ಬೆಳಗಾವಿ : ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಸಚಿವ ರಮೇಶ ಜಾರಕಿಹೊಳಿ ಜಂಟಿ ಸುದ್ದಿಗೋಷ್ಠಿ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ಕಳೆದ ಒಂದು ವಾರದಿಂದ ಬ್ಯಾಂಕ್ ಚುನಾವಣೆ ಅವಿರೋಧ ಆಯ್ಕೆ ಮಾಡಲು ಕಸರತ್ತು ನಡೆಸಿದ್ದೇವು. ವೈಮನಸ್ಸು ತಪ್ಪಿಸಲು ಅವಿರೋಧ ಆಯ್ಕೆ ಒತ್ತು ಕೊಟ್ಟಿದ್ದೇವು. ಪಕ್ಷದ ಮುಖಂಡರು ಇದೇ ಸೂಚನೆಯನ್ನು ನೀಡಿದ್ದರು. ಜಾರಕಿಹೊಳಿ, ಸವದಿ ಹಾಗೂ ಕತ್ತಿ ಕುಟುಂಬ ಒಟ್ಟಿಗೆ …
Read More »ರಾಜಕೀಯ ಬದ್ಧ ವೈರಿಗಳ ಮುಖಾಮುಖಿ
ಬೆಳಗಾವಿ : ಬೆಳಗಾವಿ ರಾಜಕೀಯ ಬದ್ಧ ವೈರಿಗಳ ಮುಖಾಮುಖಿ ಆಗಿದ್ದಾರೆ.ಬೆಳಗಾವಿ ಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಇಬ್ಬರು ಮುಖಾಮುಖಿ ಆಗುವ ಮೂಲಕ ಮೂರು ವರ್ಷಗಳ ವೈರತ್ವಕ್ಕೆ ಅಂತ್ಯ ಹಾಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಹಾವು- ಮುಂಗುಸಿಯಂತೆ ಕಿತ್ತಾಡಿಕೊಂಡಿದ್ದ ಈ ಇಬ್ಬರು ನಾಯಕರು ಒಂದೇ ವೇದಿಕೆಗೆ ಬರಬೇಕೆನ್ನುವದು ಬಿಜೆಪಿ ಕಾರ್ಯಕರ್ತರ ಅಪೇಕ್ಷೆಯಾಗಿತ್ತು ,ಡಿಸಿಸಿ ಬ್ಯಾಂಕ್ ಚುನಾವಣೆ ಈ ಅವಕಾಶವನ್ನು ಕಲ್ಪಿಸಿ ಕೊಟ್ಟಿದೆ. ಡಿಸಿಸಿ ಬ್ಯಾಂಕಿನಲ್ಲಿ ಮುಖಾಮುಖಿಯಾದ ಇಬ್ಬರು ನಾಯಕರಾದ ಡಿಸಿಎಂ ಲಕ್ಷ್ಮಣ ಸವದಿ, …
Read More »ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಶುಭಾಶಯ : ರಮೇಶ ಜಾರಕಿಹೊಳಿ
ಗೋಕಾಕ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು, ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಶುಭಾಶಯ ಕೋರಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಅತೀ ವಿಜ್ರಂಭನೆಯಿಂದ ವಾಲ್ಮೀಕಿ ಜಯಂತಿ ಆಚರಿಸಲಾಗುತ್ತಿತ್ತು. ಆದ್ರೆ ಈ ಭಾರಿ ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು ಹೇಳಿದರು.
Read More »ವಾಲ್ಮೀಕಿ ಸಮುದಾಯ ಮೀಸಲಾತಿಗಾಗಿ ಮತ್ತೊಮ್ಮೆ ಸರ್ಕಾರದ ಗಮನ ಸೆಳೆದಿದೆ
ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರ ಎದುರೇ ವಾಲ್ಮೀಕಿ ಸಮುದಾಯ ಮೀಸಲಾತಿಗಾಗಿ ಮತ್ತೊಮ್ಮೆ ಸರ್ಕಾರದ ಗಮನ ಸೆಳೆದಿದೆ. ಬೆಂಗಳೂರಿನ ಶಾಸಕರ ಭವನದ ವಾಲ್ಮೀಕಿ ತಪೋವನದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಸಚಿವ ಶ್ರೀರಾಮುಲು ಹಾಗೂ ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ಪುಷ್ಪಾರ್ಚನೆ ಮೂಲಕ ಗೌರವ ಸಮರ್ಪಿಸಿದರು. ಇದೇ ಸಂದರ್ಭದಲ್ಲಿ ವಾಲ್ಮೀಕಿ ಪ್ರತಿಮೆಯ ಎದುರು ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ವಾಲ್ಮೀಕಿ ಜ್ಯೋತಿಯನ್ನು ಸಚಿವ ಶ್ರೀರಾಮುಲು ಅವರಿಗೆ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಶ್ರೀರಾಮುಲು ಸಮ್ಮುಖದಲ್ಲೇ …
Read More »ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆಗೆ ಹೊಸ ಸೂಚನೆ
ಬೆಂಗಳೂರು- ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ 100 ಜನಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಹಾಗೂ ಯಾವುದೇ ಮೆರವಣಿಗೆ ನಡೆಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊರೊನಾ ಮಾರ್ಗ ಸೂಚಿ ಅನ್ವಯ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ರಾಜ್ಯೋತ್ಸವ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ. ಹಾಗಾಗಿ ನವೆಂಬರ್ 1 ರಂದು ರಾಜ್ಯೋತ್ಸವ ಕಾರ್ಯಕ್ರಮವನ್ನು …
Read More »ಸವದತ್ತಿಯ ಸುಕ್ಷೇತ್ರ ಸೇರಿ 3 ದೇವಸ್ಥಾನ ಮತ್ತೊಂದು ತಿಂಗಳು ಬಂದ್
ಬೆಳಗಾವಿ: ಜಿಲ್ಲೆಯ ಸವದತ್ತಿಯ ಸುಕ್ಷೇತ್ರ ರೇಣುಕಾ ಯಲ್ಲಮ್ಮದೇವಿ, ಜೋಗುಳಬಾವಿ ಸತ್ತೆಮ್ಮದೇವಿ ಮತ್ತು ರಾಯಬಾಗ ತಾಲ್ಲೂಕಿನ ಚಿಂಚಲಿ ಮಾಯಕ್ಕದೇವಿ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನವನ್ನು ನ.30ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. ‘ಈ ದೇವಸ್ಥಾನಗಳಿಗೆ ನೆರೆಯ ಮಹಾರಾಷ್ಟ್ರ ಮೊದಲಾದ ಕಡೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಇದನ್ನು ತಡೆಯಲು, ಕೊರೊನಾ ಸೋಂಕು ಹರಡದಂತೆ ನಿಯಂತ್ರಿಸಲು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಈ ದೇವಸ್ಥಾನಗಳ ಆಡಳಿತ ಮಂಡಳಿಯವರು ನಿತ್ಯದ …
Read More »ಜಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಅಮಾನವೀಯ ಘಟನೆ
ಗದಗ: ಜಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಬೆಡ್ನಿಂದ ರೋಗಿಯೊಬ್ಬ ಕೆಳಗೆ ಬಿದ್ದರೂ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯವಹಿಸಿರುವುದು ಕಂಡು ಬಂದಿದೆ. ತುರ್ತು ಚಿಕಿತ್ಸಾ ಘಟಕದ ವಾರ್ಡ್ನಲ್ಲೇ ರೋಗಿ ನರಳಾಡ್ತಿದ್ದಾರೆ. ಆದರೆ ವೈದ್ಯರು, ಸಿಬ್ಬಂದಿ ಅಲ್ಲೇ ಓಡಾಡುತ್ತಿದ್ರೂ ಕ್ಯಾರೆ ಎಂದಿಲ್ಲ. ವೈದ್ಯರ ಮೇಲೆ ನಂಬಿಕೆ ಇಟ್ಟು ರೋಗಿಗಳು ಆಸ್ಪತ್ರೆಗೆ ಹೋಗ್ತಾರೆ. ಆದರೆ ಅಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಆಗಬಾರದ ಅನಾಹುತ ಸಂಭವಿಸುತ್ತೆ. ನಿನ್ನೆ ಕೂಡ ಜಿಮ್ಸ್ ಆಸ್ಪತ್ರೆ ಸಿಬ್ಬಂದಿ ತಾಯಿ ಮಗುವಿಗೆ …
Read More »ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿ ಜಾಥಾಕ್ಕೆ ಡಿಸಿ ಚಾಲನೆ
ರಾಯಚೂರು. ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ವಾರ್ಷಿಕೋತ್ಸವ ಅಂಗವಾಗಿ ರಾಷ್ಟ್ರೀಯ ಏಕತಾ ದಿನಾಚರಣೆ ಜಾಥಾಕ್ಕೆ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರು ನಗರದ ಚಂದ್ರಮೌಳೇಶ್ಚರ ವೃತ್ತದಲ್ಲಿ ಚಾಲನೆ ನೀಡಿದರು. ನಗರದ ಚಂದ್ರಮೌಳೇಶ್ಚರ ವೃತ್ತದಿಂದ ಆರಂಭಗೊಂಡ ಜಾಥಾವು ನಗರದ ವಿವಿಧ ಪ್ರಮುಖ ವೃತ್ತಗಳಾದ ಬಸವನಬಾವಿ ವೃತ್ತ, ಕನಕದಾಸ ವೃತ್ತದ ಮೂಲಕ ಪುನಃ ಜಿಲ್ಲಾ ಪೊಲೀಸ್ ಕಚೇರಿಗೆ ತಲುಪಿತು.. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠರಾದ …
Read More »ಏಕಾಏಕಿ ಹೆಚ್ಚಿದ ವಿಚಿತ್ರ ರೋಗದಿಂದ ಜನರಲ್ಲಿ ಆತಂಕ
ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಸುಲೇನಹಳ್ಳಿಯಲ್ಲಿ 35ಕ್ಕೂ ಹೆಚ್ಚು ಜನರಿಗೆ ಜ್ವರ, ಮೈ-ಕೈ ನೋವು, ಕಾಲು ಊತ ಕಾಣಿಸಿಕೊಂಡಿದೆ. ಕಳೆದ ಒಂದು ವಾರದಿಂದ ಕಾಣಿಸಿಕೊಂಡಿರುವ ಈ ಖಾಯಿಲೆಯಿಂದ ಜನ ಹೈರಾಣುಗೊಂಡಿದ್ದಾರೆ. ಮೊಳಕಾಲ್ಮೂರು ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಹಲವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಏಕಾಏಕಿ ಹೆಚ್ಚಿದ ವಿಚಿತ್ರ ರೋಗದಿಂದ ಸುಲೇನಹಳ್ಳಿ ಜನರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Read More »ಯುವಕನ ಬರ್ಬರ ಕೊಲೆ
ಬೆಂಗಳೂರು: ಜಿಲ್ಲೆಯ ಆನೇಕಲ್ ತಾಲೂಕಿನ ಶೆಟ್ಟಿಹಳ್ಳಿಯ ವೇರ್‌ಹೌಸ್ ಬಳಿ ಯುವಕನ ಬರ್ಬರ ಕೊಲೆಯಾಗಿರುವ ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ 25 ವರ್ಷದ V.Y. ವಿನುತ್ ಎಂಬಾತನನ್ನು ಹತ್ಯೆ ಮಾಡಲಾಗಿದೆ. ಕೆಲಸಕ್ಕೆ ತೆರಳುತ್ತಿದ್ದ ವೇಳೆ ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ ಎಸಗಲಾಗಿದ್ದು ಹಳೇ ದ್ವೇಷದ ಹಿನ್ನೆಲೆಯಲ್ಲಿ ವಿನುತ್ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ವಿನುತ್ ಬೆಸ್ತಮಾನಹಳ್ಳಿ ನಿವಾಸಿ ಎಂದು ಹೇಳಲಾಗಿದೆ. ಜಾಕಿ ಕಂಪನಿಯಲ್ಲಿ ಕೆಲಸ …
Read More »