ಬಳ್ಳಾರಿ: ಯುಪಿಎಸ್‍ಸಿ ಪರೀಕ್ಷೆಯಲ್ಲಿ ಇಡೀ ದೇಶಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿರುವ ನಂದಿನಿ ಕೆ.ಆರ್. ಅವರು ಇಂದು ಬಳ್ಳಾರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಮೂಲತಃ ಕೋಲಾರ ಜಿಲ್ಲೆಯ ಕೆಂಬೋಡಿ ಗ್ರಾಮದವರಾದ ನಂದಿನಿ ಅವರು, 2016ರ ಬ್ಯಾಚ್‍ನ ಯುಪಿಎಸ್‍ಸಿ ಪರೀಕ್ಷೆಯಲ್ಲಿ ಟಾಪರ್ ಆಗಿ ಉತ್ತೀಣರಾಗಿದ್ದರು. ಈ ಮೂಲಕ ಇಡೀ ದೇಶದ ಗಮನ ಸೆಳೆದಿದ್ದರು. ಕಡುಬಡತನದ ಹಿನ್ನೆಲೆಯಲ್ಲಿ ಬಂದ ನಂದಿನಿ ಅವರು ಇದೀಗ ಬಳ್ಳಾರಿ ಜಿಲ್ಲಾ ಪಂಚಾಯಿತಿಯ ಮುಖ್ಯ …
Read More »ಭಾರತ ಸಮೀಕ್ಷೆಯಲ್ಲಿ ಮೂರನೇ ಸ್ವಚ್ಛ ನಗರ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮತ್ತೊಂದು ಗರಿಯನ್ನು ಮುಡಿಗೇರಿಸಿಕೊಂಡಿದೆ. ಸ್ವಚ್ಛ ಭಾರತ ಸಮೀಕ್ಷೆಯಲ್ಲಿ ಮೂರನೇ ಸ್ವಚ್ಛ ನಗರ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ಕೇಂದ್ರ ಸರ್ಕಾರ ನಡೆಸುವ ಸ್ವಚ್ಛ ಭಾರತ ಸರ್ವೇಕ್ಷಣೆಯಲ್ಲಿ (ಸಮೀಕ್ಷೆಯಲ್ಲಿ) ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಮೂರನೇ ಸ್ಥಾನ ಬಂದಿದೆ. ಗಣೇಶ ಚತುರ್ಥಿಯ ಮೊದಲ ದಿನ ಕೇಂದ್ರ ಸರ್ಕಾರ ಪ್ರಕಟಿಸಿರುವ ಸ್ವಚ್ಛತಾ ವರದಿಯಲ್ಲಿ ಮೈಸೂರಿಗೆ ಮೊದಲ ಸ್ಥಾನ, ತುಮಕೂರಿಗೆ …
Read More »ಕೋವಿಡ್ ಕೇರ್ ಸೆಂಟರ್ ನಲ್ಲಿ ಇರುವವರಿಗೆ ಹೋಳಿಗೆ ಊಟ:ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ
ದಾವಣಗೆರೆ: ಕೊರೊನಾ ಸೋಂಕು ತಗುಲಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಇರುವವರಿಗೆ ಗಣಪತಿ ಹಬ್ಬ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಇಂದು ಕೋವಿಡ್ ಕೇಸ್ ಸೆಂಟರ್ ನಲ್ಲಿ ಗಣಪತಿ ಹಬ್ಬವನ್ನು ಆಚರಣೆ ಮಾಡಿದ್ದಾರೆ. ದಾವಣಗೆರೆಯ ಮಾದನಬಾವಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿರುವ ಕೋವಿಡ್ ಕೇರ್ ಸೆಂಟರಿನಲ್ಲಿ 150ಕ್ಕೂ ಹೆಚ್ಚು ಪಾಸಿಟಿವ್ ಬಂದಿರುವ ಜನರಿದ್ದು, ರೇಣುಕಾಚಾರ್ಯ ಕುಟುಂಬದ ಹಾಗೂ ಆಪ್ತರ ಜೊತೆ ಸೇರಿ ಕೋವಿಡ್ ಕೇರ್ ಸೆಂಟರ್ …
Read More »ಕೇಂದ್ರ ಸರ್ಕಾರ ಆದೇಶ ಮಾಡಿದೆ. ಆದರೂ ಕೇರಳ ಸರ್ಕಾರ ಮಾತ್ರ ಕರ್ನಾಟಕದ ಗಡಿ ಬಂದ್ ಮಾಡಿ ಉದ್ಧಟತನ ತೋರಿದೆ.
ಮಂಗಳೂರು: ದೇಶದ ಎಲ್ಲಾ ರಾಜ್ಯದ ಗಡಿಗಳನ್ನು ಓಪನ್ ಮಾಡಿ ಅಂತರ್ ರಾಜ್ಯ ಸಂಪರ್ಕಕ್ಕೆ ಅನುವು ಮಾಡಿಕೊಡಲು ಕೇಂದ್ರ ಸರ್ಕಾರ ಆದೇಶ ಮಾಡಿದೆ. ಆದರೂ ಕೇರಳ ಸರ್ಕಾರ ಮಾತ್ರ ಕರ್ನಾಟಕದ ಗಡಿ ಬಂದ್ ಮಾಡಿ ಉದ್ಧಟತನ ತೋರಿದೆ. ಮಂಗಳೂರಿನ ತಲಪಾಡಿಯಲ್ಲಿರುವ ಕೇರಳ ಗಡಿ ಚೆಕ್ ಪೋಸ್ಟ್ ನಲ್ಲಿ ಕೇರಳಕ್ಕೆ ಪ್ರವೇಶಿಸದಂತೆ ಕೇರಳ ಪೊಲೀಸರು ತಡೆಯುತ್ತಿದ್ದಾರೆ. ಕೇರಳದ ಸಿಪಿಎಂ ಸರ್ಕಾರದ ಈ ನಡೆಯಿಂದ ಗಡಿನಾಡ ಕನ್ನಡಿಗರು ಅತಂತ್ರರಾಗಿದ್ದಾರೆ. ತಕ್ಷಣ ಗಡಿಯನ್ನು ಓಪನ್ ಮಾಡಬೇಕೆಂದು …
Read More »ಕೊರೊನಾ ಸೋಂಕು ತಗುಲಿದ ಪತ್ನಿಯನ್ನು ಭೇಟಿಯಾಗಲು ಬಂದಿದ್ದ ವ್ಯಕ್ತಿ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಧಾರವಾಡ: ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕು ತಗುಲಿದ ಪತ್ನಿಯನ್ನು ಭೇಟಿಯಾಗಲು ಬಂದಿದ್ದ ವ್ಯಕ್ತಿ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮುತ್ತುರಾಜ್ ಶಿವಣ್ಣವರ (26) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮುತ್ತುರಾಜ್ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ನಿವಾಸಿ. ಪತ್ನಿಗೆ ಸೋಂಕು ತಗುಲಿದ್ದರಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ 9 ಗಂಟೆಗೆ ಪತ್ನಿ ಭೇಟಿಯಾಗಲು ಮುತ್ತುರಾಜ್ ಆಗಮಿಸಿದ್ದರು. ಈ ವೇಳೆ ಮೂರನೇ …
Read More »ಮುಂಜಾಗ್ರತಾ ಕ್ರಮಗಳೊಂದಿಗೆ ಪದವಿ ಕಾಲೇಜುಗಳನ್ನ ಆರಂಭಿಸಲು ಮುಂದಾಗಿರುವ ಸರ್ಕಾರ
ಬೆಂಗಳೂರು: ಕೊರೊನಾ ಮುಂಜಾಗ್ರತಾ ಕ್ರಮಗಳೊಂದಿಗೆ ಪದವಿ ಕಾಲೇಜುಗಳನ್ನ ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿವೆ. ಸೆಪ್ಟೆಂಬರ್ 1 ರಿಂದ ಆನ್‍ಲೈನ್ ತರಗತಿಗಳು ಮತ್ತು ಅಕ್ಟೋಬರ್ 1 ರಿಂದ ಆಫ್‍ಲೈನ್ ತರಗತಿ ಪ್ರಾರಂಭಿಸಲಾಗುತ್ತಿರುವ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಮೂಲಗಳ ಮಾಹಿತಿ ತಿಳಿದು ಬಂದಿದೆ. ಯುಜಿಸಿ ಸೂಚನೆ ಮೇರೆಗೆ ರಾಜ್ಯದಲ್ಲಿ ತರಗತಿ ಪ್ರಾರಂಭಕ್ಕೆ ಸರ್ಕಾರದ ನಿರ್ಧಾರ ಮಾಡಿದೆ ಎನ್ನಲಾಗಿದೆ. ಅನ್‍ಲಾಕ್ 4.O ಮಾರ್ಗಸೂಚಿಗಾಗಿ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಈ …
Read More »ಕಾಮದಾಹ ತೀರಿಸದ್ದಕ್ಕೆ ಕಲ್ಲು ಎತ್ತಾಕಿ ಕೊಂದು ಅತ್ಯಾಚಾರ…………..
ಹಾಸನ: ಸೋಮವಾರ ರಾತ್ರಿ ರಸ್ತೆ ಪಕ್ಕದಲ್ಲೇ ಮಹಿಳೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕಾಮದ ದಾಹ ತೀರಿಸಲು ಒಪ್ಪದ ನಿರ್ಗತಿಕ ಮಹಿಳೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ, ಬಳಿಕ ಕಾಮುಕ ಅತ್ಯಾಚಾರ ಎಸಗಿದ್ದಾನೆ .ನಗರದ ಬಿಎಂ ರಸ್ತೆಯಲ್ಲಿನ ಎನ್‍ಆರ್ ವೃತ್ತದ ಸಮೀಪವಿರುವ ಶ್ರೀ ಕನ್ನಿಕಾ ಪರಮೇಶ್ವರಿ ಸಹಕಾರಿ ಬ್ಯಾಂಕ್ ಎದುರು ಕೊಲೆ ನಡೆದಿತ್ತು. ಮಹಿಳೆ ಸುಮಾರು 45 ವರ್ಷದವಳಾಗಿದ್ದರು. ತನ್ನ …
Read More »ಬೆಳೆ ಹಾಳಾಗಬಾರದೆಂದು ಪ್ರಾಣ ಒತ್ತೆಯಿಟ್ಟು ಸಾಗಿಸಿದ ರೈತರು…..
ಕೊಪ್ಪಳ: ರೈತರು ತಾವು ಬೆಳೆದ ಬೆಳೆ ಹಾಳಾಗಬಾರದೆಂದು ಪ್ರಾಣವನ್ನೇ ಒತ್ತೆಯಿಟ್ಟು, ಹರಸಾಹಸ ಪಟ್ಟು ಬೆಳೆ ಸಾಗಿಸುತ್ತಿದ್ದಾರೆ. ಪ್ರವಾಹದ ನೀರಿನ ಮಧ್ಯೆ ಬೆಳೆ ಸಾಗಿಸುತ್ತಿರುವ ದೃಶ್ಯ ಎದೆ ಜೆಲ್ ಎನಿಸುತ್ತದೆ ಕೊಪ್ಪಳ ತಾಲೂಕಿನ ಕಾತರಕಿ-ಗುಡ್ಲಾನೂರ ಗ್ರಾಮದ ಬಳಿ ಹಿನ್ನೀರ ಪ್ರದೇಶದಲ್ಲಿ ನೀರು ಆವರಿಸಿದ್ದು ಬೆಳೆದ ಬೆಳೆಯನ್ನು ಸಾಗಿಸಲು ರೈತರು ಹರಸಾಹಸ ಪಡುವಂತಾಗಿದೆ. ತುಂಗಾಭದ್ರಾ ಜಲಾಶಯ ಹಿನ್ನೀರಿನ ಅಚ್ಚುಕಟ್ಟು ಪ್ರದೇಶದಲ್ಲಿ ನೀರು ತುಂಬಿದೆ. ರಸ್ತೆ ಸಂಪೂರ್ಣ ಜಲಾವೃತವಾಗಿರುವುದರಿಂದ ನೀರಿನಲ್ಲೆ ಹರಸಾಹಸ ಪಟ್ಟು ಸಾಗಿಸುವಂತ …
Read More »ಪರಿಹಾರದ ನೀರಿಕ್ಷೆಯಲ್ಲಿದ್ದ ಅತೀವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶದ ಜನರಿಗೆ ನಿರಾಸೆ ಮೂಡಿಸಿದ.B.S.Y.
ಬೆಳಗಾವಿ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರವಾಹ ಪೀಡಿತ ಪ್ರದೇಶದಲ್ಲಿ ಕಾಟಾಚಾರದ ವೈಮಾನಿಕ ಸಮೀಕ್ಷೆ ನಡೆಸಿದ್ದು, ಸಂತ್ರಸ್ತರ ಸಮಸ್ಯೆ ಆಲಿಸಿದೆ ಹಾಗೇ ಬಂದು ಹೀಗೆ ಹೋಗಿದ್ದಾರೆ. ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾನಕ್ಕೆ ಬೆಳಿಗ್ಗೆ 10.30ಕ್ಕೆ ಬಂದಿಳಿದ ಸಿಎಂ ಅವರು ಬೆಳಗಾವಿ, ಧಾರವಾಡ ಜನಪ್ರತಿನಿಧಿ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ ಮಾಡಿದರು. ಆದರೆ ಸುವರ್ಣಸೌಧದ ಮುಂದೆಯೇ ರೈತರು ಪ್ರತಿಭಟನೆ ನಡೆಸಿದರು ಸಹ ಮುಖ್ಯಮಂತ್ರಿಗಳು ಅವರತ್ತ ಸುಳಿಯಲಿಲ್ಲ. …
Read More »ಮಲಪ್ರಭಾ ನದಿಪಾತ್ರದಲ್ಲಿ ಆಗಿರುವ ಅಕ್ರಮ ಒತ್ತುವರಿಯನ್ನು ಆದಷ್ಟು ಬೇಗ ಸರ್ವೇ ಮಾಡಲಾಗುವುದು: ರಮೇಶ್ ಜಾರಕಿಹೊಳಿ
ಬೆಳಗಾವಿ: ಮಲಪ್ರಭಾ ನದಿಪಾತ್ರದಲ್ಲಿ ಆಗಿರುವ ಅಕ್ರಮ ಒತ್ತುವರಿಯನ್ನು ಆದಷ್ಟು ಬೇಗ ಸರ್ವೇ ಮಾಡಲಾಗುವುದು. ಅದಕ್ಕಾಗಿ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ, ಸರ್ವೆ ಕಾರ್ಯ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಬೆಳಗಾವಿ ಮತ್ತು ಆಲಮಟ್ಟಿಯಲ್ಲಿ ಸಿಎಂ ಅವರು, ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚೆ ಮಾಡಿ, ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ಬೆಂಗಳೂರಿನಲ್ಲಿ ನೆರೆ ಪರಿಹಾರ ಕುರಿತು …
Read More »