ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಸಿಬಿಐ ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಮುಖಂಡ ಯೋಗೇಶ್ವರ್ ಕೊಲೆ ಪ್ರಕರಣದಲ್ಲಿ ಬೆಳಗ್ಗೆಯಿಂದ ಸತತ 9 ಗಂಟೆಗಳ ಕಾಲ ವಿನಯ್ ಅವರನ್ನು ವಶಕ್ಕೆ ಪಡೆದು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಸದ್ಯ ಅವರನ್ನು ಬಂಧಿಸಿ ಕೊರೊನಾ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಧಾರವಾಡದ ಬರಾಕೊಟ್ರಿಯಲ್ಲಿರುವ ಕುಲಕರ್ಣಿ ನಿವಾಸಕ್ಕೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಸಿಬಿಐ ಅಧಿಕಾರಿ ರಾಕೇಶ್ ರಂಜನ್ …
Read More »ಲೈಸನ್ಸ್ ಇಲ್ಲದೆ ನಾಡ ಪಿಸ್ತೂಲ್ ಇಟ್ಟುಕೊಂಡು ಬೈಕ್ ಮೇಲೆ ತೆರಳುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ವಿಜಯಪುರ: ಲೈಸನ್ಸ್ ಇಲ್ಲದೆ ನಾಡ ಪಿಸ್ತೂಲ್ ಇಟ್ಟುಕೊಂಡು ಬೈಕ್ ಮೇಲೆ ತೆರಳುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಯಾಳಗಿ ಗ್ರಾಮದ ರಾಮರೆಡ್ಡಿ ಮಾಲಿಪಾಟೀಲ್, ಬೆಂಗಳೂರಿನ ಶ್ರೀರಾಮಪುರಂದ ಸುರೇಶ್ ತುಂಗರಾಜ, ವಿನೋದ ರಾಜಾ ಬಂಧಿತ ಆರೋಪಿಗಳು. ಇಲ್ಲಿನ ರಿಂಗ್ ರಸ್ತೆಯಲ್ಲಿನ ಜಮಖಂಡಿ ನಾಕಾ ಬಳಿ ಬೈಕ್ ಮೇಲೆ ತೆರಳುತ್ತಿದ್ದ ಮೂವರು ವಾಹನ ತಪಾಸಣೆ ವೇಳೆ ಸಿಕ್ಕಿ ಬಿದ್ದಿದ್ದು, ಎರಡು ಮಚ್ಚು, ಒಂದು ನಾಡ ಪಿಸ್ತೂಲ್, ಜೀವಂತ ಗುಂಡು ಪತ್ತೆಯಾಗಿವೆ. ಮೂವರನ್ನು …
Read More »ನವೆಂಬರ್ 14 ರಿಂದ ನವೆಂಬರ್ 16 ರ ವರೆಗೆ ಆಚರಿಸುವ ದೀಪಾವಳಿ ಹಬ್ಬವನ್ನು ರೋಗಾಣು ಹರಡದಂತೆ ಮುನ್ನೆಚ್ಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಎಂ.ಜಿ.ಹೀರೆಮಠ
ಬೆಳಗಾವಿ: ಕೋವಿಡ್-19 ಹಿನ್ನೆಲೆಯಲ್ಲಿ ನವೆಂಬರ್ 14 ರಿಂದ ನವೆಂಬರ್ 16 ರ ವರೆಗೆ ಆಚರಿಸುವ ದೀಪಾವಳಿ ಹಬ್ಬವನ್ನು ರೋಗಾಣು ಹರಡದಂತೆ ಮುನ್ನೆಚ್ಚ್ಚರಿಕೆ ವಹಿಸಿ ಸರರ್ಕಾರದ ಮಾರ್ಗಸೂಚಿ ಪ್ರಕಾರ ಆಚರಿಸಲು ಜಿಲ್ಲಾಧಿಕಾರಿ ಎಂ.ಜಿ.ಹೀರೆಮಠ ಅವರು ಆದೇಶಿಸಿದ್ದಾರೆ. ಮಾರ್ಗಸೂಚಿಗಳು: ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರಗಳಿಂದ ಅಧಿಕೃತ ಪರವನಾಗಿಯನ್ನು ಪಡೆದ ಮಾರಾಟಗಾರರು ಮಾತ್ರ ಪಟಾಕಿಯನ್ನು ಮಾರಾಟ ಮಾಡತಕ್ಕದ್ದು, ಪಟಾಕಿ ಮಾರಾಟದ ಮಳಿಗೆಗಳನ್ನು ನವೆಂಬರ್ 1 ರಿಂದ ನವೆಂಬರ್ 12 ರ ವರೆಗೆ ಮಾತ್ರ ತೆರೆದಿರತಕ್ಕದು. ಪರವಾನಿಗೆದಾರರು ಸಂಬಂಧಪಟ್ಟ …
Read More »ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದ್ದು, ರಾಜಕೀಯ ದುರುದ್ದೇಶ: ಡಿಕೆ ಶಿವಕುಮಾರ್
ಬೆಂಗಳೂರು: ಯೋಗೇಶ್ ಗೌಡ ಹತ್ಯೆ ಪ್ರಕರಣ ವಿಚಾರಣೆಗಾಗಿ ಕಾಂಗ್ರೆಸ್ ಮುಖಂಡರ ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿರುವುದನ್ನು ನಾನು ಗಮನಿಸಿದ್ದೇನೆ. ಈ ಹಿಂದೆ, ವಿನಯ್ ಕುಲಕರ್ಣಿ ಬಳಿ ಎಲ್ಲವನ್ನೂ ವಿಚಾರಿಸಿದ್ದೇನೆ. ಈಗಾಗಲೇ ಅವರ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸಿ …
Read More »ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ಏಕಾಏಕಿ ವಶಕ್ಕೆ ಪಡೆಯುವ ಮೂಲಕ ವಿನಯ್ ಕುಲಕರ್ಣಿಗೆ ಅವಮಾನ ಮಾಡಲಾಗಿದೆ ಎಂದಿದ್ದಾರೆ.
ತುಮಕೂರು : ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ಏಕಾಏಕಿ ವಶಕ್ಕೆ ಪಡೆಯುವ ಮೂಲಕ ವಿನಯ್ ಕುಲಕರ್ಣಿಗೆ ಅವಮಾನ ಮಾಡಲಾಗಿದೆ ಎಂದಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಧಾರವಾಡದಲ್ಲಿ ದ್ವೇಷದ ರಾಜಕೀಯ ತುಂಬಿ ತುಳುಕುತ್ತಿದೆ. ಸಹ ಸಮಾಜದ ನಾಯಕರು, ಸಮಾಜದ ಮುಖಂಡರನ್ನು ಈ ರೀತಿ ನಡೆಸಿಕೊಳ್ಳುವುದು ಸರಿಯಲ್ಲ. ಸಿಎಂ ಯಡಿಯೂರಪ್ಪನವರು ಇದ್ದನ್ನು ಸರಿಪಡಿಸಬೇಕು ಎಂದಿದ್ದಾರೆ. ಪ್ರಾಥಮಿಕ ವರದಿಯಲ್ಲೂ ಅವರ ಹೆಸರು …
Read More »ಸರ್ಕಾರಿ ಶಾಲೆಯಲ್ಲಿ ಓದಿದವರಿಗೆ ಮೀಸಲಾತಿ : ತಮಿಳುನಾಡು ಮಾದರಿ ರಾಜ್ಯದಲ್ಲೂ ಜಾರಿಯಾಗಲಿ : ಹೊರಟ್ಟಿ
ಹುಬ್ಬಳ್ಳಿ, ನ.4- ತಮಿಳುನಾಡು ಸರ್ಕಾರ ಜಾರಿಗೆ ತಂದಿರುವ ಸರ್ಕಾರಿ ಶಾಲೆಯಲ್ಲಿ ಓದಿದವರಿಗೆ ವೈದ್ಯಕೀಯ ಶಿಕ್ಷಣದಲ್ಲಿ ಶೇ.7.5 ಮೀಸಲಾತಿ ಮಾದರಿಯನ್ನು ಕರ್ನಾಟಕದಲ್ಲೂ ಜಾರಿಗೊಳಿಸಲು ಕಾಯ್ದೆ ರೂಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ತಮಿಳುನಾಡು ಸರ್ಕಾರ ಅಲ್ಲಿ ಸರ್ಕಾರಿ ಶಾಲೆಗಳಲ್ಲಿ ಓದಿರುವ ಬಡಮಕ್ಕಳಿಗೆ ವೈದ್ಯಕೀಯ ಸೀಟುಗಳಲ್ಲಿ ಶೇ.7.5 ಮೀಸಲಿಡಲು ನಿರ್ಧರಿಸಿದೆ.ಈ ಸಂಬಂಧ ಅಲ್ಲಿನ ರಾಜ್ಯಪಾಲರು ಒಪ್ಪಿಗೆ …
Read More »ನಾನು ಅಧ್ಯಕ್ಷ ಸ್ಥಾನದ ಪೈಪೋಟಿಯಲ್ಲಿಲ್ಲಎಲ್ಲ ಸದಸ್ಯರು ಸೇರಿ ಆಯ್ಕೆ ಮಾಡಿದರೆ ನಾನು ಆ ಹುದ್ದೆಯಲ್ಲಿ ಮುಂದುವರಿಯಲು ಸಿದ್:ರಮೇಶ ಕತ್ತಿ,ದ
ಬೆಳಗಾವಿ – ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ಆಡಳಿತ ಮಂಡಳಿಯ 13 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, ಇನ್ನುಳಿದ 3 ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯಲಿದೆ. ಎಲ್ಲ 16 ಸ್ಥಾನಗಳಿಗೂ ಅವಿರೋಧ ಆಯ್ಕೆ ಮಾಡಬೇಕೆನ್ನುವ ಪ್ರಯತ್ನ ಫಲ ನೀಡಲಿಲ್ಲ. ಅಂತಿಮವಾಗಿ 3 ಸ್ಥಾನಗಳಿಗೆ ಚುನಾವಣೆ ನಡೆಸಲೇಬೇಕಾಗಿದೆ. ರಾಮದುರ್ಗ ತಾಲೂಕಿನ ಕೃಷಿ ಪತ್ತಿನ ಸಹಕಾರಿ ಸಂಘಗಳ ಕ್ಷೇತ್ರ, ಖಾನಾಪುರ ತಾಲೂಕಿನ ತಾಲೂಕಿನ ಕೃಷಿ ಪತ್ತಿನ ಇವುಗಳಲ್ಲಿ ಹೆಚ್ಚು ಕುತೂಹಲ ಮೂಡಿಸಿರುವುದು ಖಾನಾಪುರ …
Read More »ಇಂದಿನಿಂದ ಇತಿಹಾಸ ಪ್ರಸಿದ್ಧ ಹಾಸನಾಂಬೆಯ ಆನ್‍ಲೈನ್ ದರ್ಶನ
ಹಾಸನ, ನ.5- ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಾಲಯದ ಬಾಗಿಲು ತೆರೆಯಲಾಗಿದೆ. ಆದರೂ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ. ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬ ದೇವಿ ದೇವಾಲಯದ ಬಾಗಿಲು ತೆರೆದಿದ್ದರೂ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸಾರ್ವಜನಿಕರ ದೇಗುಲ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಪ್ರತಿ ವರ್ಷಕ್ಕೊಮ್ಮೆ ಮಾತ್ರ ಆಶ್ವಯುಜ ಮಾಸದ ಗುರುವಾರದಂದು ಬಾಗಿಲು ತೆರೆಯುವ ಹಾಸನಾಂಬ ದೇವಾಲಯದ ಬಾಗಿಲು ತೆರೆದಾಗ ಹಿಂದಿನ ವರ್ಷ ಹಚ್ಚಿದ ದೀಪ ಆರಿರುವುದಿಲ್ಲ. …
Read More »ಅಲಿಭಾಗ್ ಕೋವಿಡ್ ಶಾಲೆಯಲ್ಲಿ ರಾತ್ರಿ ಕೆಳದ ಬಂಧಿತ ಅರ್ನಬ್ ಗೋಸ್ವಾಮಿ..!
ಅಲಿಭಾಗ್, ನ.5-ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧಿತರಾಗಿ ನ್ಯಾಯಾಂಗ ವಶದಲ್ಲಿರುವ ರಿಪಬ್ಲಿಕ್ ಟವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರು ರಾಯ್‍ಗಢ ಜಿಲ್ಲೆಯ ಅಲಿಭಾಗ್ ಬಂಧೀಖಾನೆಗಾಗಿ ಕೋವಿಡ್-19 ಕೇಂದ್ರವಾಗಿ ಪರಿವರ್ತಿತವಾಗಿರುವ ಸ್ಥಳೀಯ ಶಾಲೆಯೊಂದರಲ್ಲಿ ರಾತ್ರಿ ಕಳೆದರು. ಈ ಪ್ರಕರಣದಲ್ಲಿ ಅರ್ನಬ್ ಗೋಸ್ವಾಮಿ ಮತ್ತು ಇನ್ನಬರಿಗೆ ಅಲಿಭಾಗ್ ಸ್ಥಳೀಯ ನ್ಯಾಯಾಲಯವೊಂದು ನವೆಂಬರ್ 18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅರ್ನಬ್ ಅವರನ್ನು 14 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಅಲಿಭಾಗ್‍ಪೆÇಲೀಸರು ಕೋರಿದ್ದರು. …
Read More »ಗ್ರಾಮ ಪಂಚಾಯಿತಿ ಮಟ್ಟದಿಂದಲೂ ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ- ಸಿ.ಟಿ.ರವಿ
ಮಂಗಳೂರು: ಮುಂದಿನ ಚುನಾವಣೆಗಳಲ್ಲಿ ನಾವು ಗೆಲವು ಸಾಧಿಸಲಿದ್ದು, ಇದರಿಂದಾಗಿ ಗ್ರಾಮ ಪಂಚಾಯತ್‍ನಿಂದಲೂ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹರಿಹಾಯ್ದಿದ್ದಾರೆ. ನಗರದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ, ಮುಂದಿನ 4 ವಿಧಾನಪರಿಷತ್, 2 ವಿಧಾನಸಭೆ ಉಪ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವುವಾಗಲಿದೆ. ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಈ ಮೂಲಕ ಗ್ರಾಮ ಪಂಚಾಯತಿ ಮಟ್ಟದಿಂದಲೂ ಕಾಂಗ್ರೆಸ್ ಮುಕ್ತವಾಗಲಿದೆ …
Read More »