Breaking News

ಆರೋಗ್ಯಇಲಾಖೆ ಸಿಬ್ಬಂದಿಯ ಮೇಲೆ ಪೋಲೀಸರ ಹಲ್ಲೆ ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ

ಬೆಳಗಾವಿ  ಆರೋಗ್ಯಇಲಾಖೆ  ಸಿಬ್ಬಂದಿಯ ಮೇಲೆ ಪೋಲೀಸರ ಹಲ್ಲೆ ಖಂಡಿಸಿ ಆರೋಗ್ಯ ಮೇಲ್ವಿಚಾರಕರು ಹಾಗೂ ಆರೋಗ್ಯ ಸಹಾಯಕರ ಜಿಲ್ಲಾ ಸಂಘದ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ, ಪೋಲೀಸ್ ಆಯುಕ್ತರಿಗೆ, ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.         

Read More »

ಕೊರೋನಾ ವೈರಸ್ ತಡೆಗಟ್ಟಲು ಅಧಿಕಾರಿಗಳು , ಜನಪ್ರತಿನಿಧಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ: ಸಚಿವ ರಮೇಶ ಜಾರಕಿಹೊಳಿ ಸೂಚನೆ

ಗೋಕಾಕ :ಕೊರೋನಾ ವೈರಸ್ ಹರಡದಂತೆ ತಡೆಗಟ್ಟಲು ಅಧಿಕಾರಿಗಳು , ಜನಪ್ರತಿನಿಧಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು ರವಿವಾರದಂದು ನಗರದ ತಮ್ಮ ಕಾರ್ಯಾಲಯದಲ್ಲಿ ಕೊರೋನಾ ಮುಂಜಾಗೃತ ಕ್ರಮಗಳ ಕುರಿತು ತಾಲೂಕಾ ಅಧಿಕಾರಿಗಳ ಸಭೆ ನಡೆಸಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಆಕಸ್ಮಿಕವಾಗಿ ದೇಶಾದ್ಯಂತ ಭೀಕರ ಕೊರೋನಾ ವೈರಸ ಅಪ್ಪಳಿಸಿ ಜನರ ಜೀವನವನ್ನೇ ಅಸ್ತವ್ಯಸ್ತ ಗೋಳಿಸಿದೆ ಜನತೆ ಅನಾವಶ್ಯಕವಾಗಿ ಹೊರ ಬರದಂತೆ ಮನೆಯಲ್ಲಿಯೇ ಇದ್ದು ವೈರಸ ಹರಡದಂತೆ ಸಹಕರಿಸಬೇಕು ಅಧಿಕಾರಿಗಳು …

Read More »

ಪುಣೆ ನರ್ಸ್‍ಗೆ ಪ್ರಧಾನಿ ಮೋದಿ ಕರೆ…….

ಮುಂಬೈ: ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಪುಣೆಯ ನಾಯ್ಡು ಆಸ್ಪತ್ರೆಯ ದಾದಿಯೊಬ್ಬರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಆಸ್ಪತ್ರೆಯ ಸಿಬ್ಬಂದಿ ಮಾಡಿದ ಕಾರ್ಯವನ್ನು ಶ್ಲಾಘಿಸಿದ್ದಾರೆ. ಶುಕ್ರವಾರ ಸಂಜೆ ಪ್ರಧಾನಿ ಕಚೇರಿಯಿಂದ ನರ್ಸ್ ಛಾಯ ಜಗ್ತಾಪ್ ಅವರಿಗೆ ಕರೆ ಬಂದಿದೆ ಎಂದು ಪುಣೆ ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿ ಹೇಳಿದ್ದಾರೆ. ಕರೆ ಮಾಡಿ ಮರಾಠಿಯಲ್ಲಿ ಮಾತನಾಡಿದ ಮೋದಿ ಅವರು, ಅವರ ಯೋಗಕ್ಷೇಮದ ಬಗ್ಗೆ ವಿಚಾರಿಸಿದ್ದಾರೆ. …

Read More »

ಭಾರತವೇ ಲಾಕ್ ಡೌನ್ ಆಗಿದೆ. 24 ದಿನದ ಮಗು ಶವಸಂಸ್ಕಾರ ಮಾಡಲು ಸಾಧ್ಯವಾಗದೆ ಪರದಾಡಿದ ಘಟನೆ

ಯಾದಗಿರಿ: ಕೊರೊನಾ ವೈರಸ್ ಭೀತಿಯಿಂದ ಇಡೀ ಭಾರತವೇ ಲಾಕ್ ಡೌನ್ ಆಗಿದೆ. ಈ ಮಧ್ಯೆ  ಬಡ ದಂಪತಿ ತಮ್ಮ 24 ದಿನದ ಮಗುವನ್ನು ಕಳೆದುಕೊಂಡು ಶವಸಂಸ್ಕಾರ ಮಾಡಲು ಸಾಧ್ಯವಾಗದೆ ಪರದಾಡಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಜಿಲ್ಲೆಯ ಶಹಾಪೂರ ಪಟ್ಟಣದಲ್ಲಿ 25 ದಿನದ ಕಂದನನ್ನು ಕಳೆದುಕೊಂಡ ಪೋಷಕರು ಶವ ಸಂಸ್ಕಾರ ಪರದಾಡುತ್ತಿರುವಾಗ ಪೌರ ಕಾರ್ಮಿಕರು ನೆರವಿಗೆ ನಿಂತಿದ್ದಾರೆ. ಮಗುವಿನ ಅಂತ್ಯಕ್ರಿಯೆ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.ಉತ್ತರ ಪ್ರದೇಶ ಮೂಲದ ಕಲ್ಯಾಣಸಿಂಗ್ ಎಂಬ ವ್ಯಕ್ತಿಯ …

Read More »

ಐಸೋಲೇಷನ್ ವಾರ್ಡಿಗೆ ಮಾಸ್ಕ್ ಧರಿಸದೇ ಶ್ರೀರಾಮುಲು ಭೇಟಿ:

ರಾಮನಗರ: ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು ಸೋಂಕಿತರ ಸಂಖ್ಯೆಯೂ ಹೆಚ್ಚಳವಾಗ್ತಿದ್ದರೆ, ಜನರಲ್ಲಿ ಅರಿವು ಮೂಡಿಸಬೇಕಾದ ಆರೋಗ್ಯ ಸಚಿವರೇ ಕೇರ್‍ಲೆಸ್ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರದಲ್ಲಿ ಇಂದು ಜಿಲ್ಲಾಡಳಿತದಿಂದ ತೆಗೆದುಕೊಂಡಿರುವ ಕೊರೊನಾ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ್ರು. ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ಮೂಲಕ ಕೊರೊನಾ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಾದ ಆರೋಗ್ಯ …

Read More »

ಚೆನ್ನೈ:ಕ್ವಾರಂಟೈನ್‍ನಲ್ಲಿದ್ದು ಹುಚ್ಚನಾದ – ಮನೆಯಿಂದ ಬೆತ್ತಲಾಗಿ ಓಡಿ ವೃದ್ಧೆಯ ಕತ್ತು ಕಚ್ಚಿ ಕೊಂದ

ಚೆನ್ನೈ: ವಿದೇಶದಿಂದ ಭಾರತಕ್ಕೆ ಬಂದು ಹೋಂ ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿಯೋರ್ವ ಮನೆಯಲ್ಲಿಯಿದ್ದು ಹುಚ್ಚನಾಗಿ, ರಾತ್ರಿ ಮನೆಯಿಂದ ಬೆತ್ತಲಾಗಿ ಓಡಿ ಹೋಗಿ ವೃದ್ಧೆಯೊಬ್ಬರ ಕತ್ತು ಕಚ್ಚಿ ಕೊಲೆಮಾಡಿದ ಭಯಾನಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಥೇನಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಥೇನಿ ನಿವಾಸಿ ನಾಟ್ಚಿಯಮ್ಮಾಲ್(90) ಮೃತ ದುರ್ಧೈವಿ. ಕೆಲವು ದಿನಗಳ ಹಿಂದೆ ಶ್ರೀಲಂಕಾದಿಂದ ಭಾರತಕ್ಕೆ ವಾಪಾಸ್ ಬಂದಿದ್ದ ವ್ಯಕ್ತಿಯನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ಮನೆಯಲ್ಲೇ ಇದ್ದು ಇದ್ದು ಆತ ಮಾನಸಿಕವಾಗಿ …

Read More »

ಕೊರೊನಾ ವಿರುದ್ಧ ಹೋರಾಡಲು ಸಂಭಾವ್ಯ ಲಸಿಕೆ ಅಭಿವೃದ್ಧಿಪಡಿಸಿದ ಹೈದರಾಬಾದ್ ವಿವಿ

ಹೈದರಾಬಾದ್: ವಿಶ್ವವ್ಯಾಪಿ ಹರಡುತ್ತಿರುವ ಮಹಾಮಾರಿ ಕೊರೊನಾ ವೈರಸ್ ಸೋಂಕಿಗೆ ಹೈದರಾಬಾದ್‍ನ ವಿಶ್ವವಿದ್ಯಾಲಯ ಸಂಭಾವ್ಯ ಲಸಿಕೆಯನ್ನು ಅಭಿವೃದ್ಧಿಗೊಳಿಸಿದೆ. ಸ್ಕೂಲ್ ಆಫ್ ಲೈಫ್ ಸೈನ್ಸ್ ಜೀವ ರಾಸಾಯನಿಕ ವಿಭಾಗದ ಅಧ್ಯಾಪಕಿ ಡಾ. ಸೀಮಾ ಮಿಶ್ರಾ ಅವರು ‘ಟಿ ಸೆಲ್ ಎಪಿಟೋಪ್ಸ್’ ಎಂಬ ಸಂಭಾವ್ಯ ಲಸಿಕೆಯನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಬಗ್ಗೆ ಹೈದರಾಬಾದ್ ವಿಶ್ವವಿದ್ಯಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದ್ದು, ಈ ಲಸಿಕೆಯನ್ನು ಕೊರೊನಾ ವೈರಸ್ ವಿರುದ್ಧ ಪ್ರಾಯೋಗಿಕ ಪರೀಕ್ಷೆಗೆ ಒಳಪಡಿಸಲಾಗುವುದು ಎಂದಿದೆ. ಪ್ರಾಧ್ಯಾಪಕಿ ಡಾ. ಸೀಮಾ …

Read More »

ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತ್ಯ 8 ಲಕ್ಷ ಲೀಟರ್ ಹಾಲು ಮಾರಾಟವಾಗದೇ ಉಳಿಯುತ್ತಿದೆ:ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಹೇರಲಾಗಿರುವ ಲಾಕ್‍ಡೌನ್‍ನಿಂದಾಗಿ ನಂದಿನಿ ಹಾಲು ಹಾಗೂ ಮೊಸರಿಗೆ ಬೇಡಿಕೆ ಕುಸಿದಿದೆ. ನಿತ್ಯ 8 ಲಕ್ಷ ಲೀಟರ್ ಹಾಲು ಮಾರಾಟವಾಗದೇ ಉಳಿಯುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದಲ್ಲಿ ಶನಿವಾರ ಕೆಎಂಎಫ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕೊರೊನಾ ವೈರಸ್ ಹರಡುವಿಕೆ ತಡೆಯಲು ಕೆಎಂಎಫ್ ಕೂಡ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಹಾಲು ಉತ್ಪಾದಕರ ಸಂಘಗಳಲ್ಲಿ …

Read More »

ಪ್ರಧಾನಿ ಪರಿಹಾರ ನಿಧಿಗೆ ಬರೋಬ್ಬರಿ 25 ಕೋಟಿ ರೂ. ನೀಡಿದ ನಟ ಅಕ್ಷಯ್ ಕುಮಾರ್..!

ನವದೆಹಲಿ : ಕೊರೋನಾ ಮಹಾಮಾರಿ ಪ್ರಪಂಚದಾದ್ಯಂತ ಮರಣಮೃದಂಗ ಬಾರಿಸುತ್ತಾ ಅಟ್ಟಹಾಸ ಮೆರೆಯುತ್ತಿದೆ. ಕಿಲ್ಲರ್ ಕೊರೋನಾ ವಿರುದ್ಧ ಭಾರತ ಲಾಕ್ ಡೌನ್ ಹೋರಾಟ ಮಾಡುತ್ತಿದೆ. ಇದೆ ಹೊತ್ತಲ್ಲಿ ಪ್ರಧಾನಿ ಮೋದಿ ದೇಶವಾಸಿಗಳಲ್ಲಿ ಹಣಕಾಸಿನ ನೆರವನ್ನು ಕೋರಿದ್ದಾರೆ. ಈ ಕೊರೊನಾ ನಿಯಂತ್ರಣ ಕ್ರಮಕ್ಕಾಗಿ ದೇಶದ ಜನರು ಕೈಜೋಡಿಸಿ, ಹಣಕಾಸಿನ ನೆರವನ್ನು ನೀಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಕ್ಷಣಮಾತ್ರದಲ್ಲೇ ಸ್ಪಂದಿಸಿದ ಬಾಲಿವುಡ್ ನಟ ಅಕ್ಷಯ್ ಕುಮಾರ್ ತಮ್ಮ ಉಳಿತಾಯದಿಂದ ಬರೋಬ್ಬರಿ 25 ಕೋಟಿ ರೂ. …

Read More »

ಆರ್ ಬಿಐ ಸೂಚನೆ ನೀಡಿದೆ ಆದ್ರೆ ಫೈನಾನ್ಸ್ ಸಿಬ್ಬಂದಿ ರೈತರ ಸಾಲ ಪಾವತಿಸುವಂತೆ ಮನೆಗೆ ಹೋಗಿ ಕಿರುಕುಳ : ಲಕ್ಷ್ಮಣ ಸವದಿ ಅವರ ಸ್ವಕ್ಷೇತ್ರದಲ್ಲಿ

ಅಥಣಿ:  ರಾಷ್ಟ್ರೀಕೃತ, ಸಹಕಾರಿ ಮತ್ತು ಗ್ರಾಮೀಣ ಬ್ಯಾಂಕುಗಳ ಎಲ್ಲಾ ಸಾಲಗಳ ಇಎಂಐ ಮೂರು ತಿಂಗಳು ವಿನಾಯ್ತಿ ನೀಡಿ ಆರ್ ಬಿಐ ಸೂಚನೆ ನೀಡಿದೆ. ಆದ್ರೆ  ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಸ್ವಕ್ಷೇತ್ರದಲ್ಲಿಯೇ ಫೈನಾನ್ಸ್ ಸಿಬ್ಬಂದಿ ರೈತರ ಸಾಲ ಪಾವತಿಸುವಂತೆ ಮನೆಗೆ ಹೋಗಿ ಕಿರುಕುಳ ನೀಡುತ್ತಿರುವ ಪ್ರಕರಣ ಪ್ರಕರಣ ಬೆಳಕಿಗೆ ಬಂದಿದೆ. ಅಥಣಿ  ತಾಲೂಕಿನ ಸುಟ್ಟಟ್ಟಿ ಗ್ರಾಮದ ರೈತ ಮಾಹವೀರ ವೀರಗೌಡ ಎಂಬುವವರು ವಿಸ್ತಾರ ಫೈನಾನ್ಸ್ ನಿಂದ ಸಾಲ ಪಡೆದಿದ್ದರು.  ಸದ್ಯ …

Read More »