ಬೆಂಗಳೂರು, ಡಿ.11- ಸಾರಿಗೆ ನೌಕರರ ದಿಢೀರ್ ಪ್ರತಿಭಟನೆಯಿಂದ ಇಂದು ನಗರದ ರಸ್ತೆ ತುಂಬೆಲ್ಲಾ ಆಟೋಗಳದ್ದೇ ಕಾರುಬಾರು. ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಇಂದು ಬೆಳಗ್ಗೆಯಿಂದಲೆ ಸೇವೆಯನ್ನು ಸ್ಥಗಿತಗೊಳಿಸಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದರಿಂದ ಬಸ್‍ಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿತ್ತು. ದೈನಂದಿನ ಕೆಲಸ-ಕಾರ್ಯಗಳಿಗೆ ತೆರಳುವ ಸಾರ್ವಜನಿಕರಿಗೆ ಹಾಗೂ ನೌಕರರಿಗೆ ಭಾರೀ ತೊಂದರೆ ಉಂಟಾಗಿತ್ತು. ಮೊದಲೆ ಕೊರೊನಾದಿಂದ ಬಾಡಿಗೆ ಇಲ್ಲದೆ ಕಂಗಾಲಾಗಿದ್ದ ಆಟೋಚಾಲಕರಿಗೆ ಸಾರಿಗೆ ನೌಕರರ ಪ್ರತಿಭಟನೆ ಬಯಸದೆ ಬಂದ ಭಾಗ್ಯದಂತಾಗಿದೆ. …
Read More »ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ
ಬೆಂಗಳೂರು : ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ಶುಕ್ರವಾರ ನಡೆಸಿದರು. SCP , TSP ಯೋಜನೆಗಳ ಕಾಮಗಾರಿಗಳ ಅನುಷ್ಠಾನ ಮತ್ತು ಕೃಷ್ಣಾ ನದಿಯ ಪ್ರವಾಹ ಕಾಮಗಾರಿಗಳು ಹಾಗೂ ಕೈಗೊಂಡ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚಿಸಿದರು. ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿಸಿ ಪಾಟೀಲ್, ನವಲಗುಂದ ಶಾಸಕ ಶಂಕರ್ ಪಾಟೀಲ್ ಮುನೇನಕೊಪ್ಪ, ಸರ್ಕಾರದ ಅಪರ ಮುಖ್ಯ …
Read More »ಮುಷ್ಕರವನ್ನು ಕೈಬಿಟ್ಟು ಕೆಲಸಕ್ಕೆ ಮರಳುವಂತೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಮನವಿ
ಬೆಂಗಳೂರು: ಸಾರಿಗೆ ನೌಕರರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ಮುಷ್ಕರವನ್ನು ಕೈಬಿಟ್ಟು ಕೆಲಸಕ್ಕೆ ಮರಳುವಂತೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ. ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ, ಸಾರಿಗೆ ನೌಕರರು ಮುಷ್ಕರ ಆರಂಭಿಸಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ತುರ್ತು ಸಭೆ ಕರೆದು ಚರ್ಚಿಸಿರುವ ಸಚಿವ ಲಕ್ಷ್ಮಣ ಸವದಿ ಸಾರಿಗೆ ನೌಕರರ ಮನವೊಲಿಕೆಗೆ ಯತ್ನಿಸಿದ್ದಾರೆ. ರಾಜ್ಯಾದ್ಯಾಂತ ಬಸ್ ಸಂಚಾರ ಸ್ತಬ್ಧವಾಗಿದ್ದು, ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೋವಿಡ್ ನಂತಹ …
Read More »– ಸಾರಿಗೆ ನೌಕರರಿಗೆ ಡಿಸಿ ಅವಾಜ್ ಡ್ಯೂಟಿ ಮಾಡಿ, ಇಲ್ಲ ಮನೆಗೋಗಿ
ಹಾವೇರಿ: ಕೆಎಸ್ಆರ್‌ಟಿಸಿ ನೌಕರರು ಹೋರಾಟ ಹಾವೇರಿಯಲ್ಲಿ ತೀವ್ರ ಕಾವು ಪಡೆದುಕೊಂಡಿದೆ.ವಾಯುವ್ಯ ಸಾರಿಗೆ ಸಂಸ್ಥೆಯ ಡಿಸಿ ಆವಾಜ್ ಗೆ ಡೋಂಟ್ ಕೇರ್ ಎನ್ನದೆ, ಕರ್ತವ್ಯಕ್ಕೆ ಬರೋದಿಲ್ಲ ಅಂತ ಬಸ್ ಬಂದ್ ಮಾಡಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಡ್ಯೂಟಿ ಮಾಡಿ ಇಲ್ಲ ಮನೆಗೋಗಿ, ನಿಮ್ಮ ಮೇಲೆ ಕಂಪ್ಲೆಂಟ್ ಕೊಡ್ತೀನಿ ಅಂತ ನೌಕರರಿಗೆ ಅವಾಜ್ ಹಾಕಿದ ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಜಗ್ಗದೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಬಸ್ ಆರಂಭ ಮಾಡೋದಿಲ್ಲ …
Read More »ಸಾರಿಗೆ ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕು
ಸಾರಿಗೆ ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕು ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕ.ರಾ.ರ.ಸಾ ಸಂಸ್ಥೆಯ ನಾಲ್ಕು ನಿಗಮಗಳ ಸುಮಾರು 1.30 ಲಕ್ಷ ಸಿಬ್ಬಂದಿಗಳನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಹಲವಾರು ಪ್ರತಿಭಟನೆ ನಡೆಸಿದರೂ ಸಕಾರಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಾರಿಗೆ ಸಂಸ್ಥೆಯಲ್ಲಿ ಒಟ್ಟು 1.30 ಲಕ್ಷ ಕಾರ್ಮಿಕರನ್ನೊಳಗೊಂಡ ದೇಶ,ವಿದೇಶಗಳ ಅತ್ಯುನ್ನತ ಸಾರಿಗೆ …
Read More »ಮೇಲಾಧಿಕಾರಿಯ ಕಿರುಕುಳ, ಮಾನಸಿಕ ಹಿಂಸೆಗೆ ಬೇಸತ್ತು, ಪುರಸಭೆ ಆರೋಗ್ಯಾಧಿಕಾರಿಯಾದ ಡಾ.ರವಿಕೃಷ್ಣ ಪಣಚ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿ
ಮಂಗಳೂರು: ಮೇಲಾಧಿಕಾರಿಯ ಕಿರುಕುಳ, ಮಾನಸಿಕ ಹಿಂಸೆಗೆ ಬೇಸತ್ತು, ಪುರಸಭೆ ಆರೋಗ್ಯಾಧಿಕಾರಿಯಾದ ಡಾ.ರವಿಕೃಷ್ಣ ಪಣಚ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ. ಮೇಲಾಧಿಕಾರಿ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಪತ್ರ ಬರೆದಿಟ್ಟು ವಿಷಸೇವಿಸಿ ಡಾ.ರವಿಕೃಷ್ಣ ಪಣಚ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಭೀರ ಸ್ಥಿತಿಗೆ ತಲುಪಿದ್ದ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿಕೃಷ್ಣ, ಪತ್ರದಲ್ಲಿ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಪ್ರತಿದಿನ ಮಾನಸಿಕ ಕಿರುಕುಳ ನೀಡುತ್ತಿದ್ದು, ಕಚೇರಿ ಸಿಬ್ಬಂದಿ …
Read More »ಬಿಜೆಪಿ ಬೆಂಬಲಿಗರೇ ಗೋ ಮಾಂಸ ರಫ್ತು ಮಾಡ್ತಾರೆ: ಸಿದ್ದರಾಮಯ್ಯ
ಬಿಜೆಪಿ ಬೆಂಬಲಿಗರೇ ಗೋ ಮಾಂಸ ರಫ್ತು ಮಾಡ್ತಾರೆ: ಸಿದ್ದರಾಮಯ್ಯ ಗಂಭೀರ ಆರೋಪ ಬೆಂಗಳೂರು: ಮೋದಿಯವರು ಪ್ರಧಾನಿಯಾದ ಬಳಿಕ ಗೋ ಮಾಂಸ ರಫ್ತು ಪ್ರಮಾಣ ಏರಿಕೆಯಾಗಿದೆ. ಅಷ್ಟೇ ಅಲ್ಲ, ಗೋ ಮಾಂಸ ರಫ್ತು ಮಾಡುವವರಲ್ಲಿ ಬಹುತೇಕ ಬಿಜೆಪಿ ಬೆಂಬಲಿತರೇ ಇದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಸಂಬಂಧ ಗೋ ಮಾಂಸ ರಫ್ತು ಮಾಡುವ ಸಂಸ್ಥೆಗಳು ಹಾಗೂ ಅದರ ಮಾಲೀಕರ ಪಟ್ಟಿಯನ್ನೂ ಸಿದ್ದರಾಮಯ್ಯ ನೀಡಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ …
Read More »ಜಿಲ್ಲಾಧಿಕಾರಿ ಕಚೇರಿಯ ಕಟ್ಟಡ ಮೇಲಿಂದ ಬಿದ್ದು, ಆತ್ಮಹತ್ಯೆ ಮಾಡಿಕೊಳ್ಳಲು ಯತ್ನ
ಬೆಳಗಾವಿ : ಸಕ್ಕರೆ ಕಾರ್ಖಾನೆಯವರು ಕಳೆದ 6 ತಿಂಗಳ ವೇತನ ನೀಡಿಲ್ಲೆಂದು ಕಾರ್ಮಿಕನೊರ್ವ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಕಟ್ಟಡ ಮೇಲಿಂದ ಬಿದ್ದು, ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಶುಕ್ರವಾರ ನಡೆದಿದೆ. ವಾಮದೇವ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ರಾಯಬಾಗ ರೇಣುಕಾ ಶುಗರ್ಸ್ ಸಕ್ಕರೆ ಕಾರ್ಖಾನೆ ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿದ್ದೆ. ಆದರೆ ಕೆಲವು ದಿನಗಳ ಹಿಂದೆಯಷ್ಟೇ ನನ್ನನ್ನು ಸೇರಿ ಹಲವರನ್ನು ಬೇರೆಡೆ ವರ್ಗಾವಣೆ ಮಾಡಿದ್ದರು. ನಾನು ವರ್ಗಾವಣೆ ಮಾಡದಂತೆ ಮನವಿ ಮಾಡಿಕೊಂಡಿದ್ದೆ. …
Read More »ಮುಷ್ಕರ ಕೈ ಬಿಡುವಂತೆ ಸಾರಿಗೆ ಸಿಬ್ಬಂದಿಗೆ ಸಿಎಂ ಮನವಿ
ಬೆಂಗಳೂರು:ಸಾರಿಗೆ ಇಲಾಖೆಯಲ್ಲಿ ನಾಲ್ಕು ಕಾರ್ಪೋರೇಶನ್ ಗಳು ಬಹುತೇಕ ಕೊರೋನಾ ಹೊಡೆತಕ್ಕೆ ಎಲ್ಲವೂ ನಷ್ಟದಲ್ಲಿವೆ. ಸಂಬಳಗಳ ಹಂಚಿಕೆಯಲ್ಲಿ ವಿಳಂಬವಾಗಿದೆ, ಇಲ್ಲ ಎಂದು ಯಾರೂ ಹೇಳುತ್ತಿಲ್ಲ, ದುಡ್ಡು ಬಂದ ಮೇಲೆ ಬಿಡುಗಡೆ ಮಾಡಿದ್ದು ಸುಳ್ಳಲ್ಲ, ಸಾರಿಗೆ ಮಂತ್ರಿ, ಮುಖ್ಯಮಂತ್ರಿಗಳು ನಿಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಅನ್ನುವವದು ಸರಿಯಲ್ಲ. ಪುಣ್ಯಕ್ಕೆ ಪಕ್ಕದ ತೆಲಂಗಾಣದ KCR ತರ 48000 ನೌಕರರನ್ನು ಮನೆಗೆ ಕಳಿಸಿಲ್ಲ. ನಿಮ್ಮ ಬೇಡಿಕೆಗಳ ಒತ್ತಾಯಿಸಿ ನಡೆಸುತ್ತಿರುವ ಮುಷ್ಕರ ನ್ಯಾಯ ಸಮ್ಮತವಲ್ಲವೆಂದು ಯಾರೂ ಹೇಳುವದಿಲ್ಲ. …
Read More »ಹಗಲು ರಾತ್ರಿ ದುಡಿಯುವ ನಮಗೂ ಸರಕಾರಿ ನೌಕರರೆನ್ನಿ
ಗೋಕಾಕ : ಎಲ್ಲರಂತೆ ನಾವು ಸಹ ಕಷ್ಟಪಟ್ಟು ದುಡಿಯುವ ಮೂಲಕ ಜನಸಾಮಾನ್ಯರಿಗೆ ಸೇವೆ ಸಲ್ಲಿಸುತ್ತಿದ್ದೇವೆ. ಇದನ್ನು ಅರಿತು ರಾಜ್ಯ ಸರಕಾರ ತಮ್ಮನ್ನು ಸರಕಾರಿ ನೌಕರರು ಎಂದು ಪರಿಗಣಿಸುವಂತೆ ಸಾರಿಗೆ ನೌಕರರು ಗೋಕಾಕದಲ್ಲಿ ಬಸ್ಸುಗಳನ್ನು ಬಂದ್ ಮಾಡಿ ಆಗ್ರಹಿಸಿದರು. ಸಾರಿಗೆ ಸಂಸ್ಥೆಗಳು ಉತ್ತಮ ಲಾಭದೊಂದಿಗೆ ಚಲಿಸುತ್ತಲಿದೆ. ಹೀಗಾಗಿ ಸಂಸ್ಥೆಗೆ ಯಾವುದೇ ನಷ್ಟ ಇಲ್ಲ ನಮಗೆ ಸಂಬಳ, ಇನ್ನಿತರ ಸೌಲಭ್ಯ ನೀಡಿದರೆ ಸರಕಾರದ ಬೊಕ್ಕಸಕ್ಕೆ ನಷ್ಟವಾಗಲಿದೆ ಎನ್ನುವುದು ಸರಿಯಲ್ಲ.ಎಂದು ಪ್ರತಿಭಟನಾಕಾರರು …
Read More »