ಬೆಂಗಳೂರು: ನಟಿ ಮೇಘನಾ ರಾಜ್ ಸರ್ಜಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮೂರು ತಿಂಗಳ ನಂತರ ಅದ್ಧೂರಿಯಾಗಿ ನಾಮಕರಣ ಮಾಡಲಾಗುವುದು ಎಂದು ಮೇಘನಾ ತಂದೆ ಸುಂದರ್ ರಾಜ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸುಂದರ್ ರಾಜ್, ತಿರುಪತಿ ತಿಮ್ಮಪ್ಪನ ಹರಕೆಯಿಂದ ನನ್ನ ಮೊಮ್ಮಗ ಹುಟ್ಟಿದ್ದಾನೆ. ಕನ್ನಡದ ನೆಲದಲ್ಲಿ ದಸರಾ ಹಬ್ಬದ ವೇಳೆ ಮೊಮ್ಮಗು ಹುಟ್ಟಿರೋದು ಶುಭ ಸೂಚಕ. ನವೆಂಬರ್ 1 ರಂದು ಮೇಘನಾ ರಾಜ್ ಎಲ್ಲರ ಜೊತೆ ಮಾತನಾಡುತ್ತಾರೆ. ಕೊರೊನಾ ಕಾಲದಿಂದಾಗಿ …
Read More »ಸೇಂದಿ ಕಾಯಿಸುವ ಅಡ್ಡೆ ಮೇಲೆ ಅಬಕಾರಿ ಇಲಾಖೆ ದಾಳಿ
ಯಾದಗಿರಿ: ಸೇಂದಿ ಕಾಯಿಸುವ ಅಡ್ಡೆ ಮೇಲೆ ಯಾದಗಿರಿ ಅಬಕಾರಿ ಇಲಾಖೆ ಇಂದು ದಾಳಿ ನಡೆಸಿದೆ. ದಾಳಿಯಲ್ಲಿ ಸಂಗ್ರಹಿಸಿಟ್ಟ 1,030 ಲೀಟರ್ ಕಳ್ಳಭಟ್ಟಿಯನ್ನು ವಶಪಡಿಸಿಕೊಳ್ಳಲಾಗಿದೆ. ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಕುರಬಗೇರಾ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದಲೂ ಕಳ್ಳಭಟ್ಟಿ ತಯಾರು ಮತ್ತು ಮಾರಾಟ ಮಾಡುವ ದಂಧೆ ಬಗ್ಗೆ ಖಚಿತ ಮಾಹಿತಿ ಪಡೆದ ಅಬಕಾರಿ ಇಲಾಖೆಯ ಪೊಲೀಸರು, ಯಾದಗಿರಿ ಅಬಕಾರಿ ಉಪ ಅಧೀಕ್ಷಕರ ಸೂಚನೆ ಮೇರೆಗೆ, ಉಪ ವಿಭಾಗ ಶಹಾಪೂರ ಅಧಿಕಾರಿ ಬಸವರಾಜ ಜಾಮಗೊಂಡ …
Read More »ಪಿಪಿಇ ಕಿಟ್ ಧರಿಸಿ ಮತ ಚಲಾಯಿಸಿದ ಕೊರೊನಾ ಸೋಂಕಿತರು
ಧಾರವಾಡ/ಹುಬ್ಬಳ್ಳಿ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಕೊನೆಯ ಒಂದು ತಾಸು ಮತದಾನ ಅವಧಿಯನ್ನು ಕೋವಿಡ್ ಸೋಂಕಿತರು ತಮ್ಮ ಹಕ್ಕು ಚಲಾಯಿಸಲು ಮೀಸಲಿಡಲಾಗಿತ್ತು. ಈ ವೇಳೆ ಅಣ್ಣಿಗೇರಿ ಪುರಸಭೆಯ ಮತಗಟ್ಟೆ ಸಂಖ್ಯೆ 50ರಲ್ಲಿ ಇಬ್ಬರು ಕೊರೊನಾ ಸೋಂಕಿತರು ಪಿಪಿಇ ಕಿಟ್ ಧರಿಸಿ ಕೋವಿಡ್ ನಿಯಂತ್ರಣದ ಎಲ್ಲ ಮುಂಜಾಗ್ರತಾ ಕ್ರಮಗಳೊಂದಿಗೆ ಮತ ಚಲಾಯಿಸಿದರು. ಹೋಂ ಐಸೋಲೇಷನ್ ನಲ್ಲಿದ್ದ ಓರ್ವ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿದ್ದ ಓರ್ವ ಪಿಪಿಇ ಕಿಟ್ ಧರಿಸಿ ಮತದಾನ …
Read More »ಜನರೇ ಗಮನಿಸಿ, ಕೊರೊನಾ ಸೋಂಕಿತರ ಸಾವಿಗೆ ವಾಯುಮಾಲಿನ್ಯವೂ ಕಾರಣ
ನವದೆಹಲಿ: ಜನರೇ ವಾತಾವರಣವನ್ನು ಸ್ವಚ್ಛವಾಗಿರಿಸಿ. ಯಾಕೆಂದರೆ ಕೊರೋನಾ ಸಾವಿಗೆ ವಾಯುಮಾಲಿನ್ಯವೂ ಈಗ ಕಾರಣವಾಗಿರುವುದು ಅಧ್ಯಯನದಿಂದ ದೃಢಪಟ್ಟಿದೆ. ಮಾಲಿನ್ಯದ ಜೊತೆ ಸೇರಿ ಕೊರೋನಾ ಪ್ರಾಣಕ್ಕೆ ಕುತ್ತು ತರಬಹುದು ಹುಷಾರ್ ಅಂತ ಕೇಂದ್ರ ಆರೋಗ್ಯ ಇಲಾಖೆ ಹಾಗೂ ಐಸಿಎಂಆರ್ ಆತಂಕ ವ್ಯಕ್ತಪಡಿಸಿದೆ. ವಿದೇಶಗಳಲ್ಲಿ ನಡೆಸಿದ ಅಧ್ಯಯನದ ಮೇಲೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾಹಿತಿಯನ್ನು ಹಂಚಿಕೊಂಡಿದೆ. ಏನಿದು ಅಧ್ಯಯನ? ಯುರೋಪ್, ಅಮೆರಿಕದ ಅಧ್ಯಯನದ ಪ್ರಕಾರ ಕಲುಷಿತ ಗಾಳಿಯೂ ಕೊರೊನಾ ರೋಗಿಗಳ ಸಾವಿಗೆ …
Read More »ಬಸ್ ಡಿಕ್ಕಿಯಲ್ಲಿದ್ದ 64 ಲಕ್ಷ ನಗದು ಸೀಜ್
ತುಮಕೂರು: ಖಾಸಗಿ ಬಸ್ಸಿನ ಡಿಕ್ಕಿಯಲ್ಲಿ 64,40,000 ನಗದು ಪತ್ತೆಯಾಗಿದೆ.ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಚುನಾವಣಾ ಚೆಕ್ ಪೋಸ್ಟ್ ನಲ್ಲಿ ಸಿಕ್ಕಿರುವ ಯಾವುದೇ ದಾಖಲೆ ಇಲ್ಲದ 64,40,000 ಹಣ ಸಿಕ್ಕಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿರೋ ಕಳ್ಳಂಬೆಳ್ಳ ಚೆಕ್ ಪೋಸ್ಟ್ ನಲ್ಲಿ ಈ ಹಣ ಖಾಸಗಿ ಬಸ್ಸಿನ ಡಿಕ್ಕಿಯಲ್ಲಿ ಸಿಕ್ಕಿದೆ. ಹಣವನ್ನು ಚುನಾವಣಾಧಿಕಾರಿ ನಂದಿನಿದೇವಿ ನೇತೃತ್ವದಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ.
Read More »ಕೊರೊನಾ ಲಸಿಕೆ ಪ್ರಯೋಗಕ್ಕೆ ಒಳಗಾದ ಮೈಸೂರಿನ ವೈದ್ಯ ದಂಪತಿ
ಮೈಸೂರು: ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಅಭಿವೃದ್ಧಿ ಪಡಿಸಿರುವ ಪ್ರಯೋಗ ಹಂತದಲ್ಲಿರುವ ಕೋವಿಶಿಲ್ಡ್ ಲಸಿಕೆಯನ್ನು ಮೈಸೂರಿನ ವೈದ್ಯ ದಂಪತಿಯನ್ನು ಹಾಕಿಸಿಕೊಂಡಿದ್ದಾರೆ. 3ನೇ ಹಂತದ ಲಸಿಕೆಯನ್ನು ಮೈಸೂರಿನ ವೈದ್ಯೆ ಶಿಲ್ಪ ಸಂತೃಪ್ತ್ ಹಾಗೂ ಅವರ ಪತಿ ಡಾ. ಸಂತೃಪ್ತ್ ಹಾಕಿಸಿ ಕೊಂಡಿದ್ದಾರೆ. ಈ ಬಗ್ಗೆ ಡಾ. ಶಿಲ್ಪ ಸಂತೃಪ್ತ್ ಮಾತನಾಡಿದ್ದಾರೆ. ಅ. 1 ರಂದು ಕೊರೊನಾ ಲಸಿಕೆ ಹಾಕಿಸಿಕೊಂಡಿರುವ ವೈದ್ಯೆ ಶಿಲ್ಪ ಲಸಿಕೆ ಪಡೆದು 28 ದಿನಗಳಿಂದ ಆರೋಗ್ಯದಿಂದಿದ್ದಾರೆ. ಇನ್ನೂ ಎರಡು ಇಂಜೆಕ್ಷನ್ ಪಡೆಯಬೇಕಿದ್ದು …
Read More »ಮುನಿರತ್ನ ಕೂಡ ದರ್ಶನ್ ಆಪ್ತರಲ್ಲಿ ಒಬ್ಬರಾಗಿದ್ದು ಚುನಾವಣಾ ಪ್ರಚಾರಕ್ಕೆ ಗಜ ಬರ್ತಾರೆ ಎನ್ನಲಾಗ್ತಿದೆ.
ಬೆಂಗಳೂರು: ಆರ್.ಆರ್ ನಗರ ಕ್ಚೇತ್ರದ ಉಪಚುನಾವಣೆ ಪ್ರಚಾರ ಕಣ ಕ್ಲೈಮಾಕ್ಸ್ ಗೆ ಬರ್ತಿದೆ. ಕ್ಲೈಮಾಕ್ಸ್ ನಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ಕಣಕ್ಕೆ ಧುಮುಕಲಿದ್ದಾರೆ. ಈ ಮೂಲಕ ಆರ್ ಆರ್ ನಗರದಲ್ಲಿ ಸಾರಥಿ ಧೂಳೆಬ್ಬಿಸ್ತಾರೆ ಎನ್ನಲಾಗ್ತಿದೆ. ಸ್ಯಾಂಡಲ್ವುಡ್ನ ಚಾಲೆಜಿಂಗ್ ಸ್ಟಾರ್ ದರ್ಶನ್, ಕನ್ನಡದ ಸೂಪರ್ ಸ್ಟಾರ್ ಹಾಗೂ ಅಪಾರ ಅಭಿಮಾನಿಗಳನ್ನು ಹೊಂದಿರೋ ಯಜಮಾನ ಎರಡು ವರ್ಷಗಳ ಹಿಂದೆ ಇದೇ ದಾಸ ಮಂಡ್ಯ ಎಲೆಕ್ಷನ್ನಲ್ಲಿ ಮಿಂಚಿದ್ದನ್ನು …
Read More »ಭಾರೀ ಸಂಚಲನ ಸೃಷ್ಟಿಸಿದ್ದ ಐಎಂಎ ಬಹುಕೋಟಿ ವಂಚನೆ,ಮನ್ಸೂರ್ ಖಾನ್ಗೆ ಹೈಕೋರ್ಟ್ ಜಾಮೀನು ನೀಡಿದೆ.
ಬೆಂಗಳೂರು: ಭಾರೀ ಸಂಚಲನ ಸೃಷ್ಟಿಸಿದ್ದ ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮನ್ಸೂರ್ ಖಾನ್ಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನೀಡಿದೆ. ಮನ್ಸೂರ್ ಖಾನ್ ವಿರುದ್ಧ ಇಡಿ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಕೆಲ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ. ಅಧೀನ ನ್ಯಾಯಾಲಯ ಸೂಚಿಸಿದಾಗ ವಿಚಾರಣೆಗೆ ಹಾಜರಾಗಬೇಕು, ಯಾವುದೇ ಕಾರಣಕ್ಕೂ ಸಾಕ್ಷ್ಯ ನಾಶ ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. …
Read More »ನಮ್ಮಲ್ಲಿರುವುದು ಕೆಂಪು, ಬಿಳಿ ರಕ್ತ ಕಣ, ಡಿ.ಕೆ.ಸುರೇಶ್ಗೆ ಬಯಾಲಜಿ ಪುಸ್ತಕ ಕೊಡಿ- ಸುಧಾಕರ್
ಕೋಲಾರ: ಸಂಸದ ಡಿ.ಕೆ.ಸುರೇಶ್ ಅವರ ಕೇಸರಿ ರಕ್ತ ಹೇಳಿಕೆಗೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ.ಸುಧಾಕರ್ ಟಾಂಗ್ ನೀಡಿದ್ದು, ನಮ್ಮಲ್ಲಿರುವುದು ಕೆಂಪು ಹಾಗೂ ಬಿಳಿ ರಕ್ತ ಕಣಗಳು ಎಂದಿದ್ದಾರೆ. ನಗರದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಸುರೇಶ್ ಕೇಸರಿ ರಕ್ತ ಹೇಳಿಕೆ ವಿಚಾರಕ್ಕೆ ತಿರುಗೇಟು ನೀಡಿ, ಅವರಿಗೆ ಬಯಾಲಜಿ ಪುಸ್ತಕ ಕೊಡಿಸುತ್ತೇನೆ ನೋಡಿಕೊಳ್ಳಲಿ. ನನಗೆ ಗೊತ್ತಿರೋದು ಬಿಳಿ ಹಾಗೂ ಕೆಂಪು ರಕ್ತ ಕಣ ಅಷ್ಟೆ ಕೇಸರಿ ರಕ್ತ ಕಣ ಇರೋದು …
Read More »ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ವಿಷಪ್ರಸಾದ ದುರಂತ ಪ್ರಕರಣ ಮಾಸುವ ಮುನ್ನವೇ ಇದೀಗ ಮಂಡ್ಯದಲ್ಲೂ ಮಾರಮ್ಮನ ಪ್ರಸಾದ ಸ್ವೀಕರಿಸಿದ ಭಕ್ತರು ಅಸ್ವಸ್ಥರಾಗಿದ್ದಾರೆ.
ಮಂಡ್ಯ: ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ವಿಷಪ್ರಸಾದ ದುರಂತ ಪ್ರಕರಣ ಮಾಸುವ ಮುನ್ನವೇ ಇದೀಗ ಮಂಡ್ಯದಲ್ಲೂ ಮಾರಮ್ಮನ ಪ್ರಸಾದ ಸ್ವೀಕರಿಸಿದ ಭಕ್ತರು ಅಸ್ವಸ್ಥರಾಗಿದ್ದಾರೆ.ಪ್ರಸಾದ ಸೇವನೆ ಬಳಿಕ ಗ್ರಾಮದ 60ಕ್ಕೂ ಹೆಚ್ಚು ಮಂದಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ಜಿಲ್ಲೆಯ ಮಳವಳ್ಳಿ ತಾಲೂಕಿನ ಲಿಂಗಪಟ್ಟಣದಲ್ಲಿ ಮಾರಮ್ಮ ದೇವಾಲಯದ ಪ್ರಸಾದ ಸೇವಿಸಿದ 60 ಮಂದಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ. 60 ಜನರ ಪೈಕಿ ಐವರು ತೀವ್ರ ಸುಸ್ತಿನಿಂದ ಬಳಲಿದ್ದು. ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯಾಧಿಕಾರಿಗಳು ಗ್ರಾಮದಲ್ಲೇ …
Read More »