ಬೆಂಗಳೂರು: ಕರ್ನಾಟಕಕ್ಕೆ ಬೇರೆ ರಾಜ್ಯಗಳಿಂದ ಬರೋ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಸರಕುಗಳ ಅಂತರ-ರಾಜ್ಯ ಚಲನೆಗೆ ಯಾವುದೇ ನಿರ್ಬಂಧಗಳಿರುವದಿಲ್ಲ. ಅಂತರ-ರಾಜ್ಯ ಪ್ರಯಾಣಕ್ಕೆ ಸಂಬಂಧಿಸಿದಂತೆ ಹಿಂದಿನ ಎಲ್ಲ ಸುತ್ತೋಲೆಗಳನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ. ಸೇವಾಸಿಂಧು ಪೋರ್ಟಲ್ ನಲ್ಲಿ ನೋಂದಣಿ, ಗಡಿ ಭಾಗಗಳಲ್ಲಿ ವೈದ್ಯಕೀಯ ತಪಾಸಣೆ, ಜಿಲ್ಲೆಗಳಲ್ಲಿ ತಪಾಸಣೆ, ಪ್ರಯಾಣಿಕರ ವರ್ಗೀಕರಣ, ಕೈಗಳ ಮೇಲೆ ಮುದ್ರೆ, ಮನೆ ಬಾಗಿಲುಗಳಿಗೆ ಪೋಸ್ಟರ್ ಹಚ್ಚುವಿಕೆ ಈ ಎಲ್ಲ ಷರತ್ತುಗಳನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರಿಗೆ ಸರ್ಕಾರ …
Read More »ಅತಿವೃಷ್ಟಿ: ಜಿಲ್ಲೆಯಲ್ಲಿ 972 ಕೋಟಿ ಹಾನಿ: ಸಚಿವ ರಮೇಶ್ ಜಾರಕಿಹೊಳಿ
ಅತಿವೃಷ್ಟಿ: ಜಿಲ್ಲೆಯಲ್ಲಿ 972 ಕೋಟಿ ಹಾನಿ: ಸಚಿವ ಜಾರಕಿಹೊಳಿ ಬೆಳಗಾವಿ, ಆ. 24(ಕರ್ನಾಟಕ ವಾರ್ತೆ): ಇತ್ತೀಚೆಗೆ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಉಂಟಾಗಿರುವ ಬೆಳೆ, ಮನೆಗಳು ಹಾಗೂ ಮೂಲಸೌಕರ್ಯಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 972 ಕೋಟಿ ರೂಪಾಯಿ ಹಾನಿಯಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದರು. ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಹಿಡಕಲ್ ಜಲಾಶಯದ ಬಳಿಯ ಸಭಾಭವನದಲ್ಲಿ …
Read More »ಕರ್ನಾಟಕ-ಮಹಾರಾಷ್ಟ್ರ-ಗೋವಾ ಮಧ್ಯಭಾಗದಲ್ಲಿರುವ ಅಂಬೋಲಿ ಫಾಲ್ಸ್ ಜಲವೈಭವ ನೋಡುಗರ ಕಣ್ಣಿಗೆ ಹಬ್ಬ.
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ-ಗೋವಾ ಮಧ್ಯಭಾಗದಲ್ಲಿರುವ ಅಂಬೋಲಿ ಫಾಲ್ಸ್ ಜಲವೈಭವ ನೋಡುಗರ ಕಣ್ಣಿಗೆ ಹಬ್ಬ. ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆ ಸಾವಂತವಾಡಿ ತಾಲೂಕಿನ ಅಂಬೋಲಿಯಲ್ಲಿರುವ ಈ ಜಲಪಾತ ಕಿಂಗಡಮ್ ಆಫ್ ಫಾಲ್ಸ್ ಅಂತಾನೇ ಫೇಮಸ್. ವರ್ಷಧಾರೆಗೆ ಮೈದುಂಬಿರುವ ಈ ಜಲಧಾರೆ ಪ್ರತಿವರ್ಷ ಪ್ರವಾಸಿಗರನ್ನು ಹರ್ಷದ ಹೊನಲಿನಲ್ಲಿ ಮಿಂದೇಳಿಸುತ್ತಿತ್ತು. ಆದರೆ ಈ ಬಾರಿ ಮಾತ್ರ ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಈ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶವಿಲ್ಲ. ಆದರೆ ಈ ಮಾರ್ಗವಾಗಿ ಸಂಚರಿಸುವ ಜನರು ಕೆಲವು ಕ್ಷಣಗಳ …
Read More »ಗ್ರಾಮದಲ್ಲಿ ಯಾರಾದರೂ ಮೃತಪಟ್ಟರೆ ಶವಸಂಸ್ಕಾರಕ್ಕೆ ಸ್ಮಶಾನ ಇಲ್ಲ.
ಚಾಮರಾಜನಗರ: ಗ್ರಾಮದಲ್ಲಿ ಯಾರಾದರೂ ಮೃತಪಟ್ಟರೆ ಶವಸಂಸ್ಕಾರಕ್ಕೆ ಸ್ಮಶಾನ ಇಲ್ಲ. ಅಂತ್ಯ ಸಂಸ್ಕಾರ ಮಾಡಬೇಕೆಂದರೆ ಶವ ಹೊತ್ತು ನದಿ ದಾಟಿ, ಅಲ್ಲಿರುವ ಜಮೀನುಗಳಲ್ಲೇ ಹೆಣ ಹೂಳಬೇಕು. ಇದು ಇಂದು ನಿನ್ನೆಯ ಸಮಸ್ಯೆಯಲ್ಲ ವರ್ಷಗಟ್ಟಲೆ ಗ್ರಾಮಸ್ಥರು ಪಡುತ್ತಿರುವ ಕಷ್ಟ. ಜಿಲ್ಲೆಯ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಇಂತಹ ಗಂಭೀರ ಸಮಸ್ಯೆ ಇದ್ದರೂ ಜನಪ್ರತಿನಿಧಿಗಳು, ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ನದಿ ದಾಟಲು ಇತ್ತೀಚೆಗೆ ಗ್ರಾಮಸ್ಥರೇ ಮರದ ಹಲಗೆಗಳ ಸೇತುವೆ ನಿರ್ಮಿಸಿಕೊಂಡಿದ್ದಾರೆ. ಹೆಣ …
Read More »ಬಿಗ್ ನ್ಯೂಸ್ : ಸೋನಿಯಾ ರಾಜೀನಾಮೆ ಮತ್ತು ರಾಹುಲ್ ಯಡವಟ್ಟಿನಿಂದ ಅಲ್ಲಾಡುತ್ತಿದೆ ಕಾಂಗ್ರೆಸ್ ಬುಡ….!
ಬೆಂಗಳೂರು, ಆ.24- ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಪಕ್ಷದ ಸಾರಥ್ಯವನ್ನು ತ್ಯಜಿಸಿದ ಬೆನ್ನಲ್ಲೇ ಪಕ್ಷದಲ್ಲಿ ಹಿರಿಯ ನಾಯಕರ ಬಗ್ಗೆ ರಾಹುಲ್ಗಾಂ ನೀಡಿದ ಹೇಳಿಕೆ ಅಲ್ಲೋಲ ಕಲ್ಲೋಲ ಉಂಟು ಮಾಡಿದೆ. ನಾಯಕತ್ವ ಬದಲಾವಣೆ ಹಾಗೂ ಗಾಂ ಕುಟುಂಬೇತರರಿಗೆ ನಾಯಕತ್ವ ನೀಡಬೇಕೆಂದು ಕಾಂಗ್ರೆಸ್ನ 23 ಹಿರಿಯ ಧುರೀಣರು ಬರೆದಿರುವ ಪತ್ರ ಕುರಿತು ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ರಾಹುಲ್ಗಾಂಧಿ ನೀಡಿದ ಹೇಳಿಕೆ ಹಿರಿಯ ಕಾಂಗ್ರೆಸಿಗರಲ್ಲಿ ತೀವ್ರ ಅಸಮಾಧಾನ ಉಂಟು ಮಾಡಿರುವುದರ ಜತೆಗೆ 130 ವರ್ಷಗಳ ಇತಿಹಾಸದ ಕಾಂಗ್ರೆಸ್ನಲ್ಲಿ …
Read More »ವಿಧಾನ ಪರಿಷತ್ತಿನ ಸಭಾಂಗಣದಲ್ಲೇ ಈ ಬಾರಿಯ ಮಳೆಗಾಲದ ಅಧಿವೇಶನ ನಡೆಸಲಾಗುವುದು
ಬೆಂಗಳೂರು, ಆ.24-ವಿಧಾನಸಭಾ ಸಭಾಂಗಣ ಹಾಗೂ ವಿಧಾನ ಪರಿಷತ್ತಿನ ಸಭಾಂಗಣದಲ್ಲೇ ಈ ಬಾರಿಯ ಮಳೆಗಾಲದ ಅಧಿವೇಶನ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ತಿಳಿಸಿದರು. ಪ್ರಸಕ್ತ 15ನೇ ವಿಧಾನಸಭೆಯ 7ನೇ ಅಧಿವೇಶನ ನಡೆಸುವ ಸಾಧ್ಯಾಸಾಧ್ಯತೆ ಕುರಿತಂತೆ ಇಂದು ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು , ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಿಜಯಭಾಸ್ಕರ್, ವಿಧಾನಸಭೆಯ ಹಿರಿಯ ಅಧಿಕಾರಿಗಳೊಂದಿಗೆ ವಿಧಾನಸಭೆಯ ಸಭಾಂಗಣವನ್ನು ವೀಕ್ಷಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಅಧಿವೇಶನಕ್ಕೆ ಸಾಮಾಜಿಕ …
Read More »ಹಿರಿಯ ನಾಯಕರ ಮೇಲೆ ಚಿತ್ರ ನಟಿ, ಮಾಜಿ ಸಂಸದೆ ರಮ್ಯಾ ಕಿಡಿ
ಬೆಂಗಳೂರು, ಆ.24- ರಾಹುಲ್ ಗಾಂಧಿ ಅವರ ವಿರುದ್ಧದ ಪತ್ರವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ ಹಿರಿಯ ನಾಯಕರ ಮೇಲೆ ಚಿತ್ರ ನಟಿ, ಮಾಜಿ ಸಂಸದೆ ರಮ್ಯಾ ಕಿಡಿಕಾರಿದ್ದಾರೆ. ಪತ್ರವೊಂದನ್ನು ಸೋರಿಕೆ ಮಾಡುವ ಮೂಲಕ ಮಾಧ್ಯಮಗಳಿಗೆ ಎಐಸಿಸಿ ಕಾರ್ಯಕಾರಿ ಸಮಿತಿ ಸಭೆಯ ಪ್ರತಿನಿಮಿಷದ ಬೆಳವಣಿಗೆಗಳನ್ನು ಚರ್ಚಿಸಲು ಆಹಾರ ಒದಗಿಸಿದ್ದಾರೆ ಅದ್ಭುತ ಎಂದು ರಮ್ಯ ವ್ಯಂಗ್ಯವಾಡಿದ್ದಾರೆ. ನಿನ್ನೆಯಿಂದ ಕಾಂಗ್ರೆಸ್ ಬೆಳವಣಿಗೆಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ.2019ರ ಜುಲೈನಿಂದ 2020ರ ಆಗಸ್ಟ್ 18ರವರೆಗೆ ಟ್ವಿಟರ್ನಿಂದ ದೂರವಿದ್ದ ರಮ್ಯಾ …
Read More »ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯದಲ್ಲಿ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಬೇಕೆಂದುಮನವಿ
ಬೆಳಗಾವಿ : ಪೀರನವಾಡಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯದಲ್ಲಿ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬ್ರಿಟಿಷರ್ ವಿರುದ್ದ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಹಲವು ವರ್ಷಗಳಿಂದ ಪೀರನವಾಡಿ ವೃತ್ತದಲ್ಲಿ ಪ್ರತಿಷ್ಠಾಪಿಸಬೇಕು ಎಂಬುವುದು ಅಭಿಮಾನಿಗಳ ಕನಸಾಗಿದೆ. ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡುವ ಬಗ್ಗೆ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಮನವಿ ಸಲ್ಲಿಸಿದರು ಸಹ ಇಲ್ಲಿಯವರೆಗೂ …
Read More »ಸಂತ್ರಸ್ತರಿಗೆ ಪರಿಹಾರ ಕೊಡಿಸುತ್ತೇವೆ ಶಾಸಕ ಮಹೇಶ ಕುಮಟಳ್ಳಿ ಭರವಸೆ
ಅಥಣಿ: ತಾಂತ್ರಿಕ ದೋಷದಿಂದಾಗಿ ಕೆಲವು ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿತರಣೆ ವಿಳಂಬವಾಗಿದೆ. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಹಾಗೂ ತಾವು ಮುಖ್ಯಮಂತ್ರಿಗಳ ಗಮನಕ್ಕೆ ತರುವ ಮೂಲಕ ಸಂತ್ರಸ್ತರಿಗೆ ಪರಿಹಾರ ಕೊಡಿಸುತ್ತೇವೆ ಎಂದು ಶಾಸಕ ಮಹೇಶ ಕುಮಟಳ್ಳಿ ಭರವಸೆ ನೀಡಿದ್ದಾರೆ. ತಾಲೂಕಿನಲ್ಲಿ ವಿವಿಧ ಗ್ರಾಮಗಳಲ್ಲಿ ನಬಾರ್ಡ25 ರಲ್ಲಿ ಯೋಜನೆ ಅಡಿಯಲ್ಲಿ ಹೆಚ್ಚುವರಿ ಶಾಲಾ ಕೊಠಡಿ ನಿರ್ಮಾಣಕ್ಕೆ ಚಾಲಲೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಪ್ರವಾಹಕ್ಕೆ ಅಪಾರ ಪ್ರಮಾಣದಲ್ಲಿ …
Read More »ಕೂಡಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯ ಕೈಗೊಳ್ಳಿ: ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಇತ್ತೀಚೆಗೆ ಮಳೆ ಹಾಗೂ ಪ್ರವಾಹದಿಂದಾಗಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ರೈತರ ಬೆಳೆಗಳು ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಕೂಡಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ ಹಾಗೂ ಮೂಡಲಗಿ ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ. ಕಳೆದೊಂದು ವಾರದಿಂದ ಮಹಾರಾಷ್ಟ್ರ ಹಾಗೂ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಸುರಿದ ಮಳೆಯಿಂದಾಗಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಕೋಟ್ಯಾಂತರ …
Read More »