ಗೋಕಾಕ : ಇತ್ತೀಚೆಗೆ ಮಳೆ ಹಾಗೂ ಪ್ರವಾಹದಿಂದಾಗಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ರೈತರ ಬೆಳೆಗಳು ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಕೂಡಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ ಹಾಗೂ ಮೂಡಲಗಿ ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ. ಕಳೆದೊಂದು ವಾರದಿಂದ ಮಹಾರಾಷ್ಟ್ರ ಹಾಗೂ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಸುರಿದ ಮಳೆಯಿಂದಾಗಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಕೋಟ್ಯಾಂತರ …
Read More »ಬೈಕ್ ಬಿಟ್ಟು ರೈಲ್ವೆ ಬ್ರಿಡ್ಜ್ ಮೇಲೆ ನಡೆದುಕೊಂಡು ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆ
ಉಡುಪಿ: ಜಿಲ್ಲೆ ಕಾಪು ತಾಲೂಕಿನ ಉದ್ಯಾವರ ಬೊಳ್ಜೆ ರೈಲ್ವೆ ಟ್ರ್ಯಾಕ್ ಮೇಲೆ ಶವವೊಂದು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಉಬೇದುಲ್ಲ ಎಂದು ಗುರುತಿಸಲಾಗಿದೆ.ಉಬೇದುಲ್ಲ ಕಾಪು ತಾಲೂಕು ಮಲ್ಲಾರು ಗ್ರಾಮದ ನಿವಾಸಿ. ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಉದ್ಯಾವರ ಬಳಜಿ ರೈಲ್ವೆ ಟ್ರ್ಯಾಕ್ ನಲ್ಲಿ ಬಂದಿದ್ದು, ಅಮಲಿನಲ್ಲಿದ್ದರು ಎನ್ನಲಾಗಿದೆ. ಈ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳದಲ್ಲಿ ಬೈಕ್ ಹಾಗೂ ಮೊಬೈಲ್ ಫೋನ್ ಪತ್ತೆಯಾಗಿದೆ. ಸ್ಥಳೀಯ ನಿವಾಸಿಯೊಬ್ಬರು ಘಟನೆ …
Read More »15 ದಿನಗಳ ಒಳಗೆ ಕಾಳಜಿ ರಿಲೀಫ್ ಫಂಡ್ ಲೆಕ್ಕ ಕೊಡದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆ
ಮಂಗಳೂರು: ಪ್ರವಾಹ ಪರಿಹಾರದ ಲೆಕ್ಕ ಕೊಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ.ಮಾಜಿ ಶಾಸಕ ವಸಂತ ಬಂಗೇರಾ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಬೆಳ್ತಂಗಡಿ ಪ್ರವಾಹ ಸಂತ್ರಸ್ತರ ಕಾಳಜಿ ರಿಲೀಫ್ ಫಂಡ್ ಲೆಕ್ಕ ನೀಡುವಂತೆ ಆಗ್ರಹಿಸಿದ್ದಾರೆ. ಅಲ್ಲದೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ನಿಂದ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮುತ್ತಿಗೆ ಯತ್ನದ ವೇಳೆ ಮಾಜಿ …
Read More »ಡಿಕೆಶಿ ಕೊತ್ವಾಲ್ ರಾಮಚಂದ್ರನ ಶಿಷ್ಯನ ಮನಸ್ಥಿತಿಯಿಂದ ಹೊರಬಂದಿಲ್ಲ: ಸಿ.ಟಿ ರವಿ
ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕೊತ್ವಾಲ್ ರಾಮಚಂದ್ರನ ಶಿಷ್ಯನ ಮನಸ್ಥಿತಿಯಿಂದ ಹೊರಬಂದಿಲ್ಲ ಎಂದು ಸಚಿವ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ.ಜಿಲ್ಲೆಯ ಜಿಲ್ಲೆ ಮೂಡಿಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬೆಂಗಳೂರು ಗಲಭೆಗೆ ಸಂಬಂಧ ಡಿಕೆಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಸಿ, ತನಿಖೆ ನಡೆಯುವ ಹಂತದಲ್ಲೇ ಧಮ್ಕಿ ಹಾಕುವುದು ಸರಿಯಲ್ಲ. ತಾವು ಕೊತ್ವಾಲ್ ರಾಮಚಂದ್ರನ ಶಿಷ್ಯ ಅಂತ ತೋರಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ನಮ್ಮ ಸರ್ಕಾರದಲ್ಲಿ ಗೂಂಡಾಗಳಂತೆ ಧಮ್ಕಿ ಹಾಕುವ ಅವಕಾಶವಿಲ್ಲ. …
Read More »ಈರುಳ್ಳಿ ಬೆಲೆ ಗಗನಕ್ಕೇಏರಿಕೆಯಾಗುವ ಲಕ್ಷಣಗಳು………….!
ಬೆಂಗಳೂರು, ಆ.24- ಈರುಳ್ಳಿ ಬೆಲೆ ಮತ್ತೆ ದುಪ್ಪಾಟ್ಟಾಗುವ ಸಾಧ್ಯತೆ ಇದೆ. ಸದ್ಯ ಕೆಜಿಗೆ 10ರಿಂದ 15 ರೂ.ಗೆ ಸಿಗುತ್ತಿದ್ದ ಈರುಳ್ಳಿ ಇದೀಗ 30ರಿಂದ 50ರೂ.ಗೆ ಏರಿಕೆಯಾಗುವ ಲಕ್ಷಣಗಳು ಕಂಡು ಬರುತ್ತಿವೆ. ಗ್ರಾಹಕರ ಕಣ್ಣಲ್ಲಿ ನೀರು ತರಿಸುವ ಜತೆಗೆ ಈರುಳ್ಳಿ ಬೆಳೆದ ಕೃಷಿಕನ ಬಾಳಲ್ಲೂ ಕಣ್ಣೀರಿಗೆ ಕಾರಣವಾಗುತ್ತಿದೆ. ಅತಿ ಹೆಚ್ಚು ಈರುಳ್ಳಿ ಬೆಳೆಯುವ ಗದಗ, ಬಾಗಲಕೋಟೆ, ಧಾರವಾಡ, ಬೆಳಗಾವಿಯಲ್ಲಿ ಪ್ರವಾಹ ಬಂದು ಈರುಳ್ಳಿ ಬೆಳೆ ನಾಶವಾಗಿದೆ. ಮಳೆ ಹಾಗೂ ರೋಗ ಬಾಧೆಯಿಂದ …
Read More »2020-21ನೇ ಸಾಲಿನ ರೈತ ಬೆಳೆ ಸಮೀಕ್ಷೆ ಆ್ಯಪ್ ಪ್ರಾತ್ಯಕ್ಷಿಕೆ ನಡೆಸಿದಬಿ.ಸಿ.ಪಾಟೀಲ್
ಶಿವಮೊಗ್ಗ/ಹಾವೇರಿ,ಆ.24- ಕೃಷಿ ಹಾಗೂ ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಅವರು ಸೊರಬ ತಾಲೂಕಿನ ಯಲವಾಳ ಗ್ರಾಮ ಹಾಗೂ ಹಾವೇರಿ ಜಿಲ್ಲಾ ಹಿರೇಕೆರೂರು ತಾಲೂಕಿನ ಚಿಕ್ಕಕೊಣತಿ ಗ್ರಾಮದ ಜಮೀನುಗಳಲ್ಲಿ 2020-21ನೇ ಸಾಲಿನ ರೈತ ಬೆಳೆ ಸಮೀಕ್ಷೆ ಆ್ಯಪ್ ಪ್ರಾತ್ಯಕ್ಷಿಕೆ ನಡೆಸಿದರು. ಜಮೀನಿನಲ್ಲಿ ನಿಂತು ಬೆಳೆ ವಿವರ ಸರ್ವೆ ನಂಬರ್ ಸೇರಿದಂತೆ ಜಮೀನಿನಲ್ಲಿನ ತಮ್ಮ ಭಾವಚಿತ್ರವನ್ನು ಆ್ಯಪ್ ಪ್ರಾತ್ಯಕ್ಷಿಕೆ ಮಾಡಿ ರೈತರಿಗೆ ಮಾದರಿಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ರೈತನ ಬೆಳೆ ರೈತನ …
Read More »B.S..Y.ನಾಯಕತ್ವಬದಲಾವಣೆಯಾಗಲಿದೆಯ……………………?
ಬೆಂಗಳೂರು,ಆ.24- ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಮಾಡುವ ಪ್ರಸ್ತಾವನೆ ಸದ್ಯಕ್ಕಿಲ್ಲ ಎನ್ನುವ ಮೂಲಕ ಕೇಂದ್ರ ಬಿಜೆಪಿ ವರಿಷ್ಠರು ಎಲ್ಲಾ ಉಹಾಪೋಹಗಳಿಗೂ ತೆರೆ ಎಳೆದಿದ್ದಾರೆ. ಕಳೆದ ಹಲವು ದಿನಗಳಿಂದ ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವ ಬದಲಾವಣೆಯಾಗಲಿದೆ ಎಂಬ ವದಂತಿಗಳು ಬಿಜೆಪಿ ವಲಯದಲ್ಲಿ ಕೇಳಿ ಬಂದಿದ್ದವು. ಮುಂದಿನ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಸಮರ್ಥ ನಾಯಕನಿಗೆ ಪಟ್ಟ ಕಟ್ಟಲು ತೆರೆಮರೆಯಲ್ಲಿ ಸಿದ್ದತೆಗಳು ನಡೆಯುತ್ತಿವೆ ಎಂಬ ಉಹಾಪೋಹಗಳು ಎದ್ದಿದ್ದವು. ಇದಕ್ಕೆ ಪುಷ್ಟಿ ನೀಡುವಂತೆ ಎರಡು …
Read More »ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸಾರಥ್ಯದ ವಿಷಯ ಪಕ್ಷದಲ್ಲೀಗ ಭಾರೀ ವಿವಾದ ಮತ್ತು ಚರ್ಚೆಗೆ ಗ್ರಾಸ
ನವದೆಹಲಿ, ಆ.24- ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸಾರಥ್ಯದ ವಿಷಯ ಪಕ್ಷದಲ್ಲೀಗ ಭಾರೀ ವಿವಾದ ಮತ್ತು ಚರ್ಚೆಗೆ ಗ್ರಾಸವಾಗಿದ್ದು, ಇಂದು ಕಾಂಗ್ರೆಸ್ ಕಾರ್ಯಕಾರಿಣಿ (ಸಿಡಬ್ಲ್ಯುಸಿ) ಸಭೆಯಲ್ಲಿ ಕೈಗೊಳ್ಳುವ ಅಂತಿಮ ನಿರ್ಧಾರ ಭಾರೀ ಕುತೂಹಲ ಕೆರಳಿಸಿದೆ. ಕಾಂಗ್ರೆಸ್‍ನ ಕ್ರಿಯಾಶೀಲ ನಾಯಕ ರಾಹುಲ್ ಗಾಂಧಿ ಅವರೇ ಮತ್ತೆ ಪಕ್ಷದ ಸಾರಥ್ಯ ವಹಿಸಬೇಕೆಂದು ಒಂದು ಬಣ ಬಿಗಿ ಪಟ್ಟು ನೀಡಿರುವ ಬೆನ್ನಲ್ಲೇ ಅವರು ಈ ಅತ್ಯುನ್ನತ ಹುದ್ದೆ ವಹಿಸಿಕೊಳ್ಳಲು ನಿರಾಕರಿಸಿದ್ದಾರೆ. ಪಕ್ಷದ ತಾರಾ …
Read More »ಹೇಮಾವತಿಯಲ್ಲಿ ಮುಳುಗಿ, ಶಿವನ ಮುಡಿ ಸೇರಿದ ಗೌರಿ!
ಚಿಕ್ಕಮಗಳೂರು: ಮೊನ್ನೆ ಶುಕ್ರವಾರ ಸಂಭ್ರಮದಿಂದ ಬರಮಾಡಿಕೊಂಡಿದ್ದ ಗೌರಿಯನ್ನು ನಿನ್ನೆ ಹೆಂಗಳೆಯರು ಬೇಸರದಿಂದ ಕಳಿಸಿಕೊಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿಯಲ್ಲಿ ಗೌರಿಗೆ ಹೇಮಾವತಿ ನದಿ ತೀರದಲ್ಲಿ ಪೂಜೆ ಮಾಡಲಾಯಿತು. ಹೇಮಾವತಿ ತೀರದಲ್ಲಿ ಹತ್ತಾರು ಮಹಿಳೆಯರು ಮಂಗಳ ಹಾಡಿ ಗೌರಮ್ಮನನ್ನ ಭಾರವಾದ ಮನಸ್ಸಿನಿಂದಲೇ ಕಳುಹಿಸಿಕೊಟ್ಟರು. ಇದೇ ಸಂದರ್ಭದಲ್ಲಿ ತವರು ಮನೆಗೆ ಆಗಮಿಸಿದ ಮಹಿಳೆಯರು ಗೌರಿ ಪೂಜೆಯಲ್ಲಿ ಪಾಲ್ಗೊಂಡು ಸಂಭ್ರಮಪಟ್ಟರು. ಕಳೆದ ಕೆಲವು ದಿನಗಳ ಹಿಂದೆ ಉಕ್ಕಿ ಹರಿದಿದ್ದ ಹೇಮಾವತಿ, ಸದ್ಯ ಶಾಂತಳಾಗಿದ್ದು, ನೀರಿನ …
Read More »ಕೊರೋನಾ ಸೋಂಕಿಗೆ ಬಿಜೆಪಿ ಮುಖಂಡ ಬಲಿ
ಗಂಗಾವತಿ : ನಗರದ ಬಿಜೆಪಿ ಮುಖಂಡ ಹಾಗೂ ನಗರಸಭೆ ಮಾಜಿ ಸದಸ್ಯ ದೇವಪ್ಪ ಕಾಮದೊಡ್ಡಿ (45) ಅವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಒಂದು ವಾರದ ಹಿಂದೆ ತೀವ್ರ ಉಸಿರಾಟ ತೊಂದರೆಗೆ ಒಳಗಾಗಿ ಹುಬ್ಬಳ್ಳಿ ಕೆಎಲ್‌ಇ ಸುಚಿರಾಯು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ನಿಧನರಾದರು. ಪತ್ನಿ, ಓರ್ವ ಪುತ್ರ, ಪುತ್ರಿ ಇದ್ದಾರೆ. ಈ ಹಿಂದೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರ ಆಪ್ತ ಬೆಂಬಲಿಗರಾಗಿದ್ದ ದೇವಪ್ಪ ಕಾಮದೊಡ್ಡಿ …
Read More »