Breaking News

ಇಬ್ಬರು ಶಾಸಕರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು : ಹಿರಿಯೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮತ್ತು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕೊರೋನಾ ಪಾಸಿಟಿವ್ ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ತಮ್ಮ ಫೇಸ್ ಬುಕ್ ಪುಟದಲ್ಲಿ ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ. ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ …

Read More »

10 ತರಗತಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಬೆಂಗಳೂರು: ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅನುತ್ತೀರ್ಣಗೊಂಡ ಹಾಗೂ ಕೊರೊನಾ ಕಾರಣಕ್ಕೆ ಪರೀಕ್ಷೆ ಬರೆಯದಿರುವ ಅಭ್ಯರ್ಥಿಗಳಿಗಾಗಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಕೊರೊನಾ ಕಾರಣಕ್ಕೆ ಪರೀಕ್ಷೆ ಬರೆಯದಿರುವ ಅಭ್ಯರ್ಥಿಗಳಿಗೆ ಇದು ಪ್ರಥಮ ಪ್ರಯತ್ನ ಎಂದು ಪರಿಗಣಿಸಲಾಗುತ್ತಿದ್ದು, ಅಂಥವರು ಹೊಸದಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಅನುತ್ತೀರ್ಣಗೊಂಡ ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಬೇಕಾಗುತ್ತದೆ. ಪರೀಕ್ಷೆಗಳು ಬೆಳಗ್ಗೆ 10.30 ರಿಂದ ಆರಂಭವಾಗಲಿದ್ದು, ವೇಳಾಪಟ್ಟಿ ಈ ಕೆಳಗಿನಂತಿದೆ. ಸೆಪ್ಟಂಬರ್ 21 …

Read More »

JEE, NEET ಪರೀಕ್ಷೆ ದಿನಾಂಕ ಪ್ರಕಟ

ನವದೆಹಲಿ : ಪ್ರಸಕ್ತ ಸಾಲಿನ ವೃತ್ತಪರ ಕೋರ್ಸ್ ಗಳಿಗೆ ನಡೆಯಲಿರುವ ನೀಟ್ ( ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ) ಹಾಗೂ ಜೆಇಇ (ಜಂಟಿ ಪ್ರವೇಶ ಪರೀಕ್ಷೆ)ಗೆ ಕೊನೆಗೂ ದಿನಾಂಕ ಘೋಷಣೆಯಾಗಿದೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮಾಹಿತಿಯ ಪ್ರಕಾರ, ಸೆಪ್ಟೆಂಬರ್ 13 ರಂದು ನೀಟ್ ಪರೀಕ್ಷೆ ನಡೆಯಲಿದ್ದು, ಸೆಪ್ಟೆಂಬರ್ 1 ರಿಂದ 6 ರವರೆಗೆ ಜೆಇಇ ಪರೀಕ್ಷೆ ನಡೆಯಲಿದೆ ಎಂದು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮಾಹಿತಿ ನೀಡಿದೆ.

Read More »

ಆ. 24,25 ರಂದು ಬಾಗಲಕೋಟೆ, ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಡಿಕೆಶಿ ಭೇಟಿ

ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸೋಮವಾರದಿಂದ ಎರಡು ದಿನಗಳ ಕಾಲ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸೋಮವಾರದಿಂದ ಎರಡು ದಿನಗಳ ಕಾಲ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಿಗೆ ಭೇಟಿ ನೀಡಿ ಪ್ರವಾಹ ಪೀಡಿತ ಪ್ರದೇಶವನ್ನು ವೀಕ್ಷಿಸಲಿದ್ದಾರೆ. ಸೋಮವಾರದಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಬೆಳಗಾವಿಗೆ ವಿಮಾನದ ಮೂಲಕ ಬಂದಿಳಿಯಲಿದ್ದು, ನಂತರ ಅವರು ಬೆಳಗಾವಿ ಜಿಲ್ಲೆಯಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಬಳಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಕಾರ್ಯಕಾರಿ …

Read More »

ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಆಗಸ್ಟ್ 27ರವರೆಗೂ ಭಾರಿ ಮಳೆ.

ಬೆಂಗಳೂರು: ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಆಗಸ್ಟ್ 27ರವರೆಗೂ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, …

Read More »

ಕರಾಚಿಯಲ್ಲೇ ಇದ್ದಾನೆ ದಾವೂದ್ ಇಬ್ರಾಹಿಂ, ವಿಶ್ವಸಂಸ್ಥೆಗೆ 88 ಉಗ್ರರ ಅಡ್ರಸ್ ಕೊಟ್ಟು ಪಾಕಿಸ್ತಾನ್ ನಾಟಕ

ಭಾರತಕ್ಕೆ ಸದಾ ಹೊರೆಯಾಗಿರೋ ನೆರೆ ರಾಷ್ಟ್ರ ಅಂದ್ರೆ ಅದು ಪಾಕಿಸ್ತಾನ. ಭಾರತಕ್ಕೆ ಕಿರುಕುಳ ನೀಡೋದ್ರಲ್ಲಿ ಸದಾ ಮುಂದಿರೋ ಪಾಪಿ ಪಾಕಿಸ್ತಾನ ಜಗತ್ತಿನ ಮುಂದೆ ಮತ್ತೊಮ್ಮೆ ಬೆತ್ತಲಾಗಿದೆ. ಈ ಮೂಲಕ ತನ್ನ ನರಿಬುದ್ಧಿಯನ್ನ ವಿಶ್ವದ ಎದುರು ಬಯಲಾಗಿದೆ. ಭಾರತಕ್ಕೆ ಬೇಕಿರೋ ಮೋಸ್ಟ್ ವಾಂಟೆಂಡ್ ಕ್ರಿಮಿನಲ್​ಗಳಿಗೆ ಪಾಕಿಸ್ತಾನದ ನೆಲದಲ್ಲಿ ಜಾಗ ನೀಡಿರುವುದನ್ನ ಒಪ್ಪಿಕೊಂಡಿದೆ ಅಂತಾ ಪಾಕಿಸ್ತಾನದಿಂದ್ಲೇ ವರದಿ ಹೊರಬಿದ್ದಿದೆ. ದಾವೂದ್ ತನ್ನ ನೆಲದಲ್ಲಿರೋದಾಗಿ ಒಪ್ಪಿಕೊಂಡಿತಾ ಪಾಕ್? ಪಾಕಿಸ್ತಾನದ ಸ್ಥಳೀಯ ಮಾಧ್ಯಮದ ವರದಿಯನ್ನ ಆಧರಿಸಿ, …

Read More »

ಆರೋಗ್ಯಾಧಿಕಾರಿಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಚಿವ ಸಿ.ಸಿ ಪಾಟೀಲ

ಗದಗ: ಮುಂಡರಗಿ ತಾಲ್ಲೂಕು ವೈದ್ಯಾಧಿಕಾರಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವು ಭರಿಸಲಿದೆ ಎಂದು ಗದಗ ಜಿಲ್ಲೆ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ. ಈ ಕುರಿತು ಸಚಿವರು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವಿದ್ ಅಕ್ತರ್ ಅವರೊಂದಿಗೆ ಮಾತನಾಡಿದ್ದು, ಅವರು ಸ್ಪರ್ಶ ಆಸ್ಪತ್ರೆಯ ಮುಖ್ಯಸ್ಥರೊಂದಿಗೆ ಈಗಾಗಲೇ ಮಾತನಾಡಿದ್ದು, ಸರ್ಕಾರವು ಚಿಕಿತ್ಸೆ ವೆಚ್ಚ ಪಾವತಿಸಲಿದೆ. ಸರ್ಕಾರವು ಕೊರೊನಾ ವಾರಿಯರ್ಸ್ ಜೊತೆಗೆ ಇರಲಿದೆ ಎಂದು …

Read More »

ಮೈಸೂರಿನಲ್ಲಿ ನಡೆಯುತ್ತಿರುವ ವೈದ್ಯರ ಪ್ರತಿಭಟನೆ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಆಕ್ರೋಶ ಹೊರಹಾಕಿದ್ದಾರೆ

ಬೆಂಗಳೂರು: ಮೈಸೂರಿನಲ್ಲಿ ನಡೆಯುತ್ತಿರುವ ವೈದ್ಯರ ಪ್ರತಿಭಟನೆ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಆಕ್ರೋಶ ಹೊರಹಾಕಿ, ಪ್ರತಿಭಟನೆ ಮಾಡುವವರು ಇಷ್ಟವಿದ್ದರೆ ಕೆಲಸ ಮಾಡಲಿ, ಇಲ್ಲದಿದ್ದರೆ ಅವರ ದಾರಿ ನೋಡಿಕೊಳ್ಳಲಿ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾರ್ಯದ ಒತ್ತಡ ಸ್ವೀಕಾರ ಮಾಡಿ ಕೆಲಸ ಮಾಡುವವರು ಸರ್ಕಾರದಲ್ಲಿರಬೇಕು. ಇಲ್ಲದಿದ್ದರೆ ಖಾಸಗಿ ಆಸ್ಪತ್ರೆಯಲ್ಲಿ ಕೆಲಸಮಾಡಲಿ ಎಂದರು ಗರಂ ಆದರು ಪ್ರತಿಭಟನೆ ಕರೆ ಕೊಟ್ಟವರಿಗೆ ಗಣೇಶ ಹಬ್ಬದ ದಿನ ಆ ದೇವರು ಸದ್ಬುದ್ಧಿ ಕೊಡಲೆಂದು …

Read More »

ರಾಜ್ಯದ ಇಬ್ಬರು ಕೈ ನಾಯಕರಿಗೆ `AICC’ಯಲ್ಲಿ ಉನ್ನತ ಹುದ್ದೆ?

ನವದೆಹಲಿ : ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಎಐಸಿಸಿಯಲ್ಲಿ ಉನ್ನತ ಹುದ್ದೆ ನೀಡಲು ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ನಾಯಕರಾದ ಕೆ.ಹೆಚ್. ಮುನಿಯಪ್ಪ ಹಾಗೂ ಹೆಚ್.ಕೆ.ಪಾಟೀಲ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಎಐಸಿಸಿಯಲ್ಲಿ ಉನ್ನತ ಹುದ್ದೆ ನೀಡಲು ಮುಂದಾಗಿದೆ ಎನ್ನಲಾಗಿದ್ದು, ಹೆಚ್.ಕೆ.ಪಾಟೀಲ್ ಅವರಿಗೆ ಸಿಡಬ್ಲ್ಯೂಸಿಯಲ್ಲಿ ಸ್ಥಾನ ನೀಡುವ ಸಾಧ್ಯತೆ ಇದ್ದು, ಕೆ.ಹೆಚ್. ಮುನಿಯಪ್ಪ ಅವರಿಗೆ ಎಸ್ಸಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಸಿಗುವ ಸಾಧ್ಯತೆ ಇದೆ …

Read More »

ಸಿಲಿಕಾನ್ ಸಿಟಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಮುಸ್ಲಿಂ ಮುಖಂಡ ಮೃತಪಟ್ಟವರ ಬೆನ್ನಿಗೆ ನಿಂತಿದ್ದಾರೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಮುಸ್ಲಿಂ ಮುಖಂಡ ಮೃತಪಟ್ಟವರ ಬೆನ್ನಿಗೆ ನಿಂತಿದ್ದಾರೆ. ಹೌದು. ಪಾದರಾಯನಪುರ ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಗೋಲಿಬಾರ್ ನಲ್ಲಿ ಸತ್ತವರಿಗೆ ಎರಡು ಲಕ್ಷ ಘೋಷಣೆ ಮಾಡಿದ್ದಾರೆ. ಈ ಕುರಿತು ಫೇಸ್ ಬುಕ್‍ನಲ್ಲಿ ಬರೆದುಕೊಂಡಿರುವ ಇಮ್ರಾನ್ ಪಾಷಾ, ಮೃತರಿಗೆ 2 ಲಕ್ಷ ಸಹಾಯ ಮಾಡುವುದಾಗಿ ಹೇಳಿದ್ದಾರೆ. ಈ ಹಿಂದೆ ಶಾಸಕ ಜಮೀರ್ ಗೋಲಿಬಾರ್ ನಲ್ಲಿ ಸತ್ತವರಿಗೆ 5 ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ …

Read More »