ಬೆಳಗಾವಿ: ರಾಜ್ಯ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಜನರಿಗೆ ರಾಜ್ಯೋತ್ಸವ ಪ್ರಕಟಿಸಿದೆ. ಅದರಲ್ಲಿ ಉತ್ತರ ಕರ್ನಾಟಕ 16 ಈ ಪ್ರಶಸ್ತಿ ಭಾಜನರಾಗಿದ್ದಾರೆ. ಕಲೆ, ಸಾಹಿತ್ಯ, ಹಾಗೂ ಸಂಗೀತ, ಮಾಧ್ಯಮ ಸೇರಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಹೆಸರು ಪ್ರಕಟಿಸಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರ ಹೆಸರು. ಸಾಹಿತ್ಯ ಕ್ಷೇತ್ರ ಪ್ರೊ. ಸಿ.ಪಿ ಸಿದ್ದರಾಮ್- ಧಾರವಾಡ ವಿ. ಮುನಿ ವೆಂಕಟಪ್ಪ- ಕೋಲಾರ ರಾಮಣ್ಣ ಬ್ಯಾಟಿ(ವಿಶೇಷ …
Read More »ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ ಪ್ರವರ್ಗ ‘ 2ಎ’ ಮೀಸಲಾತಿ ನೀಡುವಂತೆ ಆಗ್ರಹಿಸಿ ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಇಂದು ಬೃಹತ್ ಪ್ರತಿಭಟನೆ
ಬೆಳಗಾವಿ : ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ ಪ್ರವರ್ಗ ‘ 2ಎ’ ಮೀಸಲಾತಿ ನೀಡುವಂತೆ ಆಗ್ರಹಿಸಿ ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಇಂದು ಬೃಹತ್ ಪ್ರತಿಭಟನೆ ಆರಂಭವಾಗಿದೆ. ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿರುವ ಉಪವಾಸ ಸತ್ಯಾಗ್ರಹ ಅಂಗವಾಗಿ ತಾಲ್ಲೂಕಿನ ಹಿರೇಬಾಗೇವಾಡಿಯಿಂದ ದ್ವಿಚಕ್ರ ವಾಹನ ಹಾಗೂ ಕಾರುಗಳಲ್ಲಿ ಸಮಾಜದವರು ಮೆರವಣಿಗೆ ಆರಂಭಿಸಿದ್ದರು. ಆ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸ್ವಾಮೀಜಿ, …
Read More »ಡಿಸಿಸಿ ಬ್ಯಾಂಕ್, ಬೆಳಗಾವಿ ಲೋಕಸಭೆ ಚುನಾವಣೆ ಟಿಕೆಟ್ ಫೈಟ್ : ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಗರದ ಖಾಸಗಿ ಹೊಟೇಲ್ ನಲ್ಲಿ ಮಂಗಳವಾರ ತಡರಾತ್ರಿವರೆಗೂ ರಹಸ್ಯ ಸಭೆ
ಹುಬ್ಬಳ್ಳಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ) ಚುನಾವಣೆ ಮತ್ತು ಸುರೇಶ ಅಂಗಡಿ ನಿಧನದಿಂದ ತೆರವಾಗಿರುವ ಲೋಕಸಭಾ ಕ್ಷೇತ್ರದ ಟಿಕೆಟ್ ಅಂತಿಮ ಗೊಳಿಸುವ ಸಂಬಂಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಗರದ ಖಾಸಗಿ ಹೊಟೇಲ್ ನಲ್ಲಿ ಮಂಗಳವಾರ ತಡರಾತ್ರಿವರೆಗೂ ರಹಸ್ಯ ಸಭೆ ನಡೆಸಿದೆ. ಸುಮಾರು ನಾಲ್ಕು ಗಂಟೆ ನಡೆದ ಸಭೆಯಲ್ಲಿ ಧಾರವಾಡ, ಬೆಳಗಾವಿ ಮತ್ತು ಕೊಪ್ಪಳ ಜಿಲ್ಲೆಯ ಬಿಜೆಪಿಯ ಪ್ರಮುಖರು ಪಾಲ್ಗೊಂಡಿದ್ದರು. ಕೇಂದ್ರ …
Read More »ಮಹಾರಾಷ್ಟ್ರದಲ್ಲಿ ಕರ್ನಾಟಕ ಮೂಲದ ಶಿವಸೇನೆ ಮುಖಂಡನ ಕೊಲೆ
ಮುಂಬೈ, ಅ.27- ಶಿವಸೇನೆ ಅಧಿಕಾರದಲ್ಲಿರುವ ಮಹಾರಾಷ್ಟ್ರದಲ್ಲಿ ಅದೇ ಪಕ್ಷದ ಯುವ ನಾಯಕರೊಬ್ಬರ ಭೀಕರ ಕೊಲೆಯಾಗಿದೆ. ಅಷ್ಟಕ್ಕೂ ಕೊಲೆಯಾದವರು ಕನ್ನಡಿಗರು ಎನ್ನುವುದು ಗಮನಾರ್ಹ. ಈ ಕೊಲೆಯಿಂದ ಮಹಾರಾಷ್ಟ್ರ ಬೆಚ್ಚಿ ಬಿದ್ದಿದೆ. ಕೊಲೆಯಾದ ವ್ಯಕ್ಯಿಯನ್ನು ಶಿವಸೇನಾ ಯುವ ಘಟಕದ ಮಾಜಿ ಅಧ್ಯಕ್ಷ ರಾಹುಲ್ ಶೆಟ್ಟಿ (43) ಎಂದು ಗುರುತಿಸಲಾಗಿದೆ. ರಾಹುಲ್ ಶೆಟ್ಟಿ ಅವರಿಗೆ ತಾಯಿ, ಪತ್ನಿ, ಒಬ್ಬ ಮಗ ಮತ್ತು ಮಗಳು ಇದ್ದಾರೆ. ಕರ್ನಾಟಕ ಕರಾವಳಿ ಮೂಲದ ಇವರು ತಮಗೆ ಜೀವ ಬೆದರಿಕೆ …
Read More »ಮಳೆ ಪರಿಹಾರ ವಿತರಣೆಯಲ್ಲಿ ಯಡವಟ್ಟು ಮಾಡಿದ ಬಿಬಿಎಂಪಿ ಅಧಿಕಾರಿಗಳು
ಬೆಂಗಳೂರು, ಅ.27- ಮಳೆ ಅನಾಹುತಕ್ಕೆ ಕಾರಣವಾಗುವ ಒತ್ತುವರಿಯನ್ನು ನಿರ್ದಾಕ್ಷಿಣ್ಯ ವಾಗಿ ತೆರವು ಮಾಡಲಾಗುವುದು ಎಂದು ಸಿಎಂ ಬೊಬ್ಬೆ ಹೊಡೆದಿದ್ದಾರೆ. ಆದರೆ ಬಿಬಿಎಂಪಿ ಅಧಿಕಾರಿಗಳು ಮಾತ್ರ ಒತ್ತುವರಿ ಮಾಡಿಕೊಂಡಿರುವ ಮನೆಗಳಿಗೆ ಪರಿಹಾರ ನೀಡಿ ಯಡವಟ್ಟು ಮಾಡಿದ್ದಾರೆ. ಇತ್ತೀಚೆಗೆ ಬಿದ್ದ ಭಾರೀ ಮಳೆಯಿಂದ ಹೊಸಕೆರೆ ಹಳ್ಳಿಯ ದತ್ತಾತ್ರೇಯ ಬಡಾವಣೆ ಮತ್ತಿತರ ಪ್ರದೇಶಗಳಲ್ಲಿ ಭಾರೀ ಅನಾಹುತ ಸಂಭವಿಸಿತ್ತು. ಮಳೆ ಸಂತ್ರಸ್ತರಿಗೆ ಎನ್‍ಡಿಆರ್‍ಎಫ್ ಮತ್ತು ಎಸ್‍ಡಿಆರ್‍ಎಫ್ ಯೋಜನೆಯಡಿ ಪರಿಹಾರ ಧನ ನೀಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದರು. ಇದೇ …
Read More »ಬೆಂಗಳೂರು ಉತ್ತರ ವಿಭಾಗಕ್ಕೆ ಕೇರಳದ ಪೊಲೀಸ್ ಪಡೆ
ಬೆಂಗಳೂರು,ಅ.27- ಚುನಾವಣಾ ಬಂದೋಬಸ್ತ್‍ಗಾಗಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉತ್ತರ ವಿಭಾಗಕ್ಕೆ ಕೇರಳದ ಪೊಲೀಸ್ ಪಡೆ ಆಗಮಿಸಿದೆ. ನಿನ್ನೆ ನಗರಕ್ಕೆ ಆಗಮಿಸಿರುವ ಕೇರಳ ರಾಜ್ಯದ ಸಶಸ್ತ್ರ ಮೀಸಲು ಪಡೆ(ಕೆಎಸ್‍ಎಪಿ) ಇಂದು ಉತ್ತರ ವಿಭಾಗದ ಜಾಲಹಳ್ಳಿ, ಆರ್‍ಎಂಸಿಯಾರ್ಡ್ ಮುಂತಾದ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಪಥಸಂಚಲನ ನಡೆಸಲಿದೆ. ಈಗಾಗಲೇ ಈ ವಿಭಾಗಕ್ಕೆ ಸಿಐಎಸ್‍ಎಫ್ ಒಂದು ಕಂಪನಿ ಬಂದಿದ್ದು, ಅದನ್ನು ಚುನಾವಣಾ ಬಂದೋಬಸ್ತ್‍ಗೆ ನಿಯೋಜಿಸಲಾಗಿದೆ. ಉತ್ತರ ವಿಭಾಗದ 8 ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಮತದಾನ …
Read More »ಅಣ್ಣಾವ್ರ ಕೈ ಸ್ಪರ್ಶಿಸಿದ್ದೇ ನನ್ನ ಭಾಗ್ಯ: ನಟ ಗಣೇಶ್ ರಾವ್ ಕೇಸರ್ಕರ್
ನಟನೆಯ ವ್ಯಾಮೋಹಕ್ಕೆ ಸಿಲುಕಿ ಕೈಯಲ್ಲಿ ಸ್ವಂತ ಕೆಲಸವಿದ್ರೂ ಕಲಾ ಸರಸ್ವತಿಯ ಆರಾಧನೆಗೆ ಬಣ್ಣದ ಲೋಕಕ್ಕೆ ಕಾಲಿಟ್ಟು ಚಿಕ್ಕ ಚಿಕ್ಕ ಪಾತ್ರಗಳಲ್ಲೇ ಖುಷಿಪಡುತ್ತಾ ಇಂದು ಸಾಕಷ್ಟು ಹೆಸರು ಗಳಿಸಿರುವ ನಟ ಗಣೇಶ್ ರಾವ್ ಕೇಸರ್ಕರ್. ತಮ್ಮ 20 ವರ್ಷಗಳ ಕಿರುತೆರೆ, ಹಿರಿತೆರೆ ಜರ್ನಿಯ ಬಗ್ಗೆ ನಮ್ಮೊಂದಿಗೆ ಮಾತನಾಡಿದ್ದಾರೆ. * ನಿಮ್ಮ ಹಿನ್ನೆಲೆ ಬಗ್ಗೆ ಹೇಳಿ.. ಮೂಲತಃ ಕೊಳ್ಳೆಗಾಲದವನು. ನಮ್ಮ ತಂದೆ ಮಿಲಿಟರಿ ಅಧಿಕಾರಿ. ನಾನು ಡಿಪ್ಲೋಮ ಇನ್ ಆಟೋಮೊಬೈಲ್ ಎಂಜಿನಿಯರಿಂಗ್ ಮುಗಿಸಿದ್ದೇನೆ. …
Read More »ಮಾರುವೇಷದಲ್ಲಿ ಮೈಸೂರು ಸುತ್ತಿದ್ದಾರೆ. ಹಲವು ನಟ, ನಟಿಯರು
ಮೈಸೂರು: ಸ್ಟಾರ್ ನಟ ಎಂದರೆ ಸಾಮಾನ್ಯ ದಿನಗಳಲ್ಲೇ ಜನ ಮುಗಿ ಬೀಳುತ್ತಾರೆ. ಇನ್ನೂ ದಸರಾ ಸಂದರ್ಭದಲ್ಲಿ ಕೇಳ್ತೀರಾ ಇರುವೆ ತರ ಮುತ್ತಿಕೊಳ್ಳುತ್ತಾರೆ. ಇದರಿಂದಾಗಿಯೇ ಹಲವು ನಟ, ನಟಿಯರು ಮಾರುವೇಷದಲ್ಲಿ ಸುತ್ತಾಡುತ್ತಾರೆ. ಅದೇ ರೀತಿ ದಸರಾ ನೋಡಲು ನಟ ನೀನಾಸಂ ಸತೀಶ್ ಮಾರುವೇಷದಲ್ಲಿ ಮೈಸೂರು ಸುತ್ತಿದ್ದಾರೆ. ಹೌದು ಮೈಸೂರು ದಸರಾ ನೋಡುವ ಆಸೆ ಯಾರಿಗಿರಲ್ಲ ಹೇಳಿ, ಅದರೆ ಜನಪ್ರಿಯ ನಟರು ಜನಸಾಮಾನ್ಯರಂತೆ ಜಾಲಿಯಾಗಿ ನಿಂತು ದಸರಾ ವೀಕ್ಷಿಸಲು ಸಾಧ್ಯವಿಲ್ಲ. ಹೀಗೆ ಮಾಡಿದರೆ …
Read More »ಕಾರ್, ಬೈಕ್‍ನಲ್ಲಿ ಒಬ್ಬರೇ ಇದ್ದರೂ ಮಾಸ್ಕ್ ಕಡ್ಡಾಯ
ಬೆಂಗಳೂರು: ಕಾರಿನಲ್ಲಿ ಅಥವಾ ಬೈಕ್‍ನಲ್ಲಿ ಒಬ್ಬರೇ ಇದ್ದೇವೆ ಎಂದು ಮಾಸ್ಕ್ ಧರಿಸದೆ ಸಂಚರಿಸುವಂತಿಲ್ಲ. ಒಬ್ಬರೇ ಇದ್ದರೂ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಲೇಬೇಕೆಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಕಾರಿನಲ್ಲಿ ಒಬ್ಬರೇ ಇದ್ದೇವೆಂದು ಮೈಮರೆತು ಕುಳಿತರೆ ದಂಡ ಬೀಳುವುದು ಪಕ್ಕಾ. ಬೈಕಿನಲ್ಲಿ ಸಹ ಒಬ್ಬರೇ ಇದ್ದೇವೆ ಎಂದು ಮಾಸ್ಕ್ ಧರಿಸದಿದ್ದರೆ ದಂಡ ಕಟ್ಟಬೇಕಾಗುತ್ತದೆ. ಮಾಸ್ಕ್ ಧರಿಸುವ ಕುರಿತು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಸ್ಪಷ್ಟ ಆದೇಶ ಹೊರಡಿಸಿದ್ದು, ತಿನ್ನುವಾಗ, ಕುಡಿಯುವಾಗ, ಈಜುವಾಗ ಮಾತ್ರ ಮಾಸ್ಕ್ …
Read More »ನಿಷೇಧವಿದ್ರೂ ಹಣಕ್ಕಾಗಿ ಕಾವೇರಿ ನದಿಯಲ್ಲಿ ಡೇಂಜರಸ್ ತೆಪ್ಪದ ಸವಾರಿ!
ಚಾಮರಾಜನಗರ: ಕೊರೊನಾ ಭಯ, ಲಾಕ್‍ಡೌನ್‍ನಿಂದ ಕಳೆದ ಏಳೆಂಟು ತಿಂಗಳಿನಿಂದ ಮನೆಯಲ್ಲಿಯೇ ಇದ್ದ ಜನ ಈಗ ಪ್ರವಾಸಿ ತಾಣಗಳತ್ತ ಮುಖ ಮಾಡ್ತಿದ್ದಾರೆ. ರಾಜ್ಯದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗ ದಂಡೇ ನೆರೆದಿದೆ. ಮೋಜು ಮಸ್ತಿಯ ಮೂಡ್‍ನಲ್ಲಿರೋ ಜನ ಕೊಂಚ ಮೈಮರೆತಂತೆ ಕಾಣುತ್ತಿದೆ. ಇದನ್ನೇ ಬಂಡವಾಳ ಮಾಡ್ಕೊಂಡಿರೋರು ಜನರ ಜೀವದ ಜೊತೆ ಚೆಲ್ಲಾಟವಾಡ್ತಿದ್ದಾರೆ. ಹೌದು. ಕಾವೇರಿ ಮೈದುಂಬಿ ಹರಿಯುತ್ತಿದ್ದು ಕೊಳ್ಳೆಗಾಲದ ಭರಚುಕ್ಕಿಗೆ ಪ್ರವಾಸಿಗರ ದಂಡೇ ಬರುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರೋ ಇಲ್ಲಿನವರು ಪ್ರವಾಸಿಗರಿಗೆ ತೆಪ್ಪದ …
Read More »