Breaking News

ಭಾನುವಾರ ಲಾಕ್‍ಡೌನ್ ದಿನ ಕೆಎಸ್‌ಆರ್‌ಟಿಸಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ.

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಕೊರೊನಾ ನಿಯಂತ್ರಣ ರಾಜ್ಯ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಇನ್ನಿಲ್ಲದ ಪ್ರಯತ್ನಗಳನ್ನು ನಡೆಸುತ್ತಿದ್ದು, ಇದೀಗ ಭಾನುವಾರ ಲಾಕ್‍ಡೌನ್ ದಿನ ಕೆಎಸ್‌ಆರ್‌ಟಿಸಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ. ರಾಜ್ಯಾದ್ಯಂತ ಕೊರೊನಾ ಸ್ಫೋಟವಾಗುತ್ತಿದೆ. ಪ್ರತಿ ದಿನ ಸಾವಿರದ ಲೆಕ್ಕದಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಇನ್ನೊಂದೆಡೆ ಸಿಲಿಕಾನ್ ಸಿಟಿ ಕೊರೊನಾ ಹಬ್ ಆಗಿ ಮಾರ್ಪಟ್ಟಿದ್ದು, ಪ್ರತಿ ದಿನ ನೂರಾರು ಪ್ರಕರಣಗಳು ಕಂಡು ಬರುತ್ತಿವೆ. ಸರ್ಕಾರಕ್ಕೆ ಕೊರೊನಾ …

Read More »

ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 14,295 ತಲುಪಿದ್ದು, ಈವರೆಗೆ 226 ಮಂದಿ ಮೃತಪಟ್ಟಿದ್ದಾರೆ.

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ಭಾರತದಲ್ಲಿ ಅಬ್ಬರಿಸುತ್ತಿದ್ದು, ಈವರೆಗೆ 16,796 ಮಂದಿ ಮೃತಪಟ್ಟಿದ್ದಾರೆ. ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಈಗ ಒಟ್ಟು ಸೋಂಕಿತರ ಸಂಖ್ಯೆ 5,62,198 ಕ್ಕೆ ತಲುಪಿದೆ. ಸೋಂಕು ಅತಿ ಹೆಚ್ಚಿನ ಪ್ರಮಾಣದಲ್ಲಿರುವ ಕೆಲ ರಾಜ್ಯಗಳ ವಿವರ ಇಂತಿದೆ. ಮಹಾರಾಷ್ಟ್ರದಲ್ಲಿ 1,69,883 ಮಂದಿ ಸೋಂಕು ಪೀಡಿತರಿದ್ದು, ಈವರೆಗೆ 7,610 ಮಂದಿ ಮೃತಪಟ್ಟಿದ್ದಾರೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 83,077 ಮಂದಿ …

Read More »

ಬೆಂಗ್ಳೂರಲ್ಲಿ ಕೊರೊನಾ ಸ್ಫೋಟ- ಸೆಲ್ಫ್ ಲಾಕ್‍ಡೌನ್ ಹೇರಿಕೊಂಡ ಬಸವನಗುಡಿ ಜನ …..

ಬೆಂಗಳೂರು: ಕೊರೊನಾ ಎಂಬ ವೈರಸ್‍ನ ಕಾಟಕ್ಕೆ ಬೆಂಗಳೂರು ನಲುಗಿ ಹೋಗಿದೆ. ದಿನದಿಂದ ದಿನಕ್ಕೆ ಕೊರೊನಾ ತನ್ನ ಕಬಂದಬಾಹುಗಳನ್ನ ಚಾಚುತ್ತಾ ಸಿಕ್ಕ ಸಿಕ್ಕವರನೆಲ್ಲ ತನ್ನ ತೆಕ್ಕೆಗೆ ಹಾಕಿಕೊಂಡು ಮತ್ತಷ್ಟು ಮಗದಷ್ಟು ಜನರನ್ನ ಕಾಡತ್ತಿದೆ. ಹೆಮ್ಮಾರಿಯಿಂದ ತಪ್ಪಿಸಿಕೊಳ್ಳುವುದಕ್ಕೆ ಲಾಕ್ ಡೌನ್ ಒಂದೇ ಅಸ್ತ್ರ. ಸರ್ಕಾರ ಲಾಕ್ ಡೌನ್ ಮಾಡಲಿಲ್ಲ ಅಂದ್ರೂ ನಾವೇ ಸ್ವಯಂ ಲಾಕ್ ಡೌನ್ ಮಾಡಿಕೊಳ್ಳುತ್ತೇವೆ ಎಂದು ಬೆಂಗಳೂರಿನ ಜನ ಹೇಳುತ್ತಿದ್ದಾರೆ. ಕೊರೊನಾ ಎಂಬ ಹೆಮ್ಮಾರಿ ವೈರಸ್‍ಗೆ ಬೆಂಗಳೂರಿನ ಜನರಲ್ಲಿ ಆತಂಕ …

Read More »

ರೇಣುಕಾ ಯಲ್ಲಮ್ಮದೇವಿ ಸೇರಿದಂತೆ ಮೂರು ದೇವಾಲಯಗಳಿಗೆ ಜುಲೈ 31ರ ತನಕ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಈ ಆದೇಶ ನೀಡಿದೆ.

ಬೆಳಗಾವಿ, ಜೂನ್ 30 : ಸವದತ್ತಿ ರೇಣುಕಾ ಯಲ್ಲಮ್ಮದೇವಿ ಸೇರಿದಂತೆ ಮೂರು ದೇವಾಲಯಗಳಿಗೆ ಜುಲೈ 31ರ ತನಕ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಈ ಆದೇಶ ನೀಡಿದೆ. ಬೆಳಗಾವಿ ಜಿಲ್ಲಾಧಿಕಾರಿ ಡಾ. ಎಸ್. ಬಿ. ಬೊಮ್ಮನಹಳ್ಳಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕೊರೊನಾ ಸೋಂಕು ಹರಡುವ ಆತಂಕ ಮತ್ತು ಭಕ್ತರ ಆರೋಗ್ಯದ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಸವದತ್ತಿ …

Read More »

ಎಂ ಜಿ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ

ಬೆಳಗಾವಿ-ಬೆಳಗಾವಿ ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ಅವರು  ಇಂದು  ಮಂಗಳವಾರ ಸೇವಾ ನಿವೃತ್ತಿಹೊಂದಲಿದ್ದು,ಎಂ ಜಿ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ಬೆಳಗಾವಿ-ಬೆಳಗಾವಿ ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ಅವರು ನಾಳೆ ಮಂಗಳವಾರ ಸೇವಾ ನಿವೃತ್ತಿಹೊಂದಲಿದ್ದು,ಎಂ ಜಿ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂ ಜಿ ಹಿರೇಮಠ ಅವರು ಗದಗ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು ಇವರು ಮೂಲತಹ ಕೆಕೆ ಕೊಪ್ಪ ಗ್ರಾಮದವರು ಎಂದು ತಿಳಿದು ಬಂದಿದೆ. …

Read More »

60 ಜನ ಇರುವ ಅವಿಭಕ್ತ ಕುಟುಂಬದ ಸದಸ್ಯನೋರ್ವನಿಗೆ ಕೊರೊನಾ ಸೋಂಕು

ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ಶಿರಕೋಳ ಗ್ರಾಮಕ್ಕೂ ಕೊರೊನಾ ಪಾದಾರ್ಪಣೆ ಮಾಡಿದೆ. ಶಿರಕೋಳ ಗ್ರಾಮದ 60 ಜನ ಇರುವ ಅವಿಭಕ್ತ ಕುಟುಂಬದ ಸದಸ್ಯನೋರ್ವನಿಗೆ ಕೊರೊನಾ ಸೋಂಕು ತಗುಲಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿದೆ. 60 ಜನ ಇರುವ ಈ ಕುಟುಂಬಸ್ಥರು ಮನೆಯಲ್ಲಿ ಸದಸ್ಯನೊಬ್ಬನಿಗೆ ಸೋಂಕು ತಗುಲಿದ್ದು, ಇದೀಗ ಆ ಕುಟುಂಬದಲ್ಲಿರುವ ಎಲ್ಲ ಸದಸ್ಯರಿಗೂ ಕೊರೊನಾ ಆತಂಕ ಎದುರಾಗಿದೆ. ಅಲ್ಲದೆ ಇಡೀ ಗ್ರಾಮಸ್ಥರು ಕೂಡ ಆತಂಕ ಎದುರಿಸುವಂತಾಗಿದೆ. ಗ್ರಾಮದ 36 ವರ್ಷದ …

Read More »

ಗುಡ್‍ಬೈ ಡ್ಯಾಡಿ, ಅವರು ವೆಂಟಿಲೇಟರ್ ತೆಗೆದು ಹಾಕಿದ್ರು’- ಸಾಯೋ ಮುನ್ನ ಸೆಲ್ಫಿ ವಿಡಿಯೋ ಮಾಡಿ ತಂದೆಗೆ ಕಳಿಸಿದ ಮಗ

ಹೈದರಾಬಾದ್: ಮಹಾಮಾರಿ ಕೊರೊನಾ ವೈರಸ್‍ಗೆ ಬಲಿಯಾಗುವ ಕೆಲವೇ ನಿಮಿಷಗಳ ಮೊದಲು ಸೆಲ್ಫಿ ವಿಡಿಯೋ ಮಾಡಿ 26 ವರ್ಷದ ಯುವಕನೊಬ್ಬ ತನ್ನ ತಂದೆಗೆ ಕಳುಹಿಸಿದ ಕರುಣಾಜನಕ ಘಟನೆಯೊಂದು ನಡೆದಿದೆ. ಹೌದು. ಯುವಕನಿಗೆ ಕೊರೊನಾ ಪಾಸಿಟಿವ್ ದೃಢಪಟ್ಟು ಹೈದರಾಬಾದ್ ನಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಶುಕ್ರವಾರ ರಾತ್ರಿ ಯುವಕ ತನ್ನ ತಂದೆ ಸೆಲ್ಫಿ ವಿಡಿಯೋ ಮಾಡಿ ಕಳುಹಿಸಿದ್ದಾನೆ. ವಿಡಿಯೋದಲ್ಲಿ ಆಸ್ಪತ್ರೆಯ ಬೆಡ್ ನಲ್ಲಿ ಯುವಕ ಮಲಗಿದ್ದಾನೆ. ಅಲ್ಲದೆ ವೈದ್ಯರು ವೆಂಟಿಲೇಟರ್ ತೆಗೆದು …

Read More »

ತೈಲ ಬೆಲೆ ಏರಿಕೆಯನ್ನು ಖಂಡಿಸಿ ಬೀದಿಗೆ ಇಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಮಧ್ಯೆ ಕಾಂಗ್ರೆಸ್‌ ತೈಲ ಬೆಲೆ ಏರಿಕೆಯನ್ನು ಖಂಡಿಸಿ ಬೀದಿಗೆ ಇಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಅಧ್ಯಕ್ಷ ಡಿಕೆ ಶಿವಕುಮಾರ್ , ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ನೂರಾರು ಕಾರ್ಯಕರ್ತರು ಸೈಕಲ್‌ ತುಳಿದ ಪರಿಣಾಮ ಕೆಪಿಸಿಸಿ ಕಚೇರಿ ಇರುವ ಕ್ವೀನ್ಸ್‌ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಆಗಿತ್ತು. ಸಾಮಾಜಿಕ ಅಂತರದ ನಿಯಮವೇ ಉಲ್ಲಂಘನೆ ಆಗಿತ್ತು. ಸಿದ್ದರಾಮಯ್ಯ ಮತ್ತು ಡಿಕೆ …

Read More »

ಪೆಟ್ರೋಲ್, ಡಿಸೆಲ್ ಬೆಲೆ ಏರಿಕೆ ಖಂಡಿಸಿಕಾಂಗ್ರೆಸ್ನಡೆಸಿರುವ ಪ್ರತಿಭಟನೆಗೆ ರಮೇಶ್ ಜಾರಕಿಹೊಳಿ ವ್ಯಂಗ್ಯವಾಗಿಡಿದ್ದಾರೆ.

ಬೆಳಗಾವಿ:  ಪೆಟ್ರೋಲ್, ಡಿಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನಾಯಕರು ನಡೆಸಿರುವ ಪ್ರತಿಭಟನೆಗೆ ಸಚಿವ ರಮೇಶ್ ಜಾರಕಿಹೊಳಿ ವ್ಯಂಗ್ಯವಾಗಿಡಿದ್ದಾರೆ. ನಾವು ಬದುಕಿದ್ದೆವೆ ಎನ್ನುವುದನ್ನು ವಿರೋಧ ಪಕ್ಷಗಳು ತೋರಿಸುತ್ತಿದ್ದಾರೆ ಎಂದಿದ್ದಾರೆ. ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಗಳು ತಮ್ಮ ಕೆಲಸವನ್ನು ಮಾಡಿತ್ತಿವೆ. ನಾವು ಸಹ ಬದುಕಿದ್ದೆವೆ ಎಂಬುವುದನ್ನು ತೋರಿಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿ ನಾನು ಏನು ಮಾಡಿದ್ದೆನೆ ಎಂಬುವುದು ಜನರಿಗೆ ಗೊತ್ತಿದೆ ಎಂದಿದ್ದಾರೆ. ಕೇಂದ್ರ ಸರ್ಕಾರ ಶೀಘ್ರದಲ್ಲಿ ಬಡವರ …

Read More »

ಈ ಹಿಂದೆ ಕೊಳಚೆ ನೀರಿಗೆ ಹೊಲಿಸಿದ್ದ ಸಚಿವ ರಮೇಶ ಜಾರಕಿಹೊಳಿ ಇಂದು ಮತ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಇರುವೆಗೆ ಹೊಲಿಸಿದ್ದಾರೆ. 

ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮತ್ತು ಬೆಳಗಾವಿ ಗ್ರಾಮೀಣ ಕ್ಷೇತ್ರದ  ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಶೀತಲ ಸಮರ ತಾರಕಕ್ಕೇರುತ್ತಿದ್ದು ಇಂದು ಮತ್ತೆ ಸಚಿವ ರಮೇಶ ಲಕ್ಷೀ ಹೆಬ್ಬಾಳ್ಕರ ಅವರಿಗೆ ಟಾಂಗ್ ನೀಡಿದ್ದಾರೆ.  ಈ ಹಿಂದೆ ಕೊಳಚೆ ನೀರಿಗೆ ಹೊಲಿಸಿದ್ದ ಸಚಿವ ರಮೇಶ ಜಾರಕಿಹೊಳಿ ಇಂದು ಮತ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಇರುವೆಗೆ ಹೊಲಿಸಿದ್ದಾರೆ.  ಲಕ್ಷ್ಮೀ ಹೆಬ್ಬಾಳಕರ ಅವರು ನಿಮ್ಮ ಸವಾಲು ಸ್ವೀಕರಿಸಿದ್ದಾರೆ ಎಂದು ಮಾಧ್ಯಮದವರ ಹೇಳಿಕೆಗೆ …

Read More »