Breaking News

ಕರಾವಳಿಯ 5 ಭಾಗಗಳಲ್ಲಿ ಎಂಕೆ-4 ಮಾದರಿಯ ಡೈರಕ್ಷನಲ್ ವೇವ್ ರೈಡರ್ ಬಾಯ್

ಕಾರವಾರ: ಕಳೆದ ಹಲವು ವರ್ಷಗಳಿಂದ ಹವಾಮಾನ ವೈಪರಿತ್ಯ ಸೇರಿದಂತೆ ದೇಶದ ಕಡಲಿನಲ್ಲಾಗುವ ಬದಲಾವಣೆಯನ್ನು ತಕ್ಷಣ ಗುರುತಿಸಿ ಮಾಹಿತಿ ರವಾನೆ ಮಾಡಲು ಹವಾಮಾನ ಇಲಾಖೆಗೆ ಕಷ್ಟಸಾಧ್ಯವಾಗುತಿತ್ತು. ಇದರಿಂದ ಮಳೆ, ಸಮುದ್ರದಲ್ಲಿ ವೈಪರಿತ್ಯ ಆಗುವ ಮೊದಲೇ ನಿಖರವಾಗಿ ಮಾಹಿತಿ ನೀಡಲಾಗುತ್ತಿರಲಿಲ್ಲ. ಆದರೆ ಕೇಂದ್ರ ಸರ್ಕಾರ ಈಗ ದೇಶದ ಕರಾವಳಿ ಭಾಗದಲ್ಲಿ ಹೊಸ ತಂತ್ರಜ್ಞಾನ ಹೊಂದಿದ ಎಂಕೆ-4 ಮಾದರಿಯ ಡೈರಕ್ಷನಲ್ ವೇವ್ ರೈಡರ್ ಬಾಯ್ ಅನ್ನು ಕರಾವಳಿಯ 5 ಭಾಗಗಳಲ್ಲಿ ಅಳವಡಿಸುತ್ತಿದೆ. ಕರ್ನಾಟಕ ರಾಜ್ಯದ …

Read More »

ಹದಗೆಟ್ಟ ರಸ್ತೆಗಳಿಗಿಲ್ಲ ಮುಕ್ತಿ – ಅಂಬುಲೆನ್ಸ್ ನಲ್ಲೇ ಹೆರಿಗೆ

ರಾಯಚೂರು: ಕೆಟ್ಟ ರಸ್ತೆಗಳನ್ನ ಕಂಡಾಗ ಗರ್ಭಿಣಿಯರಿಗೆ ಇಲ್ಲೆ ಹೆರಿಗೆಯಾಗಿ ಬಿಡುತ್ತೆ ಅಂತ ಉದ್ಘಾರ ತೆಗೆಯುವುದು ಸಾಮಾನ್ಯ. ಆದರೆ ಅದು ರಾಯಚೂರು ಪಾಲಿಗೆ ಬಹುತೇಕ ನಿಜವಾಗಿದೆ. ಯಾಕಂದ್ರೆ ರಾಯಚೂರಿನ ರಸ್ತೆಗಳಲ್ಲೇ ಹೆರಿಗೆಯಾಗುವುದು ಸಾಮಾನ್ಯವಾಗಿದೆ. ಈ ಅಂಕಿ ಅಂಶಗಳನ್ನ ನೋಡಿದ್ರೆ ನೀವು ಗಾಬರಿಯಾಗದೆ ಇರಲ್ಲ. ಆಸ್ಪತ್ರೆ ಸೇರುವ ಮುನ್ನವೇ ಅಂಬುಲೆನ್ಸ್ ನಲ್ಲಿ ಹೆರಿಗೆಯಾಗುವುದರಲ್ಲಿ ರಾಜ್ಯದಲ್ಲೇ ರಾಯಚೂರು ಈಗ ನಂಬರ್ 1 ಆಗಿದೆ.ಅಂಬುಲೆನ್ಸ್ ನಲ್ಲಿ ಆರೋಗ್ಯ ಕವಚ ಸಿಬ್ಬಂದಿ ಸುಲಭ ಹೆರಿಗೆ ಮಾಡುವ ಮೂಲಕ …

Read More »

ನಕಲಿ ಸಹಿ ಬಳಸಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಆರೋಪದಡಿ ಸುಧೀರ್ ಅಂಗೂರ್, ಶೈಲಜಾ ಸೇರಿ 10 ಜನರ ವಿರುದ್ಧ FIR ದಾಖಲಾಗಿದೆ.

ಆನೇಕಲ್: ನಕಲಿ ಸಹಿ ಬಳಸಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಆರೋಪದಡಿ ಸುಧೀರ್ ಅಂಗೂರ್, ಶೈಲಜಾ ಸೇರಿ 10 ಜನರ ವಿರುದ್ಧ FIR ದಾಖಲಾಗಿದೆ. ಕಾಲೇಜ್ ಶುಲ್ಕ, ಟ್ಯೂಷನ್ ಫೀ, ಹಾಸ್ಟೆಲ್ ಫೀ ಎಂದು ಮಧುಕರ್ ಅವರ ನಕಲಿ ಸಹಿ ಬಳಸಿಕೊಂಡು ವಿದ್ಯಾರ್ಥಿಗಳ ಬಳಿ ಹಣ ವಸೂಲಿ ಮಾಡಿ ದುರುಪಯೋಗ ಮಾಡಿದ್ದಾರೆ ಎಂದು ಅಲಯನ್ಸ್ ವಿವಿ ಸಂಸ್ಥಾಪಕ ಮಧುಕರ್ ಅಂಗೂರ್‌ ದೂರು ದಾಖಲಿಸಿದ್ದರು. ದೂರು ಆಧರಿಸಿ ಸುಧೀರ್ ಅಂಗೂರ್, ಶೈಲಜಾ ಸೇರಿ …

Read More »

ರಾತ್ರೋರಾತ್ರಿ ಎಡಿಜಿಪಿ ಶ್ರೇಣಿಯ IPS ಅಧಿಕಾರಿ ಡಾ.ಪಿ. ರವೀಂದ್ರನಾಥ್ ಕಂಟ್ರೋಲ್ ರೂಂಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ರಾತ್ರೋರಾತ್ರಿ ಎಡಿಜಿಪಿ ಶ್ರೇಣಿಯ IPS ಅಧಿಕಾರಿ ಡಾ.ಪಿ. ರವೀಂದ್ರನಾಥ್ ಕಂಟ್ರೋಲ್ ರೂಂಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ರಾತ್ರಿ 10.30ಕ್ಕೆ ಕಂಟ್ರೋಲ್ ರೂಂಗೆ ತೆರಳಿ ಅಲ್ಲಿದ್ದ ಸಿಬ್ಬಂದಿ ಕೈಗೆ ರವೀಂದ್ರನಾಥ್ ರಾಜಿನಾಮೆ ಪತ್ರ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಸಮಾಧಾನ ಭುಗಿಲೆದ್ದಿರುವುದು ಗೋಚರವಾಗುತ್ತಿದೆ. ಸೀನಿಯಾರಿಟಿ ಇಲ್ಲದಿದ್ದರೂ ಸುನಿಲ್ ಕುಮಾರ್‌ಗೆ ಎಡಿಜಿಪಿ ಶ್ರೇಣಿಯಿಂದ ಡಿಜಿಪಿ ಶ್ರೇಣಿಗೆ ಬಡ್ತಿ ನೀಡಿರುವುದಕ್ಕೆ ರವೀಂದ್ರನಾಥ್ ಅಸಮಧಾನಗೊಂಡು ಈ ರೀತಿ ನಿರ್ಧಾರ …

Read More »

ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಮಲ್ಪೆ ಮೀನುಗಾರಿಕಾ ಬಂದರಲ್ಲಿ ಮೀನು ಹೆಕ್ಕುತ್ತಿದ್ದ 17 ಮಕ್ಕಳು ಇಲಾಖೆ ರಕ್ಷಿಸಿದೆ.

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣಾ ಘಟಕ ಕಾರ್ಮಿಕ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಒಟ್ಟು 17 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಮಲ್ಪೆ ಮೀನುಗಾರಿಕಾ ಬಂದರಲ್ಲಿ ಮೀನು ಹೆಕ್ಕುತ್ತಿದ್ದ 17 ಮಕ್ಕಳು ಇಲಾಖೆ ರಕ್ಷಿಸಿದೆ. ರಕ್ಷಿಸಲ್ಪಟ್ಟ ಬಾಲಕಾರ್ಮಿಕರೆಲ್ಲ ಕೊಪ್ಪಳ, ಬಳ್ಳಾರಿ ಮೂಲದವರು. ಈ ಜಂಟಿ ಕಾರ್ಯಾಚರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಸಾಥ್ ನೀಡಿದೆ. ಹಾಗೂ ಮಕ್ಕಳ ಸಹಾಯವಾಣಿ ನಾಗರಿಕ ಸೇವಾ ಟ್ರಸ್ಟ್ ಕಾರ್ಯಕರ್ತರು ರಕ್ಷಣೆಗೆ …

Read More »

Districts ರಥೋತ್ಸವಕ್ಕೂ ಕೋವಿಡ್ ಕರಿನೆರಳು – ದೊಡ್ಡ ರಥದ ಬದಲು ಚಿಕ್ಕ ತೇರಿನಲ್ಲಿ ಮೆರವಣಿಗೆ

ಮೈಸೂರು: ಚಾಮುಂಡೇಶ್ವರಿ ರಥೋತ್ಸವಕ್ಕೂ ಕೋವಿಡ್ ಕರಿನೆರಳು ಬಿದ್ದಿದೆ. ದೊಡ್ಡ ರಥದ ಬದಲು ಚಿಕ್ಕ ತೇರಿನಲ್ಲಿ ಮೆರವಣಿಗೆ ಸಾಗಿದೆ. ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‍ರಿಂದ ರಥ ಎಳೆದು ಚಾಲನೆ ನೀಡಿದ್ದು, ಚಾಮುಂಡೇಶ್ವರಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಗಿದೆ. ದಸರಾ ಮುಗಿದ ಬಳಿಕ ಮಹಾರಾಜರು ಜಾತ್ರೆ ಆಯೋಜನೆ ಮೂಲಕ ಭಕ್ತರಿಗೆ ಚಾಮುಂಡಿ ದರ್ಶನದ ವ್ಯವಸ್ಥೆ ಮಾಡಿದ್ದರು. ಇತಿಹಾಸದಲ್ಲೇ ಮೊದಲ ಬಾರಿಗೆ ಜನರಿಲ್ಲದ ಜಾತ್ರೆ ಇದಾಗಿದೆ. ರಥೋತ್ಸವದ ಸಂಭ್ರಮ, ಸಡಗರವನ್ನು ಮಹಾಮಾರಿ ಕಸಿದುಕೊಂಡಿದೆ. ದೊಡ್ಡ …

Read More »

ಎಂಜಿನಿಯರ್ ಬನ್ ಗಯಾ ಚಾಯ್‍ವಾಲಾ – ಬದುಕಿಗೆ ದಾರಿ ತೋರಿಸಿದ ಟೀ ಬ್ಯುಸಿನೆಸ್

ಬಾಗಲಕೋಟೆ: ಸದ್ಯ ದೇಶದ ಅತಿ ದೊಡ್ಡ ಸಮಸ್ಯೆಗಳಲ್ಲಿ ಒಂದು ನಿರುದ್ಯೋಗ. ಪ್ರಧಾನಿ ಮೋದಿಯವರೂ ನಿರುದ್ಯೋಗ ಸಮಸ್ಯೆಗೆ ಯುವಕರಿಗೆ ಪಕೋಡ ಮಾರಿ ಅಂತ ಕರೆ ನೀಡಿದರು. ಆದರೆ ಉತ್ತರ ಕರ್ನಾಟಕದ ಯುವಕನೊಬ್ಬ ತನ್ನ ಓದಿಗೆ ತಕ್ಕ ಕೆಲಸವೇ ಬೇಕೆಂದು ಸಮಯ ವ್ಯರ್ಥ ಮಾಡದೇ ಭಿನ್ನವಾಗಿ ಯೋಚಿಸಿ ಯಶಸ್ವಿಯಾಗಿದ್ದಾನೆ. ಎಂಜಿನಿಯರ್ ಬನ್ ಗಯಾ ಚಾಯ್ ವಾಲಾ. ಅರೇ ಇದೇನಿದು ಚಾಯ್ ಅಂಗಡಿ ಹೆಸರು ಡಿಫರೆಂಟ್ ಆಗಿದೆ. ಹೌದು ಅಲ್ಲೇ ಇರೋದು ಟ್ವಿಸ್ಟ್. ಅಮೀರ್ …

Read More »

ಅಪರಿಚಿತ ವ್ಯಕ್ತಿಗಳು ಅಂಗಡಿಗೆ ನುಗ್ಗಿಫೋಟೋಗ್ರಾಫರ್ ಮೇಲೆ ತಲ್ವಾರ್ ದಾಳಿ

ಮಂಗಳೂರು: ಏಕಾಏಕಿ ಸ್ಟುಡಿಯೋಗೆ ನುಗ್ಗಿ ಫೋಟೋಗ್ರಾಫರ್ ಮೇಲೆ ತಲ್ವಾರ್ ದಾಳಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ನಡೆದಿದೆ. ದಿನೇಶ್ ಕೊಟ್ಟಿಂಜ ದಾಳಿಗೊಳಗಾದ ಫೋಟೋಗ್ರಾಫರ್. ಇವರು ಫರಂಗಿಪೇಟೆಯಲ್ಲಿ ಸ್ಟುಡಿಯೋ ಇಟ್ಟುಕೊಂಡಿದ್ದಾರೆ. ಅಪರಿಚಿತ ವ್ಯಕ್ತಿಗಳು ಅಂಗಡಿಗೆ ನುಗ್ಗಿ ದಾಳಿ ಮಾಡಿದ್ದಾರೆ. ಘಟನೆಯಿಂದ ಗಂಭೀರ ಗಾಯಗೊಂಡ ದಿನೇಶ್ ಅವರನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಬಂಟ್ವಾಳ ಡಿ.ವೈ.ಎಸ್.ಪಿ ವೆಲೆಂಟೈನ್ ಡಿ.ಸೋಜ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ …

Read More »

ವಿಶ್ವ ಸೇರಿದಂತೆ ಇಡೀ ಭಾರತದ ಗಮನ ಸೆಳೆದಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್​ನನ್ನು ಬಿಡುಗಡೆ ಮಾಡುತ್ತಿರುವುದು

ದೆಹಲಿ: ವಿಶ್ವ ಸೇರಿದಂತೆ ಇಡೀ ಭಾರತದ ಗಮನ ಸೆಳೆದಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್​ನನ್ನು ಬಿಡುಗಡೆ ಮಾಡುತ್ತಿರುವುದು ಶಾಂತಿಗಾಗಿ ಎಂದು ಹೇಳಿದ್ದ ಪಾಕಿಸ್ತಾನದ ನಿಜ ರೂಪ ಬಯಲಾಗಿದೆ. ಅಭಿನಂದನ್​ ಬಿಡುಗಡೆಗೆ ಕಾರಣ ಬಯಲಾಗಿದೆ. ಭಾರತದ ಆ ಬಂದು ಮಾತಿಗೆ ಹೆದರಿ ಪಾಪಿ ಪಾಕಿಸ್ತಾನ ಬಾಲು ಮುದುಡಿಕೊಂಡಿತ್ತು. ಅಭಿನಂದನ್​ ಬಿಡುಗಡೆ ಮಾಡದಿದ್ರೆ ಭಾರತದಿಂದ ದಾಳಿ ಆಗುವ ಆತಂಕಕ್ಕೆ ಪಾಕ್​ ಸೇನೆ ಮುಖ್ಯಸ್ಥ ಖಮರ್ ಬಜ್ವಾ ಕಾಲುಗಳು ನಡುಗುತ್ತಿತ್ತು. 2019ರ ಪಾಕ್​ ಸರ್ವಪಕ್ಷ …

Read More »

ಮತ್ತೊಂದ್ಕಡೆ 2ನೇ‌ ಹಂತದ ಚುನಾವಣೆಗೂ ರಾಜಕೀಯ ಪಕ್ಷಗಳ ನಾಯಕರು ಪ್ರಚಾರ ಆರಂಭಿಸಿದ್ದಾರೆ. ಚುನಾವಣಾ ಕಾವು ಮತ್ತಷ್ಟು ಏರಿದೆ.

ದೆಹಲಿ : ಕೊರೊನಾ ಬಿಕ್ಕಟ್ಟಿನ ನಡುವೆ ಬಿಹಾರ ಮೊದಲ ಹಂತದ ಮತದಾನ ಯಶಸ್ವಿಯಾಗಿದೆ. 1066 ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರವಾಗಿದೆ. ಮತ್ತೊಂದ್ಕಡೆ 2ನೇ‌ ಹಂತದ ಚುನಾವಣೆಗೂ ರಾಜಕೀಯ ಪಕ್ಷಗಳ ನಾಯಕರು ಪ್ರಚಾರ ಆರಂಭಿಸಿದ್ದಾರೆ. ಚುನಾವಣಾ ಕಾವು ಮತ್ತಷ್ಟು ಏರಿದೆ. ರಾಷ್ಟ್ರ ರಾಜಕಾರಣದಲ್ಲಿ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆಗೆ ಬಿರುಸಿನ ಮತದಾನ ನಡೆದಿದೆ.‌ ಕೆಲ ಮತಗಟ್ಟೆಗಳಲ್ಲಿ ಮತಯಂತ್ರಗಳಲ್ಲಿ ಕಂಡುಬಂದ ದೋಷದಿಂದಾಗಿ ವೋಟಿಂಗ್ ತಡವಾಗಿ ಆರಂಭವಾಗಿತ್ತು. ಇಂತಹ ಸಣ್ಣಪುಟ್ಟ ಘಟನೆಗಳನ್ನು …

Read More »