ಬೆಂಗಳೂರು, ಮೇ 5: ಕೊರೊನಾ ಸೋಂಕಿತ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಕೊಡಿಸಿ 1.20 ಲಕ್ಷ ರೂ. ಹಣ ಪೀಕಿದ್ದ ಮೂವರು ದಂಧೆಕೋರರನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಎಂ.ಎಸ್. ರಾಮಯ್ಯ ಆಸ್ಪತ್ರೆಯ ಅರೋಗ್ಯ ಮಿತ್ರ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಚೇತನ್ ಸೇರಿದಂತೆ ಮೂವರು ಬಂಧನಕ್ಕೆ ಒಳಗಾಗಿದ್ದಾರೆ. ನೆಲಮಂಗಲದ ಲಕ್ಷ್ಮಿದೇವಮ್ಮ ಎಂಬುವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಕೂಡಲೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಯಶವಂತಪುರದ ಪೀಪಲ್ …
Read More »ಆಯಂಬುಲೆನ್ಸ್ ಕಾದು ಕಾದು ರಸ್ತೆಯಲ್ಲೇ ಕುಸಿದು ಮೃತಪಟ್ಟ ಯುವಕ;
ಕೊಡಗು: ಎರಡು ದಿನಗಳಿಂದ ಜ್ವರ, ಕೆಮ್ಮಿನಿಂದ ಬಳಲುತ್ತಿದ್ದ ಯುವಕ ಆಸ್ಪತ್ರೆಗೆ ತೆರಳಲು ಆಯಂಬುಲೆನ್ಸ್ಗಾಗಿ ಕಾದು ಕಾದು ಕೊನೆಗೆ ರಸ್ತೆಯಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕೊಡಗು ಜಿಲ್ಲೆ ಬಜಗುಂಡಿಯಲ್ಲಿ ನಡೆದಿದೆ. ಸೋಮವಾರಪೇಟೆ ತಾಲ್ಲೂಕಿನ ಬಜೆಗುಂಡಿಯ ಯುವಕ ಮನು ಮೃತ ಯುವಕ. ಎರಡು ದಿನಗಳಿಂದ ಕೆಮ್ಮು, ಜ್ವರದಿಂದ ಬಳಲುತ್ತಿದ್ದ ಯುವಕ ಮನು ಮೊನ್ನೆಯಷ್ಟೇ ಸೋಮವಾರಪೇಟೆ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಂಡಿದ್ದನಂತೆ. ಆದರೆ ಯುವಕನಿಗೆ ತೀವ್ರವಾಗಿ ಜ್ವರ ಮತ್ತು ಕೆಮ್ಮು ಇದ್ದಿದ್ದರಿಂದ ಆತನನ್ನು ಮಡಿಕೇರಿ …
Read More »ವಿಜಯಪುರ : ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ
ವಿಜಯಪುರ: ರಾಜ್ಯಾದ್ಯಂತ ಹಲವೆಡೆ ಬುಧವಾರ ಸಂಜೆ ಗುಡುಗು, ಸಿಡಿಲಿನೊಂದಿಗೆ ಭಾರಿ ಮಳೆಯಾಗಿದ್ದು, ವಿಜಯಪುರದಲ್ಲಿ ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಜೊತೆಗೆ ನಾಲ್ಕು ಆಡುಗಳು ಸಿಡಿಲಿನಿಂದ ಸಾವನಪ್ಪಿವೆ. ಅಶೋಕರಾಮ ಕಾರಜೋಳ(48), ಬಾಷಾಸಾಬ್ ಕರಜಗಿ(40) ಮತ್ತು ಜಾವಿದ್ ಹಾಜಿಸಾಬ್ ಜಾಲಗೇರಿ(33) ಸಾವಿಗೀಡಾಗಿದ್ದಾರೆ. ಸಬೀನಾ ಮತ್ತು ಇನ್ನೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಲದಿಂದ ಬರುವ ವೇಳೆ ಗಾಳಿ, ಮಳೆ ಆರಂಭವಾದ ಹಿನ್ನೆಲೆಯಲ್ಲಿ ರಕ್ಷಣೆಗಾಗಿ ಟಕ್ಕೆ ದರ್ಗಾ …
Read More »ಬೆಡ್ ಬ್ಲಾಕಿಂಗ್ ದಂಧೆಯ ಅತೀ ದೊಡ್ಡ ಜಾಲ – ಇಬ್ಬರು ವೈದ್ಯರು ಸೇರಿ 17 ಮಂದಿ ಅರೆಸ್ಟ್
ಬೆಂಗಳೂರು: ಸಿಲಿಕಾನ್ ಸಿಟಿ ವ್ಯಾಪ್ತಿಯಲ್ಲಿ ನಡೆದಿದ್ದ ಕೋವಿಡ್ ಬೆಡ್ ಬ್ಲಾಕಿಂಗ್ ದಂಧೆ ಸುದ್ದಿ ಅಲ್ಲೋಲಕಲ್ಲೋಲ ಉಂಟು ಮಾಡಿತ್ತು. ಸಂಸದ ತೇಜಸ್ವಿ ಸೂರ್ಯ ಭೇಟಿ ಬಳಿಕ ಮಾತನಾಡಿದ್ದ ಮುಖ್ಯಮಂತ್ರಿ ಸೂಕ್ತ ತನಿಖೆಯ ಭರವಸೆ ನೀಡಿದ್ರು. ಅಲ್ಲದೇ ಪ್ರಕರಣವನ್ನು ಕಳೆದ ರಾತ್ರಿಯೇ ಸಿಸಿಬಿಗೆ ಕೂಡ ವರ್ಗಾಯಿಸಿದ್ರು. ಈ ಬೆನ್ನಲ್ಲೇ ತನಿಖೆ ಶುರು ಮಾಡಿದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಜಯನಗರ ಠಾಣೆಗೆ ಭೇಟಿ ಕೊಟ್ಟು, ಆರೋಪಿಗಳಾದ ರೋಹಿತ್, ನೇತ್ರಾ ವಿಚಾರಣೆ ನಡೆಸಿದ್ರು. …
Read More »ಕೆಲಸ ಮಾಡುವ ಮನೆಯಲ್ಲಿಯೇ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳನನ್ನು 24 ಗಂಟೆಯಲ್ಲೆ ಬಂಧಿಸಿದ ಪೊಲೀಸರು
ಹುಬ್ಬಳ್ಳಿ: ಕೆಲಸ ಮಾಡುವ ಮನೆಯಲ್ಲಿಯೇ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳನನ್ನು 24 ಗಂಟೆಯಲ್ಲೆ ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ದೇಶಪಾಂಡೆ ನಗರದ ಅಪಾರ್ಟ್‍ಮೆಂಟ್‍ನಲ್ಲಿ ಲಕ್ಷಾಂತರ ರೂಪಾಯಿ ದೋಚಿಕೊಂಡು ಪರಾರಿಯಾಗಿದ್ದ ಕಳ್ಳನನ್ನು ಬಂಧನ ಮಾಡುವಲ್ಲಿ ಹುಬ್ಬಳ್ಳಿ ಉಪನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಧರ್ಮರಾಮ್ ಧರ್ಮೆಂದ್ರ ಗೋವರ್ಧನ ರಾಮ್ ಚೌಧರಿ ಎಂಬವನು ಬಂಧಿತ ಆರೋಪಿಯಾಗಿದ್ದಾನೆ. ಹುಬ್ಬಳ್ಳಿ ದೇಶಪಾಂಡೆನಗರದ ಗುರು ಅಪಾರ್ಟ್‍ಮೆಂಟ್‍ನ ಮಹೇಶ ಎಂಬವರ ಮನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಾಜಸ್ಥಾನ ಮೂಲದ …
Read More »ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಟಾಸ್ಕ್‍ಪೋರ್ಸ್ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.
ಗೋಕಾಕ: ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್.ಎಸ್.ಎಫ್. ಅತಿಥಿ ಗೃಹದ ಆವರಣದಲ್ಲಿ ಕೋವಿಡ್ ಸಂಬಂಧ ಗೋಕಾಕ್ ಮತ್ತು ಮೂಡಲಗಿ ತಾಲೂಕುಗಳ ಟಾಸ್ಕ್‍ಫೆÇೀರ್ಸ್ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಕೊರೋನಾ ನಿಯಂತ್ರಣಕ್ಕೆ ಎಲ್ಲರೂ ಶ್ರಮಿಸಬೇಕು. ಕೊರೋನಾ …
Read More »ಕೊರೊನಾ ಸೋಂಕಿಗೆ ಇಬ್ಬರು ಪೊಲೀಸರು ಬಲಿ; ಜಿಲ್ಲೆಯಾದ್ಯಂತ 25 ಸಿಬ್ಬಂದಿಗಳಿಗೆ ಕೊವಿಡ್ ಧೃಡ
ಚಿಕ್ಕಬಳ್ಳಾಪುರ: ದೇಶದಾದ್ಯಂತ ಕೊರೊನಾ ಎರಡನೇ ಅಲೆ ಅತಿ ವೇಗವಾಗಿ ಪ್ರಸರಣವಾಗುತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದೆ. ಇನ್ನು ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯೂ ಕೂಡ ಏರಿಕೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಆದರೆ ಸದ್ಯ ಜನ ಸಾಮಾನ್ಯರ ಮಧ್ಯದಲ್ಲಿ ನಿಂತು ಕೊರೊನಾ ವಾರಿಯರ್ಸ್ ಆಗಿ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ಕೊರೊನಾ ಸಂಕಷ್ಟ ಎದುರಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈಗಾಗಲೇ ಇಬ್ಬರು ಪೊಲೀಸರು ಕೊರೊನಾ ಸೋಂಕಿಗೆ ಮೃತಪಟ್ಟಿದ್ದು, ಜಿಲ್ಲೆಯಲ್ಲಿ 25ಕ್ಕೂ ಹೆಚ್ಚು ಪೊಲೀಸರಲ್ಲಿ ಕೊವಿಡ್ …
Read More »ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಷಿಜನ್ ರಾಜ್ಯದ ಬಳಕೆಗೆ ಇರಲಿ: ಸಿದ್ದರಾಮಯ್ಯ ಆಗ್ರಹ
ಬೆಂಗಳೂರು: ಕರ್ನಾಟಕದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಅನ್ನು ರಾಜ್ಯದ ಬಳಕೆಗೇ ಮೀಸಲಿಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ರಾಜ್ಯದ ಸಂಸದರು ಸಹ ಕೇಂದ್ರ ಸರ್ಕಾರದ ಮೇಲೆ ಈ ಕುರಿತು ಒತ್ತಡ ಹೇರಬೇಕು ಎಂದು ಅವರು ಹೇಳಿದ್ದಾರೆ. ಈಗ ರಾಜ್ಯಕ್ಕೆ ನಿಗದಿ ಮಾಡಿರುವ ಆಕ್ಸಿಜನ್ ಪ್ರಮಾಣ ಬೇಡಿಕೆಯ ಶೇ. 50ರಷ್ಟು ಸಹ ಇಲ್ಲ. ಬೇಡಿಕೆಗೆ ಅನುಗುಣವಾಗಿ ರಾಜ್ಯಕ್ಕೆ ಆಕ್ಸಿಜನ್ ಪೂರೈಸಲು ಕೇಂದ್ರ …
Read More »ಬೆಡ್ ಬ್ಲಾಕಿಂಗ್ ಹಗರಣ: ಬೆಂಗಳೂರಿನ ಎಲ್ಲಾ ವಲಯದ ಕೊವಿಡ್ ವಾರ್ ರೂಮ್ ಮೇಲೆ ಸಿಸಿಬಿ ಅಧಿಕಾರಿಗಳ ದಾಳಿ
ಬೆಂಗಳೂರು: ನಗರದ ಎಲ್ಲಾ ವಲಯದ ವಾರ್ ರೂಮ್ ಮೇಲೆ ಸಿಸಿಬಿ ಅಧಿಕಾರಿಗಳ ದಾಳಿ ಮಾಡಿದ್ದಾರೆ. ದಾಖಲೆಗಳು ಮತ್ತು ಅಂಕಿಅಂಶಗಳ ಹುಡುಕಾಟ ನಡೆಯುತ್ತಿದೆ. ಬೆಡ್ ಬುಕ್ಕಿಂಗ್ ಪ್ರಕರಣದಲ್ಲಿ ಇದುವರೆಗೆ ನಾಲ್ಕು ಜನರ ಬಂಧನವಾಗಿದೆ. ಒಟ್ಟು ಎರಡು ಪ್ರಕರಣ ದಾಖಲಾಗಿದೆ. ಸಾಫ್ಟ್‌ವೇರ್ ಮೂಲಕ ವಂಚನೆ ಮಾಡುವ ಮಾಹಿತಿ ಇದೆ. ಬಂಧಿತ ಇಬ್ಬರು ಡಾಕ್ಟರ್ಗಳು ವಾರ್ ರೂಮ್ ಇನ್ಚಾರ್ಜ್ಗಳಾಗಿದ್ದರು. ಅವರು ಸರ್ಕಾರಿ ವೈದ್ಯರಾಗಿದ್ದರು. ಸಿಸಿಬಿ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸ್ತಾ ಇದ್ದಾರೆ ಎಂದು ನಗರ …
Read More »ಹುಬ್ಬಳ್ಳಿಯಲ್ಲಿ ಐವರು ಕೊರೊನಾ ಸೋಂಕಿಗೆ ಬಲಿ; ಆಕ್ಸಿಜನ್ ಕೊರತೆಯೇ ಸಾವಿಗೆ ಕಾರಣ ಎಂದು ಕುಟುಂಬಸ್ಥರ ಆರೋಪ
ಹುಬ್ಬಳ್ಳಿ: ದೇಶದಾದ್ಯಂತ ಕೊರೊನಾ ಎರಡನೇ ಅಲೆ ಅತಿ ವೇಗವಾಗಿ ಪ್ರಸರಣವಾಗುತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದೆ. ಇನ್ನು ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯೂ ಕೂಡ ಏರಿಕೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಹೀಗಿರುವಾಗಲೇ ಹಲವೆಡೆ ಆಕ್ಸಿಜನ್ ಕೊರತೆ, ವೆಂಟಿಲೇಟರ್ ಬೆಡ್ ಇಲ್ಲ ಎನ್ನುವ ಕೂಗು ಕೇಳಿ ಬಂದಿದ್ದು. ಹುಬ್ಬಳಿಯಲ್ಲೂ ಕೂಡ ಸದ್ಯ ಇಂತಹದ್ದೆ ಸಮಸ್ಯೆ ಎದುರಾಗಿದೆ. ಈ ಆತಂಕ್ಕೆ ಪ್ರಮುಖ ಕಾರಣ ಹುಬ್ಬಳ್ಳಿಯ ಗೋಕುಲ ರಸ್ತೆಯ ಲೈಫ್ ಲೈನ್ ಆಸ್ಪತ್ರೆಯಲ್ಲಿ ನಿನ್ನೆ …
Read More »
Laxmi News 24×7