ರೋಟರಿ ಇಂಟರ್ ನ್ಯಾಷನಲ್ ಸಂಸ್ಥೆಯ ಸಹಯೋಗದ ‘ಜ್ಞಾನದೀವಿಗೆ’ ಕಾರ್ಯಕ್ರಮದ ವತಿಯಿಂದ ವಿವಿಧ ಜಿಲ್ಲೆಯ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಟ್ಯಾಬ್ ಗಳನ್ನು ವಿತರಣೆ ಮಾಡಲಾಯಿತು. ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್ ರಂಗನಾಥ್, ರೋಟರಿ ಇಂಟರ್ ನ್ಯಾಷನಲ್ ಸಂಸ್ಥೆಯ ಗವರ್ನರ್ ಕೇಶವಮೂರ್ತಿ, ಆರೋಗ್ಯ ಸಚಿವ ಸುಧಾಕರ್, ಶಿಕ್ಷಣ ಸಚಿವ ಸುರೇಶ್ ಕುಮಾರ್, ಪಬ್ಲಿಕ್ ಟಿವಿ ಸಿಇಒ ಅರುಣ್ ಕುಮಾರ್, ಸಿಒಒ ಸಿ.ಕೆ ಹರೀಶ್ ಮಕ್ಕಳಿಗೆ ಟ್ಯಾಬ್ …

Read More »

ನಾನು 100 ಟ್ಯಾಬ್ ನೀಡ್ತೀನಿ, ಸಾಧ್ಯವಾದ್ರೆ ನೀವೂ ಟ್ಯಾಬ್ ನೀಡಿ- ಶಿವಣ್ಣ ಮನವಿ

ಬೆಂಗಳೂರು: ನಿಮ್ಮ ಪಬ್ಲಿಕ್ ಟಿವಿ ಹಾಗೂ ರೋಟರಿ ಇಂಟರ್ ನ್ಯಾಷನಲ್ ಸಂಸ್ಥೆ ಸಹಯೋಗದಲ್ಲಿ ನಡೆಯುತ್ತಿರುವ ‘ಜ್ಞಾನ ದೀವಿಗೆ’ ಕಾರ್ಯಕ್ರಮಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇದೀಗ ನಟ ಶಿವರಾಜ್ ಕುಮಾರ್ ಅವರು ಕೈ ಜೋಡಿಸಿ, 100 ಟ್ಯಾಬ್‍ಗಳನ್ನು ನೀಡುವ ಭರವಸೆ ನೀಡಿದ್ದಾರೆ. ಅಲ್ಲದೆ ಶಕ್ತಿ ಇರುವವರು ಒಂದು ಟ್ಯಾಬ್ ಆದರೂ ನೀಡಿ ಎಂದು ಮನವಿ ಕೂಡ ಮಾಡಿಕೊಂಡಿದ್ದಾರೆ. ಜ್ಞಾನ ದೀವಿಗೆ’ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, …

Read More »

ಶಿರಾ ಹಾಗೂ ಆರ್‍ಆರ್‍ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ:b.s.y.

ಶಿವಮೊಗ್ಗ: ಶಿರಾ ಹಾಗೂ ಆರ್‍ಆರ್‍ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಪ್ರಚಾರದ ವೇಳೆಯಲ್ಲಿಯೇ ಹೇಳಿದ್ದೆ, ಎರಡು ಕ್ಷೇತ್ರದಲ್ಲಿ ನಮ್ಮ ಪಕ್ಷ ಗೆಲುತ್ತದೆ ಎಂದು ಚುನಾವಣೋತ್ತರ ಸಮೀಕ್ಷೆ ಸಹ ಹೇಳಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪ್ರಚಾರದ ವೇಳೆ ಕಾಂಗ್ರೆಸ್ ನವರು ನಮ್ಮ ಪಕ್ಷದ ಬಗ್ಗೆ ವಿನಾಃ ಕಾರಣ ಟೀಕೆ ಮಾಡುತ್ತಿದ್ದರು. ಶಿರಾದಲ್ಲಿ ಬಿಜೆಪಿ …

Read More »

ಸ್ಥಳ ಮಹಜರು ವೇಳೆ ಮಚ್ಚಿನಿಂದ್ಲೇ ಪೊಲೀಸರ ಮೇಲೆ ದಾಳಿಗೆ ಯತ್ನ!

ತುಮಕೂರು: ನಗರದಲ್ಲಿ ಪೊಲೀಸರ ಬಂದೂಕು ಸದ್ದು ಮಾಡಿದೆ. ರೌಡಿಶೀಟರ್ ರೋಹಿತ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ತುಮಕೂರು ತಾಲೂಕಿನ ಮಾರನಾಯಕಪಾಳ್ಯ ಬಳಿ ಶೂಟೌಟ್ ನಡೆದಿದೆ. ತಿಲಕ್ ಪಾರ್ಕ್ ಸಿಪಿಐ ಮುನಿರಾಜು ಆರೋಪಿ ಮೇಲೆ ಗುಂಡು ಹಾರಿಸಿದ್ದಾರೆ. ಡಕಾಯಿತಿ ಪ್ರಕರಣದಲ್ಲಿ ಆರೋಪಿ ರೋಹಿತ್‍ನನ್ನ ಪೊಲೀಸರು ಬಂಧಿಸಿದ್ದಾರೆ. ಡಕಾಯಿತಿಗೆ ಬಳಸಿದ್ದ ಮಚ್ಚು ಬಚ್ಚಿಟ್ಟಿದ್ದ ಜಾಗಕ್ಕೆ ಪೊಲೀಸರನ್ನ ರೋಹಿತ್ ಕರೆದೊಯ್ದಿದ್ದಾನೆ. ಇದೇ ವೇಳೆ ಮಚ್ಚು ತೋರಿಸಿ ಅದೇ ಮಚ್ಚಿನಿಂದ ಪೊಲೀಸರ ಮೇಲೆ ಅಟ್ಯಾಕ್ ಮಾಡಲು …

Read More »