ಗೋಕಾಕ : ಯೋಗ ಹಾಗೂ ಪ್ರಾಣಾಯಾಮದಿಂದ ಮಾತ್ರ ಎಲ್ಲ ದೀರ್ಘ ವ್ಯಾದಿಗಳನ್ನು ಬೇರು ಸಮೇತ ತೆಗೆದು ಹಾಕಲು ಸಾಧ್ಯವಿದೆ. ಮನ್ನಿಕೇರಿಯಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ಸಿದ್ಧ ಸಮಾಧಿ ಯೋಗ ತರಬೇತಿ ಕೇಂದ್ರಕ್ಕೆ ೬ ಲಕ್ಷ ರೂ.ಗಳನ್ನು ನೀಡುವುದಾಗಿ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಗುರುದೇವ ದತ್ತ ಯೋಗಾ ಫೌಂಡೇಷನ್ ಆಶ್ರಯದಲ್ಲಿ ಸಿದ್ಧ ಸಮಾಧಿ ಯೋಗ(ಎಸ್‌ಎಸ್‌ವಾಯ್) …
Read More »ಬೆಳಗಾವಿಗೆ ನಾಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ
ಬೆಳಗಾವಿ : ರಾಜ್ಯ ಗೃಹ ಸಚಿವ ಹಾಗೂ ಹಾವೇರಿ ಜಿಲ್ಲೆ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ನ.30ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಮೂರು ದಿನಗಳ ಕಾಲ ಧಾರವಾಡ, ಗದಗ, ಹಾವೇರಿ, ಬೆಳಗಾವಿ ಪ್ರವಾಸ ಕೈಗೊಂಡಿರುವ ಸಚಿವರು ನಾಳೆ ಬೆಳಗಾವಿಗೆ ರಾತ್ರಿ 10 ಗಂಟೆಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಡಿಸೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ಕೆಎಸ್ ಆರ್ ಪಿ 6ನೇ ತಂಡದ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮ, …
Read More »ರೈತರ ಹೋರಾಟದಲ್ಲಿ ಕಾರಿಗೆ ಬೆಂಕಿ : ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನ
ಹೊಸದಿಲ್ಲಿ: ದೆಹಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ರೈತರಿಗೆ ಸಹಾಯ ಮಾಡಲೆಂದು ತೆರಳಿದ ವ್ಯಕ್ತಿ ದಾರುಣ ಸಾವಿಗೀಡಾಗಿದ್ದಾನೆ. ಕಾರಿನಲ್ಲಿ ಮಲಗಿದ್ದ ಸಮಯದಲ್ಲಿ ಕಾರಿಗೆ ಬೆಂಕಿ ತಗುಲಿದ್ದು, ಆತನ ಸಜೀವ ದಹನವಾಗಿದೆ. ಪಂಜಾಬ್ ನ ಬರ್ನಾಲಾ ಜಿಲ್ಲೆಯ ಧನೋಲುವಾ ಗ್ರಾಮದ ಜನಕರಾಜ್ (55) ಮೃತ ವ್ಯಕ್ತಿ. ರೈತ ಹೋರಾಟಕ್ಕೆಂದು ಅಲ್ಲಿಂದ ದೆಹಲಿಗೆ ಬಂದಿದ್ದ. ಟ್ರ್ಯಾಕ್ಟರ್ ಮೆಕಾನಿಕ್ ಆಗಿದ್ದ ಆತನನ್ನು ಹೋರಾಟ ನಿರತ ರೈತರ ಟ್ರ್ಯಾಕ್ಟರ್ಗಳನ್ನು ಸರಿ ಮಾಡಲೆಂದೇ ಕರೆಸಿಕೊಳ್ಳಲಾಗಿತ್ತು. ಶನಿವಾರ ರಾತ್ರಿ …
Read More »ಬೆಳಗಾವಿ ವಿಭಜನೆಗೆ ತಾಂತ್ರಿಕ ತೊಂದರೆ : ಡಿಸಿಎಂ ಲಕ್ಷ್ಮಣ ಸವದಿ
ಬಳ್ಳಾರಿ : ಕಾಂಗ್ರೆಸ್, ಜೆಡಿಎಸ್ ಪಕ್ಷದ 17 ಜನರು ಬಿಜೆಪಿ ಪಕ್ಷಕ್ಕೆ ಬಂದ ಕಾರಣದಿಂದ ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಿದೆ. ಅವರ ಬಗ್ಗೆ ಗೌರವವಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬರಲು 17 ಜನರು ಕಾರಣ. ಕೆಲವೇ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುವುದು ಪಕ್ಷ ತೀರ್ಮಾನ ಮಾಡುತ್ತದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಫೈನಲ್ …
Read More »ಬೆಳಗಾವಿಯಲ್ಲಿ ನ.30ರಂದು ಮಹತ್ವದ ಸಭೆ ನಡೆಸಲಿರುವ ರಮೇಶ್ ಜಾರಕಿಹೊಳಿ
ಬೆಳಗಾವಿ : ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಸೋಮವಾರ ಜಲಸಂಪನ್ಮೂಲ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವರ ಸಭೆ ನಡೆಸಲಿದ್ದಾರೆ. ಕಳಸಾ ಬಂಡೂರ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನ ಸೇರಿ ಇತರೆ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಉನ್ನತ ಮಟ್ಟದ ಸಭೆ ಹಮ್ಮಿಕೊಂಡಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಜಿಲ್ಲಾಧಿಕಾರಿ, ಜಲಸಂಪನ್ಮೂಲ ಮತ್ತು ಅರಣ್ಯ ಇಲಾಖೆಯ …
Read More »ಸೋತವರನ್ನು ಮಂತ್ರಿ ಮಾಡಲು ಹೊರಟವರು ಸ್ಥಾನ ತ್ಯಾಗ ಮಾಡಲಿ”: ಮೇಶ್ ಜಾರಕಿಹೊಳಿ ಅವರಿಗೆ ತಿರುಗೇಟು ನೀಡಿದ್ದಾರೆ. ರೇಣುಕಾಚಾರ್ಯ
ಬೆಂಗಳೂರು, ನ.29- ವಿಧಾನಸಭಾ ಚುನಾವಣೆಯಲ್ಲಿ ಸೋತವರಿಗೆ ಮಂತ್ರಿಸ್ಥಾನ ಕೊಡಿಸಲು ಪ್ರಯತ್ನಿಸುವವರು ಸಾಧ್ಯವಾದರೆ ತಮ್ಮ ಸ್ಥಾನವನ್ನೇ ತ್ಯಾಗ ಮಾಡಿ ಮಂತ್ರಿ ಮಾಡಿಸಲಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಪರೋಕ್ಷವಾಗಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ತಿರುಗೇಟು ನೀಡಿದ್ದಾರೆ. ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಪರಾಭವಗೊಂಡವರನ್ನು ಮಂತ್ರಿ ಮಾಡುವುದಾದರೆ ಜನರಿಂದ ಆಯ್ಕೆ ಆದವರು ಏನು ಮಾಡಬೇಕು? ಗೆದ್ದವರನ್ನು ಸಂಪುಟಕ್ಕೆ ತೆಗೆದುಕೊಳ್ಳುವುದು ಸರಿ. ಸೋತವರನ್ನು ಮಂತ್ರಿ ಮಾಡಲು ಹೊರಟವರು ಮೊದಲು …
Read More »ಹೊರಗಡೆ ಗಣೇಶನ ಚಿತ್ರ, ಒಳಗಡೆ 16 ಲಕ್ಷದ ಕೆನಡಾ ಡ್ರಗ್ಸ್ –
ಆನೇಕಲ್: ಕೆನಡಾದಿಂದ ಲೈಸರ್ಜಿಕ್ ಡೈಥಲಾಮೈಡ್ (ಎಲ್‍ಎಸ್‍ಡಿ) ಡ್ರಗ್ಸ್ ತರಿಸಿದ್ದ ಖಾಸಗಿ ಆಸ್ಪತ್ರೆ ಸಿಬ್ಬಂದಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿ ಹೆಬ್ಬಗೋಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಅರುಣ್ ಆಂತೋಣಿ(22) ಎಂದು ಗುರುತಿಸಲಾಗಿದೆ. ಈತ ಮೂಲತಃ ಕೇರಳದ ಪೆರಂಬಾಡಿ ಚೇರಾ ಹೌಸ್‍ನ ಕೊಟ್ಟಾಯಂ ನಿವಾಸಿಯಾಗಿದ್ದಾನೆ. ಆನೇಕಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿಯಲ್ಲಿನ ಸ್ಪರ್ಶ ಆಸ್ಪತ್ರೆಯ ಎಕ್ಸ್-ರೇ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದನು. ಕೆನಡಾದಲ್ಲಿ ಸಿಗುವ ಎಲ್‍ಎಸ್‍ಡಿ ಡ್ರಗ್ಸ್ ಅನ್ನು …
Read More »ಇನ್ನೋವಾ ಕಾರು ಕಳ್ಳತನವಾಗಿದೆ ಎಂದು ದೂರು ನೀಡಿದ್ದ ಮಾಲೀಕನೇ ಅರೆಸ್ಟ್
ತುಮಕೂರು: ವಾಹನ ವಿಮೆ ಪಡೆಯುವ ದುರುದ್ದೇಶದಿಂದ ಕಾರು ಕಳ್ಳತನವಾಗಿದೆ ಎಂದು ಸುಳ್ಳು ದೂರು ಕೊಟ್ಟ ಕಾರು ಮಾಲೀಕನೇ ಈಗ ಬಂಧನವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.ಆರೋಪಿಯನ್ನು ದೊಡ್ಡೇಗೌಡ ಎಂದು ಗುರುತಿಸಲಾಗಿದೆ. ಈತ ಆಂಧ್ರದ ಮಡಕಶಿರಾ ಮೂಲದವನಾಗಿದ್ದಾನೆ. ವಿಮೆ ಪಡೆಯಲು ಕಾರು ಕಳೆದು ಹೋಗಿದೆ ಎಂದು ಸುಳ್ಳು ದೂರು ಕೊಟ್ಟು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಈ ಪ್ರಕರಣ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಆರೋಪಿ …
Read More »ಕುಂಬಳಕಾಯಿ ಕಳ್ಳ ಅಂದ್ರೆ ಬಿಜೆಪಿಯವರೇಕೆ ಹೆಗಲು ಮುಟ್ಟಿನೋಡಿಕೊಳ್ಳುತ್ತಿದ್ದಾರೆ..? : ಡಿಕೆಶಿ
ಬೆಂಗಳೂರು, ನ.29- ಖಾಸಗಿ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾನು ಯಾರ ಹೆಸರನ್ನೂ ಪ್ರಸ್ತಾಪ ಮಾಡಿಲ್ಲ. ಆದರೂ ಬಿಜೆಪಿಯ ಕೆಲವರು ಏಕೆ ಹೆಗಲು ಮುಟ್ಟಿನೋಡಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿರುವ ಡಿ.ಕೆ.ಶಿವಕುಮಾರ್ ಅವರು, ಇಂದು ಬೆಳಗ್ಗೆ ಕುಂದಾಪುರದಲ್ಲಿರುವ ಮಾಜಿ ಶಾಸಕ ಗೋಪಾಲ್ ಪೂಜಾರಿ ಅವರ ನಿವಾಸಕ್ಕೆ ಭೇಟಿ ನೀಡಿ ಉಪಹಾರ ಸೇವಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಇದ್ದ ಮಾಹಿತಿಯನ್ನು …
Read More »ಮೋದಿ ಮನ್ ಕಿ ಬಾತ್ ಹೈಲೈಟ್ಸ್ …………..
ನವದೆಹಲಿ, ನ.29- ಕೃಷಿ ಕ್ಷೇತ್ರದ ಸುಧಾರಣಾ ಕ್ರಮಗಳು ಮುಂದಿನ ದಿನಗಳಲ್ಲಿ ರೈತ ಸಮುದಾಯದ ಅವಕಾಶಗಳನ್ನು ಮತ್ತಷ್ಟು ಹೆಚ್ಚಿಸಲಿವೆ ಎಂಬ ವಿಶ್ವಾಸವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ವ್ಯಕ್ತಪಡಿಸಿದ್ದಾರೆ. ಅತ್ಯಂತ ಜನಪ್ರಿಯ ಕಾರ್ಯಕ್ರಮವಾಗಿರುವ ಮನ್ ಕಿ ಬಾತ್‍ನ 71ನೇ ಸರಣಿಯಲ್ಲಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಅವರು, ಕೇಂದ್ರ ಸರ್ಕಾರ ತಿದ್ದುಪಡಿ ತಂದಿರುವ ಹಲವಾರು ಕಾಯ್ದೆಗಳು ಕೃಷಿ ವಲಯವನ್ನು ಉನ್ನತ ಮಟ್ಟಕ್ಕೇರಿಸುವ ಜತೆಗೆ ರೈತರ ಅವಕಾಶಗಳನ್ನು ಮತ್ತಷ್ಟು ವಿಸ್ತರಿಸಲಿದೆ ಎಂದು ಹೇಳಿದರು. …
Read More »