Breaking News

ಬೆಳಗಾವಿಯಲ್ಲಿ 12ಸಾವಿರದ ಗಡಿ ದಾಡಿದ ಸೋಂಕಿತರ ಸಂಖ್ಯೆ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 357 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೊಂದಿಗೆ, ಇಲ್ಲಿನ ಸೋಂಕಿತರ ಸಂಖ್ಯೆ 12ಸಾವಿರದ (12,090) ಗಡಿ ದಾಡಿದೆ. ತಾಲ್ಲೂಕಿನ ಸಾಂಬ್ರಾ ಏರ್‌ಮನ್‌ ತರಬೇತಿ ಶಾಲೆ (ಎಟಿಎಸ್)ಯಲ್ಲಿ ಒಂದೇ ದಿನ 69 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು (ರಾಮದುರ್ಗ, ಬೈಲಹೊಂಗಲ, ಹುಕ್ಕೇರಿ ಮತ್ತು ಬೆಳಗಾವಿ ತಾಲ್ಲೂಕಿನ ತಲಾ ಒಬ್ಬರು) ಸಾವಿಗೀಡಾಗಿದ್ದಾರೆ. ಅವರಿಗೆ ಉಸಿರಾಟದ …

Read More »

ಮಟಮಟ ಮಧ್ಯಾಹ್ನ ಬರ್ತಾರೆ – ಫೇಕ್ ದಾಖಲೆ ಹಿಡಿದು ಮನೆ ಧ್ವಂಸ ಮಾಡ್ತಾರೆ

ಬೆಂಗಳೂರು: ಕೊರೊನಾ ಸಮಯದಲ್ಲಿಯೇ ಡೆಡ್ಲಿ ಗ್ಯಾಂಗ್ ಒಂದು ಸಿಲಿಕಾನ್ ಸಿಟಿಗೆ ಎಂಟ್ರಿಯಾಗಿದೆ. ಸುಳ್ಳು ದಾಖಲೆ ಸೃಷ್ಟಿಸಿ ಮನೆ ಧ್ವಂಸ ಮಾಡಿದ ಘಟನೆ ಬೆಂಗಳೂರಿನ ಪ್ಯಾಲೇಸ್ ಗುಟ್ಟಹಳ್ಳಿ ಮುನೇಶ್ವರ ಟೆಂಪಲ್ ಬಳಿ ನಡೆದಿದೆ. ಹೌದು. ಖದೀಮರ ತಂಡವೊಂದು ಮಟಮಟ ಮಧ್ಯಾಹ್ನವೇ ಬಂದು ಜೆಸಿಬಿ ಮೂಲಕ ಮನೆ ಕೆಡವಿ ಮನೆಯಲ್ಲಿದ್ದ ಹಣ, ಒಡವೆ, ವಸ್ತುಗಳನ್ನ ಕದ್ದೊಯ್ದಿದೆ. ಈ ವೇಳೆ ಪ್ರಶ್ನೆ ಮಾಡಿದ ಮನೆಯಲ್ಲಿದ್ದ ಮಹಿಳೆಗೆ ಅವಾಚ್ಯ ಪದಗಳಿಂದ ನಿಂದಸಿದ್ದಲ್ಲದೆ, ಹಲ್ಲೆ ಮಾಡಿದ ಆರೋಪ …

Read More »

ಮುಖ್ಯಮಂತ್ರಿಯಿಂದ ‘ಪ್ರಕೃತಿ ವಂದನಾ’

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತಮ್ಮ ನಿವಾಸ ‘ಕಾವೇರಿ’ಯಲ್ಲಿ ಭಾನುವಾರ ಬೆಳಿಗ್ಗೆ ಪ್ರಕೃತಿ ವಂದನಾ ಕಾರ್ಯಕ್ರಮ ನಡೆಯಿತು. ಯಡಿಯೂರಪ್ಪ ಅವರು ಬಿಲ್ವ ಸಸಿ ನೆಟ್ಟು ಪೂಜೆ ಸಲ್ಲಿಸಿದರು. ಬಳಿಕ ವೃಕ್ಷಕ್ಕೆ ರಾಖಿ ಕಟ್ಟಿದರು. ಪ್ರಕೃತಿಯನ್ನು ಪೂಜಿಸುವ ಅಭಿಯಾನಕ್ಕೆ ಶುಭ ಹಾರೈಸಿ ಮಾತನಾಡಿದ ಯಡಿಯೂರಪ್ಪ, ‘ಮನೆ ಮನೆಗಳಲ್ಲಿ ಹಿತ್ತಲಲ್ಲಿ ಸಸಿ ನೆಟ್ಟು ರಕ್ಷಣೆ ಮಾಡಬೇಕು’ ಎಂದು ನಾಡಿನ ಜನರಿಗೆ ಮನವಿ ಮಾಡಿದರು. ಈ ವೇಳೆ ಉಪಸ್ಥಿತರಿದ್ದ ಕರ್ನಾಟಕ ಜೀವ ವೈವಿಧ್ಯ ಮಂಡಳಿ …

Read More »

ಮಹಿಳಾ ಪೊಲೀಸ್ ಪೇದೆಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆ

ಕಲಬುರಗಿ: ಮಹಿಳಾ ಪೊಲೀಸ್ ಪೇದೆಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಸುಂಬಡ ಗ್ರಾಮದಲ್ಲಿ ನಡೆದಿದೆ. 34 ವರ್ಷದ ಸುರೇಖಾ ಬಾವಿಯಲ್ಲಿ ಶವವಾಗಿ ಪತ್ತೆಯಾದ ಮಹಿಳಾ ಪೇದೆ. ಮೃತ ಸುರೇಖಾ ಕಲಬುರಗಿ ನಗರದಲ್ಲಿ ಗುಪ್ತಚರ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಭಾನುವಾರ ಸಂಜೆ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕೆಲ ತಿಂಗಳ ಹಿಂದೆ ಸುರೇಖಾ ಪತಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದರು. ಇದೀಗ ಮಹಿಳಾ ಪೇದೆ ಸುರೇಖಾ ಕೂಡ ಸಾವನ್ನಪ್ಪಿದ್ದಾರೆ. …

Read More »

ಭಿಕ್ಷೆ ಬೇಡುತ್ತಾ ತಮ್ಮ ಜೀವನ ಸಾಗಿಸುವ ಮಂಗಳಮುಖಿ ಕೊಲೆ

ಚಿತ್ರದುರ್ಗ: ಭಿಕ್ಷೆ ಬೇಡುತ್ತಾ ತಮ್ಮ ಜೀವನ ಸಾಗಿಸುವ ಮಂಗಳಮುಖಿ ನಡುವೇ ಅಪರೂಪದ ವ್ಯಕ್ತಿತ್ವ ಎನಿಸಿದ್ದ ಚಿತ್ರದುರ್ಗದ ಮಂಗಳಮುಖಿಯೊಬ್ಬರು ಯಾರಿಗೂ ಬಾರವಾಗದೇ ತನ್ನಲ್ಲಿದ್ದ ಕಲೆಯನ್ನು ಬಂಡವಾಳವಾಗಿಸಿಕೊಂಡು ಬದುಕು ಕಟ್ಟಿಕೊಂಡಿದ್ದರು. ಆದರೆ ಅವರ ಏಳಿಗೆಯನ್ನು ಸಹಿಸದ ಯಾರೋ ದುಷ್ಕರ್ಮಿಗಳು ಮಂಗಳಮುಖಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಅಂಜಲಿ (34) ಕೊಲೆಯಾದ ಮಂಗಳಮುಖಿ. ಚಿತ್ರದುರ್ಗದ ಗಾಂಧಿ ನಗರದಲ್ಲೊಂದು ಬಾಡಿಗೆ ಮನೆಮಾಡಿಕೊಂಡಿದ್ದರು. ದೈನಂದಿನ ಜೀವನಕ್ಕಾಗಿ ತನ್ನಲ್ಲಿದ್ದ ನೃತ್ಯ, ಕರಗ ಹಾಗೂ ನಟನೆಯ ಕಲೆಯನ್ನೇ ಬಂಡವಾಳವನ್ನಾಗಿಸಿಕೊಂಡು ಬದುಕು ಕಟ್ಟಿಕೊಂಡಿದ್ದರು. …

Read More »

ರ‍್ಯಾಪಿಡ್ ಆಂಟಿಜನ್ ಟೆಸ್ಟ್ ವರದಿಪಾಸಿಟಿವ್ ಆರ್ಟಿಪಿಸಿಆರ್ ನಲ್ಲಿ ನೆಗೆಟಿವ್ : ಶಾಸಕ ಎಸ್.ಎ ರವೀಂದ್ರನಾಥ್ ಅವರ ರ‍್ಯಾಪಿಡ್ ಆಂಟಿಜನ್ ಟೆಸ್ಟ್

ದಾವಣಗೆರೆ: ಬಿಜೆಪಿ ಶಾಸಕರ ಕೊರೊನಾ ವೈರಸ್ ಟೆಸ್ಟ್ ವರದಿಯಲ್ಲಿ ಗೊಂದಲ ಉಂಟಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಉತ್ತರ ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ್ ಅವರ ರ‍್ಯಾಪಿಡ್ ಆಂಟಿಜನ್ ಟೆಸ್ಟ್ ನಲ್ಲಿ ಪಾಸಿಟಿವ್ ಎಂದು ಬಂದಿತ್ತು. ಆದರೆ ಮರುದಿನವೇ ಆರ್ಟಿಪಿಸಿಆರ್ ಟೆಸ್ಟ್ ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ. ಈ ಮೂಲಕ ಶಾಸಕರ ಕೋವಿಡ್ ಟೆಸ್ಟ್ ವರದಿಯಲ್ಲಿಯೇ ಗೊಂದಲ ಮೂಡಿದೆ. ರಾಜ್ಯ ಬುಲೆಟಿನ್ ನಲ್ಲಿ ಕೂಡ ಶಾಸಕರ ಪೇಷಂಟ್ ನಂಬರ್ …

Read More »

ಆರು ತಿಂಗಳಿನಿಂದ ಚಿತ್ರೋದ್ಯಮ ಸಂಪೂರ್ಣ ಸ್ಥಗಿತವಾಗಿದೆ. ನಿರ್ಮಾಪಕರು, ವಿತರಕರು, ಪ್ರದರ್ಶಕರು ಎಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೆಂಗಳೂರು, ಆ.30- ಚಿತ್ರಮಂದಿರಗಳನ್ನು ಆರಂಭಿಸುವ ಬಗ್ಗೆ ಸರ್ಕಾರ ಪುನರ್ ಪರಿಶೀಲನೆ ಮಾಡುವ ಮೂಲಕ ಚಿತ್ರಗಳ ಬಿಡುಗಡೆಗೂ ಅವಕಾಶ ಮಾಡಿಕೊಡುವಂತೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರ ಪ್ರಕಟಿಸಿರುವ ಅನ್‍ಲಾಕ್ 4.0 ಮಾರ್ಗಸೂಚಿಯಲ್ಲಿ ಚಿತ್ರಮಂದಿರಗಳಿಗೆ ಅವಕಾಶ ಕಲ್ಪಿಸಿಲ್ಲ. ಆದರೆ ಚಿತ್ರೋದ್ಯಮವನ್ನೇ ನಂಬಿಕೊಂಡು ಸಾಕಷ್ಟು ಮಂದಿ ಜೀವನ ನಡೆಸುತ್ತಿದ್ದೇವೆ. 700 ಸಿಂಗಲ್ ಸ್ಕ್ರೀನ್‍ಗಳ ಚಿತ್ರಮಂದಿರಗಳಿವೆ ಇದನ್ನು ಅವಲಂಬಿಸಿರುವ ಸಿಬ್ಬಂದಿಗಳಿದ್ದಾರೆ. ಎಲ್ಲರೂ ಸಂಕಷ್ಟದಲ್ಲಿದ್ದೇವೆ. ಸಾಲ ಮಾಡಿ ಬದುಕಲು ಆಗದಂತಹ …

Read More »

ಆಗಸ್ಟ್ 30 ರಿಂದ ಸೆಪ್ಟೆಂಬರ್ 1 ರ ವರೆಗೆ ಭಾರೀ ಮಳೆಯಾಗಲಿದೆ…..!

ಬೆಂಗಳೂರು: ರಾಜ್ಯದಲ್ಲಿ ಮುಂದಿನ ವಾರ ಉತ್ತಮ ಮಳೆಯಾಗುವ ನಿರೀಕ್ಷೆ ಹಿನ್ನೆಲೆಯಲ್ಲಿ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಬಿಡುವು ನೀಡಿರುವ ಮಳೆರಾಯ ಮತ್ತೆ ತನ್ನ ಆರ್ಭಟ ಆರಂಭಿಸಲಿದ್ದಾನೆ. ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 30 ರಿಂದ ಸೆಪ್ಟೆಂಬರ್ 1 ರ ವರೆಗೆ ಮಳೆಯಾಗಲಿದೆ.  ಸೆಪ್ಟೆಂಬರ್ 1 ಮತ್ತು 2 ರಂದು ವ್ಯಾಪಕ ಮಳೆ ನಿರೀಕ್ಷೆಯಿದ್ದು,  ಉತ್ತರ ಕನ್ನಡ , ಉಡುಪಿ …

Read More »

ನಳೀನ್ ಕುಮಾರ್ ಕಟೀಲ್ ಅವರಿಗೂ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಹಲವು ಸಚಿವರು, ಶಾಸಕರು, ವಿಪಕ್ಷ ನಾಯಕ ಸೇರಿದಂತೆ ರಾಜಕೀಯ ಮುಖಂಡರನ್ನೂ ಕೊವಿಡ್ ವೈರಸ್ ಕಾಡುತ್ತಿದೆ. ಈಗಾಗಲೇ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರ ಬೆನ್ನಲ್ಲೇ ಈಗ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಬಗ್ಗೆ ಸ್ವತ: ನಳೀನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದು, …

Read More »

ಪತ್ರಕರ್ತರಾಗಿದ್ದಾಗ ಏನೇನು ಮಾಡಿದ್ದೀಯಾ ಎಂಬುದು ಗೊತ್ತು,ಬಿ.ವೈ.ವಿಜಯೇಂದ್ರ ಅವರು 482 ಕೆಪಿಎಸ್‍ಸಿ ಹುದ್ದೆ ಮಾರಾಟ

ಮೈಸೂರು, ಆ.30- ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 482 ಕೆಪಿಎಸ್‍ಸಿ ಹುದ್ದೆ ಮಾರಾಟ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಡಿಸೆಂಬರ್‍ನಲ್ಲಿ ಆಗಿದ್ದ ನೇಮಕಾತಿ ಪ್ರಕ್ರಿಯೆಯಲ್ಲಿ ಆಗಿರುವ 218 ಕೋಟಿ ಅವ್ಯವಹಾರ, ಅದರಲ್ಲಿ ಹಣ ಕೊಟ್ಟು ಪಡೆದ ದಾಖಲೆಗಳು ನಮ್ಮ ಬಳಿ ಇವೆ. ಎಲ್ಲಾ ದಾಖಲೆಗಳನ್ನು ಬಿಡುಗಡೆ ಮಾಡಲು ನಾನು ಬದ್ಧನಾಗಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪ್ರತಾಪ್ ಸಿಂಹ ಅವರ ಹಗರಣಗಳನ್ನು ನಾನು …

Read More »