ಬೆಳಗಾವಿ: ಸಚಿವ ರಮೇಶ ಜಾರಕಿಹೊಳಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಜೆ.ಪಿ. ನಡ್ಡಾ ಭೇಟಿ ವಿಚಾರವಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಅಭಿವೃದ್ದಿ ಹಾಗೂ ನೀರಾವರಿ ವಿಷಯವಾಗಿ ಚರ್ಚೆ ನಡೆಸಲು ಹೋಗಿರಬಹುದು ಎಂದು ಹೇಳಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ನಮ್ಮ ಪಕ್ಷದ ಅಧ್ಯಕ್ಷರನ್ನು ಭೇಟಿಯಾಗುವುದರಲ್ಲಿ ಯಾವ ತಪ್ಪಿಲ್ಲ. ನಮ್ಮ ಪಕ್ಷದ ಯಾರು ಬೇಕಾದವರು ಅಧ್ಯಕ್ಷರನ್ನು ಭೇಟಿ ಮಾಡಬಹುದು. ಸಚಿವ ರಮೇಶ ಜಾರಕಿಹೊಳಿ ಅವರು ನಡ್ಡಾ …
Read More »ಶಾಸಕ ಜಮೀರ ಅಹ್ಮದ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಧೃಢ
ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ ಅಹ್ಮದ ಖಾನ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಧೃಢಪಟ್ಟಿದೆ. ಈ ಕುರಿತು ಟ್ವಿಟ್ಟರ್ ಮೂಲಕ ಸ್ವತಃ ಮಾಹಿತಿ ನೀಡಿರುವ ಶಾಸಕರು “ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದು …
Read More »ಸಿಇಟಿ ಪರೀಕ್ಷೆಯ ಫಲಿತಾಂಶ ಆ. 20ರಂದು ಪ್ರಕಟಆನ್ಲೈನ್ನಲ್ಲಿಯೇ ಕೌನ್ಸೆಲಿಂಗ್
ಬೆಂಗಳೂರು: ಕರ್ನಾಟಕದ ಸಿಇಟಿ ಪರೀಕ್ಷೆಯ ಫಲಿತಾಂಶ ಆ. 20ರಂದು ಪ್ರಕಟವಾಗಲಿದೆ. ಈ ಬಗ್ಗೆ ಡಿಸಿಎಂ ಡಾ. ಸಿ.ಎನ್. ಅಶ್ವಥ್ ನಾರಾಯಣ ಮಾಹಿತಿ ನೀಡಿದ್ದು, ಕಳೆದ ವರ್ಷ ಎಷ್ಟು ಶುಲ್ಕವನ್ನು ವಿಧಿಸಲಾಗುತ್ತಿತ್ತೋ ಈ ಬಾರಿಯೂ ಅಷ್ಟೇ ಶುಲ್ಕವಿರಲಿದೆ. ಹಾಗೇ, ಕಳೆದ ವರ್ಷದ ಅನುಪಾತದಲ್ಲೇ ಈ ವರ್ಷವೂ ಸೀಟು ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಜುಲೈ 30ರಿಂದ ಆಗಸ್ಟ್ 1ರವರೆಗೆ ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿಗೆ ಪರೀಕ್ಷೆ ನಡೆದ …
Read More »ಅತ್ಯಾಚಾರಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು
ಅಥಣಿ: ಧಾರವಾಡ ಜಿಲ್ಲೆಯ ಬೋಗುರ ಗ್ರಾಮದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಪಟ್ಟಣದಲ್ಲಿ ಜಂಗಮ ಸಮಾಜದ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು. ಅಥಣಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರ ಮನವಿ ಸಲ್ಲಿಸಿದರು. ಪುಟ್ಟ ಹಿರೇಮಠ ಮಾತನಾಡಿ, ಅಮ್ಮನಿಗೆ ಆರೋಗ್ಯ ಸರಿ ಇಲ್ಲದ ಕಾರಣ ದೇವಸ್ಥಾನಕ್ಕೆ ತೆರಳಿದ್ದ ಬಾಲಕಿ ಮೇಲೆ ಪಕ್ಕದ ಗ್ರಾಮದ ಯುವಕ ಅತ್ಯಾಚಾರ …
Read More »ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಚಾಮರಾಜನಗರ: ಆನ್ ಲೈನ್ ಪಾಠ ಕೇಳಲು ಪೋಷಕರು ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಸಾಗಡೆ ಗ್ರಾಮದಲ್ಲಿ ನಡೆದಿದೆ. ಸಾಗಡೆ ಗ್ರಾಮದ ರಾಜೇಶ್, ಪದ್ಮಾ ದಂಪತಿ ಮಗಳು ಹರ್ಷಿತಾ(15) ಮೃತ ದುರ್ದೈವಿ. ಸಾಗಡೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ 9 ನೇ ತರಗತಿ ತೇರ್ಗಡೆಯಾಗಿ 10 ನೇ ತರಗತಿಗೆ ದಾಖಲಾಗಿದ್ದಳು. ಸ್ನೇಹಿತರ ಬಳಿ ಮೊಬೈಲ್ ಇದೆ. ನನಗೂ ಮೊಬೈಲ್ ಕೊಡಿಸುವಂತೆ ಹರ್ಷಿತಾ ಪೋಷಕರಿಗೆ …
Read More »ಕೃಷ್ಣಾ ನದಿಯಲ್ಲಿ ನಾಪತ್ತೆಯಾದ ನಾಲ್ವರಿಗಾಗಿ ಶೋಧ ಕಾರ್ಯ ಆರಂಭ
ರಾಯಚೂರು: ಕೃಷ್ಣಾ ನದಿಯಲ್ಲಿ ನಾಪತ್ತೆಯಾಗಿರುವ ರಾಯಚೂರಿನ ಕುರ್ವಕಲಾ ನಡುಗಡ್ಡೆ ಗ್ರಾಮದ ನಾಲ್ವರಿಗಾಗಿ ಶೋಧ ಕಾರ್ಯ ಬೆಳಗ್ಗೆಯಿಂದ ಆರಂಭವಾಗಿದೆ. ತೆಲಂಗಾಣದ ಪಂಚಮಪಾಡ್ ಬಳಿ ಕೃಷ್ಣಾ ನದಿಯಲ್ಲಿ ಮುಳುಗಿದ್ದ ತೆಪ್ಪದಲ್ಲಿನ 9 ಜನರನ್ನ ಸೋಮವಾರ ರಕ್ಷಿಸಲಾಗಿತ್ತು, ಇನ್ನೂ ನಾಲ್ವರು ನಾಪತ್ತೆಯಾಗಿದ್ದಾರೆ. ಇಂದು ಬೆಳಗ್ಗೆ ಎನ್‌ಡಿಆರ್‌ಎಫ್ ಹಾಗೂ ಅಗ್ನಿಶಾಮಕ ದಳ ನಾಪತ್ತೆಯಾಗಿರುವ ನಾಲ್ವರ ಶೋಧಕಾರ್ಯವನ್ನು ತೆಲಂಗಾಣದ ಪಂಚಮಪಾಡ್ ಬಳಿ ಆರಂಭಿಸಿದೆ. ತೆಲಂಗಾಣದ ಪಂಚಮಪಾಡ್ ಬಳಿ ಕೃಷ್ಣಾ ನದಿಯಲ್ಲಿ ಮುಳುಗಿದ್ದ ತೆಪ್ಪದಲ್ಲಿನ 9 ಜನರನ್ನ ಸೋಮವಾರ …
Read More »ರಾಜಕುಮಾರ’ ಸಿನಿಮಾ ಖ್ಯಾತಿಯ ನಿರ್ದೇಶಕ ಸಂತೋಷ್ ಆನಂದ್ ರಾಮ್ ತಂದೆಯಾದ ಸಂತಸದಲ್ಲಿದ್ದು, ಅವರ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಬೆಂಗಳೂರು: ‘ರಾಜಕುಮಾರ’ ಸಿನಿಮಾ ಖ್ಯಾತಿಯ ನಿರ್ದೇಶಕ ಸಂತೋಷ್ ಆನಂದ್ ರಾಮ್ ತಂದೆಯಾದ ಸಂತಸದಲ್ಲಿದ್ದು, ಅವರ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.ಸಂತೋಷ್ ಆನಂದ್ ರಾಮ್ ಪತ್ನಿ ಸುರಭಿ ಹತ್ವಾರ್ ಸೋಮವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ನಿರ್ದೇಶಕರ ಮನೆಗೆ ಹೊಸ ಅತಿಥಿಯ ಆಗಮನವಾಗಿದ್ದು, ಕುಟುಂಬದವರು ಸಂಭ್ರಮ ಪಡುತ್ತಿದ್ದಾರೆ. ಈ ಬಗ್ಗೆ ಸಂತೋಷ್ ಸೋಶಿಯಲ್ ಮೀಡಿಯಾದಲ್ಲಿ ತಾವು ತಂದೆಯಾಗಿರುವ ವಿಚಾರವನ್ನು ಹಂಚಿಕೊಂಡಿದ್ದಾರೆ. “ನಾನು ಗಂಡು ಮಗುವಿನ ತಂದೆಯಾಗಿದ್ದಾನೆ. ನಿಮ್ಮೆಲ್ಲರ …
Read More »ಡೇಂಜರ್ ಝೋನ್‍ನಿಂದ ಎಸ್‍ಪಿಬಿ ಪಾರಾಗಿದ್ದು, ಖುಷಿ ತಂದಿದೆ: ತಲೈವಾ
ಚೆನ್ನೈ: ಗಾಯಕ ಎಸ್‍ಪಿ ಬಾಲಸುಬ್ರಹ್ಮಣ್ಯಂ ಅವರು ಡೇಂಜರ್ ಝೋನ್ ನಿಂದ ಪಾರಾಗಿದ್ದು, ಖುಷಿ ತಂದಿದೆ ಎಂದು ನಟ ರಜನಿಕಾಂತ್ ತಿಳಿಸಿದ್ದಾರೆ.ಈ ಸಂಬಂಧ ವಿಡಿಯೋ ಮಾಡಿ ಎಸ್‍ಪಿಬಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ತಲೈವಾ, ಈ ತಿಂಗಳ ಮೊದಲ ವಾರದಲ್ಲಿ ಕೊರೊನಾ ಪಾಸಿಟಿವ್ ಬಂದು ಆಸ್ಪತ್ರೆಗೆ ದಾಖಲಾಗಿರುವ 71 ವರ್ಷದ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ಸದ್ಯ ಡೇಂಜರ್ ಝೋನ್ ನಿಂದ ಪಾರಾಗಿದ್ದಾರೆ ಎಂದು ಹೇಳಿದ್ದಾರೆ. ಎಸ್‍ಪಿ ಅವರು ಅಪಾಯದಿಂದ ಪಾರಾಗಿದ್ದಾರೆ. ಅವರ …
Read More »ಬೆಂಗಳೂರಿನಲ್ಲಿ ದೊಡ್ಡ ಕಚೇರಿ ತೆರೆಯಲಿದೆ ಆಪಲ್
ಬೆಂಗಳೂರು: ಕೋವಿಡ್ 19 ನಂತರ ವಿಶ್ವದ ಯಾವ ದೇಶದಲ್ಲಿ ವಿದೇಶಿ ಹೂಡಿಕೆ ಜಾಸ್ತಿಯಾಗಲಿದೆ ಎಂಬ ಪ್ರಶ್ನೆಗೆ ಹಲವು ತಜ್ಞರು ನೀಡುವ ಉತ್ತರ ಭಾರತ. ಈ ಉತ್ತರಕ್ಕೆ ಪೂರಕ ಎಂಬಂತೆ ಈಗಾಗಲೇ ಗೂಗಲ್, ಫೇಸ್‌ಬುಕ್ ಕಂಪನಿಗಳು ದೇಶದಲ್ಲಿ ಹೂಡಿಕೆ ಮಾಡಿವೆ. ಈಗ ಐಫೋನ್ ತಯಾರಿಸುತ್ತಿರುವ ಆಪಲ್ ಕಂಪನಿ ಸಹ ಹೂಡಿಕೆ ಮಾಡಲು ಮುಂದಾಗಿದೆ. ಅದರಲ್ಲೂ ವಿಶೇಷ ಏನೆಂದರೆ ಬೆಂಗಳೂರಿನಲ್ಲಿ ದೊಡ್ಡ ಕಚೇರಿ ತೆರೆಯಲು ಆಪಲ್ ಮುಂದಾಗಿದೆ.ಹೌದು. ಆಪಲ್ ಕಂಪನಿ 3.5 ಲಕ್ಷ …
Read More »ಡಿಜೆ ಹಳ್ಳಿ ಗಲಭೆಯಲ್ಲಿ ಕೆಲ ಕಾಂಗ್ರೆಸ್ ನಾಯಕರ ಕೈವಾಡವೂ ಇದೆ: ರೋಷನ್ ಬೇಗ್
ಬೆಂಗಳೂರು: ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆಯಲ್ಲಿ ಕೆಲ ಕಾಂಗ್ರೆಸ್ ನಾಯಕರ ಕೈವಾಡವೂ ಇದೆ ಎಂದು ಮಾಜಿ ಸಚಿವ ರೋಶನ್ ಬೇಗ್ ಆರೋಪಿಸಿದ್ದಾರೆ.ಡಿಜೆ ಹಳ್ಳಿ ಗಲಭೆ ಕುರಿತು ಪ್ರತಿಕ್ರಿಯಿಸಿರುವ ಅವರು, ಗೋರಿ ಪಾಳ್ಯದ ಮೌಲಾನ ಇಲ್ಲಿಗೆ ಯಾಕೆ ಬರಬೇಕಿತ್ತು, ಕಲಾಸಿಪಾಳ್ಯದಿಂದ, ಟಿಪ್ಪು ನಗರದಿಂದ ಇಲ್ಲಿಗೆ ಯಾಕೆ ಬರಬೇಕಿತ್ತು? ಹೊರಗಿನವರು ಯಾರ್ಯಾರೋ ಬಂದಿದ್ದರು. ದಿಡೀರ್ ಗಲಾಟೆ ಮಾಡಿದರು ಎಂದು ಸ್ಥಳಿಯರೇ ಹೇಳುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಪೊಲೀಸರು ಬಂಧಿಸಿದವರಲ್ಲಿ ಕೆಲವರು ಅಮಾಯಕರೂ …
Read More »