ನಾನು ಆರೋಗ್ಯವಾಗಿ, ಆರಾಮಾಗಿ ಮನೆಯಲ್ಲಿ ಇದ್ದೀನಿ ಎಂದು ವಿಡಿಯೋ ಮೂಲಕ ನಟ ದೊಡ್ಡಣ್ಣ ಸ್ಪಷ್ಟನೆ ನೀಡಿದ್ದಾರೆ. ದೊಡ್ಡಣ್ಣ ಇನ್ನಿಲ್ಲ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ದೊಡ್ಡಣ್ಣ ಫೋಟೋ ಹಾಕಿ RIP ಅಂತ ಬರೆದು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ಪೋಸ್ಟ್ ನೋಡಿ ಆತಂಕಗೊಂಡ ಅಭಿಮಾನಿಗಳು, ಸ್ನೇಹಿತರು, ಚಿತ್ರರಂಗದ ಗಣ್ಯರು ದೊಡ್ಡಣ್ಣ ಅವರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಸಾಕಷ್ಟು ಫೋನ್ ಕರೆಗಳು ಬರುತ್ತಿದ್ದಂತೆ ನಟ ದೊಡ್ಡ ವಿಡಿಯೋ …
Read More »ದೇಶದಲ್ಲಿ 3.82 ಲಕ್ಷ ಹೊಸ ಸೋಂಕು ಪ್ರಕರಣ ಪತ್ತೆ
ನವದೆಹಲಿ: ದೇಶದ ಕೋವಿಡ್ 19 ಸೋಂಕಿತರ ಸಂಖ್ಯೆ ಏರುಗತಿಯಲ್ಲೇ ಸಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ . ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿದ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಯಲ್ಲಿ ದಾಖಲೆಯ 3.82 ಲಕ್ಷ ಹೊಸದಾಗಿ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 3780 ಮಂದಿ ಮೃತಪಟ್ಟಿದ್ದಾರೆ. ದೇಶದ ಒಟ್ಟು ಸೋಂಕಿತರ ಸಂಖ್ಯೆ 2,06,65,148ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ ಸದ್ಯ 34,87,229 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ದೇಶದಲ್ಲಿ ಒಟ್ಟು ಸಾವನ್ನಪ್ಪಿದ ಕೋವಿಡ್ 19 …
Read More »ಕೊರೊನಾ ಸೋಂಕಿತ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ಮೇ 10ರವರೆಗೆ ಲಾಕ್‌ಡೌನ್ ವಿಸ್ತರಿಸಿದೆ.
ಲಕ್ನೋ, ಮೇ 05: ಕೊರೊನಾ ಸೋಂಕಿತ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ಮೇ 10ರವರೆಗೆ ಲಾಕ್‌ಡೌನ್ ವಿಸ್ತರಿಸಿದೆ. ಕೊರೊನಾ ವೈರಸ್ ಪ್ರಕರಣಗಳು ಮತ್ತಷ್ಟು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾರಾಂತ್ಯದ ಲಾಕ್‌ಡೌನ್ ಅವಧಿಯನ್ನು ಮೇ 10 ರಂದು ಬೆಳಗ್ಗೆ 7 ಗಂಟೆಯವರೆಗೆ ವಿಸ್ತರಿಸಲು ಉತ್ತರ ಪ್ರದೇಶ ಸರ್ಕಾರ ಬುಧವಾರ ನಿರ್ಧರಿಸಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ. ಕೊರೊನಾ ಕರ್ಫ್ಯೂ ವೇಳೆ ಎಲ್ಲಾ ಅಂಗಡಿಗಳು ಮತ್ತು ಸಂಸ್ಥೆಗಳು ಸೋಮವಾರ ಬೆಳಗ್ಗೆ 7 …
Read More »ಚಾಮರಾಜನಗರ ಆಸ್ಪತ್ರೆ ದುರಂತ ನನ್ನ ತಪ್ಪಿನಿಂದ ಆಗಿದ್ದಲ್ಲ, ಊಹಾಪೋಹ ಹಬ್ಬಿಸಬೇಡಿ’: ಮೈಸೂರು ಡಿಸಿ ರೋಹಿಣಿ ಸಿಂಧೂರಿ
ಮೈಸೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಮೃತಪಟ್ಟ ಘಟನೆ ಬಗ್ಗೆ ಎಲ್ಲರಿಗೂ ನೋವಿದೆ, ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿಕೆ ನೀಡಿದ್ದಾರೆ, ಆದರೂ ಮಾಧ್ಯಮಗಳಲ್ಲಿ ಹಲವಾರು ಊಹಾಪೋಹಗಳು ಬರುತ್ತಿವೆ, ವದಂತಿಗಳನ್ನು ಹಬ್ಬಿಸಿ ಜನತೆಯನ್ನು ತಪ್ಪು ದಾರಿಗೆಳೆಯುವುದು ಬೇಡ, ಸರ್ಕಾರ ತನಿಖೆಗೆ ಅಧಿಕಾರಿಗಳನ್ನು ನೇಮಿಸಿದೆ, ತನಿಖೆಯಲ್ಲಿ ಗೊತ್ತಾಗುತ್ತದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಬುಧವಾರ ಪ್ರತಿಕ್ರಿಯಿಸಿದ್ದಾರೆ. ರೋಗಿಗಳು ಎಲ್ಲಿ ಸಾವಾದರೂ ಅದು ನಮಗೆ ನೋವಿನ ಸಂಗತಿಯೇ, ಅದು ನಮ್ಮ …
Read More »ಸ್ಮಶಾನದಲ್ಲಿಯೇ ಸೋಂಕಿತನ ಶವ ಬಿಸಾಡಿದ ಪಾಪಿಗಳು?
ಚಿಕ್ಕಬಳ್ಳಾಪುರ : ಇಲ್ಲಿಯ ನಿಮ್ಮಾಕಲಕುಂಟೆ ಹತ್ತಿರದ ಸ್ಮಶಾನದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಜನ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ನೋಡಿದ ಸ್ಥಳೀಯರು ಕೋವಿಡ್ ಸೋಂಕಿತ ಶವವನ್ನು ಮಣ್ಣು ಮಾಡದೆ ಬಿಸಾಡಿ ಹೋಗಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಈ ಮೃತ ದೇಹವನ್ನು ಬಿಸಾಡಿ ಮೂರ್ನಾಲ್ಕು ದಿನಗಳೇ ಕಳೆದಿವೆ. ಮೃತ ದೇಹ ಆಸ್ಪತ್ರೆಯಲ್ಲಿ ಪ್ಯಾಕ್ ಮಾಡಿದ ರೀತಿಯಲ್ಲಿದೆ. ನಾಯಿಗಳು ಮೃತದೇಹದ ಭಾಗಗಳನ್ನು ಎಳೆದು ತಿನ್ನುತ್ತಿವೆ. ಅಷ್ಟೇ ಇಲ್ಲ, ಈ ಸ್ಮಶಾನದ ಅಕ್ಕ ಪಕ್ಕದಲ್ಲಿಯೇ …
Read More »ಬೆಂಗಳೂರು: ಶೇ.55ಕ್ಕೆ ತಲುಪಿದ ಕೊರೊನಾ ಪಾಸಿಟಿವಿಟಿ ದರ, 3 ಲಕ್ಷ ಸಕ್ರಿಯ ಪ್ರಕರಣ
ಬೆಂಗಳೂರು, ಮೇ 05: ಬೆಂಗಳೂರಿನಲ್ಲಿ ಕೊರೊನಾ ಸೋಂಕು ಪಾಸಿಟಿವಿಟಿ ದರ ಶೇ.55ಕ್ಕೆ ತಳುಪಿದ್ದು, 3 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿರುವುದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಪ್ರತಿಯೊಬ್ಬರೂ ಕೊರೊನಾ ಪರೀಕ್ಷೆ ಮಾಡಿಸುತ್ತಿದ್ದು, ಪಾಸಿಟಿವಿಟಿ ದರ ಹೆಚ್ಚಾಗಿದೆ. ಸೋಮವಾರ ಪಾಸಿಟಿವಿಟಿ ಪ್ರಮಾಣ ಶೇ.55ಕ್ಕೆ ತಲುಪಿದೆ. ಮಂಗಳವಾರ ಕರ್ನಾಟಕದಲ್ಲಿ ಒಟ್ಟು 44,632 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಅದರಲ್ಲಿ ಬೆಂಗಳೂರಿನಲ್ಲಿ 20,850 ಕೊರೊನಾ ಸೋಂಕಿತರಿದ್ದಾರೆ ಎಂಬುದು ತಿಳಿದುಬಂದಿದೆ. ಕಳೆದ 24 ಗಂಟೆಯಲ್ಲಿ ಗಂಟೆಯಲ್ಲಿ ಒಟ್ಟು 292 …
Read More »ಚಾಮರಾಜನಗರ, ಮೈಸೂರು ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಕ್ಷಣಗಣನೆ?
ಚಾಮರಾಜನಗರ, ಮೇ 5: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತಕ್ಕೆ ಸಂಬಂಧಿಸಿದಂತೆ ಮೈಸೂರು ಹಾಗೂ ಚಾಮರಾಜನಗರದ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡುವ ಕುರಿತು ತೀರ್ಮಾನ ತೆಗೆದುಕೊಳ್ಳಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಹತ್ವದ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಜತೆ ಸುದೀರ್ಘ ಮಾತುಕತೆಯಲ್ಲಿ ತೊಡಗಿರುವ ಸಿಎಂ ಬಿ.ಎಸ್ ಯಡಿಯೂರಪ್ಪ, ಇಬ್ಬರೂ ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಸಾಕಷ್ಟು ಒತ್ತಡ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ …
Read More »ನಟಿ ಕಂಗನಾಗೆ ಮತ್ತೊಂದು ಶಾಕ್: ಟ್ವಿಟರ್ ಬಳಿಕ ಫ್ಯಾಶನ್ ಡಿಸೈನರ್ಗಳಿಂದಲೂ ಬಹಿಷ್ಕಾರ..!
ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಬಗ್ಗೆ ಸಾಲು ಸಾಲು ಟ್ವೀಟ್ಗಳನ್ನ ಮಾಡಿದ ಕಂಗನಾ ರಣಾವತ್ ಖಾತೆಗೆ ಟ್ವಿಟರ್ ಇಂಡಿಯಾ ಕೊಕ್ ನೀಡಿದೆ. ಟ್ವಿಟರ್ ಮಾರ್ಗಸೂಚಿಗಳನ್ನ ಉಲ್ಲಂಘಿಸಿದ ಹಿನ್ನೆಲೆ ಕಂಗನಾ ರಣಾವತ್ರ ಟ್ವಿಟರ್ ಖಾತೆಯನ್ನ ಶಾಶ್ವತವಾಗಿ ಅಮಾನತು ಮಾಡಲಾಗಿದೆ. ಕಂಗನಾ ರಣಾವತ್ರನ್ನ ಟ್ವಿಟರ್ ಬಹಿಷ್ಕರಿಸಿದ ಬೆನ್ನಲ್ಲೇ ಇದೀಗ ಭಾರತೀಯ ಫ್ಯಾಷನ್ ಡಿಸೈನರ್ಗಳೂ ಸಹ ಕಂಗನಾರನ್ನ ಬಹಿಷ್ಕರಿಸಿದ್ದಾರೆ. ಡಿಸೈನರ್ ರಿಮಜಿನ್ ದಾದು ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ವೊಂದನ್ನ ಶೇರ್ ಮಾಡಿದ್ದಾರೆ. ಒಳ್ಳೆಯ …
Read More »ಹಾಲು ಖರೀದಿಸುವ ಸಮಯದಲ್ಲಿ ಮದ್ಯ ಕೊಳ್ಳಲು ಯಾರು ಬರಲ್ಲ.
ಕೊಪ್ಪಳ: ಹಾಲು ಖರೀದಿಸುವ ಸಮಯದಲ್ಲಿ ಮದ್ಯ ಕೊಳ್ಳಲು ಯಾರು ಬರಲ್ಲ. ರಾಜ್ಯ ಸರ್ಕಾರ ಬಾರ್ ಗಳಿಗೆ ನೀಡಿರುವ ಸಮಯ ವ್ಯಾಪಾರಕ್ಕೆ ಸೂಕ್ತವಲ್ಲ ಎಂದು ಮದ್ಯದಂಗಡಿಗಳ ಮಾಲೀಕರು ಬೇಸರ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿರುವ ಸಮಯದಲ್ಲಿ ನಮಗೆ ವ್ಯಾಪಾರ ಸಹ ಆಗುತ್ತಿಲ್ಲ. ಸರ್ಕಾರಕ್ಕೆ ಆದಾಯವು ಬರಲ್ಲ. ಹೀಗಾಗಿ ರಾಜ್ಯದಲ್ಲಿ ಸಂಪೂರ್ಣವಾಗಿ ಬಾರ್ ಗಳನ್ನು ಬಂದ್ ಮಾಡಿದ್ರೆ ಉತ್ತಮ ಎಂದು ಕೊಪ್ಪಳ ಬಾರ್ ಮಾಲೀಕರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತುಮಾತನಾಡಿರುವ ಮದ್ಯ ಮಾರಾಟಗಾರರು, …
Read More »ರಾಜ್ಯದ ಆಮ್ಲಜನಕ ಬೇರೆಡೆ ಹಂಚಿಕೆಗೆ ಆಕ್ರೋಶ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿರುವ ಸಂದರ್ಭದಲ್ಲಿ ಇಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ಪೂರ್ಣ ಪ್ರಮಾಣದಲ್ಲಿ ರಾಜ್ಯದಲ್ಲೇ ಬಳಸಿಕೊಳ್ಳಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡದಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ರಾಜ್ಯದಲ್ಲಿ ನಿತ್ಯವೂ 1,043 ಟನ್ ಆಮ್ಲಜನಕ ಉತ್ಪಾದನೆಯಾಗುತ್ತಿದೆ. ಅದರಲ್ಲಿ 865 ಟನ್ ರಾಜ್ಯಕ್ಕೆ ಹಂಚಿಕೆ ಮಾಡಿದ್ದು, 675 ಟನ್ ಮಾತ್ರ ಬಳಕೆಗೆ ಲಭ್ಯವಾಗುತ್ತಿದೆ ಎಂಬ ಮಾಹಿತಿಯುಳ್ಳ ವರದಿಯನ್ನು ‘ಪ್ರಜಾವಾಣಿ’ ಮಂಗಳವಾರ ಪ್ರಕಟಿಸಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ಪತ್ರಿಕೆಯ ವರದಿಯ ತುಣುಕನ್ನು ಹಂಚಿಕೊಂಡಿರುವ …
Read More »
Laxmi News 24×7