ಇಸ್ಲಾಮಾಬಾದ್: ನೆರೆಯ ದುಷ್ಟ ಪಾಕಿಸ್ತಾನ 20 ತಿಂಗಳ ತಾನು ಎಸಗಿದ ಘೋರಕೃತ್ಯವನ್ನ ಒಪ್ಪಿಕೊಂಡಿದೆ. ಪುಲ್ವಾಮಾ ದಾಳಿಯ ತಮ್ಮ ಸಮುದಾಯ ಯಶಸ್ಸು ಎಂದು ಪಾಕಿಸ್ತಾನ ಸಚಿವ ಫವಾದ್ ಖಾನ್ ಸಂಸತ್ ನಲ್ಲಿಯೇ ಹೇಳಿಕೆ ನೀಡಿದ್ದಾರೆ. ಇಂದು ಮುಸ್ಲಿಂ ಲೀಗ್ ಎನ್ ಪಕ್ಷದ ನೇತಾರ ಅಯಾಜ್ ಸಾದಿಕ್ ಪ್ರಶ್ನೆಗೆ ಫವಾದ್ ಖಾನ್ ಉತ್ತರಿಸುತ್ತಿದ್ದರು. ಭಾರತ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವಶಕ್ಕೆ ಪಡೆದ ವೇಳೆ ವಿದೇಶಾಂಗ ಸಚಿವ ಖುರೇಷಿ ಭಯಗೊಂಡಿದ್ದರು. ಆರ್ಮಿ ಚೀಫ್ …
Read More »ಕುರಿ ಕಾಪಾಡಲು ಹೋದ ಇಬ್ಬರೂ ನೀರು ಪಾಲು- ಕುರಿ ಮಾತ್ರ ಸುರಕ್ಷಿತ
ಕೋಲಾರ: ಕುರಿ ಕಾಪಾಡಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಕುರಿಗಾಹಿಗಳು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕೋಲಾರದಲ್ಲಿ ನಡೆದಿದೆ. ಮುಳಬಾಗಲು ತಾಲ್ಲೂಕಿನ ಕೀಲು ಹೋಳಲಿ ಗ್ರಾಮದ ಕೆರೆಯಲ್ಲಿ ಇಂದು ಸಂಜೆ ಈ ಘಟನೆ ನಡೆದಿದ್ದು, ಮೊದಲಿಗೆ ಕುರಿ ಮೇಯಿಸುತ್ತಿದ್ದ 46 ವರ್ಷದ ತಿಮ್ಮಪ್ಪ ತನ್ನ ಕುರಿಯನ್ನ ರಕ್ಷಣೆ ಮಾಡಲು ಕೆರೆಗೆ ಇಳಿದಿದ್ದಾನೆ. ಕುರಿ ಬಚಾವ್ ಆಗಿ ಬಂದಿದೆ. ಕುರಿಯನ್ನು ಕಾಪಾಡಲು ಹೋಗಿದ್ದ ತಿಮ್ಮಪ್ಪ ನೀರಿನಲ್ಲಿ ಮುಳುಗಿ ಸಾವನ್ನಪ್ಪುತ್ತಾನೆ. ಈ ವಿಚಾರ ತಿಳಿದು …
Read More »ರಾಜ್ಯದಲ್ಲಿ ಮುಂದಿನ ಐದು ದಿನ ಮತ್ತೆ ಮಳೆಯ ಅಬ್ಬರ
ಬೆಂಗಳೂರು: ಒಂದು ವಾರ ಬಿಡುವು ನೀಡಿದ್ದ ವರುಣ ದೇವ ಮುಂದಿನ ಐದು ದಿನ ಮತ್ತೆ ಅಬ್ಬರಿಸಲಿದ್ದಾನೆ. ಈಶಾನ್ಯ ಮಾರುತಗಳು ದಕ್ಷಿಣ ಭಾರತವನ್ನ ಬುಧವಾರ ಪ್ರವೇಶಿಸಿದ್ದು, ತಮಿಳುನಾಡಿನ ಚೆನ್ನೈ ಸೇರಿದಂತೆ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಇತ್ತ ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ನವೆಂಬರ್ 2 ರವರೆಗೆ ಮಳೆಯಾಗುವ ಸಾಧ್ಯತೆಗಳಿವೆ. ಅಕ್ಟೋಬರ್ 31, ನವೆಂಬರ್ 1 ಮತ್ತು 2 ರಂದು ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರಾವಳಿ ಭಾಗ, ಬೆಳಗಾವಿ, …
Read More »ಬ್ರಿಟಿಷ್ ರಾಯಲ್ ಫ್ಯಾಮಿಲಿಯಿಂದ ಮನೆ ಕೆಲಸದವರ ಹುಡುಕಾಟ- 18.5 ಲಕ್ಷ ರೂ. ಸಂಬಳ
ಲಂಡನ್: ಬ್ರಿಟಿಷ್ ರಾಯಲ್ ಫ್ಯಾಮಿಲಿ ಮನೆ ಕೆಲಸದವರಿಗಾಗಿ ಹುಡುಕಾಟ ನಡೆಸುತ್ತಿದ್ದು, ಬರೋಬ್ಬರಿ 18.5 ಲಕ್ಷ ರೂ. ಆರಂಭಿಕ ಸಂಬಳ ನೀಡುವುದಾಗಿ ಘೋಷಿಸಿದೆ. ರಾಜ ಮನೆತನದ ಅಧಿಕೃತ ವೆಬ್ಸೈಟ್ ರಾಯಲ್ ಹೌಸ್ಹೋಲ್ಡ್ನಲ್ಲಿ ಈ ಕುರಿತು ಪ್ರಕಟಿಸಿದ್ದು, ಇದು 2ನೇ ಹಂತದ ಅಪ್ರಂಟಿಸ್ಶಿಪ್(ತರಬೇತಿ ಅವಧಿ) ಕೆಲಸವಾಗಿದೆ. ಆಯ್ದ ಅಭ್ಯರ್ಥಿಗಳು ಮಾತ್ರ ವಿಂಡ್ಸರ್ ಕ್ಯಾಸ್ಟಲ್ನಲ್ಲಿ ವಾಸಿಸಬೇಕಾಗಿರುತ್ತದೆ ಎಂದು ತಿಳಿಸಲಾಗಿದೆ. ಈಗಾಗಲೇ ಹೇಳಿದ ಹಾಗೆ ಇದೊಂದು ಎರಡನೇ ಹಂತದ ಅಪ್ರೆಂಟಿಸ್ಶಿಪ್ ಕೆಲಸವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಇಂಗ್ಲೆಂಡ್ನ …
Read More »ಅಕ್ಟೋಬರ್ 31ಕ್ಕೆ ‘ಬ್ಲೂ ಮೂನ್’ – ಒಂದೇ ತಿಂಗಳಲ್ಲಿ ಎರಡು ಹುಣ್ಣಿಮೆ
ಬೆಂಗಳೂರು: ಅಕ್ಟೋಬರ್ 31ಕ್ಕೆ ನಭೋಮಂಡದಲ್ಲಿ ಬ್ಲೂ ಮೂನ್ ವಿದ್ಯಮಾನ ಜರುಗಲಿದೆ. ಬ್ಲೂ ಮೂನ್ ಅಂದ್ರೆ ಚಂದಿರ ನೀಲಿ ಬಣ್ಣಕ್ಕೆ ಬದಲಾಗಲ್ಲ. ಚಂದ್ರನ ಮೂಲ ಬಣ್ಣವಾಗಿರುವ ನೀಲಿ ಬಣ್ಣದಲ್ಲೇ ಚಂದ್ರನಿರಲಿದ್ದಾನೆ. ಒಂದೇ ತಿಂಗಳಲ್ಲಿ ಎರಡು ಹುಣ್ಣಿಮೆಗಳು ಬರುವ ಪ್ರಾಕೃತಿಕ ವಿದ್ಯಮಾನವನ್ನೇ ಬ್ಲೂಮೂನ್ ಅಂತಾ ಕರೆಯುತ್ತಾರೆ. ಪ್ರತಿ 2 ಅಥವಾ 3 ವರ್ಷಕ್ಕೊಮ್ಮೆ ಒಂದೇ ತಿಂಗಳಲ್ಲಿ 2 ಬಾರಿ ಹುಣ್ಣಿಮೆ ಸಂಭವಿಸುತ್ತದೆ. ಈ ರೀತಿ ಒಂದೇ ತಿಂಗಳಲ್ಲಿ ಎರಡು ಬಾರಿ ಹುಣ್ಣಿಮೆ ಸಂಭವಿಸುವ …
Read More »ಪತಿಗೆ ಮದ್ಯ ಕುಡಿಸಿ, ತಲೆಗೆ ಹೊಡೆದು ಕತ್ತು ಕೊಯ್ದು ಕೊಲೆ – ಕೊಲೆಗೈದು ಕಾರಿನ ಡಿಕ್ಕಿಯಲ್ಲಿಟ್ಟು ಬೆಂಕಿ ಹಚ್ಚಿದ ಪತ್ನಿ
ಹಾಸನ: ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಎಂಬ ಮಾತಿದೆ. ಆದರೆ ಇಲ್ಲಿ ಹೆಂಡತಿಯೇ ಗಂಡನನ್ನ ಕೊಲೆ ಮಾಡಿ ಕಾರಿನ ಡಿಕ್ಕಿಯಲ್ಲಿಟ್ಟು ಗುರುತೇ ಸಿಗದಂತೆ ಸುಟ್ಟು ಹಾಕಿದ ತಪ್ಪಿಗೆ ಇಬ್ಬರು ಮಕ್ಕಳನ್ನು ಅನಾಥರನ್ನಾಗಿ ಮಾಡಿ ಪೊಲೀಸರ ಅತಿಥಿಯಾಗಿದ್ದಾಳೆ. ಅಕ್ಟೋಬರ್ 28 ರಂದು ಬೆಳ್ಳಂಬೆಳಗ್ಗೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಮಟ್ಟನವಿಲೆ ಗ್ರಾಮದ ಸಮೀಪ ಕಾರೊಂದು ಸುಟ್ಟ ಸ್ಥಿತಿಯಲ್ಲಿದ್ದು, ಅದರ ಡಿಕ್ಕಿಯಲ್ಲಿ ಸಂಪೂರ್ಣ ಸುಟ್ಟು ಕರಕಲಾದ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. …
Read More »ರಸ್ತೆ ಪಕ್ಕದಲ್ಲಿ ಹುಲ್ಲಿಗೆ ಹಚ್ಚಿದ್ದ ಬೆಂಕಿಯಿಂದ ಸುಟ್ಟು ಕರಕಲಾಯಿತು ಬೈಕ್
ಗದಗ: ರಸ್ತೆ ಪಕ್ಕದ ಒಣ ಹುಲ್ಲಿಗೆ ಬೆಂಕಿ ಹಚ್ಚಿದ್ದರಿಂದ ದಟ್ಟವಾದ ಹೊಗೆಯಲ್ಲಿ ದಾರಿ ಕಾಣದೆ ಬೈಕ್ ಸವಾರ ಸೇರಿ ಕುಟುಂಬದ ಮೂವರು ಬೆಂಕಿನಲ್ಲಿ ಬಿದ್ದ ಘಟನೆ ಜಿಲ್ಲೆಯ ರೋಣ ಪಟ್ಟಣದ ಬಳಿ ನಡೆದಿದೆ. ರೋಣ ಹಾಗೂ ಜಕ್ಕಲಿ ನಡುವೆ ಘಟನೆ ಸಂಭವಿಸಿದೆ. ಬೆಂಕಿ ದುರಂತದಲ್ಲಿ ಬೈಕ್ ಸವಾರ, ಹಿಂಬದಿ ಕುಳಿತ ತಾಯಿ ಮಗುವಿಗೆ ಗಂಭೀರ ಗಾಯಗಳಾಗಿವೆ. ಬೈಕ್ ಸವಾರ 29 ವರ್ಷದ ನಾಗರಾಜ್ ರ್ಯಾವಣಕಿ, 2 ವರ್ಷದ ಮಗು ಲಲಿತಾ …
Read More »ದೇವರಗುಂಡಿ ಜಲಪಾತದಲ್ಲಿ ಮಾಡೆಲ್ಗಳ ಅರೆಬೆತ್ತಲೆ ಫೋಟೋ ಶೂಟ್
ಮಂಗಳೂರು: ಬೆಂಗಳೂರಿನ ಇಬ್ಬರು ಮಾಡೆಲ್ ಗಳು ಕರಾವಳಿಯ ಪುಣ್ಯಕ್ಷೇತ್ರದ ಬಳಿ ಇರುವ ದೇವರ ಜಲಪಾತದ ಎದುರು ಅರೆಬೆತ್ತಲೆಯಾಗಿ ಫೋಟೋ ಶೂಟ್ ಮಾಡಿದ್ದು, ಇದೀಗ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದಲ್ಲಿ 13 ಶತಮಾನದ ಇತಿಹಾಸವಿರುವ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನವಿದೆ. ಇಲ್ಲಿ ನೆಲೆಸಿರೋ ಪರಮಾತ್ಮ ಇಲ್ಲಿಂದ 2 ಕಿಲೋಮೀಟರ್ ದೂರದಲ್ಲಿರುವ ಈ ಜಲಪಾತದಲ್ಲಿ ಸ್ನಾನ ಮಾಡುತ್ತಿದ್ದ ಎಂಬ ಐತಿಹ್ಯ ಇದೆ. ಹೀಗಾಗಿ ಇದಕ್ಕೆ …
Read More »ರವೀಂದ್ರ ಜಡೇಜಾ ಅವರ ಸ್ಫೋಟಕ ಆಟದಿಂದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್ಗಳ ರೋಚಕ ಜಯ
ದುಬೈ: ಆಲ್ರೌಂಡರ್ ರವೀಂದ್ರ ಜಡೇಜಾ ಅವರ ಸ್ಫೋಟಕ ಆಟದಿಂದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್ಗಳ ರೋಚಕ ಜಯ ಸಾಧಿಸಿದೆ. ಗೆಲ್ಲಲು 173 ರನ್ಗಳ ಸವಾಲನ್ನು ಪಡೆದ ಚೆನ್ನೈ ಅಂತಿಮವಾಗಿ 20 ಓವರ್ಗಳಲ್ಲಿ 178 ರನ್ ಹೊಡೆಯಿತು. ಈ ಪಂದ್ಯವನ್ನು ಕೋಲ್ಕತ್ತಾ ಸೋತಿರುವ ಕಾರಣ ಪ್ಲೇ ಆಫ್ ಹಾದಿ ಕಠಿಣವಾಗಿದ್ದು ಉಳಿದ ತಂಡಗಳ ಫಲಿತಾಂಶದ ಮೇಲೆ ನಿರ್ಧಾರವಾಗಲಿದೆ. ಚೆನ್ನೈ ಗೆದ್ದಿದ್ದು ಹೇಗೆ? 17. 2 …
Read More »ಈ ಬಾರಿ ಎಲ್ಲರೂ ಒಗ್ಗಟ್ಟಾಗಿ ಹದಿನಾರು ಸ್ಥಾನಗಳನ್ನು ಅವಿರೋಧ ಆಯ್ಕೆ ಮಾಡಿ, ರಾಜ್ಯಕ್ಕೆ ಒಳ್ಳೆಯ ಸಂದೇಶ ನೀಡಲು ನಿರ್ಧರಿಸಿದ್ದೇವೆ: ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ : ಕಳೆದ 2015ರಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆಯಿಂದ ಭಿನ್ನಾಭಿಪ್ರಾಯಗಳು ಮೂಡಿದ್ದವು. ಹೀಗಾಗಿ ಈ ಬಾರಿ ಎಲ್ಲರೂ ಒಗ್ಗಟ್ಟಾಗಿ ಹದಿನಾರು ಸ್ಥಾನಗಳನ್ನು ಅವಿರೋಧ ಆಯ್ಕೆ ಮಾಡಿ, ರಾಜ್ಯಕ್ಕೆ ಒಳ್ಳೆಯ ಸಂದೇಶ ನೀಡಲು ನಿರ್ಧರಿಸಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಪಕ್ಷದ ವರಿಷ್ಠರು ಸೂಚಿಸಿದ ಹಿನ್ನೆಲೆಯಲ್ಲಿ ನಮ್ಮಲ್ಲಿರುವ ಭಿನ್ನಾಪ್ರಾಯ ಬದಿಗಿಟ್ಟು ಒಂದಾಗಿ ಹೋಗುವ ನಿಟ್ಟಿನಲ್ಲಿ, ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿನ 16 ಕ್ಷೇತ್ರದಲ್ಲಿ …
Read More »