ಕೊಪ್ಪಳ: ಮಚ್ಚಿನಿಂದ ಕೊಚ್ಚಿ ಪಾಪಿ ಪತಿ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುರಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿ ಯಲ್ಲಪ್ಪ ಪತ್ನಿ ರೇಣುಕಾ (32)ಳನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಪತಿ ಮತ್ತು ಪತ್ನಿ ರೇಣುಕಾ ಒಳಜಗಳವೇ ಕೊಲೆಗೆ ಕಾರಣ ಎನ್ನಲಾಗಿದ್ದು, ಕೆಲವು ತಿಂಗಳ ಹಿಂದೆ ಪತಿ-ಪತ್ನಿ ಇಬ್ಬರೂ ಜಗಳವಾಡಿಕೊಂಡಿದ್ದರು. ಬಳಿಕ ಯಲ್ಲಪ್ಪನ ಕಿರಿಕಿರಿಗೆ ಬೇಸತ್ತು ರೇಣುಕಾ ತವರು ಮನೆ …
Read More »ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ ರಾಗಿಣಿ
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ರಾಗಿಣಿ ದ್ವಿವೇದಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಗಿಣಿ ದ್ವಿವೇದಿ ಪರ ಗುಜರಾತ್ ಮೂಲದ ವಕೀಲರೊಬ್ಬರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಡಿಸೆಂಬರ್ 4ರಂದು ರಾಗಿಣಿ ದ್ವಿವೇದಿ ಅರ್ಜಿ ವಿಚಾರಣೆ ನ್ಯಾಯಾಲಯದ ಮುಂದೆ ಬರಲಿದೆ. ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ನವೆಂಬರ್ 3ರಂದು ಹೈಕೋರ್ಟ್ ವಜಾ ಮಾಡಿ ಆದೇಶಿಸಿತ್ತು.ಹೈಕೋರ್ಟ್ ಆದೇಶ …
Read More »ಚಿತ್ರದ ಅತಿ ಚೆಂದದ ಲಿರಿಕಲ್ ವಿಡಿಯೋ ಹಾಡಿನ ಕಚಗುಳಿ ಶುರು
ವಿಂಡೋಸೀಟ್’ ಚಿತ್ರದ “ಅತಿಚೆಂದದ ಹೂಗೊಂಚಲು ಕಿಟಕಿಯಾಚೆ ಕಂಡ ಹಾಗಿದೆ” ಹ್ಯಾಂಡ್ ಮೇಡ್ ಪೇಂಟಿಂಗ್ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ, ಫಸ್ಟ್ ಲುಕ್ ವಿಡಿಯೋ ತುಣುಕಿನಲ್ಲಿ ಈ ಹಾಡಿನ ಸಾಲು ಎಲ್ಲರ ಮನಸ್ಸಿಗೂ ಪ್ರಿಯವಾಗಿತ್ತು. ಯಾವಾಗ ಈ ಹಾಡು ಬಿಡುಗಡೆಯಾಗುತ್ತದೆ ಎಂದು ಎಲ್ಲರೂ ಕಾತುರದಿಂದ ಕಾಯುತ್ತಿದ್ರು. ಇದೀಗ ಮೋಸ್ಟ್ ಎಕ್ಸ್ ಪೆಕ್ಟೆಡ್ ಸಾಂಗ್ ‘ವಿಂಡೋಸೀಟ್’ ಚಿತ್ರತಂಡ ಬಿಡುಗಡೆ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಕಮಾಲ್ ಮಾಡುತ್ತಿದೆ. ಎಲ್ಲರ ಬಾಯಲ್ಲೂ ಈಗ ಈ ಹಾಡಿನದ್ದೆ …
Read More »ಯೂಟ್ಯೂಬ್ ವಿಡಿಯೋ ನೋಡಿ ಕೆಫೆಯ ಪೇಮೆಂಟ್ ಸಿಸ್ಟಮ್ ಹ್ಯಾಕ್ ಮಾಡಿದ 17 ವರ್ಷದ ವಿದ್ಯಾರ್ಥಿ
ಮುಂಬೈ: ಅಪ್ರಾಪ್ತನೋರ್ವ ಯೂಟ್ಯೂಬ್ ವಿಡಿಯೋ ನೋಡಿ ಕೆಫೆಯ ಪೇಮೆಂಟ್ ಸಿಸ್ಟಮ್ ಹ್ಯಾಕ್ ಮಾಡಿದ್ದು, ಗ್ರಾಹಕರು ಕೆಫೆಗೆ ಪಾವತಿಸುವ ಹಣವನ್ನು ತನ್ನ ಖಾತೆಗೆ ಬರುವಂತೆ ಮಾಡುತ್ತಿದ್ದ ಪ್ರಕರಣ ಮುಂಬೈನಲ್ಲಿ ನಡೆದಿದೆ. 17 ವರ್ಷದ ವಿದ್ಯಾರ್ಥಿ ಯೂಟ್ಯೂಬ್ ವಿಡಿಯೋ ನೋಡಿ ಈ ಕೃತ್ಯ ಎಸಗಿದ್ದು, ಬಾಲಾಪರಾಧಿ ನ್ಯಾಯಾಲಯ ಎರಡು ವರ್ಷಗಳ ಕಾಲ ಕೌನ್ಸಲಿಂಗ್ಗೆ ಒಳಪಡಿಸುವಂತೆ ಸೂಚಿಸಿದೆ. ವಿದ್ಯಾರ್ಥಿ 12ನೇ ತರಗತಿಯಲ್ಲಿ ಶೇ.80ರಷ್ಟು ಅಂಕ ಗಳಿಸಿ ಉತ್ತೀರ್ಣನಾದ ಬಳಿಕ ಚಾರ್ಟೆಡ್ ಅಕೌಂಟೆನ್ಸಿ ಮಾಡುತ್ತಿದ್ದಾನೆ. ಸೆಪ್ಟೆಂಬರ್ …
Read More »ಭಾರತದಲ್ಲಿ ಕೊರೊನಾ ವೈರಸ್ ಸೃಷ್ಟಿಯಾಗಿದೆ ಚೀನಾದ ಮೊಂಡುವಾದ
ಬೀಜಿಂಗ್: ಇಡೀ ವಿಶ್ವಕ್ಕೆ ಕೊರೊನಾ ಹಬ್ಬಿಸಿ, ಸುಳ್ಳು ಮಾಹಿತಿಗಳನ್ನು ನೀಡಿದ್ದ ಚೀನಾ ಈಗ ಕೊರೊನಾ ವಿಚಾರದಲ್ಲಿ ಅತಿ ದೊಡ್ಡ ಸುಳ್ಳು ಹೇಳಿ ನಗೆಪಾಟಲಿಗೆ ಗುರಿಯಾಗಿದೆ. ಕೊರೊನಾ ವೈರಸ್ ಚೀನಾದಲ್ಲಿ ಸೃಷ್ಟಿಯಾಗಿಲ್ಲ. ಈ ವೈರಸ್ನ ಮೂಲ ಭಾರತ ಎಂದು ಹೇಳಿ ತನ್ನ ಮೇಲೆ ಬಂದಿದ್ದ ಕಳಂಕವನ್ನು ತೊಳೆಯಲು ಮತ್ತೊಂದು ಸುಳ್ಳು ಹೇಳಿದೆ. 2019ರ ಬೇಸಿಗೆಯಲ್ಲಿ ಪ್ರಾಣಿಗಳಿಂದ ಮನುಷ್ಯರಿಗೆ ಅಶುದ್ಧ ನೀರಿನ ಮೂಲಕ ಮೊದಲು ವೈರಸ್ ಹರಡಿದೆ. ಈ ವೈರಸ್ ಹೇಗೋ ವುಹಾನ್ …
Read More »ಕ್ರಿಮಿನಲ್ಗಳಿಗೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್
ಬೆಂಗಳೂರು- ಇಂದಿನಿಂದ ಆರಂಭವಾಗಿರುವ ಮಾಸಿಕ ಜನಸಂಪರ್ಕ ಸಭೆಗೆ ಉತ್ತಮ ಜನ ಸ್ಪಂದನೆ ದೊರೆತಿದ್ದು, ಕ್ರಿಮಿನಲ್ಗಳಿಗೆ ಈ ಸಭೆಯ ಮೂಲಕ ಪೊಲೀಸರು ಸ್ಪಷ್ಟ ಎಚ್ಚರಿಕೆಯ ಸಂದೇಶ ರವಾನಿಸಲು ಸಾಧ್ಯವಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಕಮಲ್ಪಂಥ್ ತಿಳಿಸಿದ್ದಾರೆ. ಪೂರ್ವ ವಿಭಾಗದ ಪುಲಿಕೇಶಿನಗರ ಪೊಲೀಸ್ ಠಾಣೆಯಲ್ಲಿ ನಡೆದ ಮಾಸಿಕ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಾರ್ವಜನಿಕರು ಮತ್ತು ಪೊಲೀಸರ ನಡುವೆ ಉತ್ತಮ ಭಾಂದವ್ಯ ಇರಬೇಕು. ಜನರಿಗೆ ತಮ್ಮ ಕೆಲಸ ಯಾವ …
Read More »ಎರಡೂ ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷವಾದ ಜೆಡಿಎಸ್ನ್ನು ಮುಗಿಸಲು ಪ್ಲಾನ್ ಮಾಡಿವೆ: ಕೋನರೆಡ್ಡಿ
ಬೆಂಗಳೂರು, – ಎರಡೂ ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷವಾದ ಜೆಡಿಎಸ್ನ್ನು ಮುಗಿಸಲು ಪ್ಲಾನ್ ಮಾಡಿವೆ ಎಂದು ಆರೋಪಿಸಿದ ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಸಮರೋಪಾದಿಯಲ್ಲಿ ಪಕ್ಷ ಸಂಘಟನೆ ಮಾಡಬೇಕಿದೆ ಎಂದು ಹೇಳಿದರು. ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿಂದು ಮುಂಬರುವ ಗ್ರಾಪಂ ಚುನಾವಣೆ, ಪಕ್ಷದ ಬಲವರ್ಧನೆ ಕುರಿತ ತಾಲೂಕು ಜಿಲ್ಲಾ ಮತ್ತು ರಾಜ್ಯಮಟ್ಟದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಎರಡೂ ರಾಷ್ಟ್ರೀಯ ಪಕ್ಷಗಳ ನಡುವೆ ಜೆಡಿಎಸ್ ಉಳಿಸಲು ಯುದ್ಧ ಮಾಡಬೇಕಿದೆ. ನಾಲ್ಕು …
Read More »ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಕಾನೂನಿನ ಸಂಕಷ್ಟಕ್ಕೆ
ಬೆಂಗಳೂರು,ನ.28- ಆತ್ಮಹತ್ಯೆಗೆ ಯತ್ನಿಸಿ ಎಂ.ಎಸ್. ರಾಮಯ್ಯ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಕಾನೂನಿನ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಈಗಾಗಲೇ ಅವರ ವಿರುದ್ದ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ(ಎಫ್ ಐಆರ್) ದಾಖಲಾಗಿದೆ. ಭಾರತೀಯ ದಂಡ ಸಂಹಿತೆ 309ರ ಪ್ರಕಾರ ಆತ್ಮಹತ್ಯೆ ಯತ್ನ ಅಪರಾಧ. ಇದರ ಅಡಿಯಲ್ಲಿ ಗರಿಷ್ಠ ಒಂದು ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಬಹುದಾಗಿದೆ. ಐಪಿಸಿ ಸೆಕ್ಷನ್ 309ರ ಪ್ರಕಾರ …
Read More »ಯಡಿಯೂರಪ್ಪ ಕುರ್ಚಿ ಉಳಿಸಿಕೊಳ್ಳಲು ಇಂತಹ ತಂತ್ರ ಮಾಡುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಿಎಸ್ವೈ ವಿರುದ್ಧ ಆರೋಪ
ಬೆಂಗಳೂರು: ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸಿ ಎಂದು ಕೇಳುವುದರಲ್ಲಿ ತಪ್ಪಿಲ್ಲ. ಸಂವಿಧಾನದ 334ನೇ ವಿಧಿಯಲ್ಲೇ ಇದನ್ನು ತಿಳಿಸಲಾಗಿದೆ. ಆದರೆ, ಯಡಿಯೂರಪ್ಪ ಕುರ್ಚಿ ಉಳಿಸಿಕೊಳ್ಳಲು ಇಂತಹ ತಂತ್ರ ಮಾಡುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಿಎಸ್ವೈ ವಿರುದ್ಧ ಆರೋಪ ಮಾಡಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡಲು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಅಧ್ಯಯನ ನಡೆಸಿ ವರದಿ ನೀಡಬೇಕು. ಪಟ್ಟಿಗೆ ಸೇರಿಸುವ, ರದ್ದು …
Read More »ವಾ.ಕ.ರ.ಸಾ.ಸಂಸ್ಥೆಯ ಮೂಡಲಗಿ ಬಸ್ ಘಟಕ ನಿರ್ಮಾಣಕ್ಕೆ ಮೂರು ಎಕರೆ ನಿವೇಶನವನ್ನು ನೀಡಲಾಗುವುದು: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮೂಡಲಗಿ ಹೊಸ ತಾಲೂಕಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಅಗತ್ಯವಿರುವ ಎಲ್ಲ ಸರ್ಕಾರಿ ಕಚೇರಿಗಳನ್ನು ಪ್ರಾರಂಭಿಸಲಾಗುವುದು. ಅಲ್ಲದೆ ವಾ.ಕ.ರ.ಸಾ.ಸಂಸ್ಥೆಯ ಮೂಡಲಗಿ ಬಸ್ ಘಟಕ ನಿರ್ಮಾಣಕ್ಕೆ ಮೂರು ಎಕರೆ ನಿವೇಶನವನ್ನು ನೀಡಲಾಗುವುದು ಎಂದು ಶಾಸಕ ಮತ್ತು ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಕುಲಗೋಡ ಗ್ರಾಮದಲ್ಲಿ ಪ್ರಾದೇಶಿಕ ಹಿಂದುಳಿದ ಪ್ರದೇಶಾಭಿವೃದ್ದಿ ಇಲಾಖೆಯಿಂದ (ನಂಜುಂಡಪ್ಪ ಆಯೋಗ) 95 ಲಕ್ಷ ರೂ.ಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಡಲಗಿ …
Read More »