Breaking News

ಬಿಜೆಪಿ ಮುಖಂಡನ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ:

ಮಂಗಳೂರು: ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರೂ ನೀಡುವುದಾಗಿ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್, ಬಿಲ್ಲವ ಸಮುದಾಯದ ನಾಯಕಿ ಪ್ರತಿಭಾ ಕುಳಾಯಿ ಹೇಳಿದ್ದಾರೆ. ದಕ್ಷಿಣ ಕನ್ನಡ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ, ಕೋಟಿ ಚೆನ್ನೈಯ್ಯರ ವಿರುದ್ಧ ಕೀಳಾಗಿ ಮಾತನಾಡಿದ್ದರು. ನಾಲ್ಕು ದಿನಗಳ ಒಳಗಾಗಿ ಜಗದೀಶ್ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿಯುತ್ತೇವೆ. ಹೀಗೆ ಮಸಿ ಬಳಿಯುವ ಬಿಲ್ಲವ ಯುವಕರಿಗೆ 1 ಲಕ್ಷ …

Read More »

ಒಂದು ಟ್ವೀಟ್ ಮತ್ತು ಟೂಲ್​ಕಿಟ್​ನಿಂದ ಹಲವು ಸಂಗತಿಗಳು ಬಯಲಾಗಲಿವೆ: ವಿದೇಶಾಂಗ ಸಚಿವ

ದೆಹಲಿ: ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟದ ಬಗ್ಗೆ ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ಮಾಡಿದ್ದ ಟ್ವೀಟ್​ಗೆ, ಭಾರತೀಯ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು ಸರಿ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಸಮರ್ಥನೆ ಮಾಡಿಕೊಂಡಿದ್ದಾರೆ. ಸ್ವೀಡನ್​ನ ಯುವ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್​ಬರ್ಗ್ ಡಿಲೀಟ್ ಮಾಡಿರುವ ಟ್ವೀಟ್​ನಲ್ಲಿ ಟೂಲ್​ಕಿಟ್ ಡಾಕ್ಯುಮೆಂಟ್ ಹಂಚಿಕೊಂಡಿದ್ದಳು. ಅದಾದ ಬಳಿಕ ದೆಹಲಿ ಪೊಲೀಸರು, ಟೂಲ್​ಕಿಟ್​ಗೆ ಖಲಿಸ್ತಾನಿ ಸಂಬಂಧ ಇರುವುದನ್ನು ಪತ್ತೆಮಾಡಿದ್ದರು. ಈ ಘಟನೆಗಳು ನಡೆದು ಎರಡು ದಿನಗಳ ಬಳಿಕ (ಫೆ.6) …

Read More »

ಚಹಾ, ಯೋಗದ ಮೇಲೂ ಸಂಚು: ನರೇಂದ್ರ ಮೋದಿ ಟೀಕೆ

ಸೋನಿತ್‌ಪುರ : ಭಾರತದ ಹೆಸರಿಗೆ ಮಸಿ ಬಳಿಯುವುದಕ್ಕಾಗಿ ಹೊಂಚು ಹಾಕುತ್ತಿರುವ ಜಾಗತಿಕ ಸಂಚುಕೋರರು ನಮ್ಮ ಚಹಾ, ಯೋಗವನ್ನೂ ಬಿಟ್ಟಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟೀಕಿಸಿದ್ದಾರೆ. ಈ ಮೂಲಕ ಸ್ವೀಡಿಶ್‌ ಹೋರಾಟಗಾರ್ತಿ ಗ್ರೆಟಾ ಥನ್ಬರ್ಗ್‌ ಟ್ವೀಟ್‌ ಮಾಡಿದ್ದ ವಿವಾದಿತ ಟೂಲ್‌ಕಿಟ್‌ ಬಗ್ಗೆ ಪ್ರಧಾನಿ ಇದೇ ಮೊದಲ ಬಾರಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಸ್ಸಾಂನ ಸೋನಿತ್‌ಪುರದಲ್ಲಿ ಮಾತನಾಡಿ, ವಿವಾದಿತ ಟೂಲ್‌ಕಿಟ್‌ನಲ್ಲಿ ನಮ್ಮ ಚಹಾ, ಯೋಗಾ ವಿರುದ್ಧವೂ ಅಪಪ್ರಚಾರ ಮಾಡುವ ಸಂಚಿತ್ತು ಎನ್ನುವುದನ್ನು …

Read More »

ಚಿನ್ನಮ್ಮನ ಬೆಂಗಳೂರು ವಾಸ ಅಂತ್ಯ: ತಮಿಳುನಾಡಿನತ್ತ ಹೊರಟ ವಿ.ಕೆ. ಶಶಿಕಲಾ

ಬೆಂಗಳೂರು: ಜೈಲು ವಾಸ ಮುಗಿಸಿರುವ ತಮಿಳರ ಚಿನ್ನಮ್ಮ, ಎಐಎಡಿಎಂಕೆಯ ಉಚ್ಛಾಟಿತ ನಾಯಕಿ ವಿ.ಕೆ. ಶಶಿಕಲಾ ಇಂದು ತಮಿಳುನಾಡಿಗೆ ಹೊರಟಿದ್ದಾರೆ. ಇದರೊಂದಿಗೆ ಚಿನ್ನಮ್ಮನ ಕೆಲವು ವರ್ಷಗಳ ಬೆಂಗಳೂರು ವಾಸ ಇಂದಿಗೆ ಅಂತ್ಯವಾಗಿದೆ. ಕಳೆದೊಂದು ವಾರದಿಂದ ನಗರದ ಪ್ರೆಸ್ಟಿಜ್ ಗಾಲ್ಫ್ ಶೈರ್ ಕ್ಲಬ್ ನಲ್ಲಿ ಕಾಲ ಕಳೆದಿದ್ದ ಶಶಿಕಲಾ ಇಂದು ಬೆಳಗ್ಗೆ ತಮಿಳುನಾಡಿನತ್ತ ಹೊರಟಿದ್ದಾರೆ. ಅತ್ತಿಬೆಲೆ, ಹೊಸೂರು ಮಾರ್ಗವಾಗಿ ಶಶಿಕಲಾ ತಮಿಳುನಾಡಿಗೆ ಹೋಗಲಿದ್ದಾರೆ. ಮಾರ್ಗಮಧ್ಯೆ ಸಾವಿರಾರು ಮಂದಿ ಬೆಂಬಲಿಗರು ಸೇರಿದ್ದು, ಶಶಿಕಲಾ ಅವರನ್ನು …

Read More »

ಮತ್ತೆ ಕುಸಿತ ಕಂಡ ಬಂಗಾರದ ಬೆಲೆ

ನವದೆಹಲಿ : ಚಿನ್ನ ಖರೀದಿಸುವ ಬಗ್ಗೆ ಯೋಚಿಸುತ್ತಿದ್ದೀರಾ? ಹಾಗಾದರೆ ನಿಮಗೊಂದು ಶುಭ ಸುದ್ದಿ. ಇಲ್ಲಿಯವರೆಗೆ ಗಗನಕ್ಕೇರುತ್ತಿದ್ದ ಚಿನ್ನದ ಬೆಲೆ ಈಗ ಕ್ರಮೇಣವಾಗಿ ಕುಸಿಯುತ್ತಿದೆ. ಇದರಿಂದಾಗಿ ಬಂಗಾರ ಕೊಳ್ಳಬೇಕೆಂದುಕೊಂಡಿದ್ದ ಆಭರಣ ಪ್ರಿಯರಿಗೆ ಇದೊಂದು ಸಮಾಧಾನಕರ ಸಂಗತಿ. ಈ ಹಿಂದೆ ಗರಿಷ್ಠ 56,000 ರೂಗಳನ್ನು ತಲುಪಿದ್ದು, ಪ್ರಸ್ತುತ 10 ಗ್ರಾಂ ಬೆಲೆ ಈಗ 48,000 ರೂ.ಗೆ ಕುಸಿದಿದೆ. 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 48,000 ರೂ. 22 ಕ್ಯಾರೆಟ್ …

Read More »

ಮೇಘಾಲಯ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿದೆ.

ಶಿಲ್ಲಾಂಗ್: ದೇಶದಲ್ಲಿ ತೈಲೋತ್ಪನ್ನಗಳ ದರಗಳು ಏರಿಕೆಯಾಗಿದ್ದು, ದೇಶಾದ್ಯಂತ ಜನರು ಈ ಬಗ್ಗೆ ಕಿಡಿ ಕಾರುತ್ತಿದ್ದಾರೆ. ಈ ನಡುವೆ ಮೇಘಾಲಯ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿದೆ. ಹೌದು ಈ ಬಗ್ಗೆ ಮೇಘಾಲಯ ಮುಖ್ಯಮಂತ್ರಿ ಕನ್ರಾಡ್ ಸಂಗ್ಮಾ ಮಾಹಿತಿ ನೀಡಿದ್ದು, ರಾಜ್ಯದ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಸೋಮವಾರ ಮಧ್ಯರಾತ್ರಿಯಿಂದ 2 ರೂ.ಗೆ ಇಳಿಸಲು ಮೇಘಾಲಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ. ‘ಮೇಘಾಲಯದಲ್ಲಿ ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ …

Read More »

ಖಾತೆ ಬಗ್ಗೆ ಅಸಮಾಧಾನ ಹೊರಹಾಕಿದ ಅರವಿಂದ ಲಿಂಬಾವಳಿ

ಚಾಮರಾಜನಗರ (ಫೆ.07)  ಸಚಿವ ಸಂಪುಟ ವಿಸ್ತರಣೆ ನಂತರ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಎಲ್ಲವು ಸರಿಯಿಲ್ಲ ಎಂಬುದು ಮತ್ತೊಮ್ಮೆ ಬಹಿರಂಗಗೊಂಡಿದೆ. ಅರಣ್ಯ ಖಾತೆ ನೀಡಿರುವುದಕ್ಕೆ ಸಚಿವ ಅರವಿಂದ ಲಿಂಬಾವಳಿ ಪರೋಕ್ಷವಾಗಿ ತಮ್ಮ ಅಸಮಧಾನ ವ್ಯಕ್ತಪಡಿಸಿದ್ದಾರೆ.  ಚಾಮರಾಜನಗರದಲ್ಲಿ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಮುಖ್ಯಮಂತ್ರಿಗಳು ನನಗೆ ಎರಡು ಖಾತೆ ಕೊಟ್ಟಿದ್ದಾರೆ. ರಾತ್ರಿ ಹೊತ್ತು ಕಾಡಿನಲ್ಲಿ ಇರಬೇಕು, ಹಗಲು ವೇಳೆ ನಾಡಿಗೆ ಬರಬೇಕು, ಕಾಡು ನಾಡು ಎರಡನ್ನೂ …

Read More »

ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಕಂಬಳ

ಕೋವಿಡ್ ನಿಯಮಗಳ ನಡುವೆ ಕರಾವಳಿಯಲ್ಲಿ ಕಂಬಳ ಕ್ರೀಡೆ ಅದ್ಧೂರಿಯಾಗಿ ನಡೆಯುತ್ತಿದೆ. ಮಂಗಳೂರು ನಗರ ಹೊರವಲಯದ ಐಕಳದಲ್ಲಿ ಎರಡನೇ ಕಂಬಳ ಕ್ರೀಡೆ ಭಾರೀ ವಿಜೃಂಭಣೆಯಿಂದ ಜರುಗಿದೆ. ಈ ಕಂಬಳ ಕೂಟ ಐತಿಹಾಸಿಕ ದಾಖಲೆಯ ಜೊತೆ ಭಾವನಾತ್ಮಕ ಸನ್ನಿವೇಶಕ್ಕೂ ಸಾಕ್ಷಿಯಾಗಿದೆ. ಹೌದು..ಮಂಗಳೂರು ಹೊರವಲಯದ ಐಕಳ ಎಂಬಲ್ಲಿ ನಡೆದ ಕಂಬಳ ಎರಡು ಘಟನೆಗಳಿಗೆ ಸಾಕ್ಷಿಯಾಯಿತು. ಒಂದು 100 ಮೀ ದೂರವನ್ನು 9.15 ಸೆಕೆಂಡಲ್ಲಿ ಬೈಂದೂರಿನ ವಿಶ್ವನಾಥ್ ಕೋಣಗಳನ್ನು ಓಡಿಸಿ ನೂತನ ದಾಖಲೆ ಮಾಡಿದ್ರೆ, ಇನ್ನೊಂದು …

Read More »

ಪ್ರಧಾನ ಮಂತ್ರಿ ಗಳಿಗೆ ರೈತರ ಬಗ್ಗೆ ಗೌರವ್ ಇದೆಯಾ …?H.D.K.

ರಾಮನಗರ  :  ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ‌.ಕುಮಾರಸ್ವಾಮಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಉದ್ಘಾಟನಾ ಸಮಾರಂಭದಲ್ಲಿಯೂ ಭಾಗವಹಿಸಿದ್ದರು‌. ಈ  ಸಂದರ್ಭದಲ್ಲಿ ಮಾತನಾಡಿದ ಹೆಚ್ಡಿಕೆ ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ರಾಜಕೀಯ ವಿಚಾರಕ್ಕೆ ಪ್ರತಿಕ್ರಿಯಿಸಿ ನಾನು ಸೂಕ್ಷ್ಮವಾಗಿ ಎಲ್ಲವನ್ನು ಗಮನಿಸುತ್ತಿದ್ದೇನೆ, ಧಾರ್ಮಿಕ ಗುರುಗಳೇ ಸಮಾಜದ ಪರವಾಗಿ ಹೋರಾಟಕ್ಕಿಳಿದಿದ್ದಾರೆ. ಹಾಗಾಗಿ ಇದು ದಾರಿತಪ್ಪುವ ಮುನ್ನ ಸರ್ಕಾರ ಎಚ್ಚರಿಕೆ ವಹಿಸಬೇಕು‌.ಧಾರ್ಮಿಕ ಗುರುಗಳ ಭಾವನೆಗೂ ಸರ್ಕಾರ ಗೌರವ ಕೊಡಬೇಕು ಆ ನಿಟ್ಟಿನಲ್ಲಿ ಸರ್ಕಾರ ಸೂಕ್ತ …

Read More »

ಅಯೋಧ್ಯೆ ಆಯ್ತು, ಕಾಶಿ, ಮಥುರಾಗಳಲ್ಲಿನ್ನು ಮಂದಿರ ನಿರ್ಮಾಣ ಬಾಕಿ ಇದೆ; ಬಸನಗೌಡ ಯತ್ನಾಳ್

ವಿಜಯಪುರ (ಫೆ. 7): ರಾಮ ಮಂದಿರ ನಿರ್ಮಾಣದ ಕನಸು ಇದೀಗ ನನಸಾಗುತ್ತಿದೆ.  ಇನ್ನು ಕಾಶಿ ಮತ್ತು ಮಥುರಾಗಳಲ್ಲಿ ಮಂದಿರ ನಿರ್ಮಾಣ ಬಾಕಿ ಇದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. ವಿಜಯಪುರದಲ್ಲಿ ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಚ್ ಪರವಾಗಿ ಆಯೋಜಿಸಲಾಗಿದ್ದ ನಿಧಿ ಸಮರ್ಪಣಾ ಮಹಾ ಅಭಿಯಾನದ ಸಭೆಯಲ್ಲಿ ಅವರು ರಾಮ ಮಂದಿರ ನಿರ್ಮಾಣಕ್ಕೆ ರೂ. 5 ಲಕ್ಷ ದೇಣಿಗೆ ನೀಡಿ ಮಾತನಾಡಿದರು. ಎಲ್ಲವೂ …

Read More »