Breaking News

ಜಿಂದಾಲ್ ಗೆ 3667 ಎಕರೆ ಪರಭಾರೆ : ಸುಪ್ರೀಂ ಕೋರ್ಟ್ ಮೊರೆ ಹೋದ ಸಾಮಾಜಿಕ ಕಾರ್ಯಕರ್ತ

ಬೆಂಗಳೂರು, ಮೇ. 14 : ಕೊರೊನಾ ಕಷ್ಟ ಕಾಲದಲ್ಲಿ ಸಮರ್ಪಕ ರೀತಿಯಲ್ಲಿ ಆಕ್ಸಿಜನ್ ಪೂರೈಕೆ ಮಾಡದೇ ವಿವಾದಕ್ಕೆ ಈಡಾಗಿದ್ದ ಜಿಂದಾಲ್ ಸಂಸ್ಥೆಗೆ ಭೂಮಿ ನೀಡಲು ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಬಳ್ಳಾರಿಯಲ್ಲಿರುವ ಜೆಎಸ್‌ಡಬ್ಲೂ ಸಂಸ್ಥೆಗೆ 3667 ಎಕರೆ ಜಮೀನು ಮಾರಾಟ ಮಾಡಲು ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಸಾಮಾಜಿಕ ಕಾರ್ಯಕರ್ತ ಪೌಲ್ ಎಂಬುವರು ಸುಪ್ರೀಂಕೋರ್ಟ್ ಮುಖ್ಯ …

Read More »

ರಾಜ್ಯದ ಜನತೆಗೆ ಆದಷ್ಟು ಬೇಗ ಲಸಿಕೆ ಕೊಡಿಸಲು ಯತ್ನ: ಸಿಎಂ

ಬೆಂಗಳೂರು : ರಾಜ್ಯದ ಜನತೆಗೆ ಆದಷ್ಟು ಬೇಗ ಲಸಿಕೆ ಕೊಡಿಸಲು ಸರಕಾರ ಸರ್ವ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. ಬಸವ ಜಯಂತಿ ಅಂಗವಾಗಿ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ರಾಜ್ಯಕ್ಕೆ ಅಗತ್ಯವಿರುವ ಲಸಿಕೆ ಪಡೆಯಲು ಗ್ಲೋಬಲ್‌ ಟೆಂಡರ್‌ ಕರೆಯಲಾಗಿದೆ. ಲಸಿಕೆ, ಆಮ್ಲಜನಕ ಹಾಗೂ ಔಷಧ ನೀಡುವಲ್ಲಿ ಕೇಂದ್ರ ಸರಕಾರ ಯಾವುದೇ ತಾರತಮ್ಯ ಮಾಡುತ್ತಿಲ್ಲ. ಈಗ ಎಲ್ಲರೂ ಒಟ್ಟಾಗಿ …

Read More »

ಯುವತಿಯ ಅನುಮಾನಾಸ್ಪದ ಸಾವು, ಕೊಲೆ ಶಂಕೆ : ಪೊಲೀಸರಿಂದ ತೀವ್ರ ವಿಚಾರಣೆ

ಬನಹಟ್ಟಿ : ರಬಕವಿ-ಬನಹಟ್ಟಿ ತಾಲೂಕಿನ ತೇರದಾಳ ಪೊಲೀಸ್ ಠಾಣೆ ವ್ಯಾಪ್ತಿಯ ರಬಕವಿಯ ವಿದ್ಯಾನಗರದಲ್ಲಿ ಗುರುವಾರ ಸಂಜೆ ಹೊತ್ತು ಯುವತಿಯೊಬ್ಬಳು ಮನೆಯಲ್ಲಿಯೇ ತೀವ್ರ ಅಸ್ವಸ್ಥಗೊಂಡ ಪರಿಣಾಮ ಖಾಸಗಿ ಆಸ್ಪತ್ರೆಗೆ ತೆರಳಿದಾಗ ಮೃತಪಟ್ಟಿರುವದಾಗಿ ತಿಳಿದುಬಂದಿದೆ. ರಬಕವಿಯ ರಶ್ಮಿ ಕಿರಣ ಜುಗಳಿ(28) ಮೃತಪಟ್ಟ ದುರ್ದೈವಿಯಾಗಿದ್ದಾಳೆ. ಯುವತಿಯನ್ನು ಹತ್ಯೆ ಮಾಡಿದ್ದು, ಕುತ್ತಿಗೆ ಭಾಗದಲ್ಲಿ ಬಲವಾದ ಕಲೆ ಇರುವದಾಗಿ ಮೃತಳ ತಂದೆ ಪೊಲೀಸರಿಗೆ ತಿಳಿಸಿದ್ದಾರೆ. ಗಂಡನ ಮನೆಯಲ್ಲಿ ಹಲವು ದಿನಗಳಿಂದ ವರದಕ್ಷಿಣೆಗಾಗಿ ಕಿರುಕುಳ ಹಾಗು ಇತರೆ ತೊಂದರೆ …

Read More »

ಬೆಳಗಾವಿ ಜಿಲ್ಲೆಯಲ್ಲಿ 1592 ಪಾಸಿಟಿವ್ ಪ್ರಕರಣ ಪತ್ತೆ : ಹೆಚ್ಚಿದ ಆತಂಕ

ಬೆಳಗಾವಿ: ಕೊರೊನಾ ಪಾಸಿಟಿವ್ ಸಂಖ್ಯೆ ಪ್ರಮಾಣದಲ್ಲಿ ಶುಕ್ರವಾರ ದಿಢೀರ್ ಏರಿಕೆ ಆಗಿದ್ದು, ಒಂದೇ ದಿನ 1592 ಜನರಿಗೆ ಸೋಂಕು ತಗುಲಿದೆ. ಕೆಲ ದಿನಗಳ ಹಿಂದೆ ಸಾವಿರ ಸಮೀಪ ಅಥವಾ ಸಾವಿರದೊಳಗೆ ಪಾಸಿಟಿವ್ ಬರುತ್ತಿದ್ದ ಜಿಲ್ಲೆಯಲ್ಲಿ ಈಗ ಒಂದೇ ದಿನ 1500 ದಾಟಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಒಟ್ಟು 43,557 ಜನರಿಗೆ ಸೋಂಕು ತಗುಲಿದಂತಾಗಿದೆ. ಸದ್ಯ 6583 ಸಕ್ರಿಯ ಪ್ರಕರಣಗಳು ಇವೆ. ಜಿಲ್ಲೆಯಾದ್ಯಂತ ಒಂದೇ ದಿನ 358 ಜನ ಗುಣಮುಖರಾಗಿದ್ದಾರೆ. ಈವರೆಗೆ …

Read More »

ಜನಿ ಪುತ್ರಿಯಿಂದ ಸಿಎಂ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ

ಚೆನ್ನೈ: ಕಾಲಿವುಡ್ ನಟ ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಸೌಂದರ್ಯ ರಜನಿಕಾಂತ್ ಹಾಗೂ ಅವರ ಕುಟುಂಬಸ್ಥರು ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಈ ವಿಚಾರವನ್ನು ಸೌಂದರ್ಯ ರಜನಿಕಾಂತ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸೌಂದರ್ಯ ರಜನಿಕಾಂತ್‍ರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ನನ್ನ ಮಾವ ಶ್ರೀ ಎಸ್.ಎಸ್. ವನಂಗಮುಡಿ, ಪತಿ ವಿಶಾಗನ್, ಅವರ ಸಹೋದರಿ ಮತ್ತು ನಾನು ಇಂದು ಬೆಳಗ್ಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‍ರವರನ್ನು ಭೇಟಿ …

Read More »

ಸದ್ಯದ `ಡಿಸ್ಕೌಂಟ್ ಲಾಕ್‍ಡೌನ್’ ಪೂರ್ಣ ಪ್ರಮಾಣದಲ್ಲಿ ಯಶಸ್ವಿ ಆಗಿಲ್ಲ,ಮೇ 24ರ ನಂತರವೂ ಲಾಕ್‍ಡೌನ್ ಮುಂದುವರಿಕೆ?

ಬೆಂಗಳೂರು: ರಾಜ್ಯದಲ್ಲಿ ಘೋಷಣೆ ಆಗಿರುವ ಲಾಕ್‍ಡೌನ್ ಮೇ 24ರ ನಂತರವೂ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ. ರಾಜ್ಯದಲ್ಲಿ ಇವತ್ತು 41 ಸಾವಿರ ಕೇಸ್, 373 ಮಂದಿ ಮೃತಪಟ್ಟಿದ್ದಾರೆ. ಜೊತೆಗೆ, 5.98 ಲಕ್ಷ ಸಕ್ರಿಯ ಕೇಸ್‍ಗಳೊಂದಿಗೆ ದೇಶದಲ್ಲೇ ಕರ್ನಾಟಕ ನಂಬರ್ 1 ಆಗಿದೆ. ಶೇಕಡವಾರು ಪ್ರಮಾಣದಲ್ಲಿ ಭಾರತದ್ದು 20.80ರಷ್ಟಿದೆ. ಇದರ ಲೆಕ್ಕಾಚಾರದಂತೆ ದೇಶದ ಪ್ರತಿ ಐವರಲ್ಲಿ ಒಬ್ಬರಿಗೆ ಸೋಂಕು ದೃಢವಾಗಿದೆ. ರಾಜ್ಯದಲ್ಲಿ ಸದ್ಯಕ್ಕೆ 32.86% ಪಾಸಿಟೀವ್ ರೇಟ್ ಇದೆ. 10 ಜನರ ಪೈಕಿ …

Read More »

ಗೃಹಸಚಿವ ಬಸವರಾಜ ಬೊಮ್ಮಾಯಿ ಮನೆ, ಇದೀಗ ಕೊವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ

ಹಾವೇರಿ: ಗೃಹಸಚಿವ ಬಸವರಾಜ ಬೊಮ್ಮಾಯಿ ತಮ್ಮ ಮನೆಯನ್ನೇ ಕೊವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸುವ ಮೂಲಕ ಹಾವೇರಿಯಲ್ಲಿ ಮೂಡುತ್ತಿರುವ ಕೊರೋನ ಸೋಂಕನ ಪ್ರಭಾವವನ್ನು ಕಡಿಮೆಗೊಳಿಸಲು ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಸಚಿವರೊಬ್ಬರ ನಿವಾಸವನ್ನು ಕೋವಿಡ್ ಕೇರ್ ಕೇಂದ್ರ ಮಾಡಲಾಗಿದ್ದು, ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿರುವ ಬಸವರಾಜ ಬೊಮ್ಮಾಯಿ ನಿವಾಸದ ವರಾಂಡವನ್ನು ಕೊರೊನಾ ರೋಗಿಗಳ ಚಿಕಿತ್ಸೆಗಾಗಿ ಮಾರ್ಪಡಿಸಿ 50 ಬೆಡ್​ಗಳ ವ್ಯವಸ್ಥೆ ಮಾಡಲಾಗಿದೆ. ಆಕ್ಸಿಜನ್ ವ್ಯವಸ್ಥೆ ಕೂಡ ಅಲ್ಲಿ ಮಾಡಲಾಗಿದೆ. ಇದರಿಂದ …

Read More »

ಕೊರೋನಾ ನಿಯಮ ಉಲ್ಲಂಘನೆ; 448 ವಾಹನ ಜಪ್ತಿ, 3.26 ಕೋಟಿ ರೂ. ದಂಡ ಸಂಗ್ರಹ

ಬೆಂಗಳೂರು: ಕೊರೊನಾ ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದರೂ ಅನೇಕ ಮಂದಿ ನಿಯಮಗಳನ್ನು ಉಲ್ಲಂಘಿಸಿ ಎಲ್ಲೆಡೆ ಸಂಚರಿಸುತ್ತಿದ್ದಾರೆ. ನಿಯಮ ಮೀರಿ ರಸ್ತೆಗಳಿದಿದ್ದ ವಾಹನಗಳನ್ನು ನಗರ ಪೊಲೀಸರು ಗುರುವಾರ ಜಪ್ತಿ ಮಾಡಿದ್ದು, ಅಂತೆಯೇ 3.26 ಕೋಟಿ ರೂ. ದಂಡ ಸಂಗ್ರಹಣೆ ಮಾಡಿದ್ದಾರೆ. ಕಳೆದ 20 ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿ 448 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ 429 ದ್ವಿಚಕ್ರ ವಾಹನ, 11 ತ್ರಿಚಕ್ರ ವಾಹನ, 8 ನಾಲ್ಕು ಚಕ್ರದ ವಾಹನ ಸೇರಿ …

Read More »

ಬ್ಲ್ಯಾಕ್‌ ಫಂಗಸ್‌ ಹಾವಳಿ ಉಲ್ಬಣ; 52 ಮಂದಿ ಬಲಿ

ಮುಂಬೈ: ಒಂದೆಡೆ ಮಹಾಮಾರಿ ಕೋವಿಡ್‌ ಸಾಂಕ್ರಾಮಿಕ ಅಟ್ಟಹಾಸ ತೀವ್ರವಾಗುತ್ತಿದೆ ಇನ್ನೊಂದೆಡೆ, ಬ್ಲ್ಯಾಕ್‌ ಫಂಗಸ್‌ ಹಾವಳಿ ಉಲ್ಬಣಗೊಳ್ಳುತ್ತಿದೆ. ಮಹಾರಾಷ್ಟ್ರದಲ್ಲಿ ಹೊಸ ರೋಗದ 52 ಮಂದಿ ಬಲಿಯಾಗಿದ್ದಾರೆ. ಹೆಚ್ಚು ಕಾಲ ಆಸ್ಪತ್ರೆಗಳಲ್ಲಿ ಉಳಿಯುವ ಕೋವಿಡ್‌ ಸೋಂಕಿತರು ಹಾಗೂ ಸೋಂಕಿನಿಂದ ಗುಣಮುಖರಾಗಿ ಮಲೀನ ಪರಿಸರದಲ್ಲಿ ವಾಸ ಮಾಡುವ ದುರ್ಬಲ ಕಾಯರಿಗೆ ಫಂಗಸ್‌ ರೋಗ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ಹೇಳಲಾಗಿದ್ದು, ಮಹಾರಾಷ್ಟ್ರದಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರೊಂದಿಗೆ ಈ ರೋಗದಿಂದ 52 ಮಂದಿ ಮೃತಪಟ್ಟಿದ್ದಾರೆಂದು …

Read More »

ಲಾಕ್ ಡೌನ್ ಮಧ್ಯಯೇ ಹಸೆಮಣೆ ಏರಿದ ಚಂದನವನದ ಜೋಡಿ

ಬೆಂಗಳೂರು : ಲಾಕ್ ಡೌನ್ ಮಧ್ಯಯೇ ಸಿಂಪಲ್ ಆಗಿ ಹಸೆಮಣೆ ಏರಿದ ಚಂದನವನದ ಜೋಡಿ ಚಂದನ್ ಕುಮಾರ್ ಹಾಗೂ ಕವಿತಾ. ಚಂದನ್ ತಮ್ಮ ಇನ್ಮಾಗ್ರಾಮ್ ನಲ್ಲಿ ಫೋಟೋ ಹಂಚಿಕೊಂಡು ಮನೆ ಮದುವೆ , ಮದುವೆ ಮನೆ . ಗೋರಿಯಸ್ ಆಗಿಲ್ಲ , ಆದರೆ , ಸಂತಸದಿಂದ ತುಂಬಿದೆ ಎಂದು ಬರೆದುಕೊಂಡಿದ್ದಾರೆ . ‘ ಲಕ್ಷ್ಮೀ ಬಾರಮ್ಮ ‘ ಧಾರಾವಾಹಿಯ ಮೂಲಕ ಪರಿಚಿತವಾದ ಈ ಜೋಡಿ ಏ .1 ರಂದು ಎಂಗೇಜೆಂಟ್ …

Read More »