Breaking News

ಇಡಿ ಸೇರಿ ಸ್ವಾಯತ್ತ ಸಂಸ್ಥೆಗಳ ದುರ್ಬಳಕೆ ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಪಿಎಫ್‍ಐ ಪ್ರತಿಭಟನೆ

ಇಡಿ ಸೇರಿ ಸ್ವಾಯತ್ತ ಸಂಸ್ಥೆಗಳ ದುರ್ಬಳಕೆ ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಪಿಎಫ್‍ಐ ಪ್ರತಿಭಟನೆ ಜಾರಿ ನಿರ್ದೇಶನಾಲಯ (ಇಡಿ) ವನ್ನು ದುರ್ಬಳಕೆ ಮಾಡಬಾರದು ಎಂದು ಆಗ್ರಹಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮುಖಂಡರು ಮತ್ತು ಕಾರ್ಯಕರ್ತರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರ ಪ್ರತಿಪಕ್ಷಗಳ ಮುಖಂಡರು, ಮುಂಚೂಣಿ ಕಾರ್ಯಕರ್ತರ ಮೇಲೆ ಈಡಿ ಮೂಲಕ ದಾಳಿ ನಡೆಸುವ ಮೂಲಕ …

Read More »

ವೇತನ ಕೊಡದ ಕಂಪೆನಿ ವಿರುದ್ಧ ಕಾರ್ಮಿಕರ ಆಕ್ರೋಶ

ಕೋಲಾರ,ಡಿ.12- ಕಳೆದ ನಾಲ್ಕು ತಿಂಗಳಿನಿಂದ ಬಾಕಿ ಉಳಿಸಿಕೊಂಡಿರುವ ವೇತನ ನೀಡಿಲ್ಲ ಎಂದು ಆರೋಪಿಸಿ ಕಾರ್ಮಿಕರು ಕಂಪೆನಿಗೆ ಕಲ್ಲು ತೂರಿ ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರ ಹಾಕಿರುವ ಘಟನೆ ನಗರ ಹೊರ ವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಜಿಲ್ಲೆಯ ಹೊರ ವಲಯದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಸ್ಟ್ರಾನ್ ಕಂಪೆನಿಯ ನೌಕರರಿಗೆ ಕಳೆದ ನಾಲ್ಕು ತಿಂಗಳಿನಿಂದ ವೇತನ ನೀಡದೆ ಇಲ್ಲಸಲ್ಲದ ಸಬೂಬು ಹೇಳಿಕೊಂಡು ಬರುತ್ತಿತ್ತು. ಇದರಿಂದ ರೊಚ್ಚಿಗೆದ್ದ ನೌಕರರು ಏಕಾಏಕಿ ಕಂಪೆನಿಗೆ …

Read More »

ಲಕ್ಷ್ಮಣ್ ಸವದಿ ಬೊಮ್ಮಾಯಿಜತೆ ಸಿಎಂ ಬಿಎಸ್‍ವೈ ಸಭೆ..

ಬೆಂಗಳೂರು,ಡಿ.12- ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಕಾನೂನು ಸುವ್ಯವಸ್ಥೆ ಕುರಿತಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಇಂದು ಮಾತುಕತೆ ನಡೆಸಿದರು. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿದ ಬೊಮ್ಮಾಯಿ ಅವರು, ಸುಮಾರು 30ಕ್ಕೂ ಹೆಚ್ಚು ನಿಮಿಷಗಳ ಕಾಲ ಮಾತುಕತೆ ನಡೆಸಿ ಪರಿಸ್ಥಿತಿಯ ಬಗ್ಗೆ ವಿವರಣೆ ನೀಡಿದರು. ಪ್ರತಿಭಟನೆ ನೆಪದಲ್ಲಿ ಕೆಲವು ಸಮಾಜಘಾತುಕ ಶಕ್ತಿಗಳು ಅಹಿತಕರ ಘಟನೆ ನಡೆಸುವ ಸಾಧ್ಯತೆಯಿದೆ ಎಂಬ ಗುಪ್ತಚರ …

Read More »

ಅನೈತಿಕ ಸಂಬಂಧ ವಿರೋಧ ಹಿನ್ನಲೆ ವಿಷ ಸೇವಿಸಿ, ಅಪ್ರಾಪ್ತೆ ಸಾವು ಯುವಕನ ಸ್ಥಿತಿ ಚಿಂತಾಜನಕ

ರಾಯಚೂರು : ರಾಯಚೂರಿನ ಲಿಂಗಸುಗೂರು ತಾಲೂಕಿನ ಪೈದೊಡ್ಡಿಯಲ್ಲಿ ಅನೈತಿಕ ಸಂಬಂಧಕ್ಕೆ ವಿರೋಧ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆ ಯತ್ನಿಸಿದ್ದು,ಅಪ್ರಾಪ್ತೆ ಸ್ಥಳದಲ್ಲಿ ಸಾವನ್ನಪ್ಪಿದ್ದಾಳೆ,ಯುವಕನ ಸ್ಥಿತಿ ಗಂಭೀರವಾಗಿದೆ. 17 ವರ್ಷದ ಅಪ್ರಾಪ್ತೆ ವಿಷಸೇವನೆಯಿಂದ ಸಾವನ್ನಪ್ಪಿದ್ದಾಳೆ.ಯರಜಂತಿ ಗ್ರಾಮದ ನರಸಪ್ಪನ ಸ್ಥಿತಿ ಗಂಭೀರವಾಗಿದೆ.ಇಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.ನರಸಪ್ಪನಿಗೆ ಮದುವೆಯಾಗಿ ಎರಡು ಮಕ್ಕಳಿವೆ. ಅಪ್ರಾಪ್ತೆಯೊಂದಿಗಿನ ಪ್ರೇಮ‌ ಸಂಬಂಧಕ್ಕೆ ಮನೆಯಲ್ಲಿ ವಿರೋಧ ಹಿನ್ನಲೆ ವಿಷ ಸೇವನೆ ಮಾಡಿದ್ದಾರೆ.  ಈ ಹಿಂದೆ ಅಪ್ರಾಪ್ತೆಯನ್ನ ಯುವಕನಿಂದ ದೂರ ಮಾಡಿ ಬಾಲಮಂದಿರದಲ್ಲಿ ಇರಿಸಲಾಗಿತ್ತು. …

Read More »

ಸರ್ಕಾರ – ನೌಕರರ ಹಗ್ಗಜಗ್ಗಾಟ, ಸಾರಿಗೆ ಮುಷ್ಕರ ನಿಲ್ಲುವ ಲಕ್ಷಣಗಳೇ ಇಲ್ಲ..!

ಬೆಂಗಳೂರು,ಡಿ.12- ಅಪ್ಪ-ಅಮ್ಮನ ಜಗಳದಲ್ಲಿ ಕೂಸು ಬಡವಾಯಿತು ಎಂಬ ಗಾದೆಯಂತೆ ಸಾರಿಗೆ ನೌಕರರು ಹಾಗೂ ಸರ್ಕಾರದ ಪ್ರತಿಷ್ಠೆಯಿಂದಾಗಿ ಸಾರ್ವಜನಿಕರು ಇಂದು ಕೂಡ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಯಾವ ಭಾಗದಲ್ಲೂ ಬಸ್‍ಗಳು ಸಂಚಾರ ಆರಂಭಿಸದ ಹಿನ್ನೆಲೆಯಲ್ಲಿ ಸಾರ್ವಜನಿಕರು ಖಾಸಗಿ ಬಸ್‍ಗಳ ಮೊರೆ ಹೋಗುತ್ತಿದ್ದ ದೃಶ್ಯ ಎಲ್ಲೆಡೆ ಕಂಡುಬಂತು. ಇದರ ನಡುವೆ ಪ್ರತಿಭಟನೆ ಕೈ ಬಿಡದಿದ್ದರೆ ನೌಕರರ ಮೇಲೆ ಎಸ್ಮಾ ಜಾರಿ ಮಾಡುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಯಾವುದೇ …

Read More »

ಬೆಳಗಾವಿಯಲ್ಲಿ ಸಾರಿಗೆ ಸಿಬ್ಬಂದಿ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ‌ ಮೊದಲ ಬಲಿಗೆ

ಬೆಳಗಾವಿಯಲ್ಲಿ ಸಾರಿಗೆ ಸಿಬ್ಬಂದಿ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ‌ ಮೊದಲ ಬಲಿಗೆ ಗೋಕಾಕ ಸಾರಿಗೆ ಸಿಬ್ಬಂದಿಗಳಿಂದ ಮೌನಚಾರಣೆ ಶುಕ್ರವಾರದಂದು ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಮೃತ ದುರದೈವಿ ಬೆಳಗಾವಿಯ ವಡಗಾವಿ ನಿವಾಸಿ ದತ್ತಾ ಮಂಡೊಳ್ಕರ (58)   ಬೆಳಗಾವಿಯ 2 ಘಟಕದಲ್ಲಿ ಬಸ್ ಚಾಲಕನಾಗಿ ಕಾರ್ಯನಿರ್ವಹಿಸುತಿದ್ದರು. ಈ ಸಾವಿಗೆ ನೇರವಾಗಿ ಸರಕಾರ ಕಾರಣವೆನ್ನುತ್ತಿರುವ ಸಾರಿಗೆ ಸಿಬ್ಬಂದಿ ಕೆ,ಎಸ್,ಆರ್ ಟಿ,ಸಿ, ಪ್ರತಿಬಟನೆಯಲ್ಲಿ ನಿರತರಾಗಿದ್ದರು. ಮೃತ ದತ್ತಾ ಮಂಡೊಳ್ಕರ ಇವರಿಗೆ ಮೌನಾಚರಣೆ ಸಲ್ಲಿಸಿದ ಗೋಕಾಕ ಸಾರಿಗೆ …

Read More »

ಬೆಳಗಾವಿಯಲ್ಲಿ ಕೆಎಸ್‍ಆರ್‍ಟಿಸಿ ನೌಕರರ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ ಮೊದಲ ಬಲಿ

      ಬೆಳಗಾವಿಯಲ್ಲಿ ಕೆಎಸ್‍ಆರ್‍ಟಿಸಿ ನೌಕರರ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ ಮೊದಲ ಬಲಿ ನಿನ್ನೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಸ್ ಚಾಲಕನೊರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ. ವಡಗಾವಿಯ ನಿವಾಸಿ ದತ್ತಾ ಮಂಡೋಳ್ಕರ್(58) ಮೃತ ಬಸ್ ಚಾಲಕನಾಗಿದ್ದಾನೆ. ಸರ್ಕಾರಿ ನೌಕರನ್ನಾಗಿ ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾಂಧ್ಯಂತ ಪ್ರತಿಭಟನೆ ನಡೆಯುತ್ತಿದೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕೆಎಸ್‍ಆರ್‍ಟಿಸಿ ಸಿಬ್ಬಂದಿ ಪ್ರತಿಭಟನೆಯಲ್ಲಿ ನಿರತರಾಗಿದ್ದರು. ನಿನ್ನೆ ಶುಕ್ರವಾರ ಪ್ರತಿಭಟನೆಯಲ್ಲಿ …

Read More »

ಅಶೋಕ ಪೂಜಾರಿ ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಅಂತೆ….!!!

  ಬೆಳಗಾವಿ- ಬೆಳಗಾವಿಯ ಮಾಸ್ಟರ್ ಮೈಂಡ್ ಈಗ ಮತ್ತೊಂದು ಮಾಸ್ಟರ್ ಪ್ಲಾನ್ ಮಾಡಿದಂತೆ ಕಾಣುತ್ತಿದೆ.ಲೋಕಸಭಾ ಉಪ ಚುನಾವಣೆಯಲ್ಲಿ ಬೆಳಗಾವಿಯಿಂದ ಅಶೋಕ ಪೂಜಾರಿಯನ್ನು ಕಣಕ್ಕಿಳಿಸುವ ತಯಾರಿ ನಡೆದಿದೆ ಎನ್ನುವ ಸುದ್ಧಿ ಈಗ ಸದ್ದಿಲ್ಲದೇ ಹರಿದಾಡುತ್ತಿದೆ. ಬಿಜೆಪಿಗೆ ಟಕ್ಕರ್ ಕೊಡಲು,ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಗೋಕಾಕಿನ ಅಶೋಕ ಪೂಜಾರಿ ಅವರನ್ನುಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಕಾಂಗ್ರೆಸ್ ಪಕ್ಷದ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಅಶೋಕ ಪೂಜಾರಿ ಇತ್ತೀಚಿಗೆ ಗೋಕಾಕಿನಲ್ಲಿ ನಡೆದ ಸತೀಶ್ …

Read More »

ರೈತ ವಿರುದ್ದ ಕಾಯ್ದೆಯಾಗಿದ್ದರೆ ಜೆಡಿಎಸ್ ವಿರೋಧಿಸುತ್ತಿತ್ತು : ನಮ್ಮ ಪಕ್ಷ ರೈತರ ಪರವಿದೆ

      ಹಾಸನ: ನಮ್ಮ ಜೆಡಿಎಸ್ ಪಕ್ಷವು ರೈತರ ವಿರುದ್ಧ ಇಲ್ಲ. ರೈತರ ಪರವಾಗಿದ್ದು, ಏನಾದರೂ ರೈತರ ವಿರುದ್ಧದ ಕಾಯಿದೆ ಇದ್ದರೇ ನಮ್ಮ ಸಂಪೂರ್ಣ ವಿರೋಧವಿದೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ತಿಳಿಸಿದ್ದಾರೆ.​ ​ಹಾಸನದಲ್ಲಿ ​ಸಂಸದರ ನಿವಾಸದಲ್ಲಿ ಮಾತನಾಡಿದ ಅವರು, “ಭೂಸುಧಾರಣಾ ಕಾಯ್ದೆಗೆ ಈಗಲೂ ನಮ್ಮದು ವಿರೋಧವಿದೆ. ರೈತರಿಗೆ ಕೆಲವು ವಿಷಯ ಮಾರ್ಪಾಡು ಮಾಡುತ್ತೇವೆ ಎಂದಾಗ ನಾವು ಬೆಂಬಲಿಸಿದ್ದೇವೆ. ಕೆಲ ವಿಷಯಗಳನ್ನ ಮಾರ್ಪಾಡು ಮಾಡಿದ ಬಳಿಕ ನಾವು …

Read More »

ಬಸ್ಸಿಗಾಗಿ ಗೋಕಾಕ ತಾಲೂಕಿನ ನಾಗನೂರ ಗ್ರಾಮದ ಮುತ್ತು ಎಂಬ ಪ್ರಯಾಣಿಕ ಬೊಬ್ಬೆ ಹಾಕುವ ಮೂಲಕ ಆಕ್ರೋಶ

ವಿಜಯಪುರ( ಡಿಸೆಂಬರ್​. 11): ಬಸ್ಸಿಗಾಗಿ ಪ್ರಯಾಣಿಕರೊಬ್ಬರು ಬೊಬ್ಬೆ ಹಾಕಿ ಬಸ್ ಬಿಡುವಂತೆ ಅಳಲು ತೋಡಿಕೊಂಡ ಘಟನೆ ವಿಜಯಪುರದಲ್ಲಿ ನಡೆದಿದೆ. ರಾಜ್ಯದ ಕೆಲವೆಡೆ ಸಾರಿಗೆ ನೌಕರರು ಮುಷ್ಕರಕ್ಕೆ ಇಳಿದಿದ್ದರಿಂದ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಆದರೆ, ವಿಜಯಪುರ ಜಿಲ್ಲೆಯಲ್ಲಿ ಮಾತ್ರ ಬೆಳಿಗ್ಗೆಯಿಂದ ಎಂದಿನಂತೆ ಬಸ್ ಸಂಚಾರ ಆರಂಭವಾಗಿತ್ತು. ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿರುವ ವಿಜಯಪುರ ಜಿಲ್ಲಾದ್ಯಂತ ಬಸ್​​ ಗಳು ರೋಡಿಗಿಳಿದಿದ್ದವು. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದ್ದಾಗ ದಿಢೀರನೆ ಪ್ರತಿಭಟನೆಗೆ ಇಳಿದ ಕೆಲವು ಜನ …

Read More »