Breaking News

ಶೀಘ್ರದಲ್ಲಿ ಬಾರ್, ಕ್ಲಬ್, ಪಬ್ ಓಪನ್ ಸಾಧ್ಯತೆ: ಎಚ್.ನಾಗೇಶ್

ಬೆಂಗಳೂರು: ಶೀಘ್ರದಲ್ಲಿ ಬಾರ್, ಕ್ಲಬ್ ಮತ್ತು ಪಬ್ ಓಪನ್ ಆಗುವ ಸಾಧ್ಯತೆ ಇದೆ ಎಂದು ಅಬಕಾರಿ ಸಚಿವ ಎಚ್.ನಾಗೇಶ್ ತಿಳಿಸಿದರು. ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಮಾತನಾಡಿದ ಎಚ್.ನಾಗೇಶ್, ಶೀಘ್ರದಲ್ಲಿ ಬಾರ್, ಕ್ಲಬ್ ಮತ್ತು ಪಬ್ ಓಪನ್ ಆಗುವ ಸಾಧ್ಯತೆ ಇದೆ. ಈ ವಿಚಾರದಲ್ಲಿ ಸಿಎಂ ಜೊತೆಗೆ ನಾನು ಚರ್ಚೆ ನಡೆಸುವೆ. ಬಾರ್ ಮತ್ತು ಪಬ್ ಕಾರ್ಮಿಕರಿಗೆ ತೊಂದರೆಯಾಗಿದೆ. ಕ್ಲಬ್‍ಗಳಲ್ಲಿ ಸ್ಪೋರ್ಟ್ಸ್ ಚಟುವಟಿಕೆಯನ್ನು ಇಂದಿನಿಂದ ಆರಂಭವಾಗಿದೆ. ಅಲ್ಲಿ ಪಾರ್ಸಲ್‍ಗಳಿಗೆ ಮಾತ್ರ ಅನುಮತಿ …

Read More »

ಲಿಫ್ಟ್‌ನಲ್ಲೇ ಶವ- ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ನಿರ್ಲಕ್ಷ್ಯ

ಗದಗ: ಇಲ್ಲಿನ ಜಿಮ್ಸ್ ಆಸ್ಪತ್ರೆ ಸದಾ ವಿವಾದಗಳಿಗೆ ಕಾರಣವಾಗುತ್ತಿದೆ. ಇದೀಗ ಸಿಬ್ಬಂದಿ ಶವವನ್ನು ಲಿಫ್ಟ್ ನಲ್ಲೇ ಬಿಟ್ಟು ಹೋಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಆಸ್ಪತ್ರೆಯ ಲಿಪ್ಟ್‍ನಲ್ಲಿಯೇ ಶವ ಬಿಡುವುದು, ಐಸಿಯು ಬೆಡ್‍ಗಾಗಿ ರೋಗಿಗಳು ಪರದಾಡುವುದು ಜಿಮ್ಸ್ ನಲ್ಲಿ ನಿತ್ಯದ ಕತೆಯಾಗಿದೆ. ಅಂಬುಲೆನ್ಸ್ ಅಸ್ತವ್ಯಸ್ತತೆ ಕಾರಣದಿಂದ ಒಂದು ಕೋವಿಡ್ ಶವವನ್ನು ಬೆಳಗ್ಗೆಯಿಂದ ಸಾಯಂಕಾಲದವರೆಗೆ ಲಿಫ್ಟ್‍ನಲ್ಲೇ ಬಿಡಲಾಗಿತ್ತು ಎನ್ನಲಾಗುತ್ತಿದೆ ಕನಿಷ್ಠ ಶವಾಗಾರದಲ್ಲೇ ಇಟ್ಟು ಅಂಬುಲೆನ್ಸ್ ಬಂದ ನಂತರ ಸಾಗಿಸಬೇಕಿತ್ತು. ಆದರೆ ಸಿಬ್ಬಂದಿ ಲಿಫ್ಟ್ …

Read More »

ಇತರ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಕೆಎಸ್‍ಆರ್‍ಟಿಸಿ ಸಿದ್ಧ

ಬೆಂಗಳೂರು: ದೇಶಾದ್ಯಂತ ಲಾಕ್‍ಡೌನ್ ಸಡಿಲಗೊಳಿಸಿರುವುದರಿಂದ ರಾಜ್ಯದಿಂದ ಇತರ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಕೆಎಸ್‍ಆರ್‍ಟಿಸಿ ಸಿದ್ಧವಾಗಿದ್ದು, ನೆರೆಯ ರಾಜ್ಯಗಳು ಒಪ್ಪಿಗೆ ಸೂಚಿಸಿದರೆ ಇತರೆ ರಾಜ್ಯಗಳಿಗೆ ಬಸ್ ಸಂಚಾರ ಆರಂಭವಾಗಲಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಡಿಸಿಎಂ, ನೆರೆಯ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಕಲ ಸಿದ್ಧತೆ ಮಾಡಿಕೊಂಡಿದೆ. ರಾಜ್ಯಗಳು ಒಪ್ಪಿಗೆ ಸೂಚಿಸಿದರೆ …

Read More »

ಪೀರನವಾಡಿಯ ಬಳಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಕರವೇ ಮನವಿ

ಪೀರನವಾಡಿಯ ಬಳಿ ಸಂಗೊಳ್ಳಿರಾಯಣ್ಣ ಪ್ರತಿಮೆ ಸ್ಥಾಪನೆಗೆಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಕರವೇ ಮನವಿ ಬೆಳಗಾವಿ ಬಳಿಯಿರುವ ಪೀರನವಾಡಿ ಬಳಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗಿರುವ ತಾಂತ್ರಿಕ ಅಡಚಣಿಗಳನ್ನು ನಿವಾರಿಸಿ ಪ್ರತಿಮೆ ಸ್ಥಾಪಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರು ಇಂದು ಮಂಗಳವಾರ ಮುಂಜಾನೆ ಬೆಳಗಾವಿಯಲ್ಲಿ ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ,ರಾಜ್ಯ ಸಂಚಾಲಕ ಮಹಾದೇವ ತಳವಾರ ಅವರ ನೇತೃತ್ವದಲ್ಲಿ ನಿಯೋಗವೊಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರನ್ನು ಭೆಟ್ಟಿಯಾಗಿ ಮನವಿ …

Read More »

ಮೆಕಾಲೆ ಶಿಕ್ಷಣ ವ್ಯವಸ್ಥೆಗೆ ವಿದಾಯ ಹೇಳುವ ಕ್ಷಣ ಸನ್ನಿಹಿತವಾಗಿದೆ : ಸುರೇಶ್ ಕುಮಾರ್

ಬೆಂಗಳೂರು: ಲಾರ್ಡ್ ಮೆಕಾಲೆ ತಳಹದಿಯ ಶಿಕ್ಷಣ ವ್ಯವಸ್ಥೆಗೆ ಇಂದು ನಾವು ವಿದಾಯ ಹೇಳುವ ಕ್ಷಣ ಸನ್ನಿಹಿತವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಬೆಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆದ ಹೊಸ ಶಿಕ್ಷಣ ನೀತಿಯ ಕುರಿತಾದ ಸಂವಾದದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕವಾದ ಬದಲಾವಣೆಗೆ ನಾಂದಿ ಹಾಡಿದ್ದು, ಈ ನೀತಿ ಪ್ರೇರಿತವಾದ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳ ಜ್ಞಾನಾರ್ಜನೆ, ತರ್ಕಬದ್ಧ ಆಲೋಚನೆ …

Read More »

ಎಟಿಎಂ ಸೆಕ್ಯೂರಿಟಿ ಗಾರ್ಡ್ ನನ್ನು ಬರ್ಬರ ಹತ್ಯೆ

ವಿಜಯಪುರ: ಎಟಿಎಂ ಸೆಕ್ಯೂರಿಟಿ ಗಾರ್ಡ್ ನನ್ನು ಬರ್ಬರವಾಗಿ ಹತ್ಯೆಗೈದು ಹಣ ದೋಚಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದೆ.ಸಿಂದಗಿ ಪಟ್ಟಣದ ಶಾಪೂರ ಕಾಂಪ್ಲೆಕ್ಸ್‌ನಲ್ಲಿದ್ದ ಐಸಿಐಸಿಐ ಬ್ಯಾಂಕ್‍ನ ಎಟಿಎಂನಲ್ಲಿ ಈ ಘಟನೆ ನಡೆದಿದೆ. ರಾಹುಲ್ ರಾಠೋಡ್ (22) ಕೊಲೆಯಾದ ಯುವಕ. ಈತ ಜಿಲ್ಲೆಯ ಮದಬಾವಿ ತಾಂಡಾ ನಿವಾಸಿಯಾಗಿದ್ದು, ಐಸಿಐಸಿಐ ಬ್ಯಾಂಕ್ ಎಟಿಎಂನ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನು. ಮಂಕಿ ಕ್ಯಾಪ್ ಹಾಕಿಕೊಂಡು ಬಂದಿದ್ದ ಮೂವರು ಸೋಮವಾರ ರಾತ್ರಿ ಸುತ್ತಿಗೆಯಿಂದ …

Read More »

ಸಚಿವಾಕಾಂಕ್ಷಿಗಳ ಆಸೆಗೆ ತಣ್ಣೀರೆರಚಿದ ವರಿಷ್ಠರು, ಸಂಪುಟ ವಿಸ್ತರಣೆಗೆ ರೆಡ್ ಸಿಗ್ನಲ್

ಬೆಂಗಳೂರು,ಆ.25- ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ಕೇಂದ್ರ ವರಿಷ್ಠರು ರೆಡ್ ಸಿಗ್ನಲ್ ಕೊಟ್ಟಿದ್ದು, ಅವೇಶನ ಆರಂಭದೊಳಗೆ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಆಕಾಂಕ್ಷಿಗಳ ಆಸೆಗೆ ತಣ್ಣೀರೆರಚಿದೆ. ಖಾಲಿ ಇರುವ 6 ಸ್ಥಾನಕ್ಕೆ ಆಕಾಂಕ್ಷಿಗಳ ಪಟ್ಟಿ ಹನುಮಂತನ ಬಾಲದಂತೆ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಅಲ್ಲದೆ ಅವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಮಾಡಿದರೆ ಶಾಸಕರು ಮುನಿಸಿಕೊಳ್ಳಬಹುದೆಂಬ ಕಾರಣಕ್ಕಾಗಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದಿದ್ದರೆ ಸೆಪ್ಟೆಂಬರ್ 21ರಿಂದ ಆರಂಭವಾಗಲಿರುವ ಮಳೆಗಾಲದ ಅವೇಶನಕ್ಕೂ ಮುನ್ನವೇ …

Read More »

ಕಂಡಕಂಡಲ್ಲಿ ಮೂತ್ರ ಮಾಡುವವರಿಗೆ500 ರೂಪಾಯಿ ದಂಡ

ಬೆಂಗಳೂರು, ಆ.25- ಎಚ್ಚರ ಇನ್ನು ಮುಂದೆ ಶೌಚಾಲಯದಲ್ಲಿ ಮೂತ್ರ ಮಾಡಿ, ತುರ್ತು ಎಂದು ಎಲ್ಲೆಂದರಲ್ಲಿ ನಿಂತು ಮೂತ್ರ ಮಾಡಿದರೆ ದಂಡ ಬೀಳಲಿದೆ. ಈವರೆಗೂ ಬೇಕಾಬಿಟ್ಟಿ ಕಸ ಎಸೆಯುವವರನ್ನು ಹಿಡಿದು ದಂಡ ಹಾಕಲಾಗುತ್ತಿತ್ತು. ಕೊರೊನಾ ಸಾಂಕ್ರಾಮಿಕ ಸೋಂಕಿನ ಸಂದರ್ಭದಲ್ಲಿ ಮಾಸ್ಕ್ ಧರಿಸದವರ, ಎಲ್ಲೆಂದರಲ್ಲಿ ಉಗುಳುವವರ ವಿರುದ್ಧ ಬಿಬಿಎಂಪಿ ಮಾರ್ಷಲ್‍ಗಳು ದಂಡ ವಿಸುತ್ತಿದ್ದರು ಇದೇ ಮೊದಲ ಬಾರಿಗೆ ಬೀದಿ ಬದಿಯಲ್ಲಿ ನಿಂತು ಮೂತ್ರ ಮಾಡುವವರಿಗೂ ದಂಡ ಹಾಕಿದ್ದಾರೆ. ವಾರ್ಡ್ ನಂಬರ್ 176ರ ಶಾಖಾಂಬರಿ …

Read More »

ಅನುದಾನವನ್ನು ಕಡಿತಗೊಳಿಸದೆ ಬಿಡುಗಡೆ ಮಾಡುವಂತೆ ಕುಮಾರಸ್ವಾಮಿ ಮುಖ್ಯಮಂತ್ರಿಗಳಿಗೆ ಮನವಿ

ಬೆಂಗಳೂರು: ಶಾಸಕರ ಅನುದಾನವನ್ನು ಕಡಿತ ಮಾಡಬೇಡಿ ಎಂದು ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿಯವರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.ಕೊರೊನಾ ಕಾಲದಿಂದ ಕ್ಷೇತ್ರಗಳ ಅಭಿವೃದ್ಧಿ ಕುಂಠಿತವಾಗಿದೆ. ಹೀಗಾಗಿ ಶಾಸಕರಿಗೆ ನೀಡುವ ಅನುದಾನವನ್ನು ಕಡಿತಗೊಳಿಸದೆ ಬಿಡುಗಡೆ ಮಾಡಿ ಎಂದು ಮನವಿ ಮಾಡಿ ಕುಮಾರಸ್ವಾಮಿಯವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ .ಹಿಂದಿನ ಸರ್ಕಾರದಲ್ಲಿ ಪಕ್ಷಾತೀತವಾಗಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಘೋಷಿಸಲಾಗಿದ್ದ ಅನುದಾನವನ್ನು ಕಡಿತಗೊಳಿಸದೆ ಬಿಡುಗಡೆ ಮಾಡುವಂತೆ ಕುಮಾರಸ್ವಾಮಿ …

Read More »

ಎಪಿಎಂಸಿ ಕಾಯ್ದೆ ತಿದ್ದುಪಡಿ  ವಿರೋಧಿಸಿ  ರೈತರು, ಸಚಿವ ಜಗದೀಶ ಶೆಟ್ಟರ್ ಅವರ ಕಾರಿಗೆ ಮುತ್ತಿಗೆ

ಬೆಳಗಾವಿ:  ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ  ವಿರೋಧಿಸಿ  ರೈತರು, ಸಚಿವ ಜಗದೀಶ ಶೆಟ್ಟರ್ ಅವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಯತ್ನಿಸಿದರು. ಬೆಳಗಾವಿ ಜಿಲ್ಲೆಯಲ್ಲಿ ಅತೀವೃಷ್ಠಿಯಿಂದ ಹಾನಿಯಾದ ಪ್ರದೇಶದಲ್ಲಿ ಮಂಗಳವಾರ ಸಿಎಂ ಯಡಿಯೂರಪ್ಪ ವೈಮಾನಿಕ  ಸಮೀಕ್ಷೆಗೆ ಆಗಮಿಸಿದ್ದು, ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಧಾರವಾಡ ಮತ್ತು ಬೆಳಗಾವಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಸಿಎಂ ಅವರನ್ನು ಭೇಟಿ ಮಾಡಲು  ರೈತ ಮುಖಂಡರು ಮುಂದಾಗಿದ್ದರು. ಆದ್ರೆ  …

Read More »