ಬೆಂಗಳೂರು,ಆ.28-ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಎಂಇಎಸ್, ಶಿವಸೇನೆ ಅಥವಾ ಮತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ …
Read More »ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ದೂರವಾಣಿ ಕರೆ:B.S.Y.
ಬೆಂಗಳೂರು: ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ದೂರವಾಣಿ ಕರೆ ಮಾಡುವ ಮೂಲಕ ಪೀರನವಾಡಿಯಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಮೂರ್ತಿ ಗಲಾಟೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೆನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಳಗಾವಿ ತಾಲ್ಲೂಕಿನ ಪೀರನವಾಡಿ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ಪ್ರತಿಕ್ರಿಯಿಸಿದ ಸಿಎಂ ಅವರು, ಯಾವುದೇ ರೀತಿ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕು. ಎಂದು ಡಿಸಿಗೆ …
Read More »ಪೀರನವಾಡಿ ವಿವಾದ ಜಿಲ್ಲಾಡಳಿತವೇ ಬಗೆ ಹರಿಸಬೇಕು: ಸತೀಶ್ ಜಾರಕಿಹೊಳಿ
ಧಾರವಾಡ: ಪೀರನವಾಡಿ ಸಂಗೊಳ್ಳಿ ರಾಯಣ್ಣ ಮೂರ್ತಿ ವಿವಾದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಸಮಸ್ಯೆಯನ್ನು ಜಿಲ್ಲಾಡಳಿತವೇ ಬಗೆ ಹರಿಸಬೇಕು ಎಂದು ತಿಳಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೀರನವಾಡಿ ವಿವಾದದಲ್ಲಿ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಈ ಸಮಸ್ಯೆಯನ್ನು ಬಗೆ ಹರಿಸಬೇಕು ಎಂದು ಹೇಳಿದರು. ಎರಡು ಸಮಾಜದ ಮುಖಂಡರನ್ನು ಕರೆದು ಸಭೆ ನಡೆಸಬೇಕು. ಅಂದಾಗ ಈ ಸಮಸ್ಯೆ ಬಗೆ ಹರಿಯಲಿದೆ. ಜಿಲ್ಲಾಡಳಿತ ಆದಷ್ಟು ಬೇಗ …
Read More »ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ವ್ಯಕ್ತಿಯಕೊಲೆ
ಬೆಳಗಾವಿ: ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ವ್ಯಕ್ತಿಯನ್ನು ಕೊಲೆಗೈದಿರುವ ಘಟನೆ ಕಾಕತಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಸಲ್ಲಾವುದ್ದಿನ್ ನಜೀರಸಾಬ ಪಕಾಲಿ (32) ಕೊಲೆಯಾದ ವ್ಯಕ್ತಿ. ಅಮರ ಶ್ಯಾಮ ಮೇತ್ರಿ, ಅಖೀಲ ಶಿವಪ್ಪಾ ಮೇತ್ರಿ ಎಂಬ ಇಬ್ಬರು ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಂಬೇಡ್ಕರ್ ಗಲ್ಲಿಯ ಯುವಕರು ಬೇರೊಂದು ಯುವಕರ ಗುಂಪಿನೊಂದಿಗೆ ಗಲಾಟೆ ನಡೆದಿತ್ತು. ಆ ಸಂದರ್ಭದಲ್ಲಿ ಸಲ್ಲಾವುದ್ದಿನ್ ಜಗಳ ಬಿಡಿಸಲು ಹೋಗಿದ್ದನು. ಆ ಸಂದರ್ಭದಲ್ಲಿ ಅಮರ …
Read More », ಧ್ವಜ ಹಿಡಿದು ಸಾಗುತ್ತಿದ್ದ ರಾಯಣ್ಣ ಅಭಿಮಾನಿಗಳ ಮೇಲೆ ಎಂಇಎಸ್ ಯುವಕರು ಚಪ್ಪಲಿ ಎಸೆದ ಘಟನೆ ನಡೆದಿದೆ
ಬೆಳಗಾವಿ: ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಬೆನ್ನಲ್ಲೇ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಧ್ವಜ ಹಿಡಿದು ಸಾಗುತ್ತಿದ್ದ ರಾಯಣ್ಣ ಅಭಿಮಾನಿಗಳ ಮೇಲೆ ಎಂಇಎಸ್ ಯುವಕರು ಚಪ್ಪಲಿ ಎಸೆದ ಘಟನೆ ನಡೆದಿದೆ. ಪೀರನವಾಡಿಯಲ್ಲಿ ಶಿವಾಜಿ ಪ್ರತಿಮೆ ಎದುರೇ ಬೆಳಗಾಗುವಷ್ಟರಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಇದು ಸ್ಥಳೀಯ ಮಾರಾಠಿಗರು ಹಾಗೂ ಕನ್ನಡಿಗರ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದಂತೆಯೇ ಸ್ಥಳದಲ್ಲಿ ಜಮಾವಣೆಗೊಂಡಿದ್ದ ಜನರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ …
Read More »ಶಾಂತಿ ಕಾಪಾಡಲು ಕ್ರಮಕೈಗೊಳ್ಳಿ: ಬೆಳಗಾವಿ ಡಿಸಿಗೆ ಸಿಎಂ ಬಿಎಸ್‌ವೈ ಆದೇಶ..!
ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ನಡೆಯುತ್ತಿರುವ ಗಲಾಟೆಯಲ್ಲಿ ನಡೆಯುತ್ತಿದ್ದು, ಶಾಂತಿ ಕಾಪಾಡಲು ಏನೇನು ಕ್ರಮ ಬೇಕು ಅದೆನ್ನೆಲ್ಲವನ್ನ ಕೈಗೊಳ್ಳಿ ಎಂದು ಬೆಳಗಾವಿ ಡಿಸಿಗೆ ಸಿಎಂ ಬಿಎಸ್‌ವೈ ದೂರವಾಣಿ ಕರೆ ಮಾಡಿ ಆದೇಶ ನೀಡಿದ್ದಾರೆ. ಇನ್ನು ಪೀರನವಾಡಿಗೆ ಬೆಂಗಳೂರಿನಿಂದ ಬೆಳಗಾವಿಗೆ ಹಿರಿಯ ಪೊಲೀಸ್ ಅಧಿಕಾರಿಗಳನ್ನ ಕಳಿಸಲಾಗಿದ್ದು, ಸಮಸ್ಯೆಯನ್ನ ಬಗೆಹರಿಸಲು ಸಿಎಂ ಸೂಚನೆ ನೀಡುದ್ದಾರೆ ಅದಷ್ಟು ಬೇಗ ಸಮಸ್ಯೆ ಬಗೆಹರಿಸುತ್ತೇವೆ. ಎರಡು ಸಮಾಜದ ಜೊತೆ ಹಿರಿಯರು ಮಾತನಾಡುತ್ತೇವೆ ಎಂದು …
Read More »ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಲಿಷ್ಠ ಸಂಭಾವ್ಯ XI ಹೀಗಿದೆ ನೋಡಿ!
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿ ಆರಂಭಗೊಳ್ಳಲು ಇನ್ನು ಮೂರು ವಾರಗಳು ಬಾಕಿ ಉಳಿದಿವೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ಭಾರತದ ಅದ್ದೂರಿ ಕ್ರಿಕೆಟ್ ಟೂರ್ನಿ ನಡೆಯಲಿದೆ. ಎಲ್ಲಾ ಎಂಟು ಫ್ರಾಂಚೈಸಿಗಳು ಈಗಾಗಲೇ ಯುಎಇ ತಲುಪಿದ್ದು, ಅಲ್ಲಿ 6 ದಿನಗಳ ಕಡ್ಡಾಯ ಕ್ವಾರಂಟೈನ್ ಪಾಲಿಸುತ್ತಿವೆ. ಆರ್‌ಸಿಬಿಯ ಕ್ವಾರಂಟೈನ್ ಅವಧಿ ಪೂರ್ಣಗೊಂಡಿದೆ. ಆಗಸ್ಟ್ 27ರ ಗುರುವಾರದಿಂದ 3 ವಾರಗಳ ತರಬೇತಿಯಲ್ಲಿ ಬೆಂಗಳೂರು ತಂಡ ತೊಡಗಿಕೊಳ್ಳಲಿದೆ. ಐಪಿಎಲ್‌ನ ಆಕರ್ಷಣೀಯ …
Read More »”ನಾಯಕತ್ವದ ಯಶಸ್ಸಿಗೆ ಧೋನಿಯ ತಾಳ್ಮೆ ಮತ್ತು ಕೊಹ್ಲಿಯ ಆಕ್ರಮಣಶೀಲತೆ ಎರಡೂ ಅಗತ್ಯ”
ಮುಂಬೈ : ಕ್ರಿಕೆಟ್ ಜಗತ್ತಿನಲ್ಲಿ ಕೆಲವು ವರ್ಷಗಳಿಂದ ಭಾರತ ತಂಡ ಎಲ್ಲಾ ಮಾದರಿಯ ಕ್ರಿಕೆಟ್ನಲ್ಲಿ ಅಧಿಪತ್ಯ ಸಾಧಿಸಿದೆ. ಎಲ್ಲಾ ವಿಭಾಗದಲ್ಲಿ ಅಗ್ರಸ್ಥಾನ ಪಡೆಯುವುದಕ್ಕಾಗಿ ಶ್ರಮಿಸುತ್ತಿದೆ. ಇಷ್ಟೆಲ್ಲಾ ಸಾಧನೆಗೆ ಹಲವಾರು ನಾಯಕರು ಶ್ರಮಿಸಿದ್ದಾರೆ. ತಂಡದಿಂದ ಹಲವು ಮೈಲಿಗಲ್ಲು ನಿರ್ಮಾಣವಾಗಲು ಅವರ ಪಾತ್ರ ಮಹತ್ವದ್ದಾಗಿದೆ. ಆದರೆ ನಾಯಕತ್ವದಲ್ಲಿ ಯಶಸ್ವಿಯಾಗಬೇಕಾದರೆ ಕೆಲವು ಗುಣಗಳು ಅಗತ್ಯವಾಗಿ ಬೇಕಾಗಿವೆ ಎಂದಿರುವ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್, ತಂಡ ಬಲಿಷ್ಠವಾಗಲು ಧೋನಿಯ ತಾಳ್ಮೆಯ ಮನೋಭಾವ ಹಾಗೂ ಕೊಹ್ಲಿಯಲ್ಲಿದ್ದ ಆಕ್ರಮಣಕಾರಿ ಮನೋಭಾವ ಅಗತ್ಯವಾಗಿ …
Read More »ಸ್ಮಶಾನಕ್ಕೆ ಜಾಗ ಮಂಜೂರು ಮಾಡದ ಹಿನ್ನೆಲೆ: ಸರಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ
ಬೆಂಗಳೂರು, : ರಾಜ್ಯದಲ್ಲಿ ಸಂಸ್ಕಾರಕ್ಕೆ ಸ್ಮಶಾನ ಸ್ಥಳವಿಲ್ಲದ ಕಡೆ ಅಗತ್ಯ ಜಮೀನು ಮಂಜೂರು ಮಾಡುವ ಕುರಿತ ನ್ಯಾಯಾಲಯದ ಆದೇಶ ಪಾಲಿಸದ ಸರಕಾರದ ವಿರುದ್ಧ ಸಲ್ಲಿಸಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಈ ಕುರಿತು ಬೆಂಗಳೂರು ನಿವಾಸಿ ಮುಹಮ್ಮದ್ ಇಕ್ಬಾಲ್ ಎಂಬುವರು ಸಲ್ಲಿಸಿದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದಕುಮಾರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ …
Read More »ನೆಲಮಂಗಲ ಬಳಿ ಲಾರಿಗೆ ಕಾರು ಡಿಕ್ಕಿ: ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದ ಮೂವರ ದುರ್ಮರಣ
ನೆಲಮಂಗಲ: ನಿಯಂತ್ರಣ ತಪ್ಪಿದ ಕಾರು ಪಕ್ಕದ ರಸ್ತೆಗೆ ನುಗ್ಗಿ ಗ್ಯಾಸ್ ಲ್ಯಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲ-ಕುಣಿಗಲ್ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬೆಂಗಳೂರು ಪೀಣ್ಯಾ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ್ ನಗರದ ಪುರುಷೋತ್ತಮ್ ,ಚಂದು ಮತ್ತು ನವೀನ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ತುಮಕೂರು ಜಿಲ್ಲೆಯ ತಿಪಟೂರು ನಿವಾಸಿ ಆದಿತ್ಯ ಎಂಬುವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚೇತನ್, ನವೀನ್, ಚಂದು ಮತ್ತು ಆದಿ ಇಟಿಯೋಸ್ ಕಾರಿನಲ್ಲಿ …
Read More »