Breaking News

ಲವ್ ಜಿಹಾದ್ ಹೆಸರಲ್ಲಿ ಮತಾಂತರವಾಗ್ತಿರೋದನ್ನು ಕೊನೆಗಾಣಿಸುತ್ತೇವೆ: ಸಿಎಂ

ಮಂಗಳೂರು: ಲವ್ ಜಿಹಾದ್ ಹೆಸರಲ್ಲಿ ಮತಾಂತವಾಗುತ್ತಿದೆ. ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆಯಾಗುತ್ತಿದೆ. ಕರ್ನಾಟಕದಲ್ಲಿ ಈ ವ್ಯವಸ್ಥೆ ಕೊನೆ ಮಾಡುತ್ತೇವೆ. ಮತಾಂತರದ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಮಂಗಳೂರಿನಲ್ಲಿ 20 ವರ್ಷಗಳ ನಂತರ ರಾಜ್ಯಕಾರ್ಯಕಾರಿಣಿ ಸಭೆಯಾಗುತ್ತಿದೆ. ರಾಜ್ಯಾಧ್ಯಕ್ಷರಾದ ಬಳಿಕ ನಳಿನ್ ಕುಮಾರ್ ಕಟೀಲ್ ಪಕ್ಷ ಬಲಪಡಿಸಿದ್ದಾರೆ. ಎರಡು ವರ್ಷಗಳ ಬಳಿಕ …

Read More »

ಬಹಿರ್ದೆಸೆಗೆ ಹೋಗಿದ್ದ ಸಂದರ್ಭದಲ್ಲಿ ಏಕಾಏಕಿ ಚಿರತೆ ದಾಳಿ

ಕೊಪ್ಪಳ: ಚಿರತೆ ದಾಳಿಗೆ ಯುವಕನೋರ್ವ ಬಲಿಯಾಗಿರುವ ಹೃದಯವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ವ್ಯಾಪ್ತಿಯಲ್ಲಿ ಬರುವ ದುರ್ಗಾದೇವಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಹುಲಗೇಶ್ ಚಿರತೆಗೆ ಬಲಿಯಾದ ಯುವಕನಾಗಿದ್ದಾನೆ. ಮೃತ ಹುಲಗೇಶ್ ದುರ್ಗಾದೇವಿ ದೇವಸ್ಥಾನದಲ್ಲಿ ಹಲವಾರು ವರ್ಷಗಳಿಂದ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ. ಎಂದಿನಂತೆ ಬುಧವಾರ ಸಹ ದೇವಸ್ಥಾನದ ಕೆಲಸ ಕಾರ್ಯಗಳನ್ನ ಮುಗಿಸಿ ರಾತ್ರಿ ಬಹಿರ್ದೆಸೆಗೆ ಹೋಗಿದ್ದ ಸಂದರ್ಭದಲ್ಲಿ ಏಕಾಏಕಿ ಚಿರತೆ ದಾಳಿ ಮಾಡಿದೆ. …

Read More »

ದೀಪಾವಳಿಗೆ ರಾಜ್ಯದಲ್ಲೂ ಪಟಾಕಿ ನಿಷೇಧ ಆಗುತ್ತಾ……?

ಬೆಂಗಳೂರು: ದೀಪಾವಳಿಗೆ ರಾಜ್ಯದಲ್ಲೂ ಪಟಾಕಿ ನಿಷೇಧ ಆಗುತ್ತಾ ಎಂಬ ಪ್ರಶ್ನೆಯೊಂದು ಮೂಡಿದ್ದು, ಇಂದು ಆರೋಗ್ಯ ಇಲಾಖೆಗೆ ಶಿಫಾರಸು ಮಾಡುವ ಸಾಧ್ಯತೆಗಳಿವೆ. ಕೋವಿಡ್ ಸಲಹಾ ಸಮಿತಿಯಿಂದ ಪಟಾಕಿ ನಿಷೇಧಕ್ಕೆ ಸಲಹೆ ನೀಡುವ ನಿರೀಕ್ಷೆ ಇದೆ. ಈ ಶಿಫಾರಸು ಆಧರಿಸಿ ರಾಜ್ಯದಲ್ಲಿ ಪಟಾಕಿ ನಿಷೇಧವಾಗುವ ಸಾಧ್ಯತೆಗಳಿವೆ. ಪಟಾಕಿ ನಿಷೇಧದ ಬಗ್ಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸುಳಿವು ನೀಡಿದ್ದಾರೆ. ಪಟಾಕಿ ಸಿಡಿಸುವುದರಿಂದ ಕೋವಿಡ್ ಸೋಂಕಿತರ ಮೇಲೆ ಪರಿಣಾಮ ಬೀರುತ್ತದೆ ಎಂದು ಆರೋಗ್ಯ ಸಚಿವರ …

Read More »

ಬಾಲಿವುಡ್ ನಟ ಮತ್ತು ಮಾಡೆಲ್ ಮಿಲಿಂದ್ ಸೋಮನ್ ಬೀಚಿನಲ್ಲಿ ಬೆತ್ತಲೇ ಫೋಟೋ ಶೂಟ್

ಪಣಜಿ: ಬಾಲಿವುಡ್ ನಟ ಮತ್ತು ಮಾಡೆಲ್ ಮಿಲಿಂದ್ ಸೋಮನ್ ಬೀಚಿನಲ್ಲಿ ಬೆತ್ತಲೇ ಫೋಟೋ ಶೂಟ್ ಮಾಡಿಸಿಕೊಳ್ಳುವ ಮೂಲಕ ತಮ್ಮ 55ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಮಾಡೆಲ್ ಮಿಲಿಂದ್ ತನ್ನ 55ನೇ ವಯಸ್ಸಿನಲ್ಲೂ ಕೂಡ ಯುವಕರು ನಾಚುವಂತೆ ಬಾಡಿಯನ್ನು ಮಾಡಿದ್ದಾರೆ. ಈಗಲೂ ಕೂಡ ಸಿಕ್ಸ್ ಪ್ಯಾಕ್ ಮಾಡುತ್ತಾರೆ. ಇಂದು 55ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಅವರು ಗೋವಾದ ಬೀಚಿನಲ್ಲಿ ಬೆತ್ತಲೆಯಾಗಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿ ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ …

Read More »

ಸಾಲಬಾಧೆ ತಾಳಲಾರದೆ ಒಂದೇ ಗ್ರಾಮದ ಇಬ್ಬರು ರೈತರು ಆತ್ಮಹತ್ಯೆ

ಹಾವೇರಿ: ಸಾಲಬಾಧೆ ತಾಳಲಾರದೆ ಒಂದೇ ಗ್ರಾಮದ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ನಡೆದಿದೆ. ಮಹೇಶ್ ಪರಸಳ್ಳಿ(38) ಮತ್ತು ಮಂಜಪ್ಪ ಕರಿಯಪ್ಪನವರ (44) ಆತ್ಮಹತ್ಯೆ ಮಾಡಿಕೊಂಡ ರೈತರು. ಒಂದೂವರೆ ಎಕರೆ ಜಮೀನು ಹೊಂದಿದ್ದ ಮಹೇಶ್, ಬ್ಯಾಂಕ್ ಮತ್ತು ಕೈ ಸಾಲ ಸೇರಿ ಸುಮಾರು ನಾಲ್ಕೂವರೆ ಲಕ್ಷ ರುಪಾಯಿ ಸಾಲ ಮಾಡಿಕೊಂಡಿದ್ದನು. ಇವರು ಮೆಕ್ಕೆಜೋಳ ಮತ್ತು ಈರುಳ್ಳಿ ಬೆಳೆಯನ್ನು ಬೆಳೆದಿದ್ದರು. ಆದರೆ ಈ …

Read More »

ಯಾವುದೇ ಕಾರಣಕ್ಕೂ ಕಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಯವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ:ಈಶ್ವರಪ್ಪ

ಮಂಗಳೂರು: ಯಾವುದೇ ಕಾರಣಕ್ಕೂ ಕಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಯವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದರೆ. ನಗರದಲ್ಲಿ ಮಾತನಾಡಿದ ಅವರು, ವಿನಯ್ ಕುಲಕರ್ಣಿಯವರನ್ನು ವಶಕ್ಕೆ ಪಡೆದಿರುವ ಸಿಬಿಐಯ ಕ್ರಮವನ್ನು ಸ್ವಾಗತಿಸುತ್ತೇನೆ. ಸಿಬಿಐ ಈ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡಲಿದೆ. ಅದೇ ರೀತಿ ತನಿಖೆಯಲ್ಲಿ ವಿನಯ್ ಕುಲಕರ್ಣಿ ನಿರಪರಾಧಿಯಾಗಿ ಹೊರಬಂದರೆ ತುಂಬಾ ಖುಷಿ ಪಡುತ್ತೇನೆ ಎಂದು ಯೋಗಿಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸಿಬಿಐ ವಶಪಡಿಸಿಕೊಂಡಿರುವ …

Read More »

ಆರಂಭದಲ್ಲಿ ಹಿನ್ನಡೆ, ಕೊನೆಗೆ ಟ್ರಂಪ್‌ ಮುನ್ನಡೆ – ಯಾರಾಗ್ತಾರೆ ಅಮೆರಿಕದ ಅಧ್ಯಕ್ಷ?

ವಾಷಿಂಗ್ಟನ್‌: ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ರಿಪಬ್ಲಿಕನ್ ಪಕ್ಷದ ಡೋನಾಲ್ಡ್ ಟ್ರಂಪ್ ಹಾಗೂ ಡೆಮಾಕ್ರಟಿಕ್ ಪಕ್ಷದ ಜೋ ಬೈಡೆನ್ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ವಿಜೇತರನ್ನು ನಿರ್ಣಯಿಸುವ ಎಲೆಕ್ಟೋರಲ್ ಮತಗಳಲ್ಲಿ ಬೈಡೆನ್ ಮುನ್ನಡೆ ಸಾಧಿಸಿದ್ದಾರೆ. ಬೆಳಗ್ಗೆ ತೀರಾ ಹಿಂದಿದ್ದ ಟ್ರಂಪ್ ಸಂಜೆ ಹೊತ್ತಿಗೆ ಭಾರೀ ಪೈಪೋಟಿ ನೀಡಿದ್ದಾರೆ. ಯಾವುದೇ ಕ್ಷಣದಲ್ಲೂ ಜೋ ಬೈಡನ್‍ರನ್ನು ಹಿಂದಿಕ್ಕುವ ಸಾಧ್ಯತೆಗಳೂ ಇವೆ. ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳನ್ನು …

Read More »

ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರರನ್ನು ಸಿಬಿಐ ಅಧಿಕಾರಿಗಳ ವಶಕ್ಕೆ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ

ಧಾರವಾಡ : ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರರನ್ನು ಸಿಬಿಐ ಅಧಿಕಾರಿಗಳು ಇಂದು ವಶಕ್ಕೆ ಪಡೆದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಧಾರವಾಡದ ಉಪನಗರ ಪೊಲೀಸ್ ಠಾಣೆ ಎದುರು ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್‌ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ ನೇತೃತ್ವದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ …

Read More »

ಬೆಳೆಗಳಿಗೂ ಭಾವನೆಗಳಿರುತ್ತವೆ. ಮನುಷ್ಯನ ಭಾವನೆಗಳನ್ನು ಗ್ರಹಿಸುವ ಶಕ್ತಿ ಅವುಗಳಲ್ಲಿದೆ.

ಚಿಕ್ಕೋಡಿ: ‘ಬೆಳೆಗಳಿಗೂ ಭಾವನೆಗಳಿರುತ್ತವೆ. ಮನುಷ್ಯನ ಭಾವನೆಗಳನ್ನು ಗ್ರಹಿಸುವ ಶಕ್ತಿ ಅವುಗಳಲ್ಲಿದೆ. ರಾಜಯೋಗದ ಮೂಲಕ ಶುದ್ಧ, ಸಕಾರಾತ್ಮಕ, ಶ್ರೇಷ್ಠ, ಶಕ್ತಿಶಾಲಿ ಭಾವನೆಗಳು ಪಸರಿಸಿ ಬೆಳೆಗಳಿಗೆ ಉತ್ತಮ ಸಂಸ್ಕಾರ ನೀಡಿದರೆ ಸಾತ್ವಿಕ ಆಹಾರವನ್ನು ಪಡೆಯಬಹುದು. ಇದು ಶಾಶ್ವತ ಯೋಗಿಕ ಬೇಸಾಯ ಪದ್ಧತಿಯಿಂದ ಸಾಧ್ಯ’. – ಇಲ್ಲಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸೇವಾ ಕೇಂದ್ರದ ಸಂಚಾಲಕರಾದ ಗ್ರಾಮ ವಿಕಾಸ ಬೆಳಗಾವಿ ವಿಭಾಗದ ಸಂಯೋಜಕಿ ಶಾಂತಕ್ಕ ಅವರ ಮಾತಿದು. ‘ಕಾಗವಾಡ ತಾಲ್ಲೂಕಿನ ಐನಾಪುರದಲ್ಲಿ ಲಕ್ಷ್ಮಣ ಹೊಳಬಸಪ್ಪ …

Read More »

ರಾಜ್ಯದಲ್ಲಿ 16% ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ಸೆರೋ ಸರ್ವೆಯಲ್ಲಿ ತಿಳಿದುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು : ರಾಜ್ಯದಲ್ಲಿ 16% ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ಸೆರೋ ಸರ್ವೆಯಲ್ಲಿ ತಿಳಿದುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸಚಿವ ಸುಧಾಕರ್ ಅವರು , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯ ಪ್ರಗತಿ ಮತ್ತು ಸಮರ್ಪಕ ಜಾರಿ ಕುರಿತಂತೆ ಚರ್ಚಿಸಲು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಸಭೆ …

Read More »