ಗದಗ: ಶಾಲಾ ಆವರಣದಲ್ಲಿ ಭೂ ಕುಸಿತವಾಗಿದ್ದು, ಭಾರೀ ಅನಾಹುತವೊಂದು ತಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ನಗರದ ವೀರನಾರಾಯಣ ದೇವಸ್ಥಾನದ ಬಳಿಯ ಸರ್ಕಾರಿ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆ ನಂಬರ್ 02 ಆವರಣದಲ್ಲಿ ಭೂ ಕುಸಿತವಾಗಿದೆ. ಶಾಲೆಗಳು ರಜೆ ಇರುವುದರಿಂದ ಭಾರೀ ಅನಾಹುತ ತಪ್ಪಿದೆ. ಸುಮಾರು 30 ಅಡಿ ಭೂ ಕುಸಿತವಾಗಿದೆ. ಶಿಕ್ಷಕರು ಹಾಗೂ ಸ್ಥಳೀಯರು ಶಾಲೆಗೆ ಬಂದಾಗ ಈ ಘಟನೆ ನೋಡಿ ಆತಂಕಗೊಂಡಿದ್ದಾರೆ ವೀರನಾರಾಯಣ ದೇವಸ್ಥಾನ ಬಳಿ ಅಲ್ಲಲ್ಲಿ …
Read More »ಲಾರಿ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರಿಗೆ ಗಂಭೀರ ಗಾಯ
ಹುಬ್ಬಳ್ಳಿ: ಲಾರಿ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಲಘಟಗಿ ತಾಲೂಕಿನ ಸಲಕಿನಕೊಪ್ಪ ಕ್ರಾಸ್ ಬಳಿ ನಡೆದಿದೆ. ದಾಂಡೇಲಿಯಿಂದ ಚಾಮರಾಜನಗರಕ್ಕೆ ತೆರಳುತ್ತಿದ್ದ ಕಾರಿನಲ್ಲಿ ಒಂದು ವರ್ಷದ ಮಗು ಸೇರಿದಂತೆ ನಾಲ್ಕು ಜನರಿದ್ದರು. ಅಲ್ಲದೇ ವ್ಯಕ್ತಿಯೊಬ್ಬರು ಸಾವು ಬದುಕಿನ ಮಧ್ಯ ಹೋರಾಟ ನಡೆಸುತ್ತಿದ್ದು, ಸ್ಥಳಕ್ಕೆ ದೌಡಾಯಿಸಿದ 108 ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಧಾರವಾಡದ ಸಿವಿಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುದರ್ಶನ್ (44), ಬಸವರಾಜ್ (30), ರಾಜಲಕ್ಷ್ಮಿ (29), …
Read More »ಚಿತ್ರರಂಗದ ಮಂದಿ ಡ್ರಗ್ಸ್ ಮಾಫಿಯಾದಲ್ಲಿ ಸಿಲುಕಿದೆ:ಇಂದ್ರಜಿತ್ ಲಂಕೇಶ್
ಬೆಂಗಳೂರು: ಪೊಲೀಸ್ ಇಲಾಖೆ ನ್ಯಾಯ ಕೊಡಬೇಕು. ಚಿತ್ರರಂಗ ಸ್ವಚ್ಛ ಆಗಬೇಕು ಅನ್ನೊದು ನನ್ನ ಉದ್ದೇಶ ಎಂದು ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿಕೆಗೆ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಮಾತನಾಡಿದ ಇಂದ್ರಜಿತ್ ಲಂಕೇಶ್, ಪೊಲೀಸ್ ಕಮಿಷನರ್ ಅವರ ತನಿಖೆಗೆ ಸಹಕರಿಸುತ್ತೀನಿ, ಭದ್ರತೆ ಕೊಡುತ್ತೀನಿ ಅಂತ ಹೇಳಿರೋದು ಸಂತೋಷ. ಆದರೆ ಪೊಲೀಸ್ ಇಲಾಖೆ ಚಿತ್ರರಂಗಕ್ಕೆ ನ್ಯಾಯ ಕೊಡಬೇಕು ಎಂದು ಕಮಲ್ ಪಂತ್ ಅವರ ಹೇಳಿಕೆಯನ್ನು ಸ್ವಾಗತಿಸಿದ್ದಾರೆ. ಅಲ್ಲದೇ ಚಿತ್ರರಂಗ ಸ್ವಚ್ಛ ಆಗಬೇಕು …
Read More »ಕರುಣಾಜನಕ ಕತೆ.. ಕೊರೊನಾ Bad Timeನಲ್ಲಿ ಮಾರಾಟವಾಗಿದ್ದ ಮಗು ತಾಯಿ ಮಡಿಲಿಗೆ!
ಮನೆ ಬಾಡಿಗೆ ಕಟ್ಟಲು ಸಹ ಹಣವಿಲ್ಲದೆ 3 ವರ್ಷದ ಹೆಣ್ಣು ಮಗುವನ್ನ 11,000 ರುಪಾಯಿಗೆ ಷರತ್ತುಬದ್ದ ಮಾರಾಟ ಮಾಡಲಾಗಿತ್ತು. ಷರತ್ತಿನ ಪ್ರಕಾರ ಮಗುವನ್ನ ತಾಯಿಗೆ ನೋಡಲು ಬಿಡದಿದ್ದಕ್ಕೆ ಠಾಣೆ ಮೆಟ್ಟಿಲೇರಿದ ನೊಂದ ಮಾತೃ ಹೃದಯ.. ಮುಂದೆ ಓದಿ. ನೆಲಮಂಗಲ: ಕೊರೋನಾ ಎಂಬ ಮಹಾಮಾರಿ ಜನರ ಆರ್ಥಿಕ ಪರಿಸ್ಥಿತಿಯನ್ನ ನೆಲ ಕಚ್ಚಿಸಿದ್ದು, ಲಕ್ಷಾಂತರ ಜನ ಬೆಂಗಳೂರಿನಲ್ಲಿ ಮನೆ ಬಾಡಿಗೆ ಸಹ ಕಟ್ಟಲಾಗದೆ ಬೆಂಗಳೂರು ತೊರೆದು ಹಳ್ಳಿಗಳ್ಳತ್ತ ಗಂಟು ಮೂಟೆ ಕಟ್ಟಿಕೊಂಡು ಹೊರಟೇ …
Read More »ಪಠ್ಯದಲ್ಲಿಲ್ಲದ ಪ್ರಶ್ನೆ ಇದ್ದರೆ ಕೃಪಾಂಕ; ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಡಿಸಿಎಂ ಆಭಯ
ಬೆಂಗಳೂರು: ಎಂಜಿನಿಯರಿಂಗ್ ಪರೀಕ್ಷೆಯಲ್ಲಿ ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾದ ವಿಷಯ ಸರಕಾರದ ಗಮನಕ್ಕೆ ಬಂದಿದ್ದು, ಈ ಬಗ್ಗೆ ವಿದ್ಯಾರ್ಥಿಗಳಿಗೆ ಹಿತಕ್ಕೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು. ಬೆಂಗಳೂರಿನಲ್ಲಿ ಶುಕ್ರವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ವಿಷಯಕ್ಕೆ ಸಂಬಂಧಿಸಿದಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಉಪ ಕುಲಪತಿ ಪ್ರೊ. ಕರಿಸಿದ್ದಪ್ಪ ಅವರೊಂದಿಗೆ …
Read More »ನೂತನ ಶಿಕ್ಷಣ ನೀತಿ ಜಾರಿ; ರಾಜ್ಯಪಾಲರ ಜತೆ ಡಿಸಿಎಂ ಮಹತ್ವದ ಚರ್ಚೆ
ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ, ರಾಜ್ಯಪಾಲ ವಜೂಭಾಯಿ ವಾಲ ಅವರ ಜತೆ ಮಹತ್ವದ ಮಾತುಕತೆ ನಡೆಸಿದರು. ಶುಕ್ರವಾರ ಬೆಂಗಳೂರಿನಲ್ಲಿ ರಾಜಭವನಕ್ಕೆ ಭೇಟಿ ನೀಡಿದ ಡಿಸಿಎಂ, ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಈವರೆಗೆ ಸರಕಾರ ಕೈಗೊಂಡಿರುವ ಕ್ರಮಗಳು, ಕಾರ್ಯಪಡೆ ರಚನೆ, ಆ ಕಾರ್ಯಪಡೆ ಜತೆ ನಡೆಸಿರುವ ಸಭೆಗಳು, ವಿಚಾರ ವಿನಿಮಯ ಇತ್ಯಾದಿ …
Read More »ಅಗ್ನಿಶಾಮಕ-ಪಾರುಗಾಣಿಕ ತರಬೇತಿ.
ಬೆಂಗಳೂರು,: ಕರ್ನಾಟಕ ಅಗ್ನಿಶಾಮಕ ತುರ್ತು ಸೇವೆಗಳ ಸಹಯೋಗದಲ್ಲಿ ವೈಟ್‍ಫೀಲ್ಡ್‍ನಲ್ಲಿರುವ ಅಲೋಫ್ಟ್ ಹೋಟೆಲ್‍ನಲ್ಲಿ ಅಗ್ನಿಶಾಮಕ ತರಬೇತಿ ಮತ್ತು ಪಾರುಗಾಣಿಕಾ ತರಬೇತಿ ನಡೆಸಲಾಯಿತು. ಜಿಲ್ಲಾ ಅಗ್ನಿಶಾಮಕ ಅಕಾರಿ ಸಿದ್ದಣ್ಣ, ರೇವಪುಟ್ಟಿ, ಅಗ್ನಿಶಾಮಕ ಸಿಬ್ಬಂದಿ ಕಾಶಿನಾಥ್ ಅಲಗೆವಿ, ಬಾಬು ಸಮನೆ ಅವರ ನೇತೃತ್ವದಲ್ಲಿ ಸಿಬ್ಬಂದಿಗೆ ತರಬೇತಿ ನೀಡಲಾಯಿತು. ತರಬೇತಿಯಲ್ಲಿ ಜನರನ್ನು ಎತ್ತರದ ಕ್ಕಡದಿಂದ ರಕ್ಷಿಸುವುದು ಹೇಗೆ, ಎಲ್‍ಪಿಜಿ ಗ್ಯಾಸ್ ಸಿಲಿಂಡರ್‍ಗಳ ಸುರಕ್ಷಿತ ಬಳಕೆ, ಅಗ್ನಿಶಾಮಕ ಸಾಧನಗಳ ಬಲಕೆ, ಅಗ್ನಿಶಾಮಕ ರೀಲ್‍ಗಳ ಬಳಕೆ, ರಕ್ಷಣಾ ಕಾರ್ಯಾಚರಣೆ …
Read More »ಹೊಸ ಶಿಕ್ಷಣ ನೀತಿ ದೂರದೃಷ್ಟಿ ಹೊಂದಿದೆ: ಡಿಸಿಎಂ ಗೋವಿಂದ ಕಾರಜೋಳ ಅಭಿಮತ
ಬೆಂಗಳೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ನರೇಂದ್ರ ಮೋದಿಯವರು ಅಪಾರ ದೂರದೃಷ್ಟಿಯನ್ನು ಇಟ್ಟುಕೊಂಡು ರಚಿಸಿರುವುದು ಭಾರತ ದೇಶದ ಶಿಕ್ಷಣ ವಲಯದಲ್ಲಿ ಇತಿಹಾಸ ಸೃಷ್ಟಿಸಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ 5ನೇ ದಿನದ ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಒಂದು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಅಪಾರ ದೂರದೃಷ್ಟಿಯನ್ನು ಇಟ್ಟುಕೊಂಡು ರಚಿಸಿದ್ದಾರೆ. ಇದು ಭಾರತ ದೇಶದ …
Read More »ರಾಯಣ್ಣ ಪ್ರತಿಮೆ ವಿವಾದ ಸುಖಾಂತ್ಯ ಕಂಡ ಬೆನ್ನಲ್ಲೇ ಸಚಿವರ ದಂಡೇ ಪೀರನವಾಡಿಗೆ ಭೇಟಿ
ಬೆಳಗಾವಿ: ಪೀರನವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ಸುಖಾಂತ್ಯ ಕಂಡ ಬೆನ್ನಲ್ಲೇ ಸಚಿವರ ದಂಡೇ ಪೀರನವಾಡಿಗೆ ಭೇಟಿ ನೀಡುತ್ತಿದೆ. ಶನಿವಾರ ಬೆಳಗ್ಗೆ ಸಚಿವರಾದ ರಮೇಶ ಜಾರಕಿಹೊಳಿ ಮತ್ತು ಕೆ.ಎಸ್. ಈಶ್ವರಪ್ಪ ಹಾಗೂ ಎನ್ ನಾಗೇಶ್ ಅವರು ಸ್ಥಳಕ್ಕೆ ಭೇಟಿ ನೀಡಿ ಸಂಗೊಳ್ಳಿ ರಾಯಣ್ಣ ಹಾಗೂ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಕಳೆದೊಂದು ವಾರದಿಂದ ರಾಜ್ಯದ ಗಮನ ಸೆಳೆದಿತ್ತು. ಬೆಂಗಳೂರು ಸೇರಿ ರಾಜ್ಯದ ಎಲ್ಲಡೆಯಿಂದ ರಾಯಣ್ಣ …
Read More »ತೀವ್ರ ವಿವಾದ ಸೃಷ್ಠಿಸಿದ್ದ ಪೀರನವಾಡಿಯ ಸಂಗೋಳ್ಳಿ ರಾಯಣ್ಣನ ಪುತ್ಥಳಿ ಪ್ರತಿಷ್ಠಾಪನಾ ಸ್ಥಳಕ್ಕೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ.
ಬೆಳಗಾವಿ:ತೀವ್ರ ವಿವಾದ ಸೃಷ್ಠಿಸಿದ್ದ ಪೀರನವಾಡಿಯ ಸಂಗೋಳ್ಳಿ ರಾಯಣ್ಣನ ಪುತ್ಥಳಿ ಪ್ರತಿಷ್ಠಾಪನಾ ಸ್ಥಳಕ್ಕೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದ್ರು. ನಿನ್ನೆಯಷ್ಟೇ ಪೀರನವಾಡಿಯಲ್ಲಿ ವಿವಿಧ ಸಂಘಟನೆಗಳ ವತಿಯಿಂದ ನೂತನವಾಗಿ ಸ್ಥಾಪಿಸಲಾಗಿರುವ ನೂತನ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಚಿವದ್ವಯರು ಪೀರನವಾಡಿ …
Read More »