ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ಯೋಜನೆ 2ನೇ ಹಂತಕ್ಕೆ 30,695 ಕೋಟಿ ರೂ. ಮೀಸಲಿಡಲಾಗಿದೆ. 2024ರ ಜೂನ್ ವೇಳೆಗೆ 2ನೇ ಹಂತದ ಮೆಟ್ರೋ ರೈಲು ಯೋಜನೆ ಪೂರ್ಣಗೊಳ್ಳಲಿದೆ. 10 ಲಕ್ಷ ರೈತರಿಗೆ 6,500 ಕೋಟಿ ರೂ. ಬೆಳೆ ಸಾಲ ನೀಡಲಾಗಿದೆ. ಕೊಡಗು, ಕರಾವಳಿ ಹಾಗೂ ಉತ್ತರ ಕರ್ನಾಟಕದ ಸೇರಿದಂತೆ 11 ಜಿಲ್ಲೆಗಳನ್ನು ಪ್ರವಾಹಪೀಡಿತ ಜಿಲ್ಲೆಗಳೆಂದು ಘೋಷಿಸಲಾಗಿದೆ. ಸವಾಲುಗಳನ್ನು ಅವಕಾಶವನ್ನಾಗಿ ಪರಿವರ್ತಿಸಲು ಕರ್ನಾಟಕ ಸರ್ಕಾರ ದಿಟ್ಟ ಹೆಜ್ಜೆಯನ್ನಿಟ್ಟಿದೆ ಎಂದು ಮುಖ್ಯಮಂತ್ರಿ ಬಿ.ಎಸ್. …
Read More »ಮಹಾನಗರದಲ್ಲಿ ಶೀಘ್ರದಲ್ಲಿಯೇ 100 ಎಕರೆ ಪ್ರದೇಶದಲ್ಲಿ ಹುಬ್ಬಳ್ಳಿ ಮಾದರಿಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ: ಮಹಾನಗರದಲ್ಲಿ ಶೀಘ್ರದಲ್ಲಿಯೇ 100 ಎಕರೆ ಪ್ರದೇಶದಲ್ಲಿ ಹುಬ್ಬಳ್ಳಿ ಮಾದರಿಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ
ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಶೀಘ್ರದಲ್ಲಿಯೇ 100 ಎಕರೆ ಪ್ರದೇಶದಲ್ಲಿ ಹುಬ್ಬಳ್ಳಿ ಮಾದರಿಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ ಮಾಡಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ. ಬೆಳಗಾವಿಯ ಜಿಲ್ಲಾ ಕ್ರೀಡಾಂಗಣ ದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯ ಬಳಿಕ ಮಾದ್ಯಮಗೋಷ್ಠಿ ನಡೆಸಿದ ಅವರು,ಮುಂದಿನ ವರ್ಷ ಬೆಳಗಾವಿ ಜಿಲ್ಲಾ ಕ್ರೀಡಾಂಗಣದ ಲೀಜ್ ಅವಧಿ ಮುಗಿಯುತ್ತದೆ ಮುಂದಿನ ವರ್ಷ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮ ಎಲ್ಲಿ ನಡೆಯುತ್ತದೆ ಎಂದು ಮಾದ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಉತ್ತರಿಸಿದ …
Read More »ನವೀನ್ ತಲೆಗೆ 51 ಲಕ್ಷ ಘೋಷಿಸಿದ್ದ ಮುಸ್ಲಿಂ ನಾಯಕ ಅರೆಸ್ಟ್
ಲಕ್ನೋ: ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ನವೀನ್ ತಲೆಗೆ 51 ಲಕ್ಷ ಘೋಷಣೆ ಮಾಡಿದ್ದ ಮುಸ್ಲಿಂ ನಾಯಕನನ್ನು ಮೀರತ್ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಶಹಜೀಬ್ ರಿಜ್ವಿ ಸಮಾಜವಾದಿ ಪಕ್ಷದ ಮಾಜಿ ಸದಸ್ಯ ಹಾಗೂ ಸಾಮಾಜಿಕ ಕಾರ್ಯಕರ್ತನಾಗಿದ್ದು, ಈತನನ್ನು ಮೀರತ್ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮೀರತ್ ನ ಫಲ್ವಾಡಾ ಪಟ್ಟಣದ ರಸೂಲ್ಪುರ ಗ್ರಾಮದ ನಿವಾಸಿಯಾಗಿರುವ ರಿಜ್ವಿ, ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದನು. …
Read More »“ನಮಗಿಲ್ಲದ ಸೌಲಭ್ಯ ಹಾಲಿವುಡ್ಗೆ ನೀಡುವುದು ಸರಿಯಲ್ಲ”
ಬೆಂಗಳೂರು,- ಕನ್ನಡದ ನೆಲ- ಜಲ, ಸವಲತ್ತುಗಳನ್ನು ಬಳಸಿಕೊಂಡು ಬೃಹತ್ತಾಗಿ ಬೆಳೆದಿರುವ ಐಟಿಬಿಟಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ನಿರ್ದೇಶಕ ಮೀನಾ ನಾಗಾರಾಜ್ ಅವರಿಗೆ ತಾಕೀತು ಮಾಡಿದ್ದಾರೆ. ಐಟಿಬಿಟಿ ಸಂಸ್ಥೆಗಳು ಕನ್ನಡಿಗರನ್ನು ಕಡೆಗಣಿಸುತ್ತಿವೆ, ಅಲ್ಲದೆ ಕನ್ನಡಿರಿಗೆ ಸಿಗಬೇಕಾದ ಉದ್ಯೋಗಗಳು ಅನ್ಯಭಾಷಿಕರ ಪಾಲಾಗುತ್ತಿವೆ ಎಂಬ ದೂರುಗಳು ಪ್ರಾಕಾರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಕನ್ನಡ …
Read More »ಆರ್ಸಿಬಿಗೆ ಕಿಚ್ಚ ಸುದೀಪ್- ರಚಿತಾ ರಾಮ್ ರಾಯಭಾರಿ..?
ಬೆಂಗಳೂರು, – ರನ್ನ, ಮುಕುಂದ ಮುರಾರಿ ಚಿತ್ರಗಳಲ್ಲಿ ಒಟ್ಟಾಗಿ ನಟಿಸಿದ್ದ ಕಿಚ್ಚ ಸುದೀಪ್ ಹಾಗೂ ಡಿಂಪಲ್ಕ್ವೀನ್ ರಚಿತಾರಾಮ್ ಮುಂಬರುವ ಐಪಿಎಲ್ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಆರ್ಸಿಬಿ ತಂಡದ ರಾಯಭಾರಿಯಾಗುತ್ತಾರೆ ಎಂಬ ಸುದ್ದಿ ದಟ್ಟವಾಗಿ ಹರಿದಾಡುತ್ತಿದೆ. ಸೆಪ್ಟೆಂಬರ್ 19 ರಿಂದ ನವೆಂಬರ್ 10ರವರೆಗೆ ಯುಎಇಯಲ್ಲಿ ನಡೆಯಲಿರುವ ಐಪಿಎಲ್ 13ರಲ್ಲಿ ಆರ್ಸಿಬಿ ತಂಡಕ್ಕೆ ಕಿಚ್ಚ ಸುದೀಪ್ ಹಾಗೂ ರಚಿತಾರಾಮ್ ತಂಡದ ರಾಯಭಾರಿಯಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದರೂ ಕೂಡ ಇದರ ಬಗ್ಗೆ ಆರ್ಸಿಬಿ ತಂಡದ …
Read More »4 ಸಾವಿರ ಅಡಿ ಉದ್ದದ ಅತ್ಯಾಕರ್ಷಕ ಚಿತ್ತಾರಗಳೊಂದಿಗೆ ರಂಗೋಲಿ ಬಿಡಿಸಿ ದೇಶ ಪ್ರೇಮದ ಪಾರಮ್ಯ ಮೆರೆದಿದ್ದಾರೆ.
ಬೆಂಗಳೂರು, ಆ.15- 74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಪ್ತಗಿರಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಯ ಸಿಬ್ಬಂದಿ 4 ಸಾವಿರ ಅಡಿ ಉದ್ದದ ಅತ್ಯಾಕರ್ಷಕ ಚಿತ್ತಾರಗಳೊಂದಿಗೆ ರಂಗೋಲಿ ಬಿಡಿಸಿ ದೇಶ ಪ್ರೇಮದ ಪಾರಮ್ಯ ಮೆರೆದಿದ್ದಾರೆ. ವಿದ್ಯಾರ್ಥಿಗಳ ಜತೆ ಸಂಸ್ಥೆಯ ಪ್ರಾಂಶುಪಾಲರು, ಉಪನ್ಯಾಸಕರು ಸಪ್ತಗಿರಿ ಕ್ಯಾಂಪಸ್ ಆಟದ ಮೈದಾನದಲ್ಲಿ ಹಗಲಿರುಳು ಶ್ರಮಿಸಿ ಬೃಹತ್ ತ್ರಿವರ್ಣ ಧ್ವಜ ಬಿಡಿಸಿದ್ದಾರೆ.ವಿನೂತನ ಮಾದರಿಯಲ್ಲಿ ಸ್ವಾತಂತ್ರ್ಯದಿನಾಚರಣೆಗಾಗಿ 2500 ಕೆಜಿ ಉಪ್ಪು ಹಾಗೂ 250 ಕೆಜಿ ಬಿಳಿ, ಕೇಸರಿಹಾಗೂ …
Read More »ಅಮಿತ್ ಶಾಗೆ ಕೊರೊನಾ ನೆಗೆಟಿವ್
ನವದೆಹಲಿ: ಕೇಂದ್ರಗೃಹ ಮಂತ್ರಿ ಅಮಿತ್ ಶಾ ಅವರಿಗೆ ಕೊರೊನಾ ನೆಗೆಟಿವ್ ಬಂದಿದ್ದು, ಅವರು ಇನ್ನಷ್ಟು ದಿನ ಮನೆಯಲ್ಲೇ ಉಳಿಯಲಿದ್ದಾರೆ.ಕಳೆದ ಅಗಸ್ಟ್ 2ರಂದು ಅಮಿತ್ ಶಾ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ತಮಗೆ ಕೊರೊನಾ ಪಾಸಿಟಿವ್ ಬಂದಿರುವ ವಿಚಾರವನ್ನು ಸ್ವತಃ ಅವರೇ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದರು. ಈಗ ಮತ್ತೆ ಟ್ವೀಟ್ ಮಾಡಿರುವ ಅವರು ನನ್ನ ಕೊರೊನಾ ವರದಿ ನೆಗೆಟಿವ್ ಬಂದಿದೆ ಎಂದು ಟ್ವೀಟ್ ಮಾಡಿದ್ದಾರೆ. ಮಾಡಿಸಿದ ನನ್ನ ಕೊರೊನಾ …
Read More »ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ………..
ನವದೆಹಲಿ: ಇಂದು 74 ಸ್ವಾತಂತ್ರ್ಯ ದಿನಾಚರಣೆ. ಕೊರೊನಾ ಭೀತಿ ನಡುವೆ ಮುನ್ನೆಚ್ಚರಿಕೆ ವಹಿಸಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಅವರು ಧ್ವಜಾರೋಹಣ ಮಾಡಿದ್ದಾರೆ. ಈ ಬಾರಿ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಕೆಂಪುಕೋಟೆಯನ್ನು ಮದುವಣಗಿತ್ತಿಯಂತೆ ಶೃಂಗಾರ ಮಾಡಲಾಗಿದೆ. ಮೊದಲಿಗೆ ಪ್ರಧಾನಿ ನರೇಂದ್ರ ಮೋದಿ ಮಹಾತ್ಮ ಗಾಂಧಿ ಸಮಾಧಿ ರಾಜ್ಘಾಟ್ಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು. ನಂತರ ಕೆಂಪು ಕೋಟೆಯ ಮುಖ್ಯ ದ್ವಾರಕ್ಕೆ ಆಗಮಿಸುತ್ತಿದ್ದಂತೆ ಮೂರು …
Read More »ಸ್ವಯಂಕೃತ ಅಪರಾಧದಿಂದ ‘ಕಾವೇರಿ’ ಕೋಪಕ್ಕೆ ತುತ್ತಾದರಾ ಕೊಡಗಿನ ಜನ?
ಮಡಿಕೇರಿ: ಕೊಡಗಿನ ಕುಲದೇವತೆ ಕಾವೇರಿ ಮಾತೆಯ ಭಕ್ತರು ನಾಡಿನೆಲ್ಲೆಡೆ ಇದ್ದಾರೆ. ತಲಕಾವೇರಿಯಲ್ಲಿ ಹುಟ್ಟಿ ನಾಡಿನುದ್ದಕ್ಕೂ ಜೀವಕಳೆ ತುಂಬುವ ಜೀವನದಿ. ಆದರೆ ಕೊಡಗಿನ ಜನರಿಗೆ ಮಾತ್ರ ಕಣ್ಣೀರು ತರಿಸುತ್ತಿದ್ದಾಳೆ. ಕಾವೇರಿ ನದಿ ಹೀಗೆ ತನ್ನೊಡಲ ಜನರಿಗೆ ಸಂಕಷ್ಟ ತಂದಿಟ್ಟಿರುವುದಕ್ಕೆ ಜನರ ಸ್ವಯಂಕೃತ ಅಪರಾಧವೇ ಕಾರಣ ಎಂದು ತಲಕಾವೇರಿ ಮೂಲಸ್ವರೂಪ ರಕ್ಷಣಾ ಸಮಿತಿ ಆರೋಪ ಮಾಡಿದೆ. 2005 ರಲ್ಲಿ ತಲಕಾವೇರಿಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಹಲವು ಕಾಮಗಾರಿಗಳನ್ನು ಮಾಡಲಾಯಿತು. ಇದರ ಪರಿಣಾಮ ಬ್ರಹ್ಮಗಿರಿ ಬೆಟ್ಟದಲ್ಲಿ …
Read More »ಸ್ವಾತಂತ್ರ್ಯ ಹೋರಾಟಗಾರ ಶ್ರೀರಾಮ್ ವಿಷ್ಣು ಪಂತ್ ತೆಂಬೆಗೆ ಸನ್ಮಾನ
ಹುಬ್ಬಳ್ಳಿ: ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ, ಹುಬ್ಬಳ್ಳಿ ಸಾಯಿನಗರದ ಟೀಚರ್ಸ್ ಕಾಲನಿಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಶ್ರೀರಾಮ್ ವಿಷ್ಣು ಪಂತ್ ತೆಂಬೆ ಅವರ ಮನೆಗೆ ಭೇಟಿ ನೀಡಿ ಸನ್ಮಾನಿಸಿದರು. ಶ್ರೀರಾಮ್ ವಿಷ್ಣು ಪಂತ್ ತೆಂಬೆ ಅವರು ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಯ ಕಾರ್ಡಿನಡಿ ಲಭ್ಯವಾಗುವ ಔಷಧಗಳನ್ನು ಬೆಂಗಳೂರಿನಿಂದ ತೆಗೆದುಕೊಂಡು ಬರುವುದು ಕಷ್ಟವಾಗುತ್ತದೆ. ಕಾರ್ಡನ್ನು ಹುಬ್ಬಳ್ಳಿಗೆ ವರ್ಗಾಯಿಸುವಂತೆ ಇದೇ ವೇಳೆ ಮನವಿ ಮಾಡಿಕೊಂಡರು. ಇದಕ್ಕೆ …
Read More »