Breaking News

ಪ್ರಧಾನಿ ಮೋದಿ ಪ್ರಚಾರದ ಆಸೆಗೆ ನಮ್ಮ ಲಸಿಕೆಯನ್ನು ವಿದೇಶಕ್ಕೆ ದಾನ ಮಾಡಿದ್ದಾರೆ: ದಿನೇಶ್ ಗುಂಡೂರಾವ್

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಆಸೆಗೆ ನಮ್ಮ ಲಸಿಕೆಯನ್ನು ವಿದೇಶಕ್ಕೆ ದಾನ ಮಾಡಿದ್ದಾರೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್‌ ಮೂಲಕ ಅಕ್ರೋಶ ವ್ಯಕ್ತಪಡಿಸಿದ್ದಾರೆ. ವಿದೇಶಗಳಲ್ಲೂ ಕೊರೊನಾ ಲಸಿಕೆ ಸಿದ್ಧವಾಯಿತು. ಆದರೆ, ಆ ದೇಶಗಳು ಲಸಿಕೆಯನ್ನು ತಮ್ಮಲ್ಲೇ ಉಳಿಸಿಕೊಂಡವು. ಆದರೆ, ಈ ದೇಶದ ಪ್ರಧಾನಿಯವರು ಮಾಡಿದ್ದೇನು?. ಅತ್ತೆ ಒಡವೆಯನ್ನು ಅಳಿಯ ದಾನ ಕೊಟ್ಟಂತೆ ಪ್ರಚಾರಕ್ಕಾಗಿ ಲಸಿಕೆಯನ್ನು ವಿದೇಶಕ್ಕೆ ಕೊಟ್ಟರು. ಈಗ ದೇಶದ ಜನ ಲಸಿಕೆಗಾಗಿ …

Read More »

‘ಜನರ ಜೀವ ಉಳಿಸುವುದು ಮುಖ್ಯ, ನಾವೂ ಸರಕಾರದ ಜತೆ ಕೈಜೋಡಿಸುತ್ತೇವೆ’: ಡಿ.ಕೆ ಶಿವಕುಮಾರ್

ಬೆಂಗಳೂರು: ‘ರಾಜ್ಯದ ಜನರಿಗೆ ಉಚಿತವಾಗಿ ಲಸಿಕೆ ನೀಡಲು ಕಾಂಗ್ರೆಸ್ ರೂಪಿಸಿರುವ ₹ 100 ಕೋಟಿ ಯೋಜನೆಗೆ ಸರ್ಕಾರ ಅನುಮತಿ ನೀಡಲಿ. ನಾವೂ ಸರ್ಕಾರದ ಜತೆ ಕೈಜೋಡಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಜನರ ಜೀವ ಉಳಿಸುವುದು ಮುಖ್ಯ. ಅದೇ ನಮ್ಮ ಮೊದಲ ಆದ್ಯತೆ. ಅಭಿವೃದ್ಧಿ ಕಾರ್ಯಗಳನ್ನು ನಂತರ ಮಾಡಿಕೊಳ್ಳೋಣ. ಈ ಕಾರಣಕ್ಕೆ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಶಾಸಕರ …

Read More »

ಕೊರೊನಾ ಹೋರಾಟಕ್ಕೆ ಸೂಪರ್ ಸ್ಟಾರ್ ರಜನಿ ನೆರವು; ₹50 ಲಕ್ಷ ದೇಣಿಗೆ

ಚೆನ್ನೈ: ನಟ ರಜನಿಕಾಂತ್ ಸೋಮವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾಗಿ, ಕೊರೊನಾವೈರಸ್ ವಿರುದ್ಧದ ಹೋರಾಟಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹50 ಲಕ್ಷ ದೇಣಿಗೆಯನ್ನು ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಜನರು ಪಾಲಿಸಬೇಕೆಂದು ಮನವಿ ಮಾಡಿದ್ದಾರೆ. ಇತ್ತೀಚೆಗಷ್ಟೇ ರಜನಿ ಕೊರೊನಾ ಲಸಿಕೆಯ 2ನೇ ಡೋಸ್‌ ಹಾಕಿಸಿಕೊಂಡಿದ್ದರು. ಕೊರೊನಾ ನಿರ್ಮೂಲನೆಗಾಗಿ ನಾನು ತಮಿಳುನಾಡು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹50 …

Read More »

ಕೊವಿಶೀಲ್ಡ್ ವ್ಯಾಕ್ಸಿನ್ ಸಾಗಾಟದ ಟಾಟಾ ಸುಮೋಗೆ ಲಾರಿ ಡಿಕ್ಕಿ

ಉಪ್ಪಿನಂಗಡಿ, ಮೇ 17 : ಕೊರೊನಾ ನಿಯಂತ್ರಿತ ಕೋವಿಶೀಲ್ಡ್ ವ್ಯಾಕ್ಸಿನ್ ಸಾಗಾಟದ ಟಾಟಾ ಸುಮೋ ವಾಹನಕ್ಕೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ಪೆರಿಯ ಶಾಂತಿ ಬಳಿ ನಡೆದಿದೆ. ಸೋಮವಾರ ನೆಲ್ಯಾಡಿ ಸಮೀಪದ ಪೆರಿಯಶಾಂತಿಯ ಧರ್ಮಸ್ಥಳ ತಿರುವಿನಲ್ಲಿ ಕೊರೊನಾ ವೈರಸ್ ತಡೆಗೆ ಕೋವಿಶೀಲ್ಡ್ ವ್ಯಾಕ್ಸಿನ್ ಸಾಗಿಸುತ್ತಿದ್ದ ಸರ್ಕಾರದ ಟಾಟಾ ಸುಮೋ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಟಾಟಾ ಸುಮೋ …

Read More »

ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ : ಓರ್ವ ಸವಾರನಿಗೆ ಗಂಭೀರ ಗಾಯ

ಶಿವಮೊಗ್ಗ : ಚಲಿಸುತ್ತಿದ್ದ ಬೈಕ್ ಗಳ‌ ಮೇಲೆ ಮರ ಉರುಳಿ ಬಿದ್ದು, ಓರ್ವ ಸವಾರ ಗಂಭೀರ ಗಾಯಗೊಂಡು, ಮತ್ತೋರ್ವನಿಗೆ ಸಣ್ಣ-ಪುಟ್ಟ ಗಾಯಗಳಾಗಿರುವ ಘಟನೆ ಹೊಸನಗರದ ಕೊಡಚಾದ್ರಿ ಕಾಲೇಜು ಎದುರು ಸೋಮವಾರ ( ಮೇ.17) ನಡೆದಿದೆ. ಭಾರಿ ಗಾಳಿ-ಮಳೆಯಿಂದಾಗಿ ರಸ್ತೆ ಪಕ್ಕದಲ್ಲಿದ್ದ ಬೃಹತ್ ಮರ ರಸ್ತೆಯಲ್ಲಿ ಉರುಳಿ ಬಿದ್ದಿದೆ. ಪರಿಣಾಮ ಮಾವಿನಕೊಪ್ಪ ಬಡಾವಣೆಯ ಸಾಧಿಕ್ ಎಂಬುವರಿಗೆ ಗಂಭೀರ ಗಾಯವಾಗಿದೆ. ಈತ ಬೈಕ್ ನಲ್ಲಿ ತೆರಳುವಾಗ ಮರ ಬಿದ್ದಿದೆ. ಚಿಕಿತ್ಸೆಗಾಗಿ ಈತನನ್ನು ಮಣಿಪಾಲ …

Read More »

ಹಿರಿಯೂರು ರೈತ ಬೆಳೆದಿದ್ದ 60 ಚೀಲ ಈರುಳ್ಳಿ ಖರೀದಿಸಿದ ನಟ ಉಪೇಂದ್ರ

ಹಿರಿಯೂರು: ತಾಲ್ಲೂಕಿನ ಪಟ್ರೇಹಳ್ಳಿ ಗ್ರಾಮದ ಮಹೇಶ್ ಅವರು ಬೆಳೆದಿದ್ದ 60 ಚೀಲ ಈರುಳ್ಳಿಯನ್ನು ನಟ ಉಪೇಂದ್ರ ಖರೀದಿಸಿದ್ದಾರೆ. ಲಾಕ್ ಡೌನ್ ಬೆಳೆದ ಬೆಳೆ ವ್ಯಾಪಾರವಾಗದೇ ಸಂಕಷ್ಟದಲ್ಲಿರುವ ರೈತರಿಗೆ ನಟ ಉಪೇಂದ್ರ ಅವರು ” ನಮಗೆ ಅವಶ್ಯಕತೆ ಇರುವ ಬೆಳೆಯನ್ನು ನಿಮ್ಮ ಬಳಿ ಸೂಕ್ತ ಬೆಲೆಗೆ ಕೊಂಡು ಬೇಕಿರುವವರಿಗೆ ಹಂಚುತ್ತೇವೆ” ಎಂದು ತನ್ನ ಮೊಬೈಲ್ ನಂಬರ್ ನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಕರೆ ನೀಡಿದ್ದರು. ಇದನ್ನು ಗಮನಿಸಿದ ಮಹೇಶ್ ಉಪೇಂದ್ರ ಅವರಿಗೆ ಕರೆ …

Read More »

ಕುವೈತ್ ನಿಂದ ಧಾರವಾಡಕ್ಕೆ 75 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ: ಸಚಿವ ಪ್ರಹ್ಲಾದ್ ಜೋಶಿ

ಧಾರವಾಡ: ಭಾರತ ಸರ್ಕಾರದ ವಿದೇಶಾಂಗ ಮಂತ್ರಾಲಯ ಮತ್ತು ವಾಣಿಜ್ಯ ಮಂತ್ರಾಲಯದಿಂದ ಬೇರೆ ಬೇರೆ ರಾಷ್ಟ್ರಗಳ ಜೊತೆ ಭಾರತದ ಉತ್ತಮ ಸಂಬಂಧ ಹೊಂದಿರುವದರಿಂದ ಮತ್ತು ಜಾಗತಿಕ ಟೆಂಡರ್ ಮೂಲಕ ಆಕ್ಸಿಜನ್ ಆಮದು ಮಾಡಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಸೋಮವಾರ ಬೆಳಿಗ್ಗೆ, ಜಿಲ್ಲೆಯ ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ಪ್ರಾಕ್ಸಿಯರ್ ಆಕ್ಸಿಜನ್ ಮರುಪೂರ್ಣ (ರೀಫಿಲ್ಲಿಂಗ್) ಘಟಕಕ್ಕೆ ಭೇಟಿ ನೀಡಿ, ಘಟಕದಿಂದ ಟ್ಯಾಂಕರ್ ಗೆ ಆಕ್ಸಿಜನ್ ತುಂಬುವ ಕಾರ್ಯ ಪರೀಶಿಲಿಸಿದ ನಂತರ …

Read More »

ಪರೀಕ್ಷೆಯಲ್ಲಿ ಹಿಮ್ಸ್‌ ಪ್ರಥಮ

ಹಾಸನ: ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಹಿಮ್ಸ್‌)ಯ ಪ್ರಯೋಗಾಲಯವು ಸಾಮರ್ಥ್ಯ ಮೀರಿಪರೀಕ್ಷೆಗಳನ್ನು ನಡೆಸಿ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ.ಪ್ರತಿನಿತ್ಯ 2000 ಮಾದರಿಗಳ ಪರೀಕ್ಷೆ ನೀಡಿ ವರದಿನೀಡುವ ಸಾಮರ್ಥ್ಯ ಹೊಂದಿರುವ ಪ್ರಯೋಗಾಲವು ಕೊರೊನಾ ಸಮಸ್ಯೆ ಉಲ್ಬಣವಾದ ಸಂದರ್ಭದಲ್ಲೆಲ್ಲಾಗರಿಷ್ಠ ಪರೀಕ್ಷೆಗಳನ್ನು ನಡೆಸಿ ಮೊದಲ ಸ್ಥಾನ ಪಡೆದಿದೆ. 2016 ರಲ್ಲಿ ಕೇಂದ್ರ ಸರ್ಕಾರದ ಸಹಾಯ ಧನದಿಂದವಿಆರ್‌ಡಿಎಲ್‌ (ಬೈರಲ್‌ ರೀಸರ್ಚ್‌ ಡಯೋಗ್ನಾಸ್ಟಿಕ್‌ಲ್ಯಾಬೋರೇಟರಿ) ಪ್ರಾರಂಭವಾಗಿದೆ. ಕೊರೊನಾಮೊದಲ ಅಲೆ ಪ್ರಾರಂಭಕ್ಕೆ ಪೂರ್ವದಲ್ಲಿ ರಾಜ್ಯದಲ್ಲಿದ್ದಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಮೂರು ಕೇಂದ್ರಗಳಪೈಕಿ ಹಾಗೂ ಇಡೀ …

Read More »

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ರದ್ದು ಕುರಿತು ಸ್ಪಷ್ಟನೆ ನೀಡಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು : ಕೊರೋನ ಹೆಚ್ಚಳ ಹಿನ್ನಲೆಯಲ್ಲಿ ನಡೆಯಬೇಕಾಗಿದ್ದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಆದರೆ ಇದರ ಕುರಿತು ಅನೇಕ ವದಂತಿಗಳು ಹರಡುತ್ತಿದ್ದು, ಅವುಗಳನ್ನು ಸಚಿವ ಸುರೇಶ್ ಕುಮಾರ್ ತಳ್ಳಿಹಾಕಿದ್ದಾರೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಎರಡನೆ ವರ್ಷದ ಅಂತಿಮ ಪರೀಕ್ಷೆ ರದ್ದುಪಡಿಸಲಾಗಿದೆ ಎಂಬ ವರದಿಗಳನ್ನು ತಳ್ಳಿಹಾಕಿದ್ದು, ಇದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಇದು ಕೇವಲ ವದಂತಿಯಾಗಿದೆ, ಪರೀಕ್ಷೆ ರದ್ದುಪಡಿಸುವ ಸಂಬಂಧ ರಾಜ್ಯ …

Read More »

ಕೊರೊನಾ ವಿಚಾರದಲ್ಲೂ ಎಂಇಎಸ್ ಪುಂಡಾಟಿಕೆ ಮೆರೆದಿದ್ದು, ಬ್ರಿಮ್ಸ್ ಆಸ್ಪತ್ರೆಗೆ ನುಗ್ಗಿ ಬೆಡ್‍ಗಳ ಬಳಿ ನೀಂತಿ ವೀಡಿಯೋ ಮಾಡಿಕೊಂಡು, ಪೋಸ್

ಬೆಳಗಾವಿ: ಕೊರೊನಾ ವಿಚಾರದಲ್ಲೂ ಎಂಇಎಸ್ ಪುಂಡಾಟಿಕೆ ಮೆರೆದಿದ್ದು, ಬ್ರಿಮ್ಸ್ ಆಸ್ಪತ್ರೆಗೆ ನುಗ್ಗಿ ಬೆಡ್‍ಗಳ ಬಳಿ ನೀಂತಿ ವೀಡಿಯೋ ಮಾಡಿಕೊಂಡು, ಪೋಸ್ ನೀಡಿದ್ದಾರೆ. ನಗರದ ಬಿಮ್ಸ್ ಆಸ್ಪತ್ರೆಗೆ ನುಗ್ಗಿ ಬೆಡ್‍ಗಳ ಪರಿಶೀಲನೆ ನಡೆಸಿದ್ದು, ಬೆಳಗಾವಿ ಲೋಕಸಭಾ ಉಪಚುನಾವಣೆ ಪರಾಜಿತ ಎಂಇಎಸ್ ಅಭ್ಯರ್ಥಿ ಶುಭಂ ಶೆಲ್ಕೆ ನೇತೃತ್ವದಲ್ಲಿ ಪುಂಡರು ಬಿಮ್ಸ್ ಆಸ್ಪತ್ರೆಗೆ ನುಗ್ಗಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ ನಿರುಪಯುಕ್ತ ಬೆಡ್‍ಗಳ ಬಳಿ ನಿಂತು ವೀಡಿಯೋ ಮಾಡಿಕೊಂಡು ಪೋಸ್ ನಿಡಿದ್ದಾರೆ. ಎಂಇಎಸ್ ಪುಂಡ ಶುಭಂ ಶೆಲ್ಕೆ …

Read More »